Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 7:8 - ಕನ್ನಡ ಸಮಕಾಲಿಕ ಅನುವಾದ

8 “ಈಗ ನೀನು ನನ್ನ ಸೇವಕನಾದ ದಾವೀದನಿಗೆ ಹೇಳಬೇಕಾದದ್ದೇನೆಂದರೆ, ‘ಸೇನಾಧೀಶ್ವರ ಯೆಹೋವ ದೇವರು ನಿನಗೆ ತಿಳಿಸುವುದೇನೆಂದರೆ: ಕುರಿಗಳ ಹಿಂದೆ ಹೋಗುತ್ತಿದ್ದ ನಿನ್ನನ್ನು ನಾನು ಕುರಿಯ ಹಟ್ಟಿಯಿಂದ ತೆಗೆದುಕೊಂಡು, ನನ್ನ ಜನರಾದ ಇಸ್ರಾಯೇಲರ ಮೇಲೆ ನಾಯಕನಾಗಿರುವಂತೆ ನೇಮಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಇದಲ್ಲದೆ ನೀನು ನನ್ನ ಸೇವಕನಾದ ದಾವೀದನಿಗೆ ಹೇಳಬೇಕಾದದ್ದೇನೆಂದರೆ, “ಸೇನಾಧೀಶ್ವರನಾದ ಯೆಹೋವನು ಹೀಗೆನ್ನುತ್ತಾನೆ, ‘ಕುರಿಗಳ ಹಿಂದೆ ಹೋಗುತ್ತಿದ್ದ ನಿನ್ನನ್ನು ಅಡವಿಯಿಂದ ತೆಗೆದುಕೊಂಡು ನನ್ನ ಪ್ರಜೆಗಳಾದ ಇಸ್ರಾಯೇಲರಿಗೆ ನಾಯಕನನ್ನಾಗಿ ನೇಮಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 “ಇದಲ್ಲದೆ, ನೀನು ನನ್ನ ದಾಸ ದಾವೀದನಿಗೆ ಹೇಳು, ಸರ್ವಶಕ್ತ ಸರ್ವೇಶ್ವರನಾದ ನಾನೇ ಹೀಗೆ ಹೇಳಿದೆಯೆಂದು ತಿಳಿಸು: ‘ಕುರಿಗಳ ಹಿಂದೆ ತಿರುಗಾಡುತ್ತಿದ್ದ ನಿನ್ನನ್ನು ಅಡವಿಯಿಂದ ಆಯ್ದುಕೊಂಡು ನನ್ನ ಪ್ರಜೆ ಇಸ್ರಯೇಲರ ಮೇಲೆ ನಾಯಕನನ್ನಾಗಿ ನೇಮಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಇದಲ್ಲದೆ ನೀನು ನನ್ನ ಸೇವಕನಾದ ದಾವೀದನಿಗೆ ಹೇಳಬೇಕಾದದ್ದೇನಂದರೆ - ಸೇನಾಧೀಶ್ವರನಾದ ಯೆಹೋವನು ಹೀಗನ್ನುತ್ತಾನೆ - ಕುರಿಗಳ ಹಿಂದೆ ಹೋಗುತ್ತಿದ್ದ ನಿನ್ನನ್ನು ಅಡವಿಯಿಂದ ತೆಗೆದುಕೊಂಡು ನನ್ನ ಪ್ರಜೆಗಳಾದ ಇಸ್ರಾಯೇಲ್ಯರ ಮೇಲೆ ನಾಯಕನನ್ನಾಗಿ ನೇವಿುಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 “ನೀನು ಇದನ್ನು ನನ್ನ ಸೇವಕನಾದ ದಾವೀದನಿಗೆ ಹೇಳಲೇಬೇಕು: ‘ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, ಹುಲ್ಲುಗಾವಲಿನಲ್ಲಿ ಕುರಿಕಾಯುತ್ತಿದ್ದ ನಿನ್ನನ್ನು ನಾನು ನನ್ನ ಜನರಾದ ಇಸ್ರೇಲರಿಗೆ ನಾಯಕನಾಗಿ ಮಾಡಲು ಕರೆತಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 7:8
17 ತಿಳಿವುಗಳ ಹೋಲಿಕೆ  

ಆಗ ನಾತಾನನು ದಾವೀದನಿಗೆ, “ನೀನೇ ಆ ಮನುಷ್ಯನು! ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವುದೇನೆಂದರೆ: ನಿನ್ನನ್ನು ಇಸ್ರಾಯೇಲಿನ ಮೇಲೆ ಅರಸನಾಗಿ ಅಭಿಷೇಕ ಮಾಡಿ, ನಿನ್ನನ್ನು ಸೌಲನ ಕೈಗೆ ತಪ್ಪಿಸಿಬಿಟ್ಟು;


ಆದರೆ ದಾವೀದನು ಮೀಕಲಳಿಗೆ, “ನಾನು ಕುಣಿದದ್ದು ಯೆಹೋವ ದೇವರ ಸನ್ನಿಧಿಯಲ್ಲಿ ಮಾತ್ರ; ನಿನ್ನ ತಂದೆಯನ್ನೂ ಅವನ ಮನೆಯವರೆಲ್ಲರನ್ನೂ ಬಿಟ್ಟುಬಿಟ್ಟು, ನನ್ನನ್ನೇ ಆರಿಸಿಕೊಂಡು, ತಮ್ಮ ಪ್ರಜೆಗಳಾದ ಇಸ್ರಾಯೇಲರ ಅರಸನನ್ನಾಗಿ ಮಾಡಿದ ಆ ಯೆಹೋವ ದೇವರ ಮುಂದೆ ಇನ್ನೂ ಹೆಚ್ಚಾಗಿ ಕುಣಿದಾಡುವೆನು.


“ಈಗ ನೀನು ನನ್ನ ಸೇವಕನಾದ ದಾವೀದನಿಗೆ ಹೇಳಬೇಕಾದದ್ದೇನೆಂದರೆ, ‘ಸೇನಾಧೀಶ್ವರ ಯೆಹೋವ ದೇವರು ನಿನಗೆ ತಿಳಿಸುವುದೇನೆಂದರೆ: ಕುರಿಗಳ ಹಿಂದೆ ಹೋಗುತ್ತಿದ್ದ ನಿನ್ನನ್ನು ನಾನು ಕುರಿಯ ಹಟ್ಟಿಯಿಂದ ತೆಗೆದುಕೊಂಡು, ನನ್ನ ಜನರಾದ ಇಸ್ರಾಯೇಲರ ಮೇಲೆ ನಾಯಕನಾಗಿರುವಂತೆ ನೇಮಿಸಿದೆನು.


ಆಗ ಸಮುಯೇಲನು ಎಣ್ಣೆಕುಪ್ಪಿಯಿಂದ ಅವನ ತಲೆಯ ಮೇಲೆ ಸುರಿದು, ಅವನನ್ನು ಮುದ್ದಿಟ್ಟು ಅವನಿಗೆ, “ಯೆಹೋವ ದೇವರು ನಿನ್ನನ್ನು ತಮ್ಮ ಆಸ್ತಿಯಾಗಿರುವ ಜನರ ಮೇಲೆ ನಾಯಕನಾಗಿರಲು ಅಭಿಷೇಕ ಮಾಡಿದ್ದಾರೆ.


“ನಾಳೆ ಇಷ್ಟು ಹೊತ್ತಿಗೆ ಬೆನ್ಯಾಮೀನನ ದೇಶದವನಾದ ಒಬ್ಬ ಮನುಷ್ಯನನ್ನು ನಿನ್ನ ಬಳಿಗೆ ಕಳುಹಿಸುವೆನು. ನೀನು ಅವನನ್ನು ನನ್ನ ಜನರಾದ ಇಸ್ರಾಯೇಲಿನ ಮೇಲೆ ನಾಯಕನಾಗಿರಲು ಅಭಿಷೇಕಿಸಬೇಕು. ಅವನು ನನ್ನ ಜನರನ್ನು ಫಿಲಿಷ್ಟಿಯರ ಕೈಯಿಂದ ತಪ್ಪಿಸಿ ರಕ್ಷಿಸುವನು. ಏಕೆಂದರೆ ನನ್ನ ಜನರ ಕೂಗು ನನ್ನ ಬಳಿಗೆ ಬಂದು ಮುಟ್ಟಿತು,” ಎಂಬುದೆ.


ದಾವೀದನು ದೇವರ ದಯೆಯನ್ನು ಹೊಂದಿದವನಾಗಿ ಯಾಕೋಬನ ದೇವರಿಗೆ ದೇವಾಲಯ ಕಟ್ಟಲು ತನಗೆ ಅಪ್ಪಣೆಯಾಗಬೇಕೆಂದು ದೇವರಿಗೆ ಕೇಳಿಕೊಂಡನು.


ದೇವರು ದರಿದ್ರನನ್ನು ಭೂಮಿಯ ಧೂಳಿನಿಂದ ಎತ್ತುತ್ತಾರೆ. ಭಿಕ್ಷುಕನನ್ನು ತಿಪ್ಪೆ ಗುಂಡಿಯಿಂದ ತೆಗೆದು ಉನ್ನತಕ್ಕೇರಿಸುವವರೂ ಆಗಿದ್ದಾರೆ. ಅವರನ್ನು ಪ್ರಧಾನರ ಮಧ್ಯದಲ್ಲಿ ಕೂಡ್ರಿಸುತ್ತಾರೆ. ಘನತೆಯ ಸಿಂಹಾಸನವನ್ನು ಬಾಧ್ಯವಾಗಿ ಕೊಡುತ್ತಾರೆ. “ಭೂಮಿಯ ಆಧಾರ ಸ್ತಂಭಗಳು ಯೆಹೋವ ದೇವರದ್ದೇ. ಭೂಲೋಕವನ್ನು ಅವುಗಳ ಮೇಲೆ ಇಟ್ಟಿದ್ದಾರೆ.


ದಾವೀದನ ಕಡೆಯ ಮಾತುಗಳು: “ಇಷಯನ ಮಗ ದಾವೀದನ ನುಡಿಗಳಿವು: ಉನ್ನತವಾಗಿ ಸಾಗಿದ ಪುರುಷನು ಯಾಕೋಬನ ದೇವರಿಂದ ಅಭಿಷಿಕ್ತನಾದವನು, ಇಸ್ರಾಯೇಲಿನ ರಮ್ಯವಾದ ಕೀರ್ತನೆಗಾರನು ನುಡಿದದ್ದೇನೆಂದರೆ:


ದಾವೀದನು ಜನರನ್ನು ಹೊಡೆಯುವ ದೂತನನ್ನು ನೋಡಿದಾಗ, ಅವನು ಯೆಹೋವ ದೇವರಿಗೆ, “ಇಗೋ, ನಾನೇ ಪಾಪಮಾಡಿದೆನು. ಕುರುಬನಂತಿರುವ ನಾನೇ ಕೆಟ್ಟದ್ದನ್ನು ಮಾಡಿದೆನು. ಆದರೆ ಕುರಿಗಳಂತಿರುವ ಇವರು ಮಾಡಿದ್ದೇನು? ನಿಮ್ಮ ಹಸ್ತವು ನನಗೆ ವಿರೋಧವಾಗಿಯೂ ನನ್ನ ಕುಟುಂಬದ ವಿರೋಧವಾಗಿಯೂ ಇರಲಿ ಎಂದು ನಾನು ಬೇಡುತ್ತೇನೆ,” ಎಂದನು.


ಅದಕ್ಕೆ ಸೊಲೊಮೋನನು, “ನನ್ನ ತಂದೆಯಾಗಿರುವ ನಿಮ್ಮ ಸೇವಕನಾದ ದಾವೀದನು ನಿಮ್ಮ ಮುಂದೆ ನೀತಿಯಿಂದಲೂ, ಯಥಾರ್ಥವಾದ ಹೃದಯವುಳ್ಳವನಾಗಿಯೂ ನಡೆದದ್ದರಿಂದ, ನೀವು ಅವನಿಗೆ ಮಹಾಕರುಣೆಯನ್ನು ತೋರಿಸಿದ್ದೀರಿ. ಈ ಮಹಾಕರುಣೆಯನ್ನು ಮುಂದುವರೆಸುತ್ತಾ ಈ ದಿನ ಅವನ ಸಿಂಹಾಸನದ ಮೇಲೆ ಕುಳಿತುಕೊಳ್ಳಲು ಮಗನನ್ನು ಕೊಟ್ಟಿದ್ದೀರಿ.


‘ನನ್ನ ಜನರಾದ ಇಸ್ರಾಯೇಲರನ್ನು ಈಜಿಪ್ಟ್ ದೇಶದಿಂದ ಬರಮಾಡಿದ ದಿನ ಮೊದಲುಗೊಂಡು, ನನ್ನ ನಾಮವು ಅದರಲ್ಲಿರುವ ಹಾಗೆ, ಆಲಯವನ್ನು ಕಟ್ಟುವುದಕ್ಕೆ ಇಸ್ರಾಯೇಲಿನ ಸಮಸ್ತ ಗೋತ್ರಗಳೊಳಗಿಂದ ಪಟ್ಟಣವನ್ನು ನಾನು ಆಯ್ದುಕೊಳ್ಳದೆ, ನನ್ನ ಜನರಾದ ಇಸ್ರಾಯೇಲರನ್ನು ಆಳುವುದಕ್ಕೆ ನಾನು ದಾವೀದನನ್ನು ಆಯ್ದುಕೊಂಡೆನು,’ ಎಂಬುದು.


ದಾವೀದನು ದೇವರಿಗೆ, “ಜನರಲ್ಲಿ ಯುದ್ಧ ವೀರರನ್ನು ಲೆಕ್ಕಮಾಡಲು ಆಜ್ಞಾಪಿಸಿದವನು ನಾನಲ್ಲವೋ? ನಾನೇ ಪಾಪಮಾಡಿದೆನು. ಕುರುಬನಂತಿರುವ ನಾನೇ ಈ ಕೆಟ್ಟದ್ದನ್ನು ಮಾಡಿದೆನು, ಆದರೆ ಕುರಿಗಳಂತಿರುವ ಇವರು ಮಾಡಿದ್ದೇನು? ನನ್ನ ಯೆಹೋವ ದೇವರೇ, ನಿಮ್ಮ ಹಸ್ತವು ನಿಮ್ಮ ಜನರನ್ನು ಬಾಧಿಸದೆ, ನನಗೆ ವಿರೋಧವಾಗಿಯೂ ನನ್ನ ಕುಟುಂಬದ ವಿರೋಧವಾಗಿಯೂ ಇರಲಿ ಎಂದು ನಾನು ಬೇಡುತ್ತೇನೆ,” ಎಂದನು.


ಇದಲ್ಲದೆ ಪೂರ್ವದಲ್ಲಿ ಸೌಲನು ನಮ್ಮ ಮೇಲೆ ಅರಸನಾಗಿದ್ದಾಗ, ನೀನು ದಳಪತಿಯಾಗಿ ಇಸ್ರಾಯೇಲನ್ನು ಹೊರಗೆ ನಡೆಸುವವನಾಗಿಯೂ ಒಳಗೆ ತರುವವನಾಗಿಯೂ ಇದ್ದವನು. ಆದ್ದರಿಂದ ಯೆಹೋವ ದೇವರು ನಿನಗೆ, ‘ನೀನು ನನ್ನ ಜನರಾದ ಇಸ್ರಾಯೇಲರ ನಾಯಕನೂ ಪಾಲಕನೂ ಆಗಿರುವೆ ಎಂದು ಹೇಳಿದರು,’ ” ಎಂದರು.


ಆಗ ಆ ಸ್ತ್ರೀಯು, “ಹಾಗಾದರೆ, ಏಕೆ ದೇವಜನರಿಗೆ ವಿರೋಧವಾಗಿ ಅಂಥಾ ಕಾರ್ಯವನ್ನು ನೀನು ನಡೆಸುವುದೇನು? ಅರಸನು ತಾನು ಬಹಿಷ್ಕರಿಸಿದ ಮಗನನ್ನು ತಿರುಗಿ ಸೇರಿಸಿಕೊಳ್ಳದೆ ಹೋದದ್ದರಿಂದ, ತನ್ನನ್ನು ತಾನೇ ಅಪರಾಧಿ ಎಂದು ತೀರ್ಪುಮಾಡಿದ ಹಾಗಾಯಿತು.


ನಾನು ಕುರಿಯ ಹಿಂಡನ್ನು ಹಿಂಬಾಲಿಸುವ ವೇಳೆಯಲ್ಲಿ, ಯೆಹೋವ ದೇವರು ನನ್ನನ್ನು ಕರೆದು ಹೇಳಿದ್ದೇನೆಂದರೆ: “ನೀನು ಹೋಗಿ ನನ್ನ ಜನರಾದ ಇಸ್ರಾಯೇಲರಿಗೆ ಪ್ರವಾದಿಸು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು