Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 11:3 - ಕನ್ನಡ ಸಮಕಾಲಿಕ ಅನುವಾದ

3 “ಸುನ್ನತಿ ಇಲ್ಲದವರ ಮನೆಯೊಳಗೆ ಹೋಗಿ ಅವರೊಂದಿಗೆ ಊಟಮಾಡಿದೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 “ನೀನು ಸುನ್ನತಿಯಿಲ್ಲದವರಲ್ಲಿ ಸೇರಿ ಅವರ ಸಂಗಡ ಊಟಮಾಡಿದೆಯಲ್ಲಾ” ಎಂದು ಅವನ ಕೂಡ ವಾದಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 “ನೀನು ಸುನ್ನತಿಯಿಲ್ಲದ ಅನ್ಯಧರ್ಮದವರ ಮನೆಗೆ ಭೇಟಿಕೊಟ್ಟು ಅವರೊಡನೆ ಊಟಮಾಡಿದ್ದೇಕೆ?” ಎಂದು ಆಕ್ಷೇಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಅವರು, “ಯೆಹೂದ್ಯರಲ್ಲದವರ ಮತ್ತು ಸುನ್ನತಿ ಮಾಡಿಸಿಕೊಂಡಿಲ್ಲದವರ ಮನೆಗಳಿಗೆ ನೀನು ಹೋದೆ! ನೀನು ಅವರೊಂದಿಗೆ ಊಟವನ್ನು ಸಹ ಮಾಡಿದೆ!” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ತೆನಿ ಜುದೆವ್ ನ್ಹಯ್ ಹೊಲ್ಲ್ಯಾಂಚ್ಯಾ ಅನಿ ಸುನ್ನತ್ ಕರುನ್ ಘೆವ್ ನಸಲಾಂಚ್ಯಾ ಘರಾತ್ನಿ ತಿಯಾ ಗೆಲೈ! ಅನಿ ತಿಯಾ ತೆಂಚ್ಯಾ ವಾಂಗ್ಡಾ ಜೆವಾನ್ಬಿ ಕರ್‍ಲೆ! ಮನುನ್ ಸಾಂಗ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 11:3
10 ತಿಳಿವುಗಳ ಹೋಲಿಕೆ  

ಪೇತ್ರನು ಅವರಿಗೆ: “ಯೆಹೂದ್ಯನು ಯೆಹೂದ್ಯರಲ್ಲದವರೊಂದಿಗೆ ಸೇರಿ, ಅವರನ್ನು ಭೇಟಿ ಮಾಡುವುದಾಗಲಿ ನಮ್ಮ ಯೆಹೂದಿ ನಿಯಮಕ್ಕೆ ವಿರೋಧವಾದದ್ದು ಎಂದು ನಿಮಗೆಲ್ಲರಿರೂ ತಿಳಿದೇ ಇದೆ. ಆದರೆ ಯಾವ ಮನುಷ್ಯನನ್ನೂ ಅಶುದ್ಧನು ಇಲ್ಲವೆ ನಿಷಿದ್ಧವಾದವನು ಎಂದು ಕರೆಯಬಾರದು ಎಂದು ದೇವರು ನನಗೆ ತೋರಿಸಿಕೊಟ್ಟಿದ್ದಾರೆ.


ಏಕೆಂದರೆ ಯಾಕೋಬನ ಕಡೆಯಿಂದ ಕೆಲವರು ಬರುವುದಕ್ಕೆ ಮುಂಚೆ ಪೇತ್ರನು ಯೆಹೂದ್ಯರಲ್ಲದವರೊಡನೆ ಊಟಮಾಡುತ್ತಿದ್ದನು. ಅವರು ಬಂದ ಮೇಲೆ ಯೆಹೂದ್ಯರಿಗೆ ಅವನು ಭಯಪಟ್ಟು ಯೆಹೂದ್ಯರಲ್ಲದವರಿಂದ ತನ್ನನ್ನು ಪ್ರತ್ಯೇಕಿಸಿಕೊಂಡನು.


ಫರಿಸಾಯರು ಮತ್ತು ನಿಯಮ ಬೋಧಕರು, “ಈತನು ಪಾಪಿಗಳನ್ನು ಸ್ವೀಕರಿಸಿ ಅವರೊಂದಿಗೆ ಊಟಮಾಡುತ್ತಾನೆ,” ಎಂದು ಗೊಣಗುಟ್ಟಿದರು.


ಈ ಬೋಧನೆಯನ್ನು ಒಪ್ಪದಿರುವ ಯಾರಾದರೂ ನಿಮ್ಮ ಬಳಿಗೆ ಬಂದರೆ, ಅವರನ್ನು ಮನೆಯೊಳಗೆ ಸೇರಿಸಿಕೊಳ್ಳಬೇಡಿರಿ. ಅವರಿಗೆ, “ವಂದನೆ” ಎಂದೂ ಹೇಳಬೇಡಿರಿ.


ಆದರೆ ಸಹೋದರಿ ಅಥವಾ ಸಹೋದರನೆನಿಸಿಕೊಂಡವನು ಜಾರನಾದರೂ ಲೋಭಿಯಾದರೂ ವಿಗ್ರಹಾರಾಧಕನಾದರೂ ಪರನಿಂದಕನಾದರೂ ಕುಡುಕನಾದರೂ ಸುಲಿಗೆ ಮಾಡುವವನಾದರೂ ಆಗಿದ್ದರೆ, ಅಂಥವರ ಸಹವಾಸ ಮಾಡಬೇಡಿರಿ. ಅಂಥವರ ಸಂಗಡ ಊಟ ಮಾಡಲೂ ಬೇಡಿರಿ ಎಂದು ಈಗ ಬರೆಯುತ್ತಿದ್ದೇನೆ.


ಆಗ ಅವರು ಕ್ರಿಸ್ತ ಯೇಸುವಿನ ಹೆಸರಿನಲ್ಲಿ ದೀಕ್ಷಾಸ್ನಾನ ಹೊಂದುವಂತೆ ಆಜ್ಞಾಪಿಸಿದನು. ಅನಂತರ ಕೆಲವು ದಿನ ಅಲ್ಲಿಯೇ ಇರಬೇಕೆಂದು ಅವರು ಪೇತ್ರನನ್ನು ಕೇಳಿಕೊಂಡರು.


ಪೇತ್ರನು ಅವರನ್ನು ತನ್ನ ಅತಿಥಿಗಳಾಗಿರಲು ಮನೆಯೊಳಗೆ ಕರೆದನು. ಮರುದಿನ ಪೇತ್ರನು ಅವರೊಂದಿಗೆ ಪ್ರಯಾಣ ಬೆಳೆಸಿದನು. ಯೊಪ್ಪದಲ್ಲಿಯ ಕೆಲವು ಸಹೋದರರು ಅವನೊಂದಿಗೆ ಹೊರಟರು.


ಫರಿಸಾಯರು ಇದನ್ನು ಕಂಡು, “ನಿಮ್ಮ ಬೋಧಕನು ಸುಂಕದವರ ಮತ್ತು ಅಪಖ್ಯಾತಿಯ ಪಾಪಿಗಳ ಸಂಗಡ ಏಕೆ ಊಟಮಾಡುತ್ತಾನೆ?” ಎಂದು ಯೇಸುವಿನ ಶಿಷ್ಯರನ್ನು ಕೇಳಿದರು.


ಆಮೇಲೆ ಅವರು ಯೇಸುವನ್ನು ಕಾಯಫನ ಬಳಿಯಿಂದ ರೋಮನ್ ರಾಜ್ಯಪಾಲನ ನಿವಾಸಕ್ಕೆ ಸಾಗಿಸಿಕೊಂಡು ಹೋದರು. ಆಗ ಮುಂಜಾನೆಯಾಗಿತ್ತು. ತಾವು ಅಶುದ್ಧವಾಗದಂತೆ ಪಸ್ಕದ ಊಟಮಾಡುವುದಕ್ಕೆ ಅಡ್ಡಿಯಾದೀತೆಂದು ಅವರು ರಾಜ್ಯಪಾಲನ ನಿವಾಸದ ಒಳಗೆ ಹೋಗಲಿಲ್ಲ.


ಪೇತ್ರನೆಂದು ಹೆಸರಿನ ಸೀಮೋನನನ್ನು ಕರೆದುಕೊಂಡು ಬರಲು ಯೊಪ್ಪಕ್ಕೆ ಕೆಲವರನ್ನು ಕಳುಹಿಸು. ಪೇತ್ರನು ಸಮುದ್ರ ತೀರದಲ್ಲಿರುವ ಚರ್ಮಕಾರನಾದ ಸೀಮೋನನ ಮನೆಯಲ್ಲಿ ಇಳಿದುಕೊಂಡಿದ್ದಾನೆ,’ ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು