Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 7:21 - ಕನ್ನಡ ಸಮಕಾಲಿಕ ಅನುವಾದ

21 ನಿಮ್ಮ ವಾಕ್ಯದ ನಿಮಿತ್ತವಾಗಿಯೂ ನಿಮ್ಮ ಚಿತ್ತಾನುಸಾರವಾಗಿಯೂ ನಿಮ್ಮ ಸೇವಕನಿಗೆ ತಿಳಿಯಪಡಿಸುವ ಹಾಗೆ ಈ ಮಹಾಕಾರ್ಯಗಳನ್ನೆಲ್ಲಾ ಮಾಡಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ನೀನು ನಿನ್ನ ವಾಗ್ದಾನಗಳನ್ನು ನೆರವೇರಿಸುವುದಕ್ಕೋಸ್ಕರ, ನಿನ್ನ ಇಷ್ಟಾನುಸಾರವಾಗಿ ಈ ಎಲ್ಲಾ ಮಹತ್ಕಾರ್ಯಗಳನ್ನು ನಡಿಸಿ, ಅವುಗಳ ಅನುಭವಗಳನ್ನು ನಿನ್ನ ಸೇವಕನಿಗೆ ಉಂಟುಮಾಡದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ತಮ್ಮ ಸಂಕಲ್ಪ ಹಾಗೂ ದಯಾನುಸಾರ ಎಂತೆಂಥಾ ಮಹತ್ಕಾರ್ಯವನ್ನು ನಡೆಸಿದಿರಿ! ಅವುಗಳ ಅನುಭವವನ್ನೂ ನಿಮ್ಮ ದಾಸನಿಗಿತ್ತಿರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ನೀನು ನಿನ್ನ ವಾಗ್ದಾನಗಳನ್ನು ನೆರವೇರಿಸುವದಕ್ಕೋಸ್ಕರ ನಿನ್ನ ಇಷ್ಟಾನುಸಾರವಾಗಿ ಈ ಎಲ್ಲಾ ಮಹತ್ಕಾರ್ಯಗಳನ್ನು ನಡಿಸಿ ಅವುಗಳ ಅನುಭವವನ್ನು ನಿನ್ನ ಸೇವಕನಿಗೆ ಉಂಟುಮಾಡಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ನೀನು ಈ ಕಾರ್ಯವನ್ನು ನಿನ್ನ ವಾಗ್ದಾನದ ಪ್ರಕಾರವಾಗಿಯೂ ನಿನ್ನ ಚಿತ್ತದ ಪ್ರಕಾರವಾಗಿಯೂ ಮಾಡಿರುವೆ ಮತ್ತು ನಿನ್ನ ಸೇವಕನಿಗೆ ಅದನ್ನು ತಿಳಿಸಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 7:21
16 ತಿಳಿವುಗಳ ಹೋಲಿಕೆ  

ನಮಗಲ್ಲ ಯೆಹೋವ ದೇವರೇ, ನಮಗಲ್ಲ, ನಿಮ್ಮ ಹೆಸರಿಗೆ ಮಾತ್ರ ಮಹಿಮೆ, ನಿಮ್ಮ ಪ್ರೀತಿ ಮತ್ತು ಸತ್ಯತೆಯ ನಿಮಿತ್ತ ನಿಮಗೆ ಮಹಿಮೆಯಾಗಲಿ.


ಹೀಗೆ ದೇವರು ತಮ್ಮ ನಿತ್ಯ ಉದ್ದೇಶದ ಪ್ರಕಾರ ಇದನ್ನು ನಮ್ಮ ಕರ್ತ ಆಗಿರುವ ಕ್ರಿಸ್ತ ಯೇಸುವಿನಲ್ಲಿ ನೆರವೇರಿಸಿದರು.


ದೇವರು ಕ್ರಿಸ್ತನಲ್ಲಿ ಉದ್ದೇಶಮಾಡಿಕೊಂಡ ತಮ್ಮ ಚಿತ್ತದ ರಹಸ್ಯವನ್ನು ಸಂತೋಷದಿಂದ ನಮಗೆ ಪ್ರಕಟಿಸಿದರು,


ದೇವರ ಚಿತ್ತಾನುಸಾರವಾಗಿ ಕ್ರಿಸ್ತ ಯೇಸುವಿನಿಂದ ಅಪೊಸ್ತಲನಾಗಲು ಕರೆಯಲಾದ ಪೌಲನೆಂಬ ನಾನು ಮತ್ತು ನಮ್ಮ ಸಹೋದರ ಸೊಸ್ಥೆನನು,


“ಚಿಕ್ಕ ಹಿಂಡೇ, ಭಯಪಡಬೇಡ, ಏಕೆಂದರೆ ನಿಮ್ಮ ತಂದೆಯು ತಮ್ಮ ರಾಜ್ಯವನ್ನು ನಿಮಗೆ ಕೊಡುವುದಕ್ಕೆ ಮೆಚ್ಚಿದ್ದಾರೆ.


ನಿಮ್ಮ ಪರಿಶುದ್ಧ ಮಂದಿರದ ಕಡೆಗೆ ಅಡ್ಡಬಿದ್ದು, ನಿಮ್ಮ ಒಡಂಬಡಿಕೆಯ ಪ್ರೀತಿ, ನಿಮ್ಮ ಸತ್ಯತೆಯ ನಿಮಿತ್ತ ನಿಮ್ಮ ಹೆಸರನ್ನು ಕೊಂಡಾಡುವೆನು; ನೀವು ನಿಮ್ಮ ವಾಕ್ಯವನ್ನು ನಿಮ್ಮ ಹೆಸರಿಗಿಂತಲೂ ಮಿಗಿಲಾಗಿ ಘನಪಡಿಸಿದ್ದೀರಿ.


ಆ ಸಮಯದಲ್ಲಿ ಯೇಸು, ಪವಿತ್ರಾತ್ಮರ ಮುಖಾಂತರ ಆನಂದಗೊಂಡು, “ತಂದೆಯೇ, ಪರಲೋಕ, ಭೂಲೋಕಗಳ ಒಡೆಯರೇ, ನೀವು ಈ ವಿಷಯಗಳನ್ನು ಜ್ಞಾನಿಗಳಿಂದಲೂ ಬುದ್ಧಿವಂತರಿಂದಲೂ ಮರೆಮಾಡಿ, ಶಿಶುಗಳಿಗೆ ಪ್ರಕಟ ಮಾಡಿರುವುದರಿಂದ ನಾನು ನಿಮ್ಮನ್ನು ಕೊಂಡಾಡುತ್ತೇನೆ. ಹೌದು ತಂದೆಯೇ, ಹೀಗೆ ಮಾಡುವುದು ನಿಮ್ಮ ದೃಷ್ಟಿಗೆ ಒಳ್ಳೆಯದಾಗಿ ತೋಚಿತು.


ನಮ್ಮ ಪಿತೃಗಳಿಗೆ ಕರುಣೆ ತೋರಿಸುವಂತೆಯೂ ನಮ್ಮ ಪಿತೃವಾದ ಅಬ್ರಹಾಮನಿಗೆ ಆಣೆಯಿಟ್ಟು ಪ್ರಮಾಣ ಮಾಡಿದಂತೆಯೂ ತಮ್ಮ ಪವಿತ್ರ ಒಡಂಬಡಿಕೆಯನ್ನು ನೆನಪಿಗೆ ತಂದುಕೊಂಡವನಾಗಿಯೂ


ಭೂಮ್ಯಾಕಾಶಗಳು ಅಳಿದುಹೋಗುವುವು, ಆದರೆ ನನ್ನ ಮಾತುಗಳು ಅಳಿದುಹೋಗುವುದೇ ಇಲ್ಲ.


ಹೌದು ತಂದೆಯೇ, ಹೀಗೆ ಮಾಡುವುದು ನಿಮ್ಮ ದೃಷ್ಟಿಗೆ ಒಳ್ಳೆಯದಾಗಿ ತೋಚಿತು.


ನಿಮ್ಮ ನೀತಿಗೋಸ್ಕರವೂ, ನಿಮ್ಮ ಹೃದಯದ ಯಥಾರ್ಥತೆಗೋಸ್ಕರವೂ ನೀವು ಅವರ ದೇಶವನ್ನು ಸ್ವತಂತ್ರಿಸಿಕೊಳ್ಳುವುದಕ್ಕೆ ಬರುವುದಿಲ್ಲ. ಆ ಜನಾಂಗಗಳ ಕೆಟ್ಟತನಕ್ಕೋಸ್ಕರವೂ, ಯೆಹೋವ ದೇವರು ನಿಮ್ಮ ಪಿತೃಗಳಾದ ಅಬ್ರಹಾಮ್, ಇಸಾಕ್, ಯಾಕೋಬರಿಗೆ ಕೊಟ್ಟ ಮಾತನ್ನು ಪೂರೈಸುವ ಹಾಗೆಯೂ ನಿಮ್ಮ ದೇವರಾದ ಯೆಹೋವ ದೇವರು ಅವರನ್ನು ನಿಮ್ಮ ಮುಂದೆ ಹೊರಡಿಸುತ್ತಾರೆ.


ದೇವರು ಮನುಷ್ಯನಂತೆ ಸುಳ್ಳಾಡುವವರಲ್ಲ. ನರಪುತ್ರರಂತೆ ಮನಸ್ಸನ್ನು ಬದಲಾಯಿಸಿಕೊಳ್ಳುವವರಲ್ಲ. ಅವರು ನುಡಿದದ್ದನ್ನು ಮಾಡದಿರುವರೇ? ವಾಗ್ದಾನ ಮಾಡಿದ್ದನ್ನು ಅವರು ನೆರವೇರಿಸದಿರುವರೇ?


ನೀವು ದಯೆಯುಳ್ಳವರೂ ಮೃದು ಹೃದಯುಳ್ಳವರೂ ಆಗಿದ್ದು, ದೇವರು ಕ್ರಿಸ್ತನಲ್ಲಿ ನಿಮ್ಮನ್ನು ಕ್ಷಮಿಸಿದಂತೆಯೇ ನೀವು ಸಹ ಒಬ್ಬರೊನ್ನಬ್ಬರನ್ನು ಕ್ಷಮಿಸಿರಿ.


ಯೆಹೋವ ದೇವರೇ, ನಿಮ್ಮ ಸೇವಕನ ನಿಮಿತ್ತವಾಗಿಯೂ, ನಿಮ್ಮ ಚಿತ್ತಾನುಸಾರವಾಗಿಯೂ ಈ ಮಹಾಕಾರ್ಯಗಳನ್ನೆಲ್ಲಾ ನಡೆಸಿ, ಎಲ್ಲ ವಾಗ್ದಾನಗಳನ್ನು ತಿಳಿಯಪಡಿಸಿರುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು