ಅಪೊಸ್ತಲರ ಕೃತ್ಯಗಳು 11:12 - ಕನ್ನಡ ಸಮಕಾಲಿಕ ಅನುವಾದ12 ಏನೂ ಸಂಶಯಪಡದೇ ಅವರ ಜೊತೆಯಲ್ಲಿ ಹೋಗಬೇಕೆಂದು ಪವಿತ್ರಾತ್ಮ ದೇವರು ನನಗೆ ಅಪ್ಪಣೆಕೊಟ್ಟರು. ಇದಲ್ಲದೆ ಈ ಆರು ಜನ ಸಹೋದರರೂ ನನ್ನೊಂದಿಗೆ ಹೊರಟರು. ನಾವು ಆ ಮನುಷ್ಯನ ಮನೆಯೊಳಗೆ ಪ್ರವೇಶಿಸಿದೆವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ದೇವರಾತ್ಮನು, ನನಗೆ ನೀನು ಏನೂ ಭೇದಮಾಡದೆ ಅವರ ಜೊತೆಯಲ್ಲಿ ಹೋಗು ಎಂದು ಹೇಳಿದನು. ಈ ಆರು ಮಂದಿ ಸಹೋದರರು ಸಹ ನನ್ನ ಸಂಗಡ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ನಾನು ಸಂಕೋಚಪಡದೆ ಅವರೊಡನೆ ಹೋಗಬೇಕೆಂದು ಪವಿತ್ರಾತ್ಮ ತಿಳಿಸಿದರು. ಜೊಪ್ಪದ ಈ ಆರುಮಂದಿ ಭಕ್ತರೂ ನನ್ನೊಡನೆ ಸೆಜರೇಯಕ್ಕೆ ಬಂದರು. ನಾವೆಲ್ಲರೂ ಕೊರ್ನೇಲಿಯನ ಮನೆಯನ್ನು ಪ್ರವೇಶಿಸಿದೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ದೇವರಾತ್ಮನು - ನೀನು ಏನೂ ಭೇದಮಾಡದೆ ಅವರ ಜೊತೆಯಲ್ಲಿ ಹೋಗು ಎಂದು ನನಗೆ ಹೇಳಿದನು. ಈ ಆರು ಮಂದಿ ಸಹೋದರರು ಸಹ ನನ್ನ ಸಂಗಡ ಬಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಸಂದೇಹಪಡದೆ ಅವರೊಂದಿಗೆ ಹೋಗಬೇಕೆಂದು ಪವಿತ್ರಾತ್ಮನು ನನಗೆ ಹೇಳಿದನು. ಇಲ್ಲಿರುವ ಈ ಆರು ಮಂದಿ ಸಹೋದರರು ನನ್ನೊಂದಿಗೆ ಬಂದರು. ನಾವು ಕೊರ್ನೇಲಿಯನ ಮನೆಗೆ ಹೋದೆವು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್12 ಅನ್ಮಾನ್ ಕರಿನಸ್ತಾನಾ ತೆಂಚ್ಯಾ ವಾಂಗ್ಡಾ ಜಾವ್ಚೆ ಮನುನ್ ಪವಿತ್ರ್ ಆತ್ಮ್ಯಾನ್ ಮಾಕಾ ಸಾಂಗ್ಲ್ಯಾನ್, ಹಿತ್ತೆ ಹೊತ್ತಿ ಹಿ ಸಾ ಲೊಕಾ ಭಾವಾಬಿ ಮಾಜ್ಯಾ ವಾಗ್ಡಾ ಸೆಜರಿಯಾಕ್ ಯೆಲಿ ಮಾನಾ ಅಮಿ ಕೊರ್ನೆಲಾಚ್ಯಾ ಘರಾಕ್ ಗೆಲ್ಲ್ಯಾಂವ್. ಅಧ್ಯಾಯವನ್ನು ನೋಡಿ |