ಅಪೊಸ್ತಲರ ಕೃತ್ಯಗಳು 11:19 - ಕನ್ನಡ ಸಮಕಾಲಿಕ ಅನುವಾದ19 ಸ್ತೆಫನನ ಮರಣದ ನಂತರ ಸಂಭವಿಸಿದ ಹಿಂಸೆಯ ನಿಮಿತ್ತ ಚದರಿಹೋದವರು ಫೊಯಿನಿಕೆ, ಸೈಪ್ರಸ್ ಮತ್ತು ಅಂತಿಯೋಕ್ಯದವರೆಗೆ ಪ್ರಯಾಣಮಾಡಿದರು. ಹೀಗೆ ಅವರು ಯೆಹೂದ್ಯರಿಗೆ ಮಾತ್ರವೇ ವಾಕ್ಯವನ್ನು ಸಾರಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಸ್ತೆಫನನ ವಿಷಯದಲ್ಲಿ ಉಂಟಾದ ಹಿಂಸೆಯಿಂದ ಚದರಿಹೋದವರು ಯೆಹೂದ್ಯರಿಗಲ್ಲದೇ ಮತ್ತಾರಿಗೂ ದೇವರ ವಾಕ್ಯವನ್ನು ಹೇಳದೆ ಫೊಯಿನಿಕೆ, ಕುಪ್ರ ಹಾಗೂ ಅಂತಿಯೋಕ್ಯ ಪ್ರಾಂತ್ಯಗಳವರೆಗೂ ಸಂಚರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಸ್ತೇಫನನು ಕೊಲೆಯಾದ ಮೊದಲ್ಗೊಂಡು ಉಂಟಾದ ಹಿಂಸಾಚಾರದ ನಿಮಿತ್ತ ಭಕ್ತಾದಿಗಳು ಚದರಿಹೋದರು. ಅವರಲ್ಲಿ ಕೆಲವರು ಫೆನಿಷ್ಯ, ಸೈಪ್ರಸ್, ಅಂತಿಯೋಕ್ಯದವರೆಗೂ ಹೋಗಿ ಶುಭಸಂದೇಶವನ್ನು ಸಾರಿದರು. ಆದರೆ ಇದನ್ನು ಸಾರಿದ್ದು ಯೆಹೂದ್ಯರಿಗೆ ಮಾತ್ರ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಸ್ತೆಫನನ ವಿಷಯದಲ್ಲಿ ಉಂಟಾದ ಹಿಂಸೆಯಿಂದ ಚದರಿಹೋದವರು ಯೆಹೂದ್ಯರಿಗೇ ಹೊರತು ಮತ್ತಾರಿಗೂ ವಾಕ್ಯವನ್ನು ಹೇಳದೆ ಫೊಯಿನಿಕೆ ಕುಪ್ರ ಅಂತಿಯೋಕ್ಯ ಪ್ರಾಂತ್ಯಗಳವರೆಗೂ ಸಂಚರಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಸ್ತೆಫನನು ಕೊಲ್ಲಲ್ಪಟ್ಟ ನಂತರ ಉಂಟಾದ ಹಿಂಸೆಯಿಂದಾಗಿ ವಿಶ್ವಾಸಿಗಳು ಚದರಿಹೋದರು. ವಿಶ್ವಾಸಿಗಳಲ್ಲಿ ಕೆಲವರು ಬಹು ದೂರದ ಸ್ಥಳಗಳಾದ ಫೆನಿಷ್ಯ, ಸೈಪ್ರಸ್ ಮತ್ತು ಅಂತಿಯೋಕ್ಯಗಳಿಗೆ ಹೋದರು. ವಿಶ್ವಾಸಿಗಳು ಈ ಸ್ಥಳಗಳಲ್ಲಿ ಸುವಾರ್ತೆಯನ್ನು ತಿಳಿಸಿದರು. ಆದರೆ ಅವರು ಯೆಹೂದ್ಯರಿಗೆ ಮಾತ್ರ ತಿಳಿಸಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್19 ಸ್ತೆಪನಾಕ್ ಜಿವಾನಿ ಮಾರುನ್ ಹೊಲ್ಲ್ಯಾ ಮಾನಾ ಯೆಲ್ಲ್ಯಾ ತರಾಸಾನಿ ದೆವಾಚಿ ಲೊಕಾ ಸಗ್ಳಿ ಪಗ್ಳುನ್ ಗೆಲ್ಲಿ, ದೆವಾಚ್ಯಾ ಲೊಕಾತ್ನಿ ಥೊಡಿ ಲೊಕಾ ಪೊಯಿನಿಕ್ಯಾ, ಸಿಪ್ರ್ ಅನಿ ಅಂತಿಯೊಕ್ಯ್ ಮನ್ತಲ್ಯಾ ಲೈ ಧುರ್‍ಲ್ಯಾ ಗಾಂವಾತ್ನಿ ಗೆಲೆ, ದೆವಾಚ್ಯಾ ಲೊಕಾನಿ ಹ್ಯಾ ಗಾಂವಾತ್ನಿ ದೆವಾಚಿ ಬರಿ ಖಬರ್ ಕಳ್ವುಲ್ಯಾನಿ ಖರೆ ತೆನಿ ಜುದೆವಾಕ್ನಿ ಎವ್ಡೆಚ್ ಕಳ್ವುಲ್ಯಾನಿ. ಅಧ್ಯಾಯವನ್ನು ನೋಡಿ |