Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 8:16 - ಕನ್ನಡ ಸಮಕಾಲಿಕ ಅನುವಾದ

16 ಚೆರೂಯಳ ಮಗ ಯೋವಾಬನು ಸೈನ್ಯದ ಅಧಿಪತಿಯಾಗಿದ್ದನು. ಅಹೀಲೂದನ ಮಗ ಯೆಹೋಷಾಫಾಟನು ಆಸ್ಥಾನದ ಆಗುಹೋಗುಗಳನ್ನು ದಾಖಲಿಸುವವನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಚೆರೂಯಳ ಮಗನಾದ ಯೋವಾಬನೂ ಅವನ ಸೇನಾಧಿಪತಿಯೂ ಅಹೀಲೂದನ ಮಗನಾದ ಯೆಹೋಷಾಫಾಟನು ರಾಜವಂಶಸ್ಥದ ಇತಿಹಾಸಕಾರನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಚೆರೂಯಳ ಮಗ ಯೋವಾಬನು ಅವನ ಸೇನಾಪತಿ ಆಗಿದ್ದನು. ಅಹೀಲೂದನ ಮಗ ಯೆಹೋಷಾಫಟನು ಅವನ ಮಂತ್ರಿ ಆಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಚೆರೂಯಳ ಮಗನಾದ ಯೋವಾಬನು ಅವನ ಸೇನಾಪತಿಯೂ ಅಹೀಲೂದನ ಮಗನಾದ ಯೆಹೋಷಾಫಾಟನು ಮಂತ್ರಿಯೂ ಆಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಚೆರೂಯಳ ಮಗನಾದ ಯೋವಾಬನು ಅವನ ಸೈನ್ಯದ ಅಧಿಕಾರಿಯಾಗಿದ್ದನು. ಅಹೀಲೂದನ ಮಗನಾದ ಯೆಹೋಷಾಫಾಟನು ಇತಿಹಾಸಕಾರನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 8:16
10 ತಿಳಿವುಗಳ ಹೋಲಿಕೆ  

ಶೀಷನ ಮಕ್ಕಳಾದ ಎಲೀಹೋರೆಫ್ ಹಾಗು ಅಹೀಯಾಹು ಎಂಬವರು ಕಾರ್ಯದರ್ಶಿಗಳು. ಅಹೀಲೂದನ ಮಗನಾದ ಯೆಹೋಷಾಫಾಟನು ಅವನ ಲೇಖಕ.


“ಯೆಬೂಸಿಯರಲ್ಲಿ ಒಬ್ಬನನ್ನು ಯಾರು ಮೊದಲು ಕೊಲ್ಲುವನೋ, ಅವನು ನನ್ನ ದಳಪತಿಯಾಗುವನು,” ಎಂದು ದಾವೀದ ಪ್ರಕಟಿಸಿದ್ದನು. ಹಾಗೆಯೇ ಚೆರೂಯಳ ಮಗ ಯೋವಾಬನು ಮೊದಲು ಹೋಗಿ ದಳಪತಿಯಾದನು.


ಇದಲ್ಲದೆ ನೀವು ಅಮಾಸನಿಗೆ, ‘ನೀನು ನನ್ನ ರಕ್ತವೂ, ನನ್ನ ಮಾಂಸವೂ ಅಲ್ಲವೋ? ನೀನು ಯೋವಾಬನಿಗೆ ಬದಲಾಗಿ ಯಾವಾಗಲೂ ನನ್ನ ಮುಂದೆ ಸೈನ್ಯದ ಪ್ರಧಾನನಾಗಿರದೆ ಹೋದರೆ, ದೇವರು ನನಗೆ ಏನಾದರೂ ಮಾಡಲಿ,’ ಎಂದು ಹೇಳಿರಿ,” ಎಂದನು.


ಚೆರೂಯಳ ಮಗ ಯೋವಾಬನೂ, ದಾವೀದನ ಸೇವಕರೂ ಹೊರಟು ಗಿಬ್ಯೋನಿನ ಕೊಳದ ಬಳಿಯಲ್ಲಿ ಕೂಡಿಕೊಂಡರು. ಅವರು ಕೊಳದ ಆಚೆಯಲ್ಲಿಯೂ, ಇವರು ಕೊಳದ ಈಚೆಯಲ್ಲಿಯೂ ಕುಳಿತುಕೊಂಡರು.


ದಾವೀದನು ಸಮಸ್ತ ಇಸ್ರಾಯೇಲಿನ ಮೇಲೆ ಆಳುತ್ತಾ ತನ್ನ ಸಮಸ್ತ ಜನರಿಗೂ ನೀತಿ ನ್ಯಾಯಗಳಿಂದ ನಡೆಸುತ್ತಿದ್ದನು.


ಅವರು ಅರಸನನ್ನು ಕರೆಕಳುಹಿಸಿದರು. ಅರಮನೆಯ ಕಾರ್ಯನಿರ್ವಾಹಕನಾದ ಹಿಲ್ಕೀಯನ ಮಗ ಎಲ್ಯಾಕೀಮ್, ಕಾರ್ಯದರ್ಶಿಯಾದ ಶೆಬ್ನ, ದಾಖಲೆಗಾರನಾದ ಆಸಾಫನ ಮಗ ಯೋವ ಎಂಬುವರು ಅವರ ಬಳಿಗೆ ಬಂದರು.


ಆಗ ಅರಮನೆಯ ಮೇಲ್ವಿಚಾರಕನಾದ ಹಿಲ್ಕೀಯನ ಮಗ ಎಲ್ಯಾಕೀಮನೂ, ಕಾರ್ಯದರ್ಶಿಯಾದ ಶೆಬ್ನನೂ, ದಾಖಲೆಗಾರನಾದ ಆಸಾಫನ ಮಗ ಯೋವ ಎಂಬವನೂ ತಮ್ಮ ಬಟ್ಟೆಗಳನ್ನು ಹರಿದುಕೊಂಡು ಹಿಜ್ಕೀಯನ ಬಳಿಗೆ ಬಂದು ಸೈನ್ಯಾಧಿಕಾರಿಯಾದ ರಬ್ಷಾಕೆ ಹೇಳಿದ ಮಾತುಗಳನ್ನು ಅವನಿಗೆ ತಿಳಿಸಿದರು.


ದಾವೀದನು ಜನರಲ್ಲಿ ಮೂರನೆಯ ಪಾಲನ್ನು ಯೋವಾಬನಿಗೂ, ಎರಡನೆಯ ಪಾಲನ್ನು ಚೆರೂಯಳ ಮಗನೂ ಯೋವಾಬನ ತಮ್ಮನೂ ಆಗಿರುವ ಅಬೀಷೈಗೂ, ಮೂರನೆಯ ಪಾಲನ್ನು ಗಿತ್ತೀಯನಾದ ಇತ್ತೈಗೂ ಒಪ್ಪಿಸಿದನು. ತರುವಾಯ ಅರಸನು ಸೈನಿಕರಿಗೆ, “ನಾನೂ ನಿಮ್ಮ ಸಂಗಡ ಹೊರಟು ಬರುತ್ತೇನೆ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು