Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 8:4 - ಕನ್ನಡ ಸಮಕಾಲಿಕ ಅನುವಾದ

4 ದಾವೀದನು ಅವನಿಂದ ಸಾವಿರ ರಥಗಳನ್ನೂ, ಏಳು ಸಾವಿರ ರಾಹುತರನ್ನೂ, ಇಪ್ಪತ್ತು ಸಾವಿರ ಕಾಲಾಳುಗಳನ್ನೂ ವಶಪಡಿಸಿಕೊಂಡನು. ನೂರು ರಥಗಳಿಗೆ ಕುದುರೆಗಳನ್ನು ಉಳಿಸಿ, ಇತರ ಕುದುರೆಗಳ ಕಾಲಿನ ನರಗಳನ್ನು ಕೊಯ್ಯಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅವನು ಅವರ ಸಾವಿರದ ಏಳುನೂರು ರಾಹುತರನ್ನೂ ಇಪ್ಪತ್ತು ಸಾವಿರ ಮಂದಿ ಕಾಲಾಳುಗಳನ್ನೂ ಸೆರೆಹಿಡಿದು ನೂರು ಕುದುರೆಗಳನ್ನಿಟ್ಟುಕೊಂಡು ಮಿಕ್ಕಾದ ಕುದುರೆಗಳ ಹಿಂಗಾಲಿನ ನರಗಳನ್ನು ಕತ್ತರಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಸಾವಿರದ ಏಳುನೂರು ಮಂದಿ ರಾಹುತರನ್ನೂ ಇಪ್ಪತ್ತು ಸಾವಿರ ಮಂದಿ ಕಾಲಾಳುಗಳನ್ನೂ ಸೆರೆಹಿಡಿದು, ನೂರು ಕುದುರೆಗಳನ್ನಿಟ್ಟುಕೊಂಡು ಮಿಕ್ಕ ಕುದುರೆಗಳ ಹಿಂಗಾಲಿನ ನರಗಳನ್ನು ಕೊಯ್ದುಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅವನ ಸಾವಿರದ ಏಳುನೂರು ಮಂದಿ ರಾಹುತರನ್ನೂ ಇಪ್ಪತ್ತುಸಾವಿರ ಮಂದಿ ಕಾಲಾಳುಗಳನ್ನೂ ಸೆರೆಹಿಡಿದು ನೂರು ಕುದುರೆಗಳನ್ನಿಟ್ಟುಕೊಂಡು ವಿುಕ್ಕಾದ ಕುದುರೆಗಳ ಹಿಂಗಾಲಿನ ನರಗಳನ್ನು ಕೊಯ್ದುಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಹದದೆಜೆರನಿಂದ ಒಂದು ಸಾವಿರ ರಥಗಳನ್ನೂ ಒಂದು ಸಾವಿರದ ಏಳುನೂರು ಅಶ್ವಪಡೆಗಳನ್ನೂ ದಾವೀದನು ತೆಗೆದುಕೊಂಡನು. ಅವನು ಇಪ್ಪತ್ತು ಸಾವಿರ ಕಾಲಾಳು ಸೈನಿಕರನ್ನು ಸಹ ಪಡೆದನು. ದಾವೀದನು ಒಂದು ನೂರು ರಥದ ಕುದುರೆಗಳನ್ನು ಇಟ್ಟುಕೊಂಡು ಉಳಿದವುಗಳನ್ನು ಕುಂಟುವಂತೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 8:4
8 ತಿಳಿವುಗಳ ಹೋಲಿಕೆ  

ಯೆಹೋಶುವನು ಯೆಹೋವ ದೇವರ ಅಪ್ಪಣೆಯ ಪ್ರಕಾರವೇ ಅವರ ಕುದುರೆಗಳ ಹಿಂಗಾಲಿನ ನರವನ್ನು ಕೊಯ್ದುಬಿಟ್ಟು, ಅವರ ರಥಗಳನ್ನು ಬೆಂಕಿಯಿಂದ ಸುಟ್ಟುಬಿಟ್ಟನು.


ಆಗ ಯೆಹೋವ ದೇವರು ಯೆಹೋಶುವನಿಗೆ, “ಅವರಿಗೆ ಭಯಪಡಬೇಡ, ಏಕೆಂದರೆ ನಾಳೆ ಇಷ್ಟು ಹೊತ್ತಿಗೆ ಅವರೆಲ್ಲರೂ ಸಂಹಾರವಾಗುವಂತೆ ಇಸ್ರಾಯೇಲರಿಗೆ ಒಪ್ಪಿಸಿಕೊಡುವೆನು. ನೀನು ಅವರ ಕುದುರೆಗಳ ಹಿಂಗಾಲಿನ ನರವನ್ನು ಕೊಯ್ದು ಅವರ ರಥಗಳನ್ನು ಬೆಂಕಿಯಿಂದ ಸುಟ್ಟುಬಿಡಬೇಕು,” ಎಂದರು.


ಕೆಲವರು ರಥಗಳಲ್ಲಿಯೂ ಕೆಲವರು ಕುದುರೆಗಳಲ್ಲಿಯೂ ಭರವಸೆಯಿಡುತ್ತಾರೆ; ನಾವಾದರೋ ನಮ್ಮ ಯೆಹೋವ ದೇವರ ಹೆಸರಿನಲ್ಲಿ ಭರವಸೆಯನ್ನಿಡುತ್ತೇವೆ.


ದಾವೀದನು ಅವನಿಂದ ಸಾವಿರ ರಥಗಳನ್ನೂ, ಏಳು ಸಾವಿರ ರಾಹುತರನ್ನೂ, ಇಪ್ಪತ್ತು ಸಾವಿರ ಕಾಲಾಳುಗಳನ್ನೂ ವಶಪಡಿಸಿಕೊಂಡನು. ನೂರು ರಥಗಳಿಗೆ ಕುದುರೆಗಳನ್ನು ಉಳಿಸಿ, ಇತರ ಕುದುರೆಗಳ ಕಾಲಿನ ನರಗಳನ್ನು ಕೊಯ್ಯಿಸಿಬಿಟ್ಟನು.


ಇದಲ್ಲದೆ ಸೊಲೊಮೋನನು ರಥಗಳನ್ನೂ, ರಾಹುತರನ್ನೂ ಕೂಡಿಸಿದನು. ಸಾವಿರದ ನಾನೂರು ರಥಗಳು, ಹನ್ನೆರಡು ಸಾವಿರ ಕುದುರೆಯ ರಾಹುತರು ಇದ್ದರು. ಇವುಗಳಲ್ಲಿ ಕೆಲವನ್ನು ಯೆರೂಸಲೇಮಿನಲ್ಲಿ ತನ್ನ ಬಳಿಯಲ್ಲಿಯೇ ಇರಿಸಿದನು, ಉಳಿದವುಗಳನ್ನು ರಥಗಳ ಪಟ್ಟಣಗಳಲ್ಲಿಯೂ ಇರಿಸಿದನು.


ಅರಸನು ತನಗಾಗಿ ಕುದುರೆಗಳನ್ನು ಹೆಚ್ಚಿಸಿಕೊಳ್ಳಬಾರದು. ಕುದುರೆಗಳನ್ನು ಹೆಚ್ಚಿಸಿಕೊಳ್ಳುವ ಹಾಗೆ ಜನರನ್ನು ಈಜಿಪ್ಟ್ ದೇಶಕ್ಕೆ ಕಳುಹಿಸಬಾರದು. “ಆ ಮಾರ್ಗವಾಗಿ ನೀವು ಇನ್ನು ತಿರುಗಿ ಹೋಗಬಾರದು,” ಎಂದು ಯೆಹೋವ ದೇವರು ನಿಮಗೆ ಹೇಳಿದ್ದಾರೆ.


ನನ್ನ ಮನವೇ, ಅವರ ಆಲೋಚನೆಗೆ ಒಳಪಡಬೇಡ. ನನ್ನ ಪ್ರಾಣವೇ, ಅವರ ಕೂಟಗಳಲ್ಲಿ ಸೇರಬೇಡ. ಅವರು ತಮ್ಮ ಕೋಪದಲ್ಲಿ ಮನುಷ್ಯರನ್ನು ಕೊಂದರು, ಮದದಿಂದ ಎತ್ತುಗಳನ್ನು ಊನಪಡಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು