Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 8:10 - ಕನ್ನಡ ಸಮಕಾಲಿಕ ಅನುವಾದ

10 ಅವನು ಅರಸನಾದ ದಾವೀದನ ಕ್ಷೇಮಸಮಾಚಾರವನ್ನು ವಿಚಾರಿಸಲೂ, ಹದದೆಜೆರನ ವಿರುದ್ಧ ಯುದ್ಧಮಾಡಿ ಅವನನ್ನು ಸೋಲಿಸಿದ್ದಕ್ಕಾಗಿ ಅವನನ್ನು ಅಭಿನಂದಿಸಿ, ಹರಸುವಂತೆ, ತೋವು ತನ್ನ ಪುತ್ರನಾದ ಯೋರಾಮನನ್ನು ಬೆಳ್ಳಿ, ಬಂಗಾರ, ಕಂಚಿನ ಪಾತ್ರೆಗಳ ಸಹಿತವಾಗಿ ದಾವೀದನ ಬಳಿಗೆ ಕಳುಹಿಸಿದನು; ಏಕೆಂದರೆ ಹದದೆಜೆರನಿಗೆ ತೋವಿಯ ಸಂಗಡ ಯುದ್ಧಗಳಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ತೋವಿಗೂ ಹದದೆಜೆರನಿಗೂ ವಿರೋಧವಿತ್ತು. ದಾವೀದನು ಹದದೆಜೆರನ ಮೇಲೆ ದಾಳಿಮಾಡಿ, ಅವನನ್ನು ಸೋಲಿಸಿದ್ದರಿಂದ ತೋವು ದಾವೀದನನ್ನು ವಂದಿಸುವುದಕ್ಕೂ ಹರಸುವುದಕ್ಕೂ ತನ್ನ ಮಗನಾದ ಯೋರಾಮನನ್ನು ಕಳುಹಿಸಿದನು. ಇವನು ಬರುವಾಗ ದಾವೀದನಿಗೋಸ್ಕರ ತಾಮ್ರ, ಬೆಳ್ಳಿ, ಬಂಗಾರದ ಪಾತ್ರೆಗಳನ್ನು ತಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ತೋವಿಗೂ ಹದದೆಜೆರನಿಗೂ ಹಗೆತನವಿತ್ತು. ದಾವೀದನು ಹದದೆಜೆರನ ಮೇಲೆ ದಾಳಿಮಾಡಿ ಅವನನ್ನು ಸೋಲಿಸಿದುದರಿಂದ ತೋವು ದಾವೀದನನ್ನು ಅಭಿನಂದಿಸುವುದಕ್ಕಾಗಿ ಹಾಗು ಹರಸುವುದಕ್ಕಾಗಿ ತನ್ನ ಮಗ ಯೋರಾಮನನ್ನು ಕಳುಹಿಸಿದನು. ಇವನು ಬರುವಾಗ ದಾವೀದನಿಗೆ ತಾಮ್ರ, ಬೆಳ್ಳಿ ಹಾಗು ಬಂಗಾರದ ಪಾತ್ರೆಗಳನ್ನು ತಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 (ತೋವಿಗೂ ಹದದೆಜೆರನಿಗೂ ವಿರೋಧವಿತ್ತು.) ದಾವೀದನು ಹದದೆಜೆರನ ಮೇಲೆ ಬಿದ್ದು ಅವನನ್ನು ಸೋಲಿಸಿದದರಿಂದ ತೋವು ದಾವೀದನನ್ನು ವಂದಿಸುವದಕ್ಕೂ ಹರಸುವದಕ್ಕೂ ತನ್ನ ಮಗನಾದ ಯೋರಾಮನನ್ನು ಕಳುಹಿಸಿದನು. ಇವನು ಬರುವಾಗ ದಾವೀದನಿಗೋಸ್ಕರ ತಾಮ್ರ ಬೆಳ್ಳಿ ಬಂಗಾರದ ಪಾತ್ರೆಗಳನ್ನು ತಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆಗ ತೋವಿಯು ತನ್ನ ಮಗನಾದ ಯೋರಾಮನನ್ನು ರಾಜನಾದ ದಾವೀದನ ಬಳಿಗೆ ಕಳುಹಿಸಿದನು. ದಾವೀದನು ಹದದೆಜೆರನ ವಿರುದ್ಧ ಹೋರಾಡಿ ಅವನನ್ನು ಸೋಲಿಸಿದ್ದಕ್ಕಾಗಿ ಯೋರಾಮನು ದಾವೀದನನ್ನು ಅಭಿನಂದಿಸಿದನು ಮತ್ತು ಆಶೀರ್ವದಿಸಿದನು. (ಈ ಮೊದಲು ಹದದೆಜೆರನು ತೋವಿಗೆ ವಿರುದ್ಧವಾಗಿ ಯುದ್ಧವನ್ನು ಮಾಡಿದನು.) ಯೋರಾಮನು ಚಿನ್ನ, ಬೆಳ್ಳಿ ಮತ್ತು ಹಿತ್ತಾಳೆಯಿಂದ ಮಾಡಿದ ವಸ್ತುಗಳನ್ನು ತಂದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 8:10
9 ತಿಳಿವುಗಳ ಹೋಲಿಕೆ  

“ಯೆಹೋವ ದೇವರ ಆಶೀರ್ವಾದವು ನಿಮ್ಮ ಮೇಲೆ ಇರಲಿ; ಯೆಹೋವ ದೇವರು ಹೆಸರಿನಲ್ಲಿ ನಿಮ್ಮನ್ನು ಆಶೀರ್ವದಿಸುತ್ತೇವೆ,” ಎಂದು ಹಾದುಹೋಗುವವರು ಹೇಳದಿರಲಿ.


ಅರಸನಾದ ದಾವೀದನ ಕ್ಷೇಮಸಮಾಚಾರವನ್ನು ವಿಚಾರಿಸಲೂ, ಹದದೆಜೆರನ ವಿರುದ್ಧ ಯುದ್ಧಮಾಡಿ ಅವನನ್ನು ಸೋಲಿಸಿದ್ದಕ್ಕಾಗಿ ಅವನನ್ನು ಅಭಿನಂದಿಸಿ, ಹರಸುವಂತೆ, ತೋವು ತನ್ನ ಪುತ್ರನಾದ ಹದೋರಾಮನನ್ನು ಎಲ್ಲಾ ತರವಾದ ಬೆಳ್ಳಿ, ಬಂಗಾರ, ಕಂಚಿನ ಪಾತ್ರೆಗಳ ಸಹಿತವಾಗಿ ದಾವೀದನ ಬಳಿಗೆ ಕಳುಹಿಸಿದನು; ಏಕೆಂದರೆ ಹದದೆಜೆರನಿಗೆ ತೋವಿಯ ಸಂಗಡ ಯುದ್ಧಗಳಿದ್ದವು.


ಆದರೆ ಅವನು ದಹನಬಲಿಯನ್ನು ಅರ್ಪಿಸಿ, ತೀರಿಸುವಷ್ಟರೊಳಗೆ ಸಮುಯೇಲನು ಬಂದನು. ಆಗ ಅವನನ್ನು ವಂದಿಸುವುದಕ್ಕಾಗಿ ಸೌಲನು ಅವನನ್ನು ಎದುರುಗೊಳ್ಳಲು ಹೋದನು.


ಅದೇ ಕಾಲದಲ್ಲಿ ಬಲದಾನನ ಮಗನೂ, ಬಾಬಿಲೋನಿನ ಅರಸನೂ ಆದ ಮೆರೋದಕ್ ಬಲದಾನ್ ಎಂಬವನು, ಹಿಜ್ಕೀಯನು ಅಸ್ವಸ್ಥನಾಗಿದ್ದು ಗುಣಹೊಂದಿದನು ಎಂದು ಕೇಳಿದ್ದರಿಂದ ಪತ್ರಗಳನ್ನೂ, ಉಡುಗೊರೆಗಳನ್ನೂ ಕಳುಹಿಸಿದನು.


ಇದರ ಹೊರತು ಅರಸನ ಸೇವಕರೂ, ನಮ್ಮ ಯಜಮಾನನೂ, ಅರಸನೂ ಆದ ದಾವೀದನನ್ನು ಆಶೀರ್ವದಿಸಲು ಬಂದು, ‘ದೇವರು ಸೊಲೊಮೋನನ ಹೆಸರನ್ನು ನಿಮ್ಮ ಹೆಸರಿಗಿಂತಲೂ ಪ್ರಸಿದ್ಧ ಮಾಡಲಿ. ಅವನ ಸಿಂಹಾಸನವನ್ನು ನಿಮ್ಮ ಸಿಂಹಾಸನಕ್ಕಿಂತ ದೊಡ್ಡದಾಗಿ ಮಾಡಲಿ,’ ಎಂದೂ ಹೇಳುತ್ತಿರುವಾಗ, ಅರಸನು ಮಂಚದ ಮೇಲೆ ಬಾಗಿ,


ಆಗ ಯೋಸೇಫನು ಅವರ ಕ್ಷೇಮಸಮಾಚಾರವನ್ನು ಕೇಳಿ, “ನೀವು ಹೇಳಿದ ವೃದ್ಧನಾದ ನಿಮ್ಮ ತಂದೆ ಕ್ಷೇಮವೋ? ಅವನು ಇನ್ನೂ ಬದುಕಿದ್ದಾನೋ?” ಎಂದನು.


ದಾವೀದನು ಹದದೆಜೆರನ ಸಮಸ್ತ ಸೈನ್ಯವನ್ನು ಸೋಲಿಸಿದನೆಂಬ ವರ್ತಮಾನವನ್ನು ಹಮಾತಿನ ಅರಸನಾದ ತೋವು ಕೇಳಿದಾಗ,


ಅರಸನಾದ ದಾವೀದನು ಚಿನ್ನ, ಬೆಳ್ಳಿ ಮತ್ತು ಕಂಚಿನ ಎಲ್ಲಾ ವಸ್ತುಗಳನ್ನು ಯೆಹೋವ ದೇವರಿಗೆ ಸಮರ್ಪಿಸಿದನು. ಜೊತೆಗೆ ಅವನು ಸೋತ ಎಲ್ಲಾ ದೇಶಗಳಿಂದ ವಶಪಡಿಸಿಕೊಂಡ ವಸ್ತುಗಳನ್ನೂ ಅರ್ಪಿಸಿದನು.


ಅನೇಕರು ಯೆರೂಸಲೇಮಿನಲ್ಲಿರುವ ಯೆಹೋವ ದೇವರಿಗೆ ಅರ್ಪಣೆಗಳನ್ನೂ, ಯೆಹೂದದ ಅರಸನಾದ ಹಿಜ್ಕೀಯನಿಗೆ ಕಾಣಿಕೆಗಳನ್ನೂ ತಂದರು. ಅಂದಿನಿಂದ ಅವನು ಸಮಸ್ತ ಜನಾಂಗಗಳ ಮುಂದೆ ಉನ್ನತವಾಗಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು