Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 12:21 - ಕನ್ನಡ ಸಮಕಾಲಿಕ ಅನುವಾದ

21 ನೇಮಕವಾದ ದಿನ ಹೆರೋದನು ತನ್ನ ರಾಜವಸ್ತ್ರಗಳನ್ನು ಧರಿಸಿಕೊಂಡು ಸಿಂಹಾಸನದ ಮೇಲೆ ಕುಳಿತುಕೊಂಡು ಜನರನ್ನುದ್ದೇಶಿಸಿ ಬಹಿರಂಗ ಭಾಷಣ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಗೊತ್ತುಮಾಡಿದ ಒಂದು ದಿನದಲ್ಲಿ ಹೆರೋದನು ರಾಜವಸ್ತ್ರವನ್ನು ಧರಿಸಿಕೊಂಡು ಸಿಂಹಾಸನದ ಮೇಲೆ ಕುಳಿತು ಅವರಿಗೆ ಉಪನ್ಯಾಸ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ನಿಯಮಿತ ದಿನದಂದು ಹೆರೋದನು ರಾಜಪೋಷಾಕನ್ನು ಧರಿಸಿಕೊಂಡು ಜನರನ್ನುದ್ದೇಶಿಸಿ ಭಾಷಣಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಗೊತ್ತುಮಾಡಿದ ಒಂದು ದಿನದಲ್ಲಿ ಹೆರೋದನು ರಾಜವಸ್ತ್ರವನ್ನು ಧರಿಸಿಕೊಂಡು ರಾಜಾಸನದ ಮೇಲೆ ಕೂತು ಅವರಿಗೆ ಉಪನ್ಯಾಸ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಅವರನ್ನು ಸಂಧಿಸುವುದಕ್ಕಾಗಿ ಹೆರೋದನು ದಿನವೊಂದನ್ನು ಗೊತ್ತುಮಾಡಿದನು. ಅಂದು ಹೆರೋದನು ಸುಂದರವಾದ ರಾಜವಸ್ತ್ರವನ್ನು ಧರಿಸಿಕೊಂಡಿದ್ದನು. ಅವನು ತನ್ನ ಸಿಂಹಾಸನದ ಮೇಲೆ ಕುಳಿತುಕೊಂಡು ಜನರಿಗೆ ಭಾಷಣ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ತೆಂಕಾ ಭೆಟುಕ್ ಮನುನ್ ಹೆರೊದ್ ರಾಜಾನ್ ಎಕ್‍ ದಿಸ್ ವಳಕ್ ಕರುನ್, ತ್ಯಾ ದಿಸಿ ತೆನಿ ಬರೆ ದಿಸ್ತಲೆ ರಾಜಾಚೆ ಕಪ್ಡೆ ನೆಸುನ್ ಘೆವ್ನ್ ಅಪ್ಲ್ಯಾ ಸಿವಾಸನಾರ್ ಬಸುನ್ ಲೊಕಾಕ್ನಿ ಭಾಶಾನ್ ಕರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 12:21
10 ತಿಳಿವುಗಳ ಹೋಲಿಕೆ  

ಪಿಲಾತನು ನ್ಯಾಯಾಸನದ ಮೇಲೆ ಕೂತಿದ್ದಾಗ, ಅವನ ಹೆಂಡತಿಯು ಅವನಿಗೆ, “ನೀನು ಆ ನೀತಿವಂತನ ಗೊಡವೆಗೆ ಹೋಗಬೇಡ. ಈ ದಿವಸ ನಾನು ಸ್ವಪ್ನದಲ್ಲಿ ಆತನ ವಿಷಯವಾಗಿ ಬಹಳ ಕಷ್ಟಪಟ್ಟಿದ್ದೇನೆ,” ಎಂದು ಹೇಳಿ ಕಳುಹಿಸಿದಳು.


ಅವನು ಟೈರ್ ಮತ್ತು ಸೀದೋನಿನ ಜನರೊಂದಿಗೆ ಬಹು ಕೋಪವುಳ್ಳವನಾಗಿದ್ದನು. ಈಗ ಅವರೆಲ್ಲರೂ ಒಂದಾಗಿ ಅವನ ಬಳಿ ಬಂದು ಅರಸನ ನಂಬಿಗಸ್ತ ಸೇವಕನಾದ ಬ್ಲಾಸ್ತ ಎಂಬುವನ ಬೆಂಬಲವನ್ನು ಪಡೆದುಕೊಂಡು, ಸಂಧಾನ ಮಾಡಿಕೊಳ್ಳಲು ಅರಸನನ್ನು ಕೇಳಿಕೊಂಡರು. ಏಕೆಂದರೆ ಅವರ ಆಹಾರ ಧಾನ್ಯಗಳು ಅರಸನ ಸೀಮೆಯಿಂದ ಬರುತ್ತಿದ್ದವು.


“ಇದು ಮಾನವ ಧ್ವನಿಯಲ್ಲ ದೇವರದೇ!” ಎಂದು ಜನರು ಆರ್ಭಟಿಸಿದರು.


ಇಸ್ರಾಯೇಲಿನ ಅರಸನೂ, ಯೆಹೂದದ ಅರಸನಾದ ಯೆಹೋಷಾಫಾಟನೂ, ರಾಜವಸ್ತ್ರಗಳನ್ನು ಧರಿಸಿಕೊಂಡು ಸಮಾರ್ಯದ ಬಾಗಿಲಿನ ಮುಂದೆ ಬಯಲಿನಲ್ಲಿ ತಮ್ಮ ತಮ್ಮ ಸಿಂಹಾಸನಗಳ ಮೇಲೆ ಕುಳಿತುಕೊಂಡಿದ್ದರು. ಸಕಲ ಪ್ರವಾದಿಗಳೂ ಅವರ ಮುಂದೆ ಪ್ರವಾದಿಸುತ್ತಿದ್ದರು.


ಭಯಂಕರವಾದ ಸಂಗತಿಗಳು ಅವನ ಕಿವಿಗೆ ಬೀಳುತ್ತವೆ; ಎಲ್ಲವು ಸುಖವಾಗಿರುವಾಗ ಸುಲಿಗೆ ಮಾಡುವವನು ದುಷ್ಟನ ಮೇಲೆ ದಾಳಿ ಮಾಡುತ್ತಾನೆ.


ನಾಶನಕ್ಕೆ ಮುಂಚೆ ಮನುಷ್ಯನ ಹೃದಯವು ಗರ್ವಿಷ್ಠವಾಗಿರುವುದು; ಸನ್ಮಾನಕ್ಕೆ ಮುಂಚೆ ದೀನತ್ವವು ಬರುತ್ತದೆ.


ಹೀಗಿರುವುದರಿಂದ ಪಾತಾಳವು ತನಗೆ ತಾನೇ ದೊಡ್ಡದಾಗಿ ಮಿತಿಯಿಲ್ಲದಷ್ಟು ತನ್ನ ಬಾಯಿಯನ್ನು ತೆರೆಯಲು ಅವರ ವೈಭವ, ಸಮೂಹ, ಕೋಲಾಹಲ, ಉಲ್ಲಾಸಪಡುವುದು ಇವೆಲ್ಲವೂ ಅದರಲ್ಲಿ ಬೀಳುವುವು.


ಈಗ ನಾವು ಗರ್ವಿಷ್ಠರನ್ನು ಭಾಗ್ಯವಂತರೆಂದನ್ನುತ್ತೇವೆ. ದುಷ್ಟರು ಅಭಿವೃದ್ಧಿಯಾಗುತ್ತಿದ್ದಾರೆ. ದೇವರಿಗೆ ಸವಾಲು ಹಾಕಿದವರು ತಪ್ಪಿಸಿಕೊಂಡಿದ್ದಾರೆ’ ಎಂದು ಹೇಳಿದ್ದೀರಿ.”


ಐದು ದಿನಗಳ ನಂತರ ಮಹಾಯಾಜಕ ಅನನೀಯನು ಕೆಲವು ಹಿರಿಯರೊಂದಿಗೆ ಕೈಸರೈಯಕ್ಕೆ ಬಂದನು. ತನ್ನೊಂದಿಗೆ ಟೆರ್ಟುಲಸ್ ಎಂಬ ವಕೀಲನನ್ನು ಕರೆದುಕೊಂಡು ಬಂದು, ರಾಜ್ಯಪಾಲನಿಗೆ ಪೌಲನ ವಿರೋಧವಾಗಿ ದೂರುಗಳನ್ನಿಟ್ಟರು.


ಮರುದಿನ ಅಗ್ರಿಪ್ಪನು ಹಾಗೂ ಬೆರ್ನಿಕೆಯು ಮಹಾ ವೈಭವದಿಂದ ಸೈನ್ಯಾಧಿಕಾರಿಗಳೊಂದಿಗೂ ಪಟ್ಟಣದ ಗಣ್ಯವ್ಯಕ್ತಿಗಳೊಂದಿಗೂ ಆಸ್ಥಾನವನ್ನು ಪ್ರವೇಶಿಸಿದರು. ಫೆಸ್ತನ ಆಜ್ಞೆಯಂತೆ ಪೌಲನನ್ನು ಕರೆದುಕೊಂಡು ಬಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು