ಅಪೊಸ್ತಲರ ಕೃತ್ಯಗಳು 13:10 - ಕನ್ನಡ ಸಮಕಾಲಿಕ ಅನುವಾದ10 “ಎಲೈ ಸೈತಾನನ ಮಗನೇ, ನೀತಿಗೆಲ್ಲಾ ವೈರಿಯೇ, ನಿನ್ನಲ್ಲಿ ಎಲ್ಲಾ ತರದ ಮೋಸವೂ ಕುತಂತ್ರವೂ ತುಂಬಿವೆ. ಕರ್ತದೇವರ ಸನ್ಮಾರ್ಗಗಳಿಗೆ ಅಡ್ಡಿಯಾಗುವುದನ್ನು ನೀನೆಂದೂ ನಿಲ್ಲಿಸುವುದಿಲ್ಲವೋ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಅವನನ್ನು ದೃಷ್ಟಿಸಿನೋಡಿ; “ಸೈತಾನನ ಮಗನೇ, ಮೋಸದಿಂದಲೂ, ಎಲ್ಲಾ ಕೆಟ್ಟತನದಿಂದಲೂ ತುಂಬಿರುವವನೇ, ಎಲ್ಲಾ ನೀತಿಗೂ ವಿರೋಧಿಯೇ, ನೀನು ಕರ್ತನ ನೇರವಾದ ಮಾರ್ಗಗಳನ್ನು ಡೊಂಕು ಮಾಡುವುದನ್ನು ಬಿಡುವುದಿಲ್ಲವೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 “ಎಲವೋ ಪಿಶಾಚಿಕೋರನೇ, ಸರ್ವಸನ್ಮಾರ್ಗಕ್ಕೆ ಶತ್ರು ನೀನು; ಎಲ್ಲಾ ತಂತ್ರ ಕುತಂತ್ರಗಳು ನಿನ್ನಲ್ಲಿ ತುಂಬಿವೆ. ಪ್ರಭುವಿನ ಸನ್ಮಾರ್ಗಕ್ಕೆ ಅಡ್ಡಿ ಆತಂಕಗಳನ್ನು ಒಡ್ಡುತ್ತಿರುವೆಯಾ? ಇಗೋ, ಈಗ ಪ್ರಭುವಿನ ಶಾಪ ನಿನ್ನ ಮೇಲಿದೆ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಎಲೋ, ಎಲ್ಲಾ ಮೋಸದಿಂದಲೂ ಎಲ್ಲಾ ಕೆಟ್ಟತನದಿಂದಲೂ ತುಂಬಿರುವವನೇ, ಸೈತಾನನ ಮಗನೇ, ಎಲ್ಲಾ ನೀತಿಗೂ ವಿರೋಧಿಯೇ, ನೀನು ಕರ್ತನ ನೀಟಾದ ಮಾರ್ಗಗಳನ್ನು ಡೊಂಕುಮಾಡುವದನ್ನು ಬಿಡುವದಿಲ್ಲವೋ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಅವನಿಗೆ, “ನೀನು ಸೈತಾನನ ಮಗ! ಪ್ರತಿಯೊಂದು ಒಳ್ಳೆಯದಕ್ಕೂ ನೀನು ಶತ್ರು! ನೀನು ದುಷ್ಟತಂತ್ರಗಳಿಂದಲೂ ಸುಳ್ಳುಗಳಿಂದಲೂ ತುಂಬಿದವನಾಗಿರುವೆ. ಪ್ರಭುವಿನ ಸತ್ಯಗಳನ್ನು ಸುಳ್ಳುಗಳನ್ನಾಗಿ ಪರಿವರ್ತಿಸಲು ನೀನು ಯಾವಾಗಲೂ ಪ್ರಯತ್ನಿಸುತ್ತಿರುವೆ! ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್10 “ತಿಯಾ ಗಿರ್ಯಾಚೊ ಲೆಕ್!” ಬರೆ ಹೊತಲ್ಯಾ ಹರ್ ಎಕ್ಲ್ಯಾಕ್ಬಿ ತಿಯಾ ದುಶ್ಮನ್ ಹೊವ್ನ್ ಹಾಸ್ ! ಧನಿಯಾಚ್ಯಾ ಖರೆ ಪಾನಾಕ್ ಝುಟೆ ಕರುಚೆ ಮನುನ್ ತಿಯಾ ಕನ್ನಾಬಿ ಕಟ್ಪಟ್ ಕರಿತ್ ರಾತೈ! ಅಧ್ಯಾಯವನ್ನು ನೋಡಿ |