Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 8:2 - ಕನ್ನಡ ಸಮಕಾಲಿಕ ಅನುವಾದ

2 ಹಾಗೆಯೇ ದಾವೀದನು ಮೋವಾಬ್ಯರನ್ನು ಸಹ ಸೋಲಿಸಿದನು. ಸೆರೆಯಾಳುಗಳನ್ನು ನೆಲದ ಮೇಲೆ ಹಗ್ಗದಿಂದ ಅಳತೆ ಮಾಡಿಸಿ, ಎರಡು ಪಾಲು ಜನರನ್ನು ಕೊಲ್ಲಿಸಿ, ಒಂದು ಪಾಲನ್ನು ಉಳಿಸಿದನು. ಹೀಗೆ ಮೋವಾಬ್ಯರು ದಾವೀದನಿಗೆ ಅಧೀನರಾಗಿ ಕಪ್ಪಕೊಡುವವರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಇದಲ್ಲದೆ ಅವನು ಮೋವಾಬ್ಯರನ್ನು ಸೋಲಿಸಿ, ಅವರನ್ನು ನೆಲಕ್ಕೆ ಉರುಳಿಸಿ, ಹಗ್ಗದಿಂದ ಅಳತೆಮಾಡಿಸಿ, ಪ್ರತಿ ಮೂರನೆಯ ಎರಡು ಭಾಗದ ಜನರನ್ನು ಕೊಲ್ಲಿಸಿ, ಮೂರನೆ ಭಾಗದ ಜನರನ್ನು ಉಳಿಸಿದನು. ಉಳಿದ ಮೋವಾಬ್ಯರು ದಾವೀದನ ದಾಸರಾಗಿ ಅವನಿಗೆ ಕಪ್ಪಕೊಡಬೇಕಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಆಮೇಲೆ ಮೋವಾಬ್ಯರನ್ನು ಸೋಲಿಸಿದನು. ಸೆರೆಯಾಳುಗಳನ್ನು ನೆಲದಮೇಲೆ ಮಲಗಿಸಿ ಹಗ್ಗದಿಂದ ಅಳತೆಮಾಡಿಸಿ, ಎರಡು ಪಾಲು ಜನರನ್ನು ಕೊಲ್ಲಿಸಿ ಒಂದು ಪಾಲನ್ನು ಉಳಿಸಿದನು. ಮೋವಾಬ್ಯರು ದಾವೀದನಿಗೆ ಅಧೀನರಾಗಿ ಅವನಿಗೆ ಕಪ್ಪಕೊಡಬೇಕಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಇದಲ್ಲದೆ ಅವನು ಮೋವಾಬ್ಯರನ್ನು ಸೋಲಿಸಿ ಅವರನ್ನು ನೆಲಕ್ಕೆ ಹಾಕಿಸಿ ಹಗ್ಗದಿಂದ ಅಳತೆ ಮಾಡಿಸಿ ಎರಡು ಪಾಲು ಜನರನ್ನು ಕೊಲ್ಲಿಸಿ ಒಂದು ಪಾಲು ಉಳಿಸಿದನು. ಮೋವಾಬ್ಯರು ದಾವೀದನ ದಾಸರಾಗಿ ಅವನಿಗೆ ಕಪ್ಪಕೊಡಬೇಕಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಮೋವಾಬಿನ ಜನರನ್ನು ಸಹ ದಾವೀದನು ಸೋಲಿಸಿದನು. ಅವರನ್ನು ನೆಲದ ಮೇಲೆ ಬಲವಂತದಿಂದ ಮಲಗಿಸಿ ಹಗ್ಗದಿಂದ ಅವರನ್ನು ಸಾಲುಸಾಲಾಗಿ ವಿಂಗಡಿಸಿದನು. ಎರಡು ಸಾಲಿನ ಗಂಡಸರನ್ನು ಕೊಲ್ಲಿಸಿದನು; ಆದರೆ ಮೂರನೆಯ ಸಾಲಿನ ಗಂಡಸರನ್ನು ಜೀವಂತವಾಗಿ ಉಳಿಸಿದನು. ಮೋವಾಬಿನ ಜನರು ದಾವೀದನ ಸೇವಕರಾದರು. ಅವರು ಅವನಿಗೆ ಕಪ್ಪಕಾಣಿಕೆಗಳನ್ನು ಅರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 8:2
22 ತಿಳಿವುಗಳ ಹೋಲಿಕೆ  

“ನಾನು ಅವನನ್ನು ನೋಡುವೆನು, ಈಗಲ್ಲ. ಅವನನ್ನು ದೃಷ್ಟಿಸುವೆನು, ಸಮೀಪದಲ್ಲಿ ಅಲ್ಲ. ಯಾಕೋಬನಿಂದ ನಕ್ಷತ್ರ ಉದಯಿಸುವುದು. ಇಸ್ರಾಯೇಲನಿಂದ ರಾಜದಂಡ ಏಳುವುದು. ಅದು ಮೋವಾಬಿನ ಮೂಲೆಗಳನ್ನು ಹೊಡೆದು, ಸೇಥನ ಎಲ್ಲಾ ಮಕ್ಕಳನ್ನು ಸಂಹರಿಸುವುದು.


ಮೋವಾಬ್ ನನ್ನ ಸ್ನಾನ ಪಾತ್ರೆಯು, ಎದೋಮ್ ನನ್ನ ಕೆರಗಳ ಸ್ಥಳ. ಫಿಲಿಷ್ಟಿಯರ ಮೇಲೆ ಜಯೋತ್ಸಾಹ ಮಾಡುವೆನು.”


ತರುವಾಯ ದಾವೀದನು ದಮಸ್ಕದ ಅರಾಮಿನಲ್ಲಿ ಕಾವಲುದಂಡುಗಳನ್ನು ಇಟ್ಟನು. ಹೀಗೆ ಅರಾಮ್ಯರು ದಾವೀದನಿಗೆ ಅಧೀನರಾಗಿ, ಕಪ್ಪವನ್ನು ಕೊಡುವವರಾದರು. ದಾವೀದನು ಹೋದ ಸ್ಥಳಗಳಲ್ಲೆಲ್ಲಾ ಯೆಹೋವ ದೇವರು ಅವನಿಗೆ ಜಯಕೊಟ್ಟರು.


ಆದರೆ ಕೆಲವು ಪುಂಡಪೋಕರಿಗಳು, “ಇವನು ನಮ್ಮನ್ನು ರಕ್ಷಿಸುವುದೇನು?” ಎಂದು ಅವನನ್ನು ತಿರಸ್ಕರಿಸಿದರು. ಅವರು ಅವನಿಗೆ ಕಾಣಿಕೆಯನ್ನು ತೆಗೆದುಕೊಂಡು ಬರಲಿಲ್ಲ. ಅವನು ಕೇಳದ ಹಾಗೆ ಇದ್ದನು.


“ಹಿಜ್ಕೀಯನ ಮಾತುಗಳಿಗೆ ಕಿವಿಗೊಡಬೇಡಿರಿ. ಏಕೆಂದರೆ ಅಸ್ಸೀರಿಯದ ಅರಸನು ಹೇಳುವುದೇನೆಂದರೆ, ನನ್ನ ಸಂಗಡ ಒಡಂಬಡಿಕೆ ಮಾಡಿಕೊಂಡು, ನನ್ನ ಬಳಿಗೆ ಹೊರಟುಬನ್ನಿರಿ, ಆಗ ನಿಮ್ಮಲ್ಲಿ ಪ್ರತಿ ಮನುಷ್ಯನು ತನ್ನ ತನ್ನ ದ್ರಾಕ್ಷಾಫಲವನ್ನೂ, ಅಂಜೂರದ ಫಲವನ್ನೂ ತಿಂದು ತನ್ನ ತನ್ನ ಬಾವಿಯ ನೀರನ್ನು ಕುಡಿಯುವನು.


ಮೋವಾಬ್ ನನ್ನ ಸ್ನಾನ ಪಾತ್ರೆಯು, ಎದೋಮ್ ನನ್ನ ಕೆರಗಳ ಸ್ಥಳ. ಫಿಲಿಷ್ಟಿಯರ ಮೇಲೆ ಜಯೋತ್ಸಾಹ ಮಾಡುವೆನು.”


ಅಮ್ಮೋನ್ಯರು ಉಜ್ಜೀಯನಿಗೆ ಕಪ್ಪವನ್ನು ಕೊಟ್ಟರು. ಆದ್ದರಿಂದ ಅವನ ಹೆಸರು ಈಜಿಪ್ಟಿನ ಪ್ರದೇಶದವರೆಗೂ ಬಹಳವಾಗಿ ಹಬ್ಬಿತು. ಅವನು ಬಹಳವಾಗಿ ಬಲಪಡಿಸಿಕೊಂಡಿದ್ದನು.


ಹಾಗೆಯೇ ಅವನು ಮೋವಾಬ್ಯರನ್ನು ಸಹ ಸೋಲಿಸಿದನು, ಮೋವಾಬ್ಯರು ದಾವೀದನಿಗೆ ಅಧೀನರಾಗಿ ಕಪ್ಪಕೊಡುವವರಾದರು.


ಅಸ್ಸೀರಿಯದ ಅರಸನಾದ ಶಲ್ಮನೆಸೆರನು ಅವನ ವಿರುದ್ಧ ಬಂದದ್ದರಿಂದ, ಹೋಶೇಯನು ಅವನಿಗೆ ಸೇವಕನಾಗಿ ಅವನಿಗೆ ಕಪ್ಪವನ್ನು ಕೊಟ್ಟನು.


ಅಹಾಬನ ಮರಣದ ನಂತರ ಮೋವಾಬ್ಯರು ಇಸ್ರಾಯೇಲರ ವಿರುದ್ಧ ದಂಗೆ ಎದ್ದರು.


ಇದಲ್ಲದೆ ಅವನು ಅದರಲ್ಲಿದ್ದ ಜನರನ್ನು ಹೊರಗೆ ತಂದು, ಅವರನ್ನು ಗರಗಸ ಗುದ್ದಲಿ ಕೊಡಲಿಗಳಿಂದ ಕೆಲಸ ಮಾಡುವದಕ್ಕೂ ಇಟ್ಟಿಗೆಗಳನ್ನು ಸುಡುವುದಕ್ಕೂ ಇಟ್ಟನು. ಅದೇ ಪ್ರಕಾರ ದಾವೀದನು ಅಮ್ಮೋನಿಯರ ಸಮಸ್ತ ಪಟ್ಟಣಗಳಿಗೂ ಮಾಡಿದನು. ಅನಂತರ ದಾವೀದನು ಎಲ್ಲಾ ಸೈನಿಕರೊಡನೆ ಯೆರೂಸಲೇಮಿಗೆ ತಿರುಗಿಬಂದನು.


ಹೀಗೆ ಸೌಲನು ಇಸ್ರಾಯೇಲಿನ ದೊರೆತನವನ್ನು ತೆಗೆದುಕೊಂಡು, ಸುತ್ತಲಿರುವ ತನ್ನ ಸಮಸ್ತ ಶತ್ರುಗಳಾದ ಮೋವಾಬ್ಯರ ಮೇಲೆಯೂ, ಅಮ್ಮೋನ್ಯರ ಮೇಲೆಯೂ, ಎದೋಮ್ಯರ ಮೇಲೆಯೂ, ಚೋಬದ ಅರಸರ ಮೇಲೆಯೂ, ಫಿಲಿಷ್ಟಿಯರ ಮೇಲೆಯೂ ಯುದ್ಧಮಾಡಿದನು. ಯಾರ ಮೇಲೆ ತಿರುಗಿದನೋ, ಅವರನ್ನು ಪೀಡಿಸಿದನು.


ಎದೋಮ್ಯರ ಮತ್ತು ಇಷ್ಮಾಯೇಲ್ಯರ ಪಾಳೆಯದವರು ಮೋವಾಬ್ಯರು, ಹಗ್ರೀಯರು,


ದಾವೀದನು ಅಲ್ಲಿಂದ ಹೊರಟು ಮೋವಾಬ್ ದೇಶದ ಮಿಚ್ಪೆಗೆ ಬಂದು ಮೋವಾಬಿನ ಅರಸನಿಗೆ, “ದೇವರು ನನಗೆ ಏನು ಮಾಡುವರೋ ಎಂದು ನಾನು ತಿಳಿಯುವವರೆಗೂ, ನನ್ನ ತಂದೆತಾಯಿಗಳು ಹೊರಟುಬಂದು ನಿನ್ನ ಬಳಿಯಲ್ಲಿ ವಾಸಿಸಿರಲಿ,” ಎಂದು ಹೇಳಿ, ಅವರನ್ನು ಮೋವಾಬಿನ ಅರಸನ ಬಳಿಗೆ ಕರೆತಂದು ಬಿಟ್ಟನು.


ದಾವೀದನು ಗವಿಯಲ್ಲಿ ಇದ್ದ ದಿವಸಗಳೆಲ್ಲಾ, ಅವರು ಆ ಅರಸನ ಬಳಿಯಲ್ಲಿ ವಾಸವಾಗಿದ್ದರು.


ಇದಲ್ಲದೆ ಸೊಲೊಮೋನನು ಯೂಫ್ರೇಟೀಸ್ ಮೊದಲುಗೊಂಡು ಫಿಲಿಷ್ಟಿಯರ ದೇಶ ಮತ್ತು ಈಜಿಪ್ಟಿನ ಮೇರೆಯವರೆಗೂ ಇರುವ ಸಮಸ್ತ ರಾಜ್ಯಗಳನ್ನು ಆಳುತ್ತಿದ್ದನು. ಆ ರಾಜ್ಯಗಳವರು ಸೊಲೊಮೋನನು ಜೀವಿಸಿರುವ ದಿವಸಗಳೆಲ್ಲಾ ಕಪ್ಪಗಳನ್ನು ಕೊಡುವವರಾಗಿ ಅವನಿಗೆ ಅಧೀನರಾಗಿದ್ದರು.


ಅವರು ಭಯಗೊಳ್ಳುವರು; ನಡುಗುತ್ತಾ ತಮ್ಮ ಕೋಟೆಗಳಿಂದ ಹೊರಬರುವರು.


ದೇವರೇ, ಈಗ ನೀವು ನಮ್ಮ ಸೈನ್ಯಗಳ ಸಂಗಡ ಹೊರಡುವುದಿಲ್ಲವೋ ನಮ್ಮನ್ನು ಕೈಬಿಟ್ಟಿದ್ದೀರೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು