Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 10:33 - ಕನ್ನಡ ಸಮಕಾಲಿಕ ಅನುವಾದ

33 ಆದ್ದರಿಂದ ನಾನು ನಿನ್ನನ್ನು ಕೂಡಲೇ ಕರೆದುಕೊಂಡು ಬರಲು ಕೆಲವರನ್ನು ಕಳುಹಿಸಿದೆ. ನೀನು ಬಂದಿರುವುದು ಒಳ್ಳೆಯದೇ ಆಯಿತು. ಕರ್ತ ಯೇಸು ನಮಗೆ ಏನು ಹೇಳಬೇಕೆಂದು ನಿನಗೆ ಆಜ್ಞಾಪಿಸಿರುವರೋ ಅದೆಲ್ಲವನ್ನು ಕೇಳಲು ಈಗ ನಾವು ಇಲ್ಲಿ ದೇವರ ಸನ್ನಿಧಿಯಲ್ಲಿ ಸೇರಿದ್ದೇವೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ನಾನು ತಡಮಾಡದೆ ನಿಮ್ಮ ಹತ್ತಿರ ಜನರನ್ನು ಕಳುಹಿಸಿದೆನು. ನೀವು ಬಂದದ್ದು ಒಳ್ಳೆಯದಾಯಿತು. ಹೀಗಿರುವುದರಿಂದ ಕರ್ತನು ನಿನಗೆ ಅಪ್ಪಣೆಕೊಟ್ಟಿರುವ ಎಲ್ಲಾ ಮಾತುಗಳನ್ನು ಕೇಳುವುದಕ್ಕೆ ನಾವೆಲ್ಲರು ಈಗ ದೇವರ ಸನ್ನಿಧಾನದಲ್ಲಿ ಸೇರಿಬಂದಿದ್ದೇವೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಅಂತೆಯೇ ನಾನು ತಕ್ಷಣ ತಮ್ಮನ್ನು ಕರೆತರಲು ಕಳುಹಿಸಿದೆ. ತಾವು ಇಲ್ಲಿಗೆ ದಯಮಾಡಿಸಿದಿರಿ. ಪ್ರಭು ತಮಗೆ ಆಜ್ಞಾಪಿಸಿರುವುದನ್ನೆಲ್ಲಾ ಕೇಳಲು ನಾವೆಲ್ಲರೂ ಇಲ್ಲಿ ದೇವರ ಸನ್ನಿಧಿಯಲ್ಲಿ ಸೇರಿದ್ದೇವೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ನಾನು ತಡಮಾಡದೆ ನಿನ್ನ ಹತ್ತರ ಕಳುಹಿಸಿದೆನು. ನೀನು ಬಂದದ್ದು ಉಪಕಾರವಾಯಿತು. ಹೀಗಿರುವದರಿಂದ ಕರ್ತನು ನಿನಗೆ ಅಪ್ಪಣೆ ಕೊಟ್ಟಿರುವ ಎಲ್ಲಾ ಮಾತುಗಳನ್ನು ಕೇಳುವದಕ್ಕೆ ನಾವೆಲ್ಲರು ಈಗ ದೇವರ ಸನ್ನಿಧಾನದಲ್ಲಿ ಕೂಡಿದ್ದೇವೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಆದ್ದರಿಂದ, ನಾನು ತಕ್ಷಣ ನಿನಗೆ ಕರೆಕಳುಹಿಸಿದೆ. ನೀನು ಇಲ್ಲಿಗೆ ಬಂದದ್ದು ಉಪಕಾರವಾಯಿತು. ನಮಗೆ ತಿಳಿಸಬೇಕೆಂದು ಪ್ರಭುವು ನಿನಗೆ ಆಜ್ಞಾಪಿಸಿರುವ ಪ್ರತಿಯೊಂದನ್ನು ಕೇಳಲು ನಾವೆಲ್ಲರು ದೇವರ ಸನ್ನಿಧಿಯಲ್ಲಿ ಸೇರಿದ್ದೇವೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

33 ತಸೆ ಹೊವ್ನ್, ಮಿಯಾ ಲಗ್ಗುನಾ ತುಕಾ ಯೆವ್ಕ್ ಸಾಂಗುನ್ ಧಾಡ್ಲೊ, ತಿಯಾ ಹಿತ್ತೆ ಯೆಲ್ಲೆ ಉಪ್ಕಾರ್ ಹೊಲೊ, ಅಮ್ಕಾ ಸಾಂಗ್ ಮನುನ್ ಧನಿಯಾನ್ ತುಕಾ ಸಾಂಗಲ್ಲೆ ಹರ್ ಎಕ್‍ಬಿ ಆಯ್ಕುಕ್ ಅಮಿ ಸಗ್ಳೆ ಹಿತ್ತೆ ದೆವಾಚ್ಯಾ ಫಿಡ್ಯಾತ್ ಗೊಳಾ ಹೊಲಾಂವ್ ಮನುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 10:33
20 ತಿಳಿವುಗಳ ಹೋಲಿಕೆ  

ನನ್ನ ಪ್ರಿಯರೇ ಇದನ್ನು ತಿಳಿಯಿರಿ, ಪ್ರತಿಯೊಬ್ಬನು ಕಿವಿಗೊಡುವುದರಲ್ಲಿ ತೀವ್ರವಾಗಿಯೂ ಮಾತನಾಡುವುದರಲ್ಲಿ ಮತ್ತು ಕೋಪಿಸುವುದರಲ್ಲಿ ನಿಧಾನವಾಗಿಯೂ ಇರಲಿ.


ನನ್ನ ದೇಹಸ್ಥಿತಿ ನಿಮಗೆ ಬೇಸರಗೊಳಿಸುವುದಾಗಿದ್ದರೂ ನೀವು ನನ್ನನ್ನು ಹೀನೈಸಲಿಲ್ಲ, ತಿರಸ್ಕರಿಸಲಿಲ್ಲ. ಆದರೆ ನನ್ನನ್ನು ದೇವದೂತನಂತೆಯೂ ಕ್ರಿಸ್ತ ಯೇಸುವಿನಂತೆಯೂ ಸೇರಿಸಿಕೊಂಡಿರಿ.


ಆದಕಾರಣ ಎಲ್ಲಾ ಮಾಲಿನ್ಯವನ್ನೂ ಉಳಿದಿರುವ ದುಷ್ಟತನವನ್ನೂ ತೆಗೆದುಹಾಕಿ, ನಿಮ್ಮೊಳಗೆ ಬೇರೂರಿರುವ ವಾಕ್ಯವನ್ನು ನಮ್ರತೆಯಿಂದ ಸ್ವೀಕರಿಸಿರಿ. ಅದು ನಿಮ್ಮ ಆತ್ಮಗಳನ್ನು ರಕ್ಷಿಸುವುದಕ್ಕೆ ಸಾಮರ್ಥ್ಯವುಳ್ಳದ್ದಾಗಿದೆ.


ನಿಮ್ಮನ್ನು ನೀವೇ ಮೋಸಪಡಿಸಿಕೊಳ್ಳಬೇಡಿರಿ. ನಿಮ್ಮಲ್ಲಿ ಯಾರಾದರೂ ಇಹಲೋಕ ದೃಷ್ಟಿಯಲ್ಲಿ ತಾನು ಜಾಣನೆಂದು ಭಾವಿಸಿಕೊಂಡರೆ, ಅಂಥವನು ಜ್ಞಾನಿಯಾಗುವಂತೆ ಮೂರ್ಖನಾಗಲಿ.


“ಆದ್ದರಿಂದ ದೇವರ ರಕ್ಷಣೆಯು ಯೆಹೂದ್ಯರಲ್ಲದವರಿಗೆ ಒದಗಿ ಬಂದಿದೆ ಎಂಬುದು ನಿಮಗೆ ತಿಳಿದಿರಲಿ. ಅವರು ಅದಕ್ಕೆ ಕಿವಿಗೊಡುವರು,” ಎಂದನು.


ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಯಾರಾದರೂ ಚಿಕ್ಕಮಗುವಿನಂತೆ ದೇವರ ರಾಜ್ಯವನ್ನು ಸ್ವೀಕರಿಸದಿದ್ದರೆ, ಅವರು ಅದರೊಳಗೆ ಸೇರುವುದೇ ಇಲ್ಲ,” ಎಂದರು.


ಯಾರು ಈ ಚಿಕ್ಕಮಗುವಿನಂತೆ ತಮ್ಮನ್ನು ತಾವು ತಗ್ಗಿಸಿಕೊಳ್ಳುವರೋ ಅವರೇ ಪರಲೋಕ ರಾಜ್ಯದಲ್ಲಿ ಅತಿ ದೊಡ್ಡವರಾಗಿರುವರು.


ಕೇಳುವ ಕಿವಿಗೆ ಜ್ಞಾನಿಯ ತಿದ್ದುವಿಕೆಯು ಬಂಗಾರದ ಮುರು; ಚೊಕ್ಕ ಬಂಗಾರದ ಆಭರಣ.


ಜ್ಞಾನಿಯು ಜ್ಞಾನೋಕ್ತಿಗಳನ್ನು ಕೇಳಿ, ಜ್ಞಾನವನ್ನು ಹೆಚ್ಚಿಸಿಕೊಳ್ಳಲಿ; ವಿವೇಚಿಸುವವರು ಮಾರ್ಗದರ್ಶನವನ್ನು ಹೊಂದಿಕೊಳ್ಳಲಿ.


ಇದಲ್ಲದೆ ಯೆಹೋವ ದೇವರ ವಾಕ್ಯದಿಂದ ಉಂಟಾದ ಅರಸನ ಪ್ರಧಾನರ ಆಜ್ಞೆಯನ್ನು ಕೈಗೊಳ್ಳಲು ಅವರಿಗೆ ಒಂದೇ ಹೃದಯವನ್ನು ಕೊಡಲು ದೇವರ ಕೈ ಯೆಹೂದದವರ ಮೇಲೆ ಇತ್ತು.


ಈ ಕಾರಣಕ್ಕಾಗಿಯೇ ನಂಬುವವರಾದ ನಿಮ್ಮಲ್ಲಿ ಕಾರ್ಯಸಾಧಿಸುವ ದೇವರ ವಾಕ್ಯವನ್ನು ನಮ್ಮಿಂದ ನೀವು ಕೇಳಿದಾಗ ಅದನ್ನು ಮನುಷ್ಯರ ವಾಕ್ಯವೆಂದೆಣಿಸದೆ, ನಿಜವಾಗಿಯೂ ದೇವರ ವಾಕ್ಯವೆಂದೇ ತಿಳಿದು ಅಂಗೀಕರಿಸಿದ್ದಕ್ಕಾಗಿ ನಾವಂತೂ ಎಡೆಬಿಡದೆ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇವೆ.


ಆದರೆ ಮೊದಲನೆಯವರಾದ ಅನೇಕರು ಕಡೆಯವರಾಗುವರು, ಕಡೆಯವರಾದವರು ಮೊದಲನೆಯವರಾಗುವರು.


ವಿವೇಕಿಯ ಹೃದಯವು ತಿಳುವಳಿಕೆಯನ್ನು ಸಂಪಾದಿಸುತ್ತದೆ; ಜ್ಞಾನಿಯ ಕಿವಿಯು ತಿಳುವಳಿಕೆಯನ್ನು ಹುಡುಕುತ್ತದೆ.


ಪೇತ್ರನೆಂದು ಹೆಸರಿನ ಸೀಮೋನನನ್ನು ಕರೆದುಕೊಂಡು ಬರಲು ಯೊಪ್ಪಕ್ಕೆ ಕೆಲವರನ್ನು ಕಳುಹಿಸು. ಪೇತ್ರನು ಸಮುದ್ರ ತೀರದಲ್ಲಿರುವ ಚರ್ಮಕಾರನಾದ ಸೀಮೋನನ ಮನೆಯಲ್ಲಿ ಇಳಿದುಕೊಂಡಿದ್ದಾನೆ,’ ಎಂದು ಹೇಳಿದನು.


ಆಗ ಪೇತ್ರನು ಮಾತನಾಡಲು ಪ್ರಾರಂಭಿಸಿ: “ದೇವರು ಪಕ್ಷಪಾತಿಯಲ್ಲವೆಂದು ಈಗ ನನಗೆ ಮನದಟ್ಟಾಗಿದೆ.


“ನಾವು ಅದನ್ನು ಕೈಗೊಳ್ಳುವಂತೆ ನಮಗೋಸ್ಕರ ಯಾರು ಸಮುದ್ರವನ್ನು ದಾಟಿ, ನಮಗೆ ತೆಗೆದುಕೊಂಡು ಬಂದು ಅದನ್ನು ತಿಳಿಸುವರು?” ಎಂದು ನೀವು ಕೇಳುವಂತೆ, ಆ ವಾಕ್ಯವು ಸಮುದ್ರದ ಆಚೆಯಲ್ಲಿ ಇರುವಂಥದ್ದೂ ಅಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು