2 ಸಮುಯೇಲ 9:3 - ಕನ್ನಡ ಸಮಕಾಲಿಕ ಅನುವಾದ3 ಅರಸನು, “ನಾನು ದೇವರ ದಯೆ ತೋರಿಸುವ ಹಾಗೆ ಸೌಲನ ಕುಟುಂಬದಲ್ಲಿ ಇನ್ನೂ ಯಾವನಾದರೂ ಇದ್ದಾನೋ?” ಎಂದನು. ಆಗ ಚೀಬನು ಅರಸನಿಗೆ, “ಯೋನಾತಾನನಿಗೆ ಎರಡೂ ಕಾಲು ಕುಂಟಾದ ಮಗನಿದ್ದಾನೆ,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಅರಸನು ಅವನಿಗೆ, “ಸೌಲನ ಕುಟುಂಬದಲ್ಲಿ ಯಾರಾದರೂ ಉಳಿದಿದ್ದರೆ ಹೇಳು, ನಾನು ದೇವರನ್ನು ನೆನಸಿ ಅವರಿಗೆ ದಯೆತೋರಿಸುತ್ತೇನೆ” ಎಂದನು. ಆಗ ಚೀಬನು ಅರಸನಿಗೆ “ಯೋನಾತಾನನಿಗೆ ಎರಡೂ ಕಾಲು ಕುಂಟಾದ ಒಬ್ಬ ಮಗನಿದ್ದಾನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಆಗ ಅರಸನು, “ಸೌಲನ ಕುಟುಂಬದವರಲ್ಲಿ ಯಾರಾದರೂ ಉಳಿದಿದ್ದರೆ ಹೇಳು; ನಾನು ದೇವರನ್ನು ನೆನಸಿ ಅವರಿಗೆ ದಯೆ ತೋರಿಸುತ್ತೇನೆ,” ಎಂದನು. ಆಗ ಚೀಬನು, “ಯೋನಾತಾನನಿಗೆ, ಎರಡು ಕಾಲೂ ಕುಂಟಾದ ಒಬ್ಬ ಮಗನಿರುತ್ತಾನೆ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಅರಸನು ಅವನಿಗೆ - ಸೌಲನ ಕುಟುಂಬದವರಲ್ಲಿ ಯಾರಾದರೂ ಉಳಿದಿದ್ದರೆ ಹೇಳು; ನಾನು ದೇವರನ್ನು ನೆನಸಿ ಅವರಿಗೆ ದಯೆತೋರಿಸುತ್ತೇನೆ ಅಂದನು. ಆಗ ಚೀಬನು ಅರಸನಿಗೆ - ಯೋನಾತಾನನಿಗೆ ಎರಡು ಕಾಲೂ ಕುಂಟಾದ ಒಬ್ಬ ಮಗನಿರುತ್ತಾನೆ ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ರಾಜನಾದ ದಾವೀದನು, “ಸೌಲನ ಕುಟುಂಬದಲ್ಲಿ ಯಾವ ವ್ಯಕ್ತಿಯಾದರೂ ಉಳಿದಿರುವನೇ? ನಾನು ಆ ವ್ಯಕ್ತಿಗೆ ದೇವರ ಕರುಣೆಯನ್ನು ತೋರಿಸಬೇಕಾಗಿದೆ” ಎಂದು ಹೇಳಿದನು. ಚೀಬನು ರಾಜನಾದ ದಾವೀದನಿಗೆ, “ಯೋನಾತಾನನ ಮಗನೊಬ್ಬನು ಇನ್ನೂ ಇದ್ದಾನೆ. ಅವನ ಎರಡೂ ಕಾಲುಗಳು ಕುಂಟಾಗಿವೆ” ಎಂದನು. ಅಧ್ಯಾಯವನ್ನು ನೋಡಿ |