2 ಸಮುಯೇಲ 7:19 - ಕನ್ನಡ ಸಮಕಾಲಿಕ ಅನುವಾದ19 ಸಾರ್ವಭೌಮ ಯೆಹೋವ ದೇವರೇ, ಇದು ನಿಮ್ಮ ದೃಷ್ಟಿಯಲ್ಲಿ ಅಲ್ಪವೆಂದು ಕಾಣಿಸಿದರೂ ನೀವು ನಿಮ್ಮ ಸೇವಕನ ಸಂತಾನದ ಭವಿಷ್ಯದ ಕುರಿತೂ ವಾಗ್ದಾನಮಾಡಿರುವಿರಿ. ಸಾರ್ವಭೌಮ ಯೆಹೋವ ದೇವರೇ, ಇದು ನೀವು ಮನುಷ್ಯನೊಂದಿಗೆ ವರ್ತಿಸುವ ಕ್ರಮ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಕರ್ತನೇ, ಯೆಹೋವನೇ! ಇದು ನಿನ್ನ ದೃಷ್ಟಿಯಲ್ಲಿ ಅಲ್ಪವೆಂದು ಕಾಣಿಸಿದರೂ ನನ್ನ ಮುಂದಿನ ಸಂತಾನದ ವಿಷಯದಲ್ಲಿಯೂ ವಾಗ್ದಾನ ಮಾಡಿರುವೆ. ಕರ್ತನೇ, ಯೆಹೋವನೇ! ನೀನು ಮಾನವರಾದ ನಮ್ಮೊಂದಿಗೆ ಹೀಗೆ ವರ್ತಿಸುವುದು ಎಂಥಾ ಭಾಗ್ಯ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಸರ್ವೇಶ್ವರಾ, ಸರ್ವೆಶ್ವರಾ, ಇದೂ ಸಾಲದೆಂದೆಣಿಸಿ, ನಿಮ್ಮ ದಾಸನ ಬಹು ಮುಂದಿನ ಸಂತಾನದ ವಿಷಯದಲ್ಲೂ ತಾವು ವಾಗ್ದಾನ ಮಾಡಿರುವಿರಿ. ಸರ್ವೇಶ್ವರಾ, ಸರ್ವೇಶ್ವರಾ, ತಾವು ಹೀಗೆ ವರ್ತಿಸುವುದು ನರಮಾನವರಿಗೆ ಎಂಥಾ ಭಾಗ್ಯ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಕರ್ತನೇ, ಯೆಹೋವನೇ, ಇದು ಸಾಲದೆಂದೆಣಿಸಿ ನಿನ್ನ ಸೇವಕನ ಬಹುದೂರಸಂತಾನದ ವಿಷಯದಲ್ಲಿಯೂ ವಾಗ್ದಾನಮಾಡಿದಿ. ಕರ್ತನೇ, ಯೆಹೋವನೇ, ನೀನು ನರಪ್ರಾಣಿಯನ್ನು ಹೀಗೆ ನಡಿಸಿದ್ದು ಆಶ್ಚರ್ಯ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ನಾನು ಕೇವಲ ನಿನ್ನ ಸೇವಕನು. ನೀನು ನನ್ನ ಮೇಲೆ ಬಹಳ ದಯೆ ತೋರಿಸಿರುವೆ. ನನಗೆ ಮಾತ್ರವಲ್ಲದೆ ನೀನು ನನ್ನ ಮುಂದಿನ ಸಂತಾನದ ಬಗ್ಗೆಯೂ ಇದೇ ರೀತಿಯ ದಯಾಪರವಾದ ಮಾತುಗಳನ್ನು ಆಡಿರುವೆ. ನನ್ನ ಒಡೆಯನಾದ ಯೆಹೋವನೇ, ನರಪ್ರಾಣಿಯಾದ ನನ್ನೊಂದಿಗೆ ಇಂಥ ಮಹತ್ತಾದ ಕಾರ್ಯ ಮಾಡಬಹುದೇ? ಅಧ್ಯಾಯವನ್ನು ನೋಡಿ |