Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 1:26 - ಕನ್ನಡ ಸಮಕಾಲಿಕ ಅನುವಾದ

26 ಅನಂತರ ಅವರು ಚೀಟು ಹಾಕಲು, ಅದು ಮತ್ತೀಯನ ಪಾಲಿಗೆ ಬಂದಿತು; ಆದ್ದರಿಂದ ಅವನು ಹನ್ನೊಂದು ಜನ ಅಪೊಸ್ತಲರೊಂದಿಗೆ ಸೇರಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಆನಂತರ ಅವರಿಗೋಸ್ಕರ ಚೀಟುಹಾಕಿದರು; ಚೀಟು ಮತ್ತೀಯನ ಪರವಾಗಿ ಬಿದ್ದುದರಿಂದ ಅವನು ಹನ್ನೊಂದು ಮಂದಿ ಅಪೊಸ್ತಲರೊಂದಿಗೆ ಸೇರಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಅನಂತರ ಚೀಟುಹಾಕಿದರು. ಅದು ಮತ್ತೀಯನ ಪರವಾಗಿತ್ತು. ಅವನನ್ನು ಹನ್ನೊಂದು ಮಂದಿಯೊಡನೆ ಪ್ರೇಷಿತಸ್ಥಾನಕ್ಕೆ ಸೇರಿಸಿಕೊಳ್ಳಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಆಮೇಲೆ ಅವರಿಗೋಸ್ಕರ ಚೀಟುಹಾಕಿದರು. ಚೀಟು ಮತ್ತೀಯನಿಗೆ ಬಂದದರಿಂದ ಅವನು ಹನ್ನೊಂದು ಮಂದಿ ಅಪೊಸ್ತಲರ ಸಂಗಡ ಸೇರಿ ಎಣಿಸಲ್ಪಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಬಳಿಕ ಅಪೊಸ್ತಲರು ಅವರಿಬ್ಬರಲ್ಲಿ ಒಬ್ಬನನ್ನು ಆರಿಸಿಕೊಳ್ಳಲು ಚೀಟಿಹಾಕಿದರು. ಚೀಟಿ ಮತ್ತೀಯನಿಗೆ ಬಂದದ್ದರಿಂದ ಹನ್ನೊಂದು ಮಂದಿಯೊಂದಿಗೆ ಅವನೂ ಅಪೊಸ್ತಲನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ಮಾನಾ ತೆಂಚ್ಯಾ ದೊಗ್ಯಾಂಚ್ಯಾ ಮದ್ದಿ ಚಿಟಿಯಾ ಘಾಟ್ಲ್ಯಾನಿ ಅನಿ ಮಾಥ್ಥಿಯಾಸಾಚೆ ನಾವ್ ವೈರ್ ಪಡ್ಲೆ ಅಶೆ ತೆಕಾ ಅಕ್ರಾ ಅಪೊಸ್ತಲಾಂಚ್ಯಾ ತಾಂಡ್ಯಾತ್ ಭುತ್ತುರ್ ಘೆವ್ನ್ ಹೊಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 1:26
15 ತಿಳಿವುಗಳ ಹೋಲಿಕೆ  

ಆರೋನನು ಆ ಎರಡು ಹೋತಗಳಿಗಾಗಿ ಚೀಟುಹಾಕಬೇಕು. ಒಂದು ಚೀಟು ಯೆಹೋವ ದೇವರಿಗೋಸ್ಕರ, ಮತ್ತೊಂದು ಚೀಟು ಬಲಿಪಶುವಿಗೋಸ್ಕರ.


ಆಗ ಯೆಹೋಶುವನು ಅವರಿಗೆ ಶೀಲೋವಿನಲ್ಲಿ ಯೆಹೋವ ದೇವರ ಮುಂದೆ ಚೀಟುಗಳನ್ನು ಹಾಕಿದನು. ಅಲ್ಲಿ ಯೆಹೋಶುವನು ಇಸ್ರಾಯೇಲರಿಗೆ ನಾಡನ್ನು ಅವರ ಗೋತ್ರಗಳ ಪ್ರಕಾರ ಪಾಲುಗಳನ್ನು ಹಂಚಿಕೊಟ್ಟನು.


ಆಗ ನಾವಿಕರು ಒಬ್ಬರಿಗೊಬ್ಬರು, “ಬನ್ನಿ, ಚೀಟುಗಳನ್ನು ಹಾಕೋಣ. ಯಾವನ ನಿಮಿತ್ತ ಈ ಕೇಡು ನಮಗೆ ಬಂತೋ ತಿಳಿಯೋಣ,” ಎಂದು ಹೇಳಿಕೊಂಡರು. ಹಾಗೆಯೇ ಅವರು ಚೀಟುಗಳನ್ನು ಹಾಕಿದಾಗ, ಯೋನನ ಮೇಲೆ ಚೀಟು ಬಿತ್ತು.


ಇವರು ಸಹ ಚೀಟುಹಾಕುವ ಮೂಲಕ ನಿಷ್ಪಕ್ಷಪಾತವಾಗಿ ವಿಭಾಗವಾಗಿದ್ದರು. ಏಕೆಂದರೆ ಪರಿಶುದ್ಧ ಸ್ಥಾನದ ಪ್ರಧಾನರೂ, ದೇವರ ಪ್ರಧಾನರೂ ಎಲಿಯಾಜರನ ಪುತ್ರರೂ, ಈತಾಮಾರನ ಪುತ್ರರೂ ಇದ್ದರು.


ಆಗ ಹನ್ನೊಂದು ಜನರೊಂದಿಗೆ ಪೇತ್ರನು ಎದ್ದು ನಿಂತುಕೊಂಡು, ಜನಸಮೂಹವನ್ನು ಉದ್ದೇಶಿಸಿ ಹೇಳಿದ್ದೇನೆಂದರೆ: “ಯೆಹೂದ್ಯರೇ, ಯೆರೂಸಲೇಮಿನ ಸರ್ವನಿವಾಸಿಗಳೇ, ಇದರ ಬಗ್ಗೆ ನಾನು ವಿವರಿಸುತ್ತೇನೆ, ಕೇಳಿರಿ. ನಾನು ಹೇಳುವುದನ್ನು ಜಾಗರೂಕತೆಯಿಂದ ಆಲಿಸಿರಿ.


ವಿವೇಕವು ವಿವೇಕಿಗಳಿಗೆ ಜೀವನದ ಬುಗ್ಗೆ, ಆದರೆ ಮೂರ್ಖತನವು ಮೂರ್ಖರಿಗೆ ಶಿಕ್ಷೆಯನ್ನು ತರುತ್ತದೆ.


ಕಾನಾನ್ ದೇಶದಲ್ಲಿದ್ದ ಏಳು ರಾಜ್ಯಗಳನ್ನು ಜಯಿಸಿ, ಅವರ ದೇಶವನ್ನು ತಮ್ಮ ಜನರಿಗೆ ಬಾಧ್ಯವಾಗಿ ದಯಪಾಲಿಸಿದರು.


ಯೆಹೋವ ದೇವರು ಮೋಶೆಯ ಮುಖಾಂತರವಾಗಿ ಆಜ್ಞಾಪಿಸಿದ ಹಾಗೆಯೇ ಒಂಬತ್ತುವರೆ ಗೋತ್ರಗಳಿಗೆ ಚೀಟುಗಳನ್ನು ಹಾಕಿ ಸೊತ್ತಾಗಿ ಪಾಲು ಹಂಚಿದರು.


ಮೋಶೆಯ ನಿಯಮದಲ್ಲಿ ಬರೆದ ಹಾಗೆ ನಮ್ಮ ದೇವರಾಗಿರುವ ಯೆಹೋವ ದೇವರ ಬಲಿಪೀಠದ ಮೇಲೆ ಅರ್ಪಿಸುವುದಕ್ಕೆ ನೇಮಿತವಾದ ಕಾಲಗಳಲ್ಲಿ, ವರ್ಷ ವರ್ಷಕ್ಕೆ ನಮ್ಮ ಪಿತೃಗಳ ಗೋತ್ರಗಳ ಪ್ರಕಾರ ನಮ್ಮ ದೇವಾಲಯದೊಳಗೆ ತೆಗೆದುಕೊಂಡು ಬರಬೇಕಾದ ಸೌದೆಯ ಅರ್ಪಣೆಗೋಸ್ಕರ ಯಾಜಕರಿಗೂ, ಲೇವಿಯರಿಗೂ, ಜನರಿಗೂ ಚೀಟಿಗಳನ್ನು ಹಾಕಿದೆವು.


ಈಗ ಜನರ ನಾಯಕರು ಯೆರೂಸಲೇಮಿನಲ್ಲಿ ನೆಲೆಸಿದರು. ಉಳಿದ ಜನರೊಳಗೆ ಹತ್ತು ಮಂದಿಯಲ್ಲಿ ಒಂಬತ್ತು ಮಂದಿ ತಮ್ಮ ತಮ್ಮ ಊರುಗಳಲ್ಲಿ ಇದ್ದುಕೊಂಡು, ಹತ್ತರಲ್ಲೊಬ್ಬರು ಪವಿತ್ರ ನಗರವಾದ ಯೆರೂಸಲೇಮಿನಲ್ಲಿ ಬಂದು ವಾಸಿಸಲು ಚೀಟುಹಾಕಿದರು.


ಉಡಿಯಲ್ಲಿ ಚೀಟು ಹಾಕಬಹುದು, ಆದರೆ ಪ್ರತಿ ತೀರ್ಪು ಯೆಹೋವ ದೇವರದ್ದೇ.


ಅಪೊಸ್ತಲರು ಹಿಂದಿರುಗಿ ಯೇಸುವಿನ ಬಳಿಗೆ ಬಂದು ತಾವು ಮಾಡಿದ್ದನ್ನೂ ಬೋಧಿಸಿದ ಎಲ್ಲವನ್ನೂ ಕುರಿತು ಅವರಿಗೆ ವರದಿಮಾಡಿದರು.


ಆಗ ಅವರು ಇಬ್ಬರು ಪುರುಷರ ಹೆಸರುಗಳನ್ನು ಸೂಚಿಸಿದರು: ಬಾರ್ಸಬ ಎಂಬ ಹೆಸರಿನ ಯೋಸೇಫ, ಇವನನ್ನು ಯೂಸ್ತ ಎಂಬುದಾಗಿಯೂ ಕರೆಯುತ್ತಿದ್ದರು ಮತ್ತು ಇನ್ನೊಬ್ಬನು ಮತ್ತೀಯ ಎಂಬುವನು.


ಪಟ್ಟಣದ ಗೋಡೆಗೆ ಹನ್ನೆರಡು ಅಸ್ತಿವಾರಗಳಿದ್ದವು. ಅವುಗಳ ಮೇಲೆ ಕುರಿಮರಿಯಾದವರ ಹನ್ನೆರಡು ಜನ ಅಪೊಸ್ತಲರ ಹೆಸರುಗಳಿದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು