Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 1:19 - ಕನ್ನಡ ಸಮಕಾಲಿಕ ಅನುವಾದ

19 ಯೆರೂಸಲೇಮಿನಲ್ಲಿದ್ದ ಪ್ರತಿಯೊಬ್ಬರಿಗೂ ಈ ವಿಷಯ ತಿಳಿಯಿತು, ಹೀಗೆ ಆ ಹೊಲವನ್ನು ಅವರು ತಮ್ಮ ಭಾಷೆಯಲ್ಲಿ “ಅಕೆಲ್ದಮಾ” ಎಂದು ಕರೆದರು. “ರಕ್ತದ ಹೊಲ” ಎಂದು ಅದರ ಅರ್ಥ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಇದು ಯೆರೂಸಲೇಮ್ ಪಟ್ಟಣದ ನಿವಾಸಿಗಳಿಗೆಲ್ಲಾ ತಿಳಿದುಬಂದುದರಿಂದ ಆ ಹೊಲಕ್ಕೆ ಅವರ ಭಾಷೆಯಲ್ಲಿ ‘ಅಕೆಲ್ದಾಮಾ,’ ಅಂದರೆ ರಕ್ತದ ಹೊಲ ಎಂಬ ಹೆಸರು ಬಂದಿತು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಈ ವಿಷಯ ಜೆರುಸಲೇಮಿನ ನಿವಾಸಿಗಳಿಗೆಲ್ಲಾ ತಿಳಿಯಿತು. ಆ ಜಮೀನನ್ನು ತಮ್ಮ ಭಾಷೆಯಲ್ಲಿ ‘ಅಖೆಲ್ದಾಮ’ ಅಂದರೆ ‘ನೆತ್ತರನೆಲ’ ಎಂದು ಕರೆಯಲಾರಂಭಿಸಿದರು).

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಇದು ಯೆರೂಸಲೇಮ್ ಪಟ್ಟಣದ ನಿವಾಸಿಗಳಿಗೆಲ್ಲಾ ತಿಳಿದುಬಂದದರಿಂದ ಆ ಹೊಲಕ್ಕೆ ಅವರ ಮಾತಿನಲ್ಲಿ ಅಕೆಲ್ದಮಾ, ಅಂದರೆ ಜೀವಹತ್ಯದ ಹೊಲ ಎಂಬ ಹೆಸರು ಬಂತು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಇದರ ಬಗ್ಗೆ ಜೆರುಸಲೇಮಿನ ಜನರೆಲ್ಲರಿಗೂ ತಿಳಿಯಿತು. ಆದಕಾರಣವೇ ಅವರು ಆ ಹೊಲಕ್ಕೆ ಅಕೆಲ್ದಮಾ ಎಂದು ಹೆಸರಿಟ್ಟರು. ಅವರ ಭಾಷೆಯಲ್ಲಿ ಅಕೆಲ್ದಮಾ ಅಂದರೆ “ರಕ್ತದ ಹೊಲ” ಎಂದರ್ಥ.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಜೆರುಜಲೆಮಾತ್ ಜಿವನ್ ಕರ್‍ತಲ್ಯಾ ಸಗ್ಳ್ಯಾಕ್ನಿ ಹಿ ಖಬರ್ ಕಳ್ಳಿ, ಅಶೆ ತ್ಯಾ ಸೆತಾಕ್ ತೆಂಚ್ಯಾ ಬಾಶೆತ್ ಅಕೆಲ್ತಾಮಾ ಮಟ್ಲ್ಯಾರ್ ರಗ್ತಾಚೆ ಸೆತ್ ಮನುನ್ ನಾಂವ್ ಪಡ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 1:19
6 ತಿಳಿವುಗಳ ಹೋಲಿಕೆ  

ಸಹಸ್ರಾಧಿಪತಿಯ ಅಪ್ಪಣೆ ಪಡೆದುಕೊಂಡು, ಪೌಲನು ಮೆಟ್ಟಲುಗಳ ಮೇಲೆ ನಿಂತುಕೊಂಡು ಜನಸಮೂಹಕ್ಕೆ ಸುಮ್ಮನಿರುವಂತೆ ಸನ್ನೆಮಾಡಲು, ಅವರು ಬಹು ನಿಶ್ಶಬ್ದರಾದಾಗ ಅವನು ಹೀಬ್ರೂ ಭಾಷೆಯಲ್ಲಿ ಅವರಿಗೆ ಹೀಗೆಂದನು:


“ಇಸ್ರಾಯೇಲ್ ಜನರೇ, ಈ ವಿಷಯವನ್ನು ಕೇಳಿರಿ: ದೇವರು ನಜರೇತಿನ ಯೇಸುಸ್ವಾಮಿಯವರ ಮುಖಾಂತರ ನಿಮ್ಮ ಮಧ್ಯದಲ್ಲಿ ಅದ್ಭುತಕಾರ್ಯಗಳನ್ನೂ ಆಶ್ಚರ್ಯಕಾರ್ಯಗಳನ್ನೂ ಸೂಚಕಕಾರ್ಯಗಳನ್ನೂ ನಡೆಸಿದ್ದರಿಂದ, ಯೇಸು ದೇವರ ಮೆಚ್ಚಿಕೆ ಪಡೆದವರಾಗಿದ್ದಾರೆಂಬುದನ್ನು, ನೀವೇ ತಿಳಿದಿರುವಿರಿ.


ಹೀಗೆ ಅವರು ಆ ಹಣವನ್ನು ತೆಗೆದುಕೊಂಡು ತಮಗೆ ಕಲಿಸಿದಂತೆ ವರದಿಮಾಡಿದರು. ಈ ಕಥೆಯು ಈ ದಿನದವರೆಗೂ ಯೆಹೂದ್ಯರಲ್ಲಿ ಹಬ್ಬಿದೆ.


ಅವರಲ್ಲಿ ಒಬ್ಬರ ಪಕ್ಕೆಯಲ್ಲಿ ಒಬ್ಬರು ಖಡ್ಗವನ್ನು ತಿವಿದುದರಿಂದ ಎಲ್ಲರೂ ಸತ್ತುಬಿದ್ದರು. ಆದ್ದರಿಂದ ಗಿಬ್ಯೋನಿನಲ್ಲಿರುವ ಆ ಸ್ಥಳಕ್ಕೆ “ಹೆಲ್ಕಾತ್ ಹಸ್ಸೂರಿಂ” ಅಂದರೆ, “ಹದಗತ್ತಿ ಕ್ಷೇತ್ರ” ಎಂದು ಹೆಸರಾಯಿತು.


ಆಗ ಯೆಹೋವ ದೇವರು ನನಗೆ, “ಅದನ್ನು ಕುಂಬಾರನಿಗೆ ಎಸೆ. ಅವರು ನನಗೆ ಕಟ್ಟಿದ ಬೆಲೆ ಸರಿಯಾಗಿದೆ,” ಎಂದನು. ಆಗ ನಾನು, ಆ ಬೆಳ್ಳಿ ನಾಣ್ಯಗಳನ್ನು ತೆಗೆದುಕೊಂಡು, ಯೆಹೋವ ದೇವರ ಆಲಯದಲ್ಲಿ ಅವುಗಳನ್ನು ಕುಂಬಾರನಿಗೆ ಎಸೆದೆನು.


ಈ ಕಾರಣದಿಂದ ಆ ಹೊಲವನ್ನು “ರಕ್ತದ ಹೊಲ” ಎಂದು ಈ ದಿನದವರೆಗೆ ಕರೆಯಲಾಗುತ್ತಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು