Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 11:9 - ಕನ್ನಡ ಸಮಕಾಲಿಕ ಅನುವಾದ

9 “ಆಗ ಪರಲೋಕದ ಆ ವಾಣಿಯು, ‘ದೇವರು ಶುದ್ಧೀಕರಿಸಿದ ಯಾವುದನ್ನೂ ಅಶುದ್ಧವೆನ್ನಬೇಡ,’ ಎಂದು ಎರಡನೆಯ ಸಾರಿ ನನಗೆ ಹೇಳಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅದಕ್ಕೆ; “ದೇವರು ಶುದ್ಧ ಮಾಡಿದ್ದನ್ನು ನೀನು ಹೊಲೆ ಎನ್ನಬಾರದು” ಎಂಬುದಾಗಿ ಎರಡನೆಯ ಸಾರಿಯೂ ಆಕಾಶದಿಂದ ವಾಣಿಯಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಮತ್ತೊಮ್ಮೆ ಆ ವಾಣಿ ಸ್ವರ್ಗಲೋಕದಿಂದ, ‘ದೇವರೇ ಶುದ್ಧಿಕರಿಸಿರುವ ಏನನ್ನೂ ನೀನು ಅಶುದ್ಧವೆನ್ನಬೇಡ,’ ಎಂದು ಉತ್ತರಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅದಕ್ಕೆ - ದೇವರು ಶುದ್ಧಮಾಡಿದ್ದನ್ನು ನೀನು ಹೊಲೆ ಎನ್ನಬಾರದು ಎಂಬದಾಗಿ ಎರಡನೆಯ ಸಾರಿ ಆಕಾಶವಾಣಿಯಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 “ಆದರೆ, ‘ಇವುಗಳನ್ನು ದೇವರು ಶುದ್ಧೀಕರಿಸಿದ್ದಾನೆ. ಇವುಗಳನ್ನು ಅಶದ್ಧವೆಂದು ಹೇಳಬೇಡ!’ ಎಂದು ಆ ವಾಣಿಯು ನನಗೆ ಉತ್ತರಕೊಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಖರೆ ದೆವಾನ್ ಹೆ ಶುದ್ದ್ ಕರ್‍ಲಾ ತಿಯಾ ಹೆ ಅಶುದ್ದ್ ಮನುನ್ ಸಾಂಗುನಕ್ಕೊ! ಮನುನ್ ತ್ಯಾ ಸರ್‍ಗಾ ವೈಲ್ಯಾ ಧನಾನ್ ಮಾಕಾ ಜವಾಬ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 11:9
9 ತಿಳಿವುಗಳ ಹೋಲಿಕೆ  

ದೇವರು ಅವರಿಗೂ ನಮಗೂ ಮಧ್ಯದಲ್ಲಿ ಯಾವುದೇ ವ್ಯತ್ಯಾಸವನ್ನು ಮಾಡದೆ, ವಿಶ್ವಾಸದ ಮೂಲಕ ಅವರ ಹೃದಯಗಳನ್ನು ಶುದ್ಧೀಕರಿಸಿದರು.


ಅದು ದೇವರ ವಾಕ್ಯದಿಂದಲೂ ಪ್ರಾರ್ಥನೆಯಿಂದಲೂ ಪವಿತ್ರವಾಗುತ್ತದೆ.


ಪೇತ್ರನು ಅವರಿಗೆ: “ಯೆಹೂದ್ಯನು ಯೆಹೂದ್ಯರಲ್ಲದವರೊಂದಿಗೆ ಸೇರಿ, ಅವರನ್ನು ಭೇಟಿ ಮಾಡುವುದಾಗಲಿ ನಮ್ಮ ಯೆಹೂದಿ ನಿಯಮಕ್ಕೆ ವಿರೋಧವಾದದ್ದು ಎಂದು ನಿಮಗೆಲ್ಲರಿರೂ ತಿಳಿದೇ ಇದೆ. ಆದರೆ ಯಾವ ಮನುಷ್ಯನನ್ನೂ ಅಶುದ್ಧನು ಇಲ್ಲವೆ ನಿಷಿದ್ಧವಾದವನು ಎಂದು ಕರೆಯಬಾರದು ಎಂದು ದೇವರು ನನಗೆ ತೋರಿಸಿಕೊಟ್ಟಿದ್ದಾರೆ.


ವಾಣಿಯು ಎರಡನೆಯ ಬಾರಿಗೆ, “ದೇವರು ಶುದ್ಧೀಕರಿಸಿದ ಯಾವುದನ್ನೂ ಅಶುದ್ಧವೆನ್ನಬೇಡ,” ಎಂದಿತು.


ಏಕೆಂದರೆ ಅದು ಅವನ ಹೃದಯದೊಳಗೆ ಹೋಗದೆ ಹೊಟ್ಟೆಯನ್ನು ಸೇರಿ ಬಳಿಕ ವಿಸರ್ಜಿತವಾಗುತ್ತದೆ. ಹೀಗೆ ಹೇಳುವುದರ ಮೂಲಕ ಎಲ್ಲಾ ಆಹಾರ ಪದಾರ್ಥಗಳು ಶುದ್ಧವಾಗಿವೆ,” ಎಂದು ಯೇಸು ಸೂಚಿಸಿದರು.


“ಅದಕ್ಕೆ ನಾನು, ‘ಸ್ವಾಮಿ, ನನ್ನಿಂದಾಗದು! ಅಶುದ್ಧವಾದದ್ದನ್ನೂ ನಿಷಿದ್ಧವಾದದ್ದನ್ನೂ ನಾನೆಂದೂ ತಿಂದವನಲ್ಲ,’ ಎಂದು ಉತ್ತರಕೊಟ್ಟೆನು.


ಹೀಗೆ ಮೂರು ಬಾರಿಯಾದ ತರುವಾಯ ಅವೆಲ್ಲವನ್ನೂ ಪರಲೋಕಕ್ಕೆ ಹಿಂದಿರುಗಿ ತೆಗೆದುಕೊಳ್ಳಲಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು