ಯೇಸು ಮೂರನೆಯ ಸಾರಿ ಪೇತ್ರನಿಗೆ, “ಯೋಹಾನನ ಮಗನಾದ ಸೀಮೋನನೇ, ನೀನು ನನ್ನ ಮೇಲೆ ಮಮತೆ ಇಟ್ಟಿದ್ದೀಯೋ?” ಎಂದು ಕೇಳಿದರು. ಯೇಸು ಮೂರನೆಯ ಸಾರಿ, “ನೀನು ನನ್ನ ಮೇಲೆ ಮಮತೆ ಇಟ್ಟಿದ್ದೀಯೋ?” ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು, “ಕರ್ತನೇ, ನಿಮಗೆ ಎಲ್ಲವೂ ತಿಳಿದಿದೆ. ನಾನು ನಿಮ್ಮ ಮೇಲೆ ಎಷ್ಟು ಮಮತೆ ಇಟ್ಟಿದ್ದೇನೆಂದು ನಿಮಗೆ ತಿಳಿದಿದೆ,” ಎಂದನು. ಆಗ ಯೇಸು ಪೇತ್ರನಿಗೆ, “ನನ್ನ ಕುರಿಗಳನ್ನು ಮೇಯಿಸು,” ಎಂದರು.