Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 10:28 - ಕನ್ನಡ ಸಮಕಾಲಿಕ ಅನುವಾದ

28 ಪೇತ್ರನು ಅವರಿಗೆ: “ಯೆಹೂದ್ಯನು ಯೆಹೂದ್ಯರಲ್ಲದವರೊಂದಿಗೆ ಸೇರಿ, ಅವರನ್ನು ಭೇಟಿ ಮಾಡುವುದಾಗಲಿ ನಮ್ಮ ಯೆಹೂದಿ ನಿಯಮಕ್ಕೆ ವಿರೋಧವಾದದ್ದು ಎಂದು ನಿಮಗೆಲ್ಲರಿರೂ ತಿಳಿದೇ ಇದೆ. ಆದರೆ ಯಾವ ಮನುಷ್ಯನನ್ನೂ ಅಶುದ್ಧನು ಇಲ್ಲವೆ ನಿಷಿದ್ಧವಾದವನು ಎಂದು ಕರೆಯಬಾರದು ಎಂದು ದೇವರು ನನಗೆ ತೋರಿಸಿಕೊಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಅಲ್ಲಿ ಬಹು ಜನರು ಸೇರಿ ಬಂದಿರುವುದನ್ನು ಕಂಡು ಅವರಿಗೆ; “ಯೆಹೂದ್ಯರು, ಅನ್ಯ ಜನರೊಂದಿಗೆ ಸಂಪರ್ಕ ಇಟ್ಟುಕೊಳ್ಳುವುದು, ಅವರೊಂದಿಗೆ ವ್ಯವಹರಿಸುವುದು ಯೆಹೂದ್ಯರ ಸಂಪ್ರದಾಯಕ್ಕೆ ನಿಷಿದ್ಧವಾಗಿದೆ ಎಂಬುದು ನಿಮಗೆ ತಿಳಿದಿದೆ. ನನಗಂತೂ ಯಾವ ಮನುಷ್ಯನನ್ನೂ ಹೊಲೆಯಾದವನು, ಇಲ್ಲವೆ ಅಶುದ್ಧನು ಎಂದು ಅನ್ನಬಾರದೆಂದು ದೇವರು ತೋರಿಸಿಕೊಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಪೇತ್ರನು ಅವರಿಗೆ, “ಯೆಹೂದ್ಯನೊಬ್ಬನು ಅನ್ಯಧರ್ಮದವರೊಡನೆ ಸಂಪರ್ಕ ಇಟ್ಟುಕೊಳ್ಳುವುದು ಅಥವಾ ಅವರಿಗೆ ಭೇಟಿಕೊಡುವುದು ಧರ್ಮನಿಷಿದ್ಧ ಎಂಬುದು ನಿಮಗೆ ತಿಳಿದೇ ಇದೆ. ಆದರೆ, ನಾನು ಯಾರನ್ನೂ ಅಶುದ್ಧ ಅಥವಾ ಅಸ್ಪೃಶ್ಯ ಎನ್ನಬಾರದೆಂದು ದೇವರು ನನಗೆ ತೋರಿಸಿಕೊಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಅಲ್ಲಿ ಬಹು ಜನರು ಕೂಡಿಬಂದಿರುವದನ್ನು ಕಂಡು ಅವರಿಗೆ - ಯೆಹೂದ್ಯರು ಅನ್ಯಜನರ ಕೂಡ ಹೊಕ್ಕು ಬಳಿಕೆಮಾಡುವದು ಯೆಹೂದ್ಯರ ಸಂಪ್ರದಾಯಕ್ಕೆ ವಿರುದ್ಧವಾಗಿದೆ ಎಂದು ನೀವು ಬಲ್ಲಿರಷ್ಟೆ. ನನಗಂತೂ ಯಾವ ಮನುಷ್ಯನನ್ನಾದರೂ ಹೊಲೆಯನು ಇಲ್ಲವೆ ಅಶುದ್ಧನು ಅನ್ನಬಾರದೆಂದು ದೇವರು ತೋರಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಪೇತ್ರನು ಅವರಿಗೆ, “ಯೆಹೂದ್ಯನೊಬ್ಬನು ಅನ್ಯಜನರೊಂದಿಗೆ ಸಂಪರ್ಕವಿಟ್ಟುಕೊಳ್ಳುವುದಾಗಲಿ ಅವರನ್ನು ಭೇಟಿಮಾಡುವುದಾಗಲಿ ನಮ್ಮ ಯೆಹೂದ್ಯ ಧರ್ಮಶಾಸ್ತ್ರಕ್ಕೆ ವಿರುದ್ಧವಾದದ್ದು ಎಂಬುದು ನಿಮಗೆ ಗೊತ್ತೇ ಇದೆ. ಆದರೆ ಯಾವ ವ್ಯಕ್ತಿಯನ್ನೂ ಅಪವಿತ್ರನೆಂದಾಗಲಿ ಅಶುದ್ಧನೆಂದಾಗಲಿ ಕರೆಯಕೂಡದೆಂದು ದೇವರು ನನಗೆ ತೋರಿಸಿಕೊಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ಪೆದ್ರುನ್ ತೆಂಕಾ, “ಜುದೆವಾಂಚೊ ಎಕ್ ಮಾನುಸ್ ದುಸ್ರ್ಯಾ ಲೊಕಾಂಚ್ಯಾ ವಾಂಗ್ಡಾ ಸಂಪರ್ಕ್ ಥವ್ನ್ ಘೆತಲೆ ಹೊಂವ್ದಿ, ತೆಕಾ ಭೆಟ್ತಲೆ ಹೊಂವ್ದಿ ಹೆ ಸಗ್ಳೆ ಮೊಯ್ಜೆಚ್ಯಾ ಕರಾರಾಂಚ್ಯಾ ಪುಸ್ತಕಾಕ್ ವಿರೊದ್ ಹೊವ್ನ್ ಹಾಯ್ ಮನ್ತಲೆ ತುಮ್ಕಾ ಗೊತ್ತುಚ್ ಹಾಯ್, ಖರೆ ಖಚ್ಚ್ಯಾ ಮಾನ್ಸಾಕ್ಬಿ ಬ್ರಸ್ಟ್ ಮನುನ್ ಹೊಂವ್ದಿ ಅಶುದ್ದ್ ಮನುನ್ ಬಲ್ವುತಲೆ ಹೊಂವ್ದಿ ಕರು ನ್ಹಯ್ ಮನುನ್ ದೆವಾನ್ ಮಾಕಾ ದಾಕ್ವುನ್ ದಿಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 10:28
15 ತಿಳಿವುಗಳ ಹೋಲಿಕೆ  

ಆದ್ದರಿಂದ ಆ ಸಮಾರ್ಯ ಸ್ತ್ರೀಯು ಯೇಸುವಿಗೆ, “ನೀನು ಯೆಹೂದ್ಯನಾಗಿದ್ದು ಸಮಾರ್ಯದ ಸ್ತ್ರೀಯಾದ ನನ್ನಿಂದ ಕುಡಿಯುವುದಕ್ಕೆ ನೀರು ಕೊಡು ಎಂದು ಕೇಳುವುದು ಹೇಗೆ,” ಎಂದಳು. ಏಕೆಂದರೆ ಯೆಹೂದ್ಯರಿಗೂ ಸಮಾರ್ಯದವರಿಗೂ ಒಡನಾಟ ಇರಲಿಲ್ಲ.


“ಆಗ ಪರಲೋಕದ ಆ ವಾಣಿಯು, ‘ದೇವರು ಶುದ್ಧೀಕರಿಸಿದ ಯಾವುದನ್ನೂ ಅಶುದ್ಧವೆನ್ನಬೇಡ,’ ಎಂದು ಎರಡನೆಯ ಸಾರಿ ನನಗೆ ಹೇಳಿತು.


ಆಮೇಲೆ ಅವರು ಯೇಸುವನ್ನು ಕಾಯಫನ ಬಳಿಯಿಂದ ರೋಮನ್ ರಾಜ್ಯಪಾಲನ ನಿವಾಸಕ್ಕೆ ಸಾಗಿಸಿಕೊಂಡು ಹೋದರು. ಆಗ ಮುಂಜಾನೆಯಾಗಿತ್ತು. ತಾವು ಅಶುದ್ಧವಾಗದಂತೆ ಪಸ್ಕದ ಊಟಮಾಡುವುದಕ್ಕೆ ಅಡ್ಡಿಯಾದೀತೆಂದು ಅವರು ರಾಜ್ಯಪಾಲನ ನಿವಾಸದ ಒಳಗೆ ಹೋಗಲಿಲ್ಲ.


ಅಷ್ಟರೊಳಗೆ ಅವರ ಶಿಷ್ಯರು ಬಂದು ಯೇಸು ಆ ಸ್ತ್ರೀಯೊಂದಿಗೆ ಮಾತನಾಡುತ್ತಿರುವುದನ್ನು ಕಂಡು ಆಶ್ಚರ್ಯಪಟ್ಟರು. ಆದರೂ, “ನಿಮಗೆ ಏನು ಬೇಕು? ಆಕೆಯೊಂದಿಗೆ ಏಕೆ ಮಾತನಾಡುತ್ತಿರುವಿರಿ?” ಎಂದು ಒಬ್ಬನಾದರೂ ಕೇಳಲಿಲ್ಲ.


‘ನಿನ್ನಷ್ಟಕ್ಕೆ ನೀನೇ ನಿಂತುಕೋ, ನನ್ನ ಬಳಿಗೆ ಬರಬೇಡ. ಏಕೆಂದರೆ ನಿನಗಿಂತ ಪರಿಶುದ್ಧನಾಗಿದ್ದೇನೆ,’ ಎಂದು ಹೇಳುವರು. ಇವರು ನನ್ನ ಮೂಗಿನಲ್ಲಿ ಹೊಗೆಯಾಗಿಯೂ, ದಿನವೆಲ್ಲಾ ಉರಿಯುವ ಬೆಂಕಿಯಾಗಿಯೂ ಇದ್ದಾರೆ.


ಫರಿಸಾಯನು ನಿಂತುಕೊಂಡು: ‘ದೇವರೇ, ಸುಲಿಗೆ ಮಾಡುವವರು, ಅನೀತಿವಂತರು, ವ್ಯಭಿಚಾರಿಗಳು ಆಗಿರುವ ಉಳಿದ ಜನರಂತೆ ನಾನಲ್ಲ, ಈ ಸುಂಕದವನಂತೆಯೂ ನಾನಲ್ಲ. ಆದ್ದರಿಂದ ನಾನು ನಿನಗೆ ಸ್ತೋತ್ರ ಮಾಡುತ್ತೇನೆ.


ಆಗ ಯೇಸುವಿನ ಶಿಷ್ಯರಲ್ಲಿ ಕೆಲವರು ಅಶುದ್ಧ ಕೈಗಳಿಂದ, ಅಂದರೆ ಆಚಾರ ಪದ್ಧತಿಯಂತೆ ಕೈತೊಳೆದುಕೊಳ್ಳದೆ ಊಟಮಾಡುವುದನ್ನು ಕಂಡರು.


ಆದ್ದರಿಂದ ನನ್ನನ್ನು ಕರೆಕಳುಹಿಸಿದಾಗ ಯಾವ ಆಕ್ಷೇಪಣೆ ಮಾಡದೆ ಇಲ್ಲಿಗೆ ಬಂದಿದ್ದೇನೆ. ನನ್ನನ್ನು ಕರೆಕಳುಹಿಸಿದ ಕಾರಣವನ್ನು ಈಗ ನಾನು ತಿಳಿಯಬಹುದೋ?” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು