Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 10:41 - ಕನ್ನಡ ಸಮಕಾಲಿಕ ಅನುವಾದ

41 ಯೇಸುವನ್ನು ಎಲ್ಲರೂ ನೋಡಲಿಲ್ಲ. ಆದರೆ ದೇವರು ಮೊದಲೇ ನೇಮಿಸಿಕೊಂಡ ಸಾಕ್ಷಿಗಳಾಗಿರುವ ನಮಗೆ ಕಾಣಿಸಿಕೊಂಡರು. ಯೇಸು ಸತ್ತವರೊಳಗಿಂದ ಜೀವಂತವಾಗಿ ಎದ್ದು ಬಂದ ತರುವಾಯ ಅವರೊಡನೆ ಊಟ, ಪಾನಮಾಡಿದ ನಮಗೆ ಕಾಣಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 ಆತನು ಎಲ್ಲರಿಗೂ ಪ್ರತ್ಯಕ್ಷನಾಗದೆ, ದೇವರು ಮುಂಚಿತವಾಗಿ ಆರಿಸಿಕೊಂಡಿದ್ದ ಸಾಕ್ಷಿಗಳಾದ ನಮಗೆ ಪ್ರತ್ಯಕ್ಷನಾದನು. ಆತನು ಸತ್ತವರೊಳಗಿಂದ ಜೀವಿತನಾಗಿ ಎದ್ದು ಬಂದ ಮೇಲೆ ನಾವು ಆತನ ಸಂಗಡ ಊಟ ಮಾಡಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

41 ಅವರು ಕಾಣಿಸಿಕೊಂಡದ್ದು ಎಲ್ಲಾ ಜನರಿಗೆ ಅಲ್ಲ; ದೇವರಿಂದ ಸಾಕ್ಷಿಗಳಾಗಿ ಆಯ್ಕೆಯಾಗಿದ್ದ ನಮಗೆ. ಅವರು ಪುನರುತ್ಥಾನ ಹೊಂದಿದ ನಂತರ ಅವರೊಡನೆಯೇ ಊಟಮಾಡಿದವರು ನಾವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

41 ದೇವರು ಆತನನ್ನು ಮೂರನೆಯ ದಿನದಲ್ಲಿ ಎಬ್ಬಿಸಿ ಪ್ರತ್ಯಕ್ಷನಾಗುವಂತೆ ಮಾಡಿದನು; ಆತನು ಎಲ್ಲರಿಗೆ ಪ್ರತ್ಯಕ್ಷನಾಗದೆ ದೇವರು ಮುಂಚಿತವಾಗಿ ಆರಿಸಿಕೊಂಡಿದ್ದ ಸಾಕ್ಷಿಗಳಾದ ನಮಗೆ ಪ್ರತ್ಯಕ್ಷನಾದನು. ಆತನು ಸತ್ತವರೊಳಗಿಂದ ಜೀವಿತನಾಗಿ ಎದ್ದು ಬಂದ ಮೇಲೆ ನಾವು ಆತನ ಸಂಗಡ ಅನ್ನಪಾನಗಳನ್ನು ತಕ್ಕೊಂಡೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

41 ಆದರೆ ಯೇಸುವು ಎಲ್ಲಾ ಜನರಿಗೆ ಕಾಣಿಸಿಕೊಳ್ಳಲಿಲ್ಲ. ದೇವರಿಂದ ಮೊದಲೇ ಸಾಕ್ಷಿಗಳಾಗಿ ಆಯ್ಕೆಗೊಂಡಿದ್ದವರು ಮಾತ್ರ ಆತನನ್ನು ಕಂಡರು! ನಾವೇ ಆ ಸಾಕ್ಷಿಗಳು! ಯೇಸು ಜೀವಂತವಾಗಿ ಎದ್ದುಬಂದ ಮೇಲೆ ನಾವು ಆತನೊಂದಿಗೆ ಊಟ ಮಾಡಿದೆವು ಮತ್ತು ಪಾನ ಮಾಡಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

41 ಖರೆ ಜೆಜುನ್ ಸಗ್ಳ್ಯಾ ಲೊಕಾಕ್ನಿ ದಾಕ್ವುನ್ ಘೆವ್ಕ್ ನಾ, ದೆವಾಕ್ನಾ ಅದ್ದಿಚ್ ಸಾಕ್ಷಿ ಹೊವ್ನ್ ಎಚುನ್ ಘೆಟಲ್ಯಾನಿ ಎವ್ಡೆಚ್ ತೆಕಾ ಬಗ್ಲ್ಯಾನಿ! ಜೆಜು ಮರ್ನಾಕ್ನಾ ಝಿತ್ತೊ ಹೊವ್ನ್ ಉಟುನ್ ಯೆಲಾ ಮಾನಾ ಅಮಿ ತೆಚ್ಯಾ ವಾಂಗ್ಡಾ ಜೆವಾನ್ ಕರ್ಲಾಂವ್ ಅನಿ ಫಿಲಾವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 10:41
15 ತಿಳಿವುಗಳ ಹೋಲಿಕೆ  

ಇಸ್ಕರಿಯೋತ ಅಲ್ಲದ ಮತ್ತೊಬ್ಬ ಯೂದನು, “ಸ್ವಾಮೀ, ನೀವು ಲೋಕಕ್ಕೆ ಪ್ರಕಟವಾಗದೆ ನಮಗೆ ಮಾತ್ರ ಪ್ರಕಟವಾಗುವುದು ಏಕೆ?” ಎಂದು ಕೇಳಿದನು.


ಆಗ ಯೇಸು ಬಂದು ರೊಟ್ಟಿಯನ್ನು ತೆಗೆದುಕೊಂಡು ಅವರಿಗೆ ಕೊಟ್ಟರು. ಹಾಗೆಯೇ ಮೀನನ್ನೂ ಕೊಟ್ಟರು.


ಅವರೇ ಸತ್ಯದ ಆತ್ಮರಾಗಿದ್ದಾರೆ. ಲೋಕವು ಅವರನ್ನು ನೋಡದೆಯೂ ತಿಳಿಯದೆಯೂ ಇರುವುದರಿಂದ ಸತ್ಯದ ಆತ್ಮರಾಗಿರುವ ಅವರನ್ನು ಸ್ವೀಕರಿಸಲಾರದು. ನೀವು ಅವರನ್ನು ಬಲ್ಲಿರಿ. ಏಕೆಂದರೆ ಅವರು ನಿಮ್ಮೊಂದಿಗಿರುವರು ಮತ್ತು ನಿಮ್ಮೊಳಗೂ ನೆಲೆಸಿರುವರು.


“ಯೆಹೂದ್ಯರ ನಾಡಿನಲ್ಲಿ ಮತ್ತು ಯೆರೂಸಲೇಮ ಪಟ್ಟಣದಲ್ಲಿಯೂ ಯೇಸು ಮಾಡಿದ ಪ್ರತಿಯೊಂದಕ್ಕೂ ನಾವು ಸಾಕ್ಷಿಗಳು. ಮರದ ಕಂಬಕ್ಕೆ ತೂಗುಹಾಕಿ ಯೇಸುವನ್ನು ನಾಯಕರು ಕೊಂದುಹಾಕಿದರು,


ಯೇಸುವಿನೊಡನೆ ಗಲಿಲಾಯದಿಂದ ಯೆರೂಸಲೇಮಿನವರೆಗೆ ಮುಂಚೆ ಬಂದಿದ್ದವರಿಗೆ ಯೇಸು ಅನೇಕ ದಿನಗಳವರೆಗೆ ಕಾಣಿಸಿಕೊಂಡರು. ಈಗ ಅವರೇ ನಮ್ಮ ಜನರಿಗೆ ಯೇಸುವಿನ ಸಾಕ್ಷಿಗಳಾಗಿದ್ದಾರೆ.


ಅಂದರೆ, ಯೋಹಾನನಿಂದ ದೀಕ್ಷಾಸ್ನಾನ ಪಡೆದ ದಿನದಿಂದ, ಯೇಸು ಸ್ವರ್ಗಕ್ಕೆ ಏರಿಹೋದ ಕಾಲದವರೆಗೆ ನಮ್ಮ ಸಂಗಡ ಇದ್ದವನಾಗಿರಬೇಕು.” ಅವನು ಯೇಸುವಿನ ಪುನರುತ್ಥಾನಕ್ಕೆ ನಮ್ಮೊಂದಿಗೆ ಸಾಕ್ಷಿಯಾಗಿರಬೇಕು.


ನೀವು ನನ್ನನ್ನು ಆರಿಸಿಕೊಳ್ಳಲಿಲ್ಲ. ನಾನೇ ನಿಮ್ಮನ್ನು ಆರಿಸಿಕೊಂಡಿದ್ದೇನೆ. ನೀವು ಹೋಗಿ ಫಲಕೊಡುವಂತೆಯೂ ನಿಮ್ಮ ಫಲವು ಸ್ಥಿರವಾಗಿರುವಂತೆಯೂ ನಾನು ನಿಮ್ಮನ್ನು ನೇಮಿಸಿದ್ದೇನೆ. ಹೀಗೆ ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನು ಕೇಳಿಕೊಂಡರೂ ಅವರು ನಿಮಗೆ ಕೊಡುವರು.


ಯೇಸು ಆ ಇಬ್ಬರು ಶಿಷ್ಯರೊಂದಿಗೆ ಊಟಕ್ಕೆ ಕುಳಿತುಕೊಂಡಿರಲು ರೊಟ್ಟಿಯನ್ನು ತೆಗೆದುಕೊಂಡು ಆಶೀರ್ವದಿಸಿ, ಮುರಿದು ಅವರಿಗೆ ಕೊಟ್ಟರು.


ಇವುಗಳ ವಿಷಯವಾಗಿ ನೀವು ಸಾಕ್ಷಿಗಳಾಗಿದ್ದೀರಿ.


ಇನ್ನು ಸ್ವಲ್ಪ ಕಾಲವಾದ ಮೇಲೆ ಲೋಕವು ನನ್ನನ್ನು ಕಾಣುವುದಿಲ್ಲ. ಆದರೆ ನೀವು ನನ್ನನ್ನು ಕಾಣುವಿರಿ. ಏಕೆಂದರೆ ನಾನು ಜೀವಿಸುವುದರಿಂದ ನೀವು ಸಹ ಜೀವಿಸುವಿರಿ.


ನೀವು ಪ್ರಾರಂಭದಿಂದಲೂ ನನ್ನ ಸಂಗಡ ಇದ್ದುದರಿಂದ ನೀವು ಸಹ ನನಗೆ ಸಾಕ್ಷಿಗಳಾಗಿದ್ದೀರಿ.


ಒಮ್ಮೆ ಯೇಸು ಶಿಷ್ಯರೊಂದಿಗೆ ಊಟಮಾಡುತ್ತಿದ್ದಾಗ ಶಿಷ್ಯರಿಗೆ, “ನೀವು ಯೆರೂಸಲೇಮನ್ನು ಬಿಟ್ಟು ಹೋಗಬೇಡಿರಿ, ನಾನು ನಿಮಗೆ ತಿಳಿಸಿದಂತೆ ನನ್ನ ತಂದೆ ವಾಗ್ದಾನ ಮಾಡಿರುವ ವರಕ್ಕಾಗಿ ಕಾದುಕೊಂಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು