2 ಸಮುಯೇಲ 8:1 - ಕನ್ನಡ ಸಮಕಾಲಿಕ ಅನುವಾದ1 ಇದರ ತರುವಾಯ ದಾವೀದನು ಫಿಲಿಷ್ಟಿಯರ ಮೇಲೆ ದಾಳಿಮಾಡಿ ಅವರನ್ನು ಸೋಲಿಸಿ, ಅವರಿಂದ ಮೇತೆಗ್ ಅಮ್ಮಹವನ್ನು ತೆಗೆದುಕೊಂಡು, ಆಡಳಿತವನ್ನು ತನ್ನ ಸ್ವಾಧೀನದಲ್ಲಿಟ್ಟುಕೊಂಡನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಅನಂತರ ದಾವೀದನು ಹೋಗಿ ಫಿಲಿಷ್ಟಿಯರ ಮೇಲೆ ಮುತ್ತಿಗೆ ಹಾಕಿ, ಅವರನ್ನು ಸೋಲಿಸಿ, ಅವರ ರಾಜಧಾನಿಯನ್ನು ವಶಪಡಿಸಿಕೊಂಡು, ಆಡಳಿತವನ್ನು ತನ್ನ ಸ್ವಾಧೀನದಲ್ಲಿಟ್ಟುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಅನಂತರ ದಾವೀದನು ಹೋಗಿ ಫಿಲಿಷ್ಟಿಯರ ಮೇಲೆ ದಾಳಿಮಾಡಿ, ಅವರನ್ನು ಸೋಲಿಸಿದನು. ಅವರ ರಾಜಧಾನಿಯನ್ನು ತೆಗೆದುಕೊಂಡು, ಆಡಳಿತವನ್ನು ತನ್ನ ಸ್ವಾಧೀನದಲ್ಲಿಟ್ಟುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಅನಂತರ ದಾವೀದನು ಹೋಗಿ ಫಿಲಿಷ್ಟಿಯರ ಮೇಲೆ ಬಿದ್ದು ಅವರನ್ನು ಸೋಲಿಸಿ ಅವರ ರಾಜಧಾನಿಯನ್ನು ತೆಗೆದುಕೊಂಡು ಆಡಳಿತವನ್ನು ತನ್ನ ಸ್ವಾಧೀನದಲ್ಲಿಟ್ಟುಕೊಂಡನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ತರುವಾಯ, ದಾವೀದನು ಫಿಲಿಷ್ಟಿಯರನ್ನು ಸೋಲಿಸಿ ಬಹುವಿಸ್ತಾರವಾದ ಪ್ರದೇಶವನ್ನು ಹತೋಟಿಯಲ್ಲಿಟ್ಟುಕೊಂಡಿದ್ದ ಅವರ ರಾಜಧಾನಿಯನ್ನು ಸ್ವಾಧೀನಪಡಿಸಿಕೊಂಡನು. ಅಧ್ಯಾಯವನ್ನು ನೋಡಿ |