Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 7:27 - ಕನ್ನಡ ಸಮಕಾಲಿಕ ಅನುವಾದ

27 “ಸೇನಾಧೀಶ್ವರ ಯೆಹೋವ ದೇವರೇ, ಇಸ್ರಾಯೇಲಿನ ದೇವರೇ, ‘ನಾನು ನಿಮಗೆ ಮನೆಯನ್ನು ಕಟ್ಟುವೆನೆಂದು’ ನಿಮ್ಮ ಸೇವಕನಿಗೆ ಪ್ರಕಟ ಮಾಡಿದ್ದರಿಂದ, ನಿಮ್ಮನ್ನು ಕುರಿತು ಈ ಪ್ರಾರ್ಥನೆಯನ್ನು ಪ್ರಾರ್ಥಿಸುವುದಕ್ಕೆ ನಿಮ್ಮ ಸೇವಕನ ಹೃದಯದಲ್ಲಿ ಧೈರ್ಯ ಉಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಸೇನಾಧೀಶ್ವರನಾದ ಯೆಹೋವನೇ, ಇಸ್ರಾಯೇಲರ ದೇವರೇ, ನೀನು ನಿನ್ನ ಸೇವಕನಾದ ನನಗೆ ‘ನಾನು ನಿನಗೋಸ್ಕರ ಮನೆ ಕಟ್ಟುವೆನು’ ಎಂದು ವಾಗ್ದಾನ ಮಾಡಿದ್ದರಿಂದ ಅವನು ಈ ಪ್ರಕಾರ ನಿನ್ನನ್ನು ಪ್ರಾರ್ಥಿಸುವುದಕ್ಕೆ ಧೈರ್ಯಗೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಸರ್ವಶಕ್ತರಾದ ಸರ್ವೇಶ್ವರಾ, ಇಸ್ರಯೇಲ್ ದೇವರೇ, ತಾವು ತಮ್ಮ ದಾಸನಿಗೆ, ‘ನಾನು ನಿನಗೊಂದು ಮನೆತನವನ್ನು ಕಟ್ಟುವೆನು’ ಎಂದು ವಾಗ್ದಾನಮಾಡಿದ್ದೀರಿ. ಆದುದರಿಂದಲೇ ಈ ಪ್ರಕಾರ ನಿಮ್ಮನ್ನು ಪ್ರಾರ್ಥಿಸುವುದಕ್ಕೆ ಧೈರ್ಯಗೊಂಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಸೇನಾಧೀಶ್ವರನಾದ ಯೆಹೋವನೇ, ಇಸ್ರಾಯೇಲ್‍ದೇವರೇ, ನೀನು ನಿನ್ನ ಸೇವಕನಿಗೆ - ನಾನು ನಿನಗೋಸ್ಕರ ಮನೆ ಕಟ್ಟುವೆನೆಂದು ವಾಗ್ದಾನ ಮಾಡಿದ್ದರಿಂದ ಅವನು ಈ ಪ್ರಕಾರ ನಿನ್ನನ್ನು ಪ್ರಾರ್ಥಿಸುವದಕ್ಕೆ ಧೈರ್ಯಗೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 “ಇಸ್ರೇಲರ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನೇ, ನೀನು ನನಗೆ ಮುಂದಿನ ಸಂಗತಿಗಳನ್ನು ತೋರಿಸಿರುವೆ. ‘ನಾನು ನಿನ್ನ ಕುಟುಂಬವನ್ನು ಸ್ಥಿರಪಡಿಸುವೆನು’ ಎಂದು ಹೇಳಿರುವೆ. ಆ ಕಾರಣದಿಂದಲೇ ನಿನ್ನ ಸೇವಕನಾದ ನಾನು ನಿನ್ನಲ್ಲಿ ಈ ಪ್ರಾರ್ಥನೆಯನ್ನು ಸಲ್ಲಿಸಲು ತೀರ್ಮಾನಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 7:27
10 ತಿಳಿವುಗಳ ಹೋಲಿಕೆ  

ಯೆಹೋವ ದೇವರೇ, ನೀವು ಬಾಧೆಪಡುವವರ ಬಯಕೆಯನ್ನು ಆಲಿಸುತ್ತೀರಿ; ಅವರನ್ನು ಪ್ರೋತ್ಸಾಹಿಸಿ, ಅವರ ಕೂಗನ್ನು ಲಾಲಿಸುತ್ತೀರಿ.


ನಿವಾಸಿಗಳ ಮುಂದೆಯೂ ನನ್ನ ಜನರಾದ ಹಿರಿಯರ ಮುಂದೆಯೂ ಅದನ್ನು ಕೊಂಡು ಬಿಡಿಸಿಕೊಂಡರೆ ಬಿಡಿಸಿಕೋ. ಬಿಡಿಸಿಕೊಳ್ಳದಿದ್ದರೆ ನಾನು ತಿಳಿದುಕೊಳ್ಳುವ ಹಾಗೆ ನನಗೆ ಹೇಳು. ಏಕೆಂದರೆ ನೀನೂ ನಿನ್ನ ತರುವಾಯ ನಾನೂ ಅಲ್ಲದೆ ಬಿಡಿಸಿಕೊಳ್ಳುವವನು ಯಾರೂ ಇಲ್ಲ,” ಎಂದು ಹೇಳಿದನು. ಅದಕ್ಕೆ ಅವನು, “ನಾನು ಬಿಡಿಸಿಕೊಳ್ಳುವೆನು,” ಎಂದನು.


ಯಜ್ಞ ಮತ್ತು ಅರ್ಪಣೆಯನ್ನು ನೀವು ಇಷ್ಟಪಡಲಿಲ್ಲ. ಆದರೆ ನೀವು ನನ್ನ ಕಿವಿಗಳನ್ನು ತೆರೆದಿರುವಿರಿ. ದಹನಬಲಿಗಳನ್ನೂ ಪಾಪ ಪರಿಹಾರದ ಬಲಿಗಳನ್ನೂ ನೀವು ಬಯಸಲಿಲ್ಲ.


ಆದರೆ ಸೌಲನು ಬರುವುದಕ್ಕೆ ಒಂದು ದಿವಸ ಮುಂಚೆ, ಯೆಹೋವ ದೇವರು ಸಮುಯೇಲನಿಗೆ ತಿಳಿಯಪಡಿಸಿದ್ದೇನೆಂದರೆ,


ಸೂಲಗಿತ್ತಿಯರು ದೇವರಿಗೆ ಭಯಪಟ್ಟದ್ದರಿಂದ, ದೇವರು ಅವರ ಕುಟುಂಬಕ್ಕೆ ಅಭಿವೃದ್ಧಿಯನ್ನು ಉಂಟುಮಾಡಿದರು.


ಆದರೆ ನನ್ನ ಹೃದಯಕ್ಕೂ, ನನ್ನ ಮನಸ್ಸಿಗೂ ಸಮರ್ಪಕವಾದದ್ದನ್ನೇ ಮಾಡುವ ನಂಬಿಗಸ್ತನಾದ ಒಬ್ಬ ಯಾಜಕನನ್ನು ನನಗೋಸ್ಕರ ಎಬ್ಬಿಸಿ, ಅವನಿಗೆ ಸ್ಥಿರವಾದ ಮನೆಯನ್ನು ಕಟ್ಟುವೆನು. ಅವನು ನನ್ನ ಅಭಿಷಿಕ್ತನ ಮುಂದೆ ನಿರಂತರವಾಗಿ ಸೇವೆಮಾಡುವನು.


ಪೂರ್ವಕಾಲದಲ್ಲಿ ನಾನು ನನ್ನ ಜನರಾದ ಇಸ್ರಾಯೇಲರ ಮೇಲೆ ನ್ಯಾಯಾಧಿಪತಿಗಳನ್ನು ನೇಮಿಸಿದ ಆ ದಿವಸದಿಂದ ಈಚೆಗೂ ದುಷ್ಟರು ಅವರನ್ನು ಕುಗ್ಗಿಸಿದಂತೆ ಇನ್ನು ಮೇಲೆ ಕುಗ್ಗಿಸದೆ ಇರುವರು. “ ‘ನಿನ್ನನ್ನು, ನಿನ್ನ ಸಮಸ್ತ ಶತ್ರುಗಳಿಂದ ತಪ್ಪಿಸಿ, ನಿನಗೆ ವಿಶ್ರಾಂತಿಯನ್ನು ಉಂಟುಮಾಡುವೆನು. ಇದಲ್ಲದೆ ಯೆಹೋವ ದೇವರು ನಿನಗೆ ತಿಳಿಸುವುದೇನೆಂದರೆ, ನಾನು ನಿನ್ನ ರಾಜವಂಶವನ್ನು ಸ್ಥಿರಪಡಿಸುವೆನು.


ಅವನೇ ನನ್ನ ಹೆಸರಿಗಾಗಿ ದೇವಾಲಯನ್ನು ಕಟ್ಟುವನು. ನಾನು ಅವನ ರಾಜಸಿಂಹಾಸನವನ್ನು ಸದಾಕಾಲಕ್ಕೂ ಸ್ಥಿರಮಾಡುವೆನು.


ನಾನು ನಿನಗೆ ಆಜ್ಞಾಪಿಸಿದ್ದೆಲ್ಲಾ ನೀನು ಕೇಳಿ, ನನ್ನ ಮಾರ್ಗಗಳಲ್ಲಿ ನಡೆದು, ನನ್ನ ಸೇವಕನಾದ ದಾವೀದನು ಮಾಡಿದ ಹಾಗೆ, ನನ್ನ ತೀರ್ಪುಗಳನ್ನೂ, ನನ್ನ ಆಜ್ಞೆಗಳನ್ನೂ ಕೈಗೊಂಡು, ನನ್ನ ದೃಷ್ಟಿಗೆ ಯಥಾರ್ಥವಾದದ್ದನ್ನು ಮಾಡಿದರೆ, ನಾನು ನಿನ್ನ ಸಂಗಡ ಇದ್ದು ದಾವೀದನ ಸಂತಾನದಂತೆ ನಿನ್ನ ಸಂತಾನವನ್ನೂ ಸ್ಥಿರಪಡಿಸಿ, ಇಸ್ರಾಯೇಲನ್ನು ನಿನಗೆ ಕೊಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು