Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 12:24 - ಕನ್ನಡ ಸಮಕಾಲಿಕ ಅನುವಾದ

24 ದೇವರ ವಾಕ್ಯವಾದರೋ ವೃದ್ಧಿಯಾಗುತ್ತಾ ಪ್ರಸಾರಗೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಆದರೆ ದೇವರ ವಾಕ್ಯವು ಹಬ್ಬಿ ಹೆಚ್ಚುತ್ತಾ ಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ದೇವರ ಶುಭಸಂದೇಶವಾದರೋ ಹಬ್ಬಿ ಹರಡತೊಡಗಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಆದರೆ ದೇವರ ವಾಕ್ಯವು ಹಬ್ಬಿ ಹೆಚ್ಚುತ್ತಾ ಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ದೇವರ ಸಂದೇಶವು ಹಬ್ಬುತ್ತಿತ್ತು ಮತ್ತು ಹೆಚ್ಚುಹೆಚ್ಚು ಜನರ ಮೇಲೆ ಪ್ರಭಾವ ಬೀರುತ್ತಿತ್ತು. ಇದರಿಂದ ವಿಶ್ವಾಸಿಗಳ ಸಮುದಾಯವು ದೊಡ್ಡದಾಗತೊಡಗಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ದೆವಾಚಿ ಬರಿ ಖಬರ್ ಸಗ್ಳ್ಯಾಕ್ಡೆ ಪಗ್ಳುಲಾಗಲಿ ಅನಿ ಲೈ ಲೊಕಾಕ್ನಿ ಗಾವ್ಲಾಗಲಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 12:24
13 ತಿಳಿವುಗಳ ಹೋಲಿಕೆ  

ದೇವರ ವಾಕ್ಯವು ಅಭಿವೃದ್ಧಿಯಾಗುತ್ತಾ ಬಂತು. ಯೆರೂಸಲೇಮಿನಲ್ಲಿ ಶಿಷ್ಯರ ಸಂಖ್ಯೆಯು ಬಹಳವಾಗಿ ಹೆಚ್ಚಿತು. ಯಾಜಕರಲ್ಲಿಯೂ ಅನೇಕ ಜನರು ನಂಬಿಕೆಗೆ ವಿಧೇಯರಾದರು.


ಕೊನೆಯದಾಗಿ ಪ್ರಿಯರೇ, ಕರ್ತ ಯೇಸುವಿನ ವಾಕ್ಯವು ನಿಮ್ಮಲ್ಲಿ ಹಬ್ಬಿದಂತೆ ಎಲ್ಲ ಕಡೆಗಳಲ್ಲಿಯೂ ಅತಿವೇಗದಿಂದ ಹಬ್ಬಿ ಹರಡುವಂತೆ ನಮಗಾಗಿ ಬೇಡಿಕೊಳ್ಳಿರಿ.


ಹೀಗೆ ಕರ್ತ ಯೇಸುವಿನ ವಾಕ್ಯವು ವಿಸ್ತಾರವಾಗಿ ಹರಡುತ್ತಾ ಪ್ರಬಲವಾಯಿತು.


ನಾನು ಸಹ ನಿನಗೆ ಹೇಳುವುದೇನಂದರೆ, ನೀನು ಪೇತ್ರನು. ಈ ಬಂಡೆಯ ಮೇಲೆ ನಾನು ನನ್ನ ಸಭೆಯನ್ನು ಕಟ್ಟುವೆನು. ಪಾತಾಳದ ದ್ವಾರಗಳು ಅದನ್ನು ಜಯಿಸಲಾರವು.


ಆ ಸುವಾರ್ತೆಯು ಲೋಕದಲ್ಲೆಲ್ಲಾ ಹರಡಿದಂತೆ, ನಿಮಗೂ ತಲುಪಲು ನೀವು ಸಹ ಅದನ್ನು ಕೇಳಿ ದೇವರ ಕೃಪೆಯನ್ನು ನಿಜವಾಗಿಯೂ ತಿಳಿದುಕೊಂಡ ದಿವಸದಿಂದ ನಿಮ್ಮಲ್ಲಿಯೂ ಫಲಕೊಟ್ಟು ವೃದ್ಧಿಯಾಗುತ್ತಿದೆ.


ಕರ್ತ ಯೇಸುವಿನ ಹಸ್ತವು ಅವರೊಂದಿಗಿತ್ತು ಬಹಳಷ್ಟು ಜನರು ನಂಬಿ ಕರ್ತ ಯೇಸುವಿನ ಕಡೆಗೆ ತಿರುಗಿಕೊಂಡರು.


ಒಂದು ವೇಳೆ ಇದು ದೇವರಿಂದ ಬಂದದ್ದಾಗಿದ್ದರೆ, ಅವರನ್ನು ನಿಲ್ಲಿಸಲು ನಿಮ್ಮಿಂದಾಗದು. ಹಾಗೆ ಮಾಡಲು ಪ್ರಯತ್ನಿಸಿದರೆ ನೀವು ದೇವರಿಗೆ ವಿರೋಧವಾಗಿ ಹೋರಾಡುವವರಾಗಿ ಕಂಡು ಬರುವಿರಿ,” ಎಂದು ಹೇಳಿದನು.


“ಆ ಅರಸರ ದಿವಸಗಳಲ್ಲಿ ಪರಲೋಕದ ದೇವರು ಎಂದಿಗೂ ನಾಶವಾಗದ ರಾಜ್ಯವನ್ನು ಸ್ಥಾಪಿಸುವರು. ಅದು ಬೇರೆ ಜನರಿಗೆ ಸೇರಿ ಹೋಗುವುದಿಲ್ಲ. ಅದು ಆ ರಾಜ್ಯಗಳನ್ನೆಲ್ಲಾ ಧ್ವಂಸಮಾಡಿ, ಮುಗಿಸಿ, ತಾನು ಎಂದೆಂದಿಗೂ ನಿಲ್ಲುವುದು.


ದಾನಿಯೇಲನು ಬಾಬಿಲೋನಿನ ಜ್ಞಾನಿಗಳನ್ನು ನಾಶಮಾಡಲು ಅರಸನ ಆಜ್ಞೆಯನ್ನು ಹೊಂದಿದ ಅರ್ಯೋಕನ ಹತ್ತಿರ ಹೋಗಿ ಅವನಿಗೆ, “ನೀನು ಬಾಬಿಲೋನಿನ ಜ್ಞಾನಿಗಳನ್ನು ಕೊಲ್ಲಬೇಡ. ನನ್ನನ್ನು ಅರಸನ ಮುಂದೆ ಕರೆದುಕೊಂಡು ಹೋಗು. ಆಗ ನಾನು ಅರಸನಿಗೆ ಅವನ ಕನಸಿನ ಅರ್ಥವನ್ನು ತಿಳಿಸುತ್ತೇನೆ,” ಎಂದನು.


ದುಷ್ಟರು ಎದ್ದರೆ ಜನರು ಅಡಗಿಕೊಳ್ಳುತ್ತಾರೆ, ಆದರೆ ಅವರು ನಾಶವಾದಾಗ ನೀತಿವಂತರು ವೃದ್ಧಿಯಾಗುತ್ತಾರೆ.


ಮಳೆಯೂ, ಹಿಮವೂ ಆಕಾಶದಿಂದ ಬಿದ್ದು, ಭೂಮಿಯನ್ನು ತೋಯಿಸಿ, ಹಸಿರುಗೊಳಿಸಿ, ಫಲಿಸುವಂತೆ ಮಾಡಿ, ಬಿತ್ತುವವನಿಗೆ ಬೀಜವನ್ನು, ಉಣ್ಣುವವನಿಗೆ ಆಹಾರವನ್ನು ಒದಗಿಸದ ಹೊರತು ಹೇಗೆ ಆಕಾಶಕ್ಕೆ ಸುಮ್ಮನೆ ಹಿಂದಿರುಗುವುದಿಲ್ಲವೋ, ಹಾಗೆಯೇ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು