ಅಪೊಸ್ತಲರ ಕೃತ್ಯಗಳು 1:24 - ಕನ್ನಡ ಸಮಕಾಲಿಕ ಅನುವಾದ24 ಆಮೇಲೆ ಅವರು, “ಕರ್ತ ಯೇಸುವೇ, ಪ್ರತಿಯೊಬ್ಬರ ಹೃದಯವನ್ನು ನೀವು ತಿಳಿದವರು. ಈ ಸೇವೆಯಿಂದ ಯೂದನು ಭ್ರಷ್ಟನಾಗಿ ತನಗೆ ತಕ್ಕ ಸ್ಥಳಕ್ಕೆ ಹೋಗಿರುವುದರಿಂದ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924-25 “ಕರ್ತನೇ, ಎಲ್ಲರ ಹೃದಯವನ್ನು ಬಲ್ಲಾತನೇ, ಯೂದನು ಅಪೊಸ್ತಲತನವೆಂಬ ಈ ಸೇವಾಸ್ಥಾನದಿಂದ ಭ್ರಷ್ಟನಾಗಿ ತಾನು ಹೋಗ ತಕ್ಕ ಸ್ಥಳಕ್ಕೆ ಹೋಗಿರುವುದರಿಂದ ಆ ಸ್ಥಾನವನ್ನು ಹೊಂದುವುದಕ್ಕೆ ಈ ಇಬ್ಬರಲ್ಲಿ ನೀನು ಆರಿಸಿ ಕೊಂಡವನನ್ನು ತೋರಿಸಿಕೊಡು” ಎಂದು ಪ್ರಾರ್ಥಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24-25 ಅನಂತರ ಎಲ್ಲರೂ ಪ್ರಾರ್ಥನೆಮಾಡುತ್ತಾ, “ಸರ್ವೇಶ್ವರಾ, ನೀವು ಸರ್ವರ ಅಂತರಂಗಗಳನ್ನು ಅರಿತಿರುವಿರಿ. ಯೂದನು ತನ್ನ ಪ್ರೇಷಿತಸ್ಥಾನದಿಂದ ಭ್ರಷ್ಟನಾದ, ತನಗೆ ತಕ್ಕುದಾದ ಸ್ಥಳಕ್ಕೆ ತೆರಳಿದ. ಈ ಸೇವಾಸ್ಥಾನಕ್ಕೆ ಇವರಿಬ್ಬರಲ್ಲಿ ನೀವು ಆರಿಸಿದವನು ಯಾರೆಂದು ನಮಗೆ ತೋರಿಸಿರಿ,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24-25 ಮತ್ತೀಯನನ್ನೂ ನಿಲ್ಲಿಸಿ ಪ್ರಾರ್ಥನೆ ಮಾಡುತ್ತಾ - ಕರ್ತನೇ, ಎಲ್ಲರ ಹೃದಯವನ್ನು ಬಲ್ಲಾತನೇ, ಯೂದನು ಅಪೊಸ್ತಲತನವೆಂಬ ಈ ಸೇವಾಸ್ಥಾನದಿಂದ ಭ್ರಷ್ಟನಾಗಿ ತನಗೆ ತಕ್ಕ ಸ್ಥಳಕ್ಕೆ ಹೋಗಿರುವದರಿಂದ ಆ ಸ್ಥಾನವನ್ನು ಹೊಂದುವದಕ್ಕೆ ಈ ಇಬ್ಬರಲ್ಲಿ ನೀನು ಆರಿಸಿಕೊಂಡವನನ್ನು ತೋರಿಸಿಕೊಡು ಎಂದು ಹೇಳಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24-25 ಅಪೊಸ್ತಲರು ಹೀಗೆ ಪ್ರಾರ್ಥಿಸಿದರು: “ಪ್ರಭುವೇ, ನೀನು ಎಲ್ಲಾ ಜನರ ಮನಸ್ಸುಗಳನ್ನು ತಿಳಿದಿರುವೆ. ಈ ಕೆಲಸವನ್ನು ಮಾಡುವುದಕ್ಕಾಗಿ ಈ ಇಬ್ಬರಲ್ಲಿ ನೀನು ಯಾರನ್ನು ಆರಿಸಿಕೊಂಡಿರುವೆ ಎಂಬುದನ್ನು ನಮಗೆ ತೋರಿಸು. ಯೂದನು ಈ ಕೆಲಸಕ್ಕೆ ವಿಮುಖನಾಗಿ ತಾನು ಸೇರಬೇಕಿದ್ದಲ್ಲಿಗೆ ಹೊರಟುಹೋದನು. ಪ್ರಭುವೇ, ಅವನ ಸ್ಥಳದಲ್ಲಿ ಅಪೊಸ್ತಲನಾಗಿ ಯಾರು ನೇಮಕಗೊಳ್ಳಬೇಕೆಂಬುದನ್ನು ನಮಗೆ ತೋರಿಸು!” ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್24 ಮಾನಾ ತೆನಿ ಅಶೆ ಮಾಗ್ನೆ ಕರ್‍ಲ್ಯಾನಿ: “ಧನಿಯಾ ಸಗ್ಳ್ಯಾಂಚಿ ಭುತ್ತುರ್‍ಲಿ ಮಾನಾ ತುಕಾ ಗೊತ್ತ್ ಹಾತ್. ದೊಗ್ಯಾಂಚ್ಯಾ ಭುತ್ತುರ್‍ಲ್ಯಾ ಕೊನಾಕ್ ತಿಯಾ ಎಚುನ್ ಕಾಡ್ಲೆ ದಾಕ್ವು, ಅಧ್ಯಾಯವನ್ನು ನೋಡಿ |
ಯೇಸು ಮೂರನೆಯ ಸಾರಿ ಪೇತ್ರನಿಗೆ, “ಯೋಹಾನನ ಮಗನಾದ ಸೀಮೋನನೇ, ನೀನು ನನ್ನ ಮೇಲೆ ಮಮತೆ ಇಟ್ಟಿದ್ದೀಯೋ?” ಎಂದು ಕೇಳಿದರು. ಯೇಸು ಮೂರನೆಯ ಸಾರಿ, “ನೀನು ನನ್ನ ಮೇಲೆ ಮಮತೆ ಇಟ್ಟಿದ್ದೀಯೋ?” ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು, “ಕರ್ತನೇ, ನಿಮಗೆ ಎಲ್ಲವೂ ತಿಳಿದಿದೆ. ನಾನು ನಿಮ್ಮ ಮೇಲೆ ಎಷ್ಟು ಮಮತೆ ಇಟ್ಟಿದ್ದೇನೆಂದು ನಿಮಗೆ ತಿಳಿದಿದೆ,” ಎಂದನು. ಆಗ ಯೇಸು ಪೇತ್ರನಿಗೆ, “ನನ್ನ ಕುರಿಗಳನ್ನು ಮೇಯಿಸು,” ಎಂದರು.
“ಇದಲ್ಲದೆ ನನ್ನ ಮಗ ಸೊಲೊಮೋನನೇ, ನೀನು ನಿನ್ನ ತಂದೆಯ ದೇವರನ್ನು ಅರಿತುಕೊಂಡು, ಪೂರ್ಣಹೃದಯದಿಂದಲೂ, ಪೂರ್ಣಮನಸ್ಸಿನಿಂದಲೂ ದೇವರನ್ನು ಸೇವಿಸು. ಏಕೆಂದರೆ, ಯೆಹೋವ ದೇವರು ಸಕಲ ಹೃದಯಗಳನ್ನು ಪರಿಶೋಧಿಸಿ, ಯೋಚನೆಗಳ ಕಲ್ಪನೆಯನ್ನೆಲ್ಲಾ ತಿಳಿದಿದ್ದಾರೆ. ನೀನು ದೇವರನ್ನು ಹುಡುಕಿದರೆ, ದೇವರು ನಿನಗೆ ಸಿಕ್ಕುವರು. ನೀನು ದೇವರನ್ನು ಬಿಟ್ಟುಬಿಟ್ಟರೆ, ದೇವರು ಸಹ ನಿನ್ನನ್ನು ಎಂದೆಂದಿಗೂ ತೊರೆದುಬಿಡುವರು.