Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 13:11 - ಕನ್ನಡ ಸಮಕಾಲಿಕ ಅನುವಾದ

11 ಇಗೋ ಕರ್ತದೇವರ ಹಸ್ತ ನಿನಗೆ ವಿರೋಧವಾಗಿದೆ. ಈಗ ನೀನು ಕುರುಡನಾಗಿ, ಸ್ವಲ್ಪ ಕಾಲ ಸೂರ್ಯನ ಬೆಳಕನ್ನು ಕಾಣದೇ ಹೋಗುವೆ,” ಎಂದನು. ತಕ್ಷಣವೇ ಅವನ ಮೇಲೆ ಮಂಜು ಮುಸುಕಿ ಕತ್ತಲೆ ಆವರಿಸಿತು. ಅವನು ತಡವರಿಸುತ್ತಾ ತನ್ನನ್ನು ಯಾರಾದರೂ ಕೈಹಿಡಿದು ನಡೆಸುವರೋ ಎಂದು ಹುಡುಕಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಇಗೋ, ಕರ್ತನು ನಿನಗೆ ವಿರುದ್ಧವಾಗಿ ಕೈ ಎತ್ತಿದ್ದಾನೆ; ನೀನು ಕುರುಡನಾಗಿ ಕೆಲವು ಕಾಲ ಸೂರ್ಯನನ್ನು ನೋಡದೆ ಇರುವಿ” ಎಂದು ಹೇಳಿದನು. ಆ ಕ್ಷಣವೇ ಅವನಿಗೆ ಕಣ್ಣು ಮೊಬ್ಬಾಗಿ ಕತ್ತಲೆ ಕವಿಯಿತು; ಅವನು ಕೈಹಿಡಿದು ಆಧಾರ ಕೊಡುವವರನ್ನು ಹುಡುಕುತ್ತಾ ತಿರುಗಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ನೀನು ಬೆಳಕನ್ನು ಕಾಣದೆ ಕೆಲವು ಕಾಲ ಕುರುಡನಾಗಿರುವೆ,” ಎಂದನು. ಆ ಕ್ಷಣವೇ ಎಲಿಮನ ಕಣ್ಣು ಮಬ್ಬಾಯಿತು; ಕತ್ತಲೆ ಕವಿದಂತಾಯಿತು; ಯಾರಾದರೂ ಕೈಹಿಡಿದು ನಡೆಸಲೆಂದು ಅವನು ತಡವರಿಸಲಾರಂಭಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಇಗೋ, ಕರ್ತನು ನಿನ್ನ ಮೇಲೆ ಕೈ ಎತ್ತಿದ್ದಾನೆ; ನೀನು ಕುರುಡನಾಗಿ ಕೆಲವು ಕಾಲ ಸೂರ್ಯನನ್ನು ಕಾಣದೆ ಇರುವಿ ಎಂದು ಹೇಳಿದನು. ಆ ಕ್ಷಣವೇ ಅವನಿಗೆ ಕಣ್ಣು ಮೊಬ್ಬಾಗಿ ಕತ್ತಲೆ ಉಂಟಾಯಿತು; ಅವನು ಕೈಹಿಡಿಯುವವರನ್ನು ಹುಡುಕುತ್ತಾ ತಿರುಗಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಇಗೋ, ಪ್ರಭುವು ಕೈ ಎತ್ತಿದ್ದಾನೆ. ನೀನು ಕುರಡನಾಗಿ ಸ್ವಲ್ಪಕಾಲದವರೆಗೆ ಏನನ್ನೂ ನೋಡಲಾರೆ; ಸೂರ್ಯನ ಬೆಳಕನ್ನು ಸಹ ಕಾಣಲಾರೆ” ಎಂದನು. ಆಗ ಎಲಿಮನಿಗೆ ಎಲ್ಲವೂ ಕತ್ತಲಾಯಿತು. ತನ್ನನ್ನು ಯಾರಾದರೂ ಕೈಹಿಡಿದು ನಡೆಸಲೆಂದು ಅವನು ತಡವರಿಸುತ್ತಾ ಸುತ್ತಮುತ್ತ ನಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಅಬಕ್, ಧನಿಯಾ ಹಾತ್ ತುಕಾ ವೈರ್ ಹೊವ್ನ್ ಉಟೈತಿಲ್,ಉಲ್ಲೊ ಯೆಳ್ ತುಕಾ ಕಾಯ್ಬಿ ದಿಸಿನಾ, ತಿಯಾ ಕುಡ್ಡೊ ಹೊತೈ, ದಿಸಾಚೊ ಉಜ್ವೊಡ್ಬಿ ತಿಯಾ ಬಗುಕ್ ಹೊಯ್ನಾ ಮಟ್ಲ್ಯಾನ್ ತನ್ನಾ ತಾಬೊಡ್ತೊಬ್ ಎಲಿಯಾಕ್ ಸಗ್ಳೆಬಿ ಕಾಳೊಕ್ ಹೊವ್ನ್ ಗೆಲೆ, ಕೊನ್ ತರ್ ಬಿ ಅಪ್ನಾಕ್ ಹಾತ್ ಧರುನ್ ಚಲ್ವುಂದಿತ್ ಮನುನ್ ತಳ್ಮಳ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 13:11
18 ತಿಳಿವುಗಳ ಹೋಲಿಕೆ  

ದೇವರೇ, ರಾತ್ರಿ ಹಗಲು ನಿಮ್ಮ ಕೈ ನನ್ನ ಮೇಲೆ ಭಾರವಾಗಿತ್ತು; ನನ್ನ ಬಲವು ಬೇಸಿಗೆಯ ಬಿಸಿಲಿನಲ್ಲಿ ಕುಂದಿಹೋಗುವಂತೆ ಆಯಿತು.


ಯೆಹೋವ ದೇವರ ಕೈ ಹೊಲದಲ್ಲಿರುವ ನಿನ್ನ ಪಶುಗಳ ಮೇಲೆ ಇರುವುದು. ಕುದುರೆ, ಕತ್ತೆ, ಒಂಟೆ, ಎತ್ತು, ಕುರಿ, ಆಡು ಇವುಗಳ ಮೇಲೆ ಕಠಿಣವಾದ ಉಪದ್ರವ ಬರುವುದು.


ಸಜೀವ ದೇವರ ಕೈಯಲ್ಲಿ ಬೀಳುವುದು ಭಯಂಕರವಾದದ್ದು.


ಆಗ ಆ ಇಡೀ ಪಟ್ಟಣಕ್ಕೆ ಮರಣಾಂತಿಕ ವಿನಾಶ ಉಂಟಾಗಿ, ದೇವರ ಕೈ ಅಲ್ಲಿ ಮಹಾಬಾಧಕವಾಗಿದ್ದರಿಂದ ಅವರು ಫಿಲಿಷ್ಟಿಯರ ಅಧಿಪತಿಗಳೆಲ್ಲರನ್ನು ಒಟ್ಟುಗೂಡಿಸಿ, “ಇಸ್ರಾಯೇಲ್ ದೇವರ ಮಂಜೂಷವು ನಮ್ಮನ್ನೂ, ನಮ್ಮ ಜನರನ್ನೂ ಕೊಂದು ಹಾಕದ ಹಾಗೆ ನೀವು ಅದನ್ನು ಅದರ ಸ್ವಸ್ಥಳಕ್ಕೆ ತಿರುಗಿ ಹೋಗುವಂತೆ ಕಳುಹಿಸಿಬಿಡಿರಿ,” ಎಂದರು.


ಈ ಸುಳ್ಳು ಬೋಧಕರು ನೀರಿಲ್ಲದ ಬಾವಿಗಳೂ ಬಿರುಗಾಳಿಯಿಂದ ಬಡಿಸಿಕೊಂಡು ಹಾರಿಹೋಗುವ ಮೇಘಗಳೂ ಆಗಿದ್ದಾರೆ. ಇಂಥವರ ಪಾಲಿಗೆ ಕಾರ್ಗತ್ತಲು ಇಟ್ಟಿರುವುದು.


ಯೇಸು, “ಕುರುಡರು ನೋಡುವಂತೆಯೂ ನೋಡುವವರು ಕುರುಡರಾಗುವಂತೆಯೂ ನಾನು ನ್ಯಾಯತೀರ್ಪು ಮಾಡುವುದಕ್ಕಾಗಿ ಈ ಲೋಕಕ್ಕೆ ಬಂದಿದ್ದೇನೆ,” ಎಂದರು.


“ಕನಿಕರಿಸಿರಿ, ನನ್ನ ಸ್ನೇಹಿತರೇ, ನನ್ನನ್ನು ಕನಿಕರಿಸಿರಿ, ಏಕೆಂದರೆ ದೇವರ ಕೈ ನನ್ನನ್ನು ದಂಡಿಸಿದೆ.


ಪ್ರಿಯರೇ, ನೀವು ಈ ಮರ್ಮದ ಬಗ್ಗೆ ಅಜ್ಞಾನಿಗಳಾಗಿರಬೇಕೆಂದು ನಾನು ಬಯಸುವುದಿಲ್ಲ. ಅದೇನೆಂದರೆ, ಯೆಹೂದ್ಯರಲ್ಲದವರು ಪೂರ್ಣಸಂಖ್ಯೆಯಲ್ಲಿ ದೇವರ ಬಳಿಗೆ ಬರುವವರೆಗೆ ಮಾತ್ರ ಇಸ್ರಾಯೇಲರು ತಮ್ಮ ಹೃದಯದ ಕಾಠಿಣ್ಯಕ್ಕೆ ತಾತ್ಕಾಲಿಕವಾಗಿ ಒಳಗಾಗಿರುವರು.


ಆಮೇಲೆ ಅನನೀಯನು ಆ ಮನೆಗೆ ಹೋಗಿ ಒಳಗೆ ಪ್ರವೇಶಿಸಿದನು. ತನ್ನ ಕೈಗಳನ್ನು ಸೌಲನ ಮೇಲಿಟ್ಟು, “ಸಹೋದರ ಸೌಲನೇ, ನೀನು ಇಲ್ಲಿಗೆ ಬರುತ್ತಿದ್ದಾಗ ದಾರಿಯಲ್ಲಿ ನಿನಗೆ ದರ್ಶನಕೊಟ್ಟ ಕರ್ತ ಯೇಸು, ನಿನಗೆ ಪುನಃ ದೃಷ್ಟಿ ಬರುವಂತೆಯೂ ನೀನು ಪವಿತ್ರಾತ್ಮಭರಿತನಾಗುವಂತೆಯೂ ನನ್ನನ್ನು ಕಳುಹಿಸಿದ್ದಾರೆ,” ಎಂದು ಹೇಳಲು,


ಯೆಹೋವ ದೇವರು ನಿಮ್ಮ ಮೇಲೆ ಗಾಢನಿದ್ರೆಯ ಆತ್ಮವನ್ನು ಹೊಯ್ದು, ನಿಮ್ಮ ಕಣ್ಣುಗಳನ್ನು ಮುಚ್ಚಿದ್ದಾರೆ. ಪ್ರವಾದಿಗಳನ್ನೂ, ನಿಮ್ಮ ಮುಖ್ಯಸ್ಥರಾದ ದರ್ಶಿಗಳನ್ನು ಮುಚ್ಚಿದ್ದಾರೆ.


ಏಕೆಂದರೆ, ನಿಮ್ಮ ಬಾಣಗಳು ನನ್ನಲ್ಲಿ ನಾಟಿವೆ. ನಿಮ್ಮ ಶಿಕ್ಷಾ ಹಸ್ತವು ನನ್ನ ಮೇಲೆ ಭಾರವಾಗಿದೆ.


ಅರಾಮ್ಯರ ಅರಸನು ಇಸ್ರಾಯೇಲಿನ ಮೇಲೆ ಯುದ್ಧ ಮಾಡುತ್ತಿದ್ದನು. ಇಂಥಿಂಥ ಸ್ಥಳದಲ್ಲಿ ತನ್ನ ದಂಡು ಇಳಿಯಬೇಕೆಂದು ತನ್ನ ಸೇವಕರ ಸಂಗಡ ಯೋಚನೆ ಮಾಡಿಕೊಂಡನು.


ಆದರೆ ಅವರು ಅದನ್ನು ತಂದ ತರುವಾಯ, ಯೆಹೋವ ದೇವರ ಕೈ ಆ ಪಟ್ಟಣದ ಮೇಲೆ ಬಂದು ಮಹಾ ನಾಶಮಾಡಿತು. ಇದಲ್ಲದೆ ಯೆಹೋವ ದೇವರು ಚಿಕ್ಕವರಿಂದ ಹಿರಿಯರವರೆಗೂ ಆ ಪಟ್ಟಣದ ಮನುಷ್ಯರನ್ನು ಹೊಡೆದರು. ಅವರಿಗೆ ಗಡ್ಡೆರೋಗ ಬಂದಿತು.


ಬಾಗಿಲಲ್ಲಿದ್ದವರನ್ನು ಕಿರಿಯರಿಂದ ಹಿರಿಯರವರೆಗೆ ಕುರುಡಾಗುವಂತೆ ಮಾಡಿದರು. ಆಗ ಆ ಊರಿನವರು ಬಾಗಿಲನ್ನು ಕಂಡುಕೊಳ್ಳದೆ ಬೇಸರಗೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು