Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




3 ಯೋಹಾನನು 1:1 - ಕನ್ನಡ ಸಮಕಾಲಿಕ ಅನುವಾದ

1 ಹಿರಿಯನು, ಸತ್ಯದಲ್ಲಿ ಬಹಳವಾಗಿ ಪ್ರೀತಿಸುವ ಗಾಯನಿಗೆ ಬರೆಯುವುದು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಸಭೆಯ ಹಿರಿಯನಾದ ನಾನು, ಪೂರ್ಣಹೃದಯದಿಂದ ಪ್ರೀತಿಸುವ ಪ್ರಿಯ ಗಾಯನಿಗೆ ಬರೆಯುವುದೇನಂದರೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಯಥಾರ್ಥ ಪ್ರೀತಿಗೆ ಪಾತ್ರನಾದ ಗಾಯನಿಗೆ - ಸಭೆಯ ಹಿರಿಯನಾದ ನಾನು ಬರೆಯುವ ಪತ್ರ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಸಭೆಯ ಹಿರಿಯನು ತಾನು ಸತ್ಯವಾಗಿ ಪ್ರೀತಿಸುವ ಪ್ರಿಯ ಗಾಯನಿಗೆ ಬರೆಯುವದೇನಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಸಭಾಹಿರಿಯನು, ತಾನು ಸತ್ಯವಾಗಿಯೂ ಪ್ರೀತಿಸುವ, ತನ್ನ ಪ್ರಿಯ ಸ್ನೇಹಿತನಾದ ಗಾಯನಿಗೆ ಬರೆಯುವ ಪತ್ರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಮಿಯಾ ಜಾನ್ತ್ಯಾನ್, ಖರೊ ಪ್ರೆಮ್ ಕರ್ತಲ್ಯಾ ಪ್ರಿತಿಚ್ಯಾ ಗಾಯುಸಾಕ್ ಮಾಜ್ಯಾ ವಾಂಗ್ಡಿಯಾಕ್ ಲಿವ್ತಲಿ ಚಿಟ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




3 ಯೋಹಾನನು 1:1
9 ತಿಳಿವುಗಳ ಹೋಲಿಕೆ  

ನನ್ನ ಪ್ರಿಯ ಮಕ್ಕಳೇ, ನೀವು ಬರೀಮಾತಿನಿಂದಾಗಲಿ, ಹೊಗಳಿಕೆಯ ಮಾತಿನಿಂದಾಗಲಿ ಪ್ರೀತಿಸುವವರಾಗಿರದೆ ಕ್ರಿಯೆಯಲ್ಲಿಯೂ ಸತ್ಯದಲ್ಲಿಯೂ ಪ್ರೀತಿಸುವವರಾಗಿರಬೇಕು.


ಕ್ರಿಸ್ಪನನ್ನು ಮತ್ತು ಗಾಯನನ್ನು ಹೊರತು ಬೇರೆ ಯಾರಿಗೂ ನಾನು ದೀಕ್ಷಾಸ್ನಾನ ಕೊಡಲಿಲ್ಲ. ಅದಕ್ಕಾಗಿ ನಾನು ದೇವರಿಗೆ ಸ್ತೋತ್ರ ಹೇಳುತ್ತೇನೆ.


ಇಲ್ಲಿ ನನಗೂ ಇಡೀ ಸಭೆಗೂ ಅತಿಥಿ ಸತ್ಕಾರ ಮಾಡುತ್ತಿರುವ ಗಾಯನು ತನ್ನ ವಂದನೆಗಳನ್ನು ತಿಳಿಸುತ್ತಾನೆ. ಈ ಪಟ್ಟಣದ ಖಜಾಂಚಿಯಾಗಿರುವ ಎರಸ್ತನೂ ಮತ್ತು ಸಹೋದರ ಕ್ವರ್ತನೂ ನಿಮಗೆ ವಂದನೆಗಳನ್ನು ಹೇಳುತ್ತಾರೆ.


ಕೂಡಲೇ ಇಡೀ ಪಟ್ಟಣದಲ್ಲೆಲ್ಲಾ ಕೋಲಾಹಲ ಉಂಟಾಯಿತು. ಜನರು ಗುಂಪಾಗಿ ಕೂಡಿಕೊಂಡು ಬಂದು ಮಕೆದೋನ್ಯದಿಂದ ಪೌಲನೊಂದಿಗೆ ಪ್ರಯಾಣಮಾಡಿ ಬಂದ, ಗಾಯ ಮತ್ತು ಅರಿಸ್ತಾರ್ಕರನ್ನು ಬಂಧಿಸಿ ಕ್ರೀಡಾಂಗಣದೊಳಗೆ ಎಳೆದುಕೊಂಡು ಬಂದರು.


ಬೆರೋಯದ ಪುರ್ರನ ಮಗ ಸೋಪತ್ರನು, ಥೆಸಲೋನಿಕದ ಅರಿಸ್ತಾರ್ಕ ಮತ್ತು ಸೆಕುಂದ, ದೆರ್ಬೆಯ ಗಾಯ, ತಿಮೊಥೆ ಅಲ್ಲದೆ ಏಷ್ಯಾ ಪ್ರಾಂತದ ತುಖಿಕ ಹಾಗೂ ತ್ರೊಫಿಮ ಅವನೊಂದಿಗೆ ಹೋದರು.


ಇದಕ್ಕನುಗುಣವಾಗಿ ಬಾರ್ನಬ ಮತ್ತು ಸೌಲರ ಮುಖಾಂತರ ಹಿರಿಯರಿಗೆ ತಮ್ಮ ದೇಣಿಗೆಗಳನ್ನು ಕಳುಹಿಸಿದರು.


ಜೊತೆ ಹಿರಿಯನೂ ಕ್ರಿಸ್ತ ಯೇಸುವಿನ ಶ್ರಮೆಗಳ ಸಾಕ್ಷಿಯೂ ಪ್ರತ್ಯಕ್ಷವಾಗಲಿರುವ ಮಹಿಮೆಯಲ್ಲಿ ಪಾಲುಗಾರನೂ ಆಗಿರುವ ನಾನು ನಿಮ್ಮಲ್ಲಿರುವ ಹಿರಿಯರನ್ನು ಬೇಡಿಕೊಳ್ಳುವುದು.


ಪ್ರಿಯ ಸ್ನೇಹಿತನೇ, ನಿನ್ನ ಆತ್ಮವು ಅಭಿವೃದ್ಧಿ ಹೊಂದಿರುವ ಪ್ರಕಾರವೇ, ಎಲ್ಲಾ ವಿಷಯಗಳಲ್ಲಿಯೂ ನೀನು ಆರೋಗ್ಯವೂ ಅಭಿವೃದ್ಧಿಯೂ ಹೊಂದಿರಬೇಕೆಂದು ನಾನು ಪ್ರಾರ್ಥಿಸುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು