Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 13:14 - ಕನ್ನಡ ಸಮಕಾಲಿಕ ಅನುವಾದ

14 ಉಳಿದವರು ಪೆರ್ಗೆದಿಂದ ಪಿಸಿದ್ಯದ ಅಂತಿಯೋಕ್ಯಕ್ಕೆ ಹೋದರು. ಸಬ್ಬತ್ ದಿನ ಅವರು ಸಭಾಮಂದಿರದೊಳಗೆ ಹೋಗಿ ಕುಳಿತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆ ಮೇಲೆ ಅವರು ಪೆರ್ಗೆಯಿಂದ ಸಂಚಾರಮಾಡಿ ಪಿಸಿದ್ಯ ಸೀಮೆಗೆ ಸೇರಿದ ಅಂತಿಯೋಕ್ಯಕ್ಕೆ ಬಂದರು. ಸಬ್ಬತ್ ದಿನದಲ್ಲಿ ಅವರು ಸಭಾಮಂದಿರದೊಳಗೆ ಹೋಗಿ ಕುಳಿತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಉಳಿದವರು ಪೆರ್ಗದಿಂದ ಹೊರಟು ಪಿಸಿದಿಯ ಸೀಮೆಗೆ ಸೇರಿದ ಅಂತಿಯೋಕ್ಯಕ್ಕೆ ಬಂದರು. ಸಬ್ಬತ್‍ದಿನದಲ್ಲಿ ಪ್ರಾರ್ಥನಾಮಂದಿರಕ್ಕೆ ಹೋಗಿ ಕುಳಿತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆಮೇಲೆ ಅವರು ಪೆರ್ಗೆಯಿಂದ ಸಂಚಾರಮಾಡಿ ಪಿಸಿದ್ಯ ಸೀಮೆಗೆ ಸೇರಿದ ಅಂತಿಯೋಕ್ಯಕ್ಕೆ ಬಂದರು. ಸಬ್ಬತ್‍ದಿನದಲ್ಲಿ ಅವರು ಸಭಾಮಂದಿರಕ್ಕೆ ಹೋಗಿ ಕೂತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಅವರು ತಮ್ಮ ಪ್ರಯಾಣವನ್ನು ಪೆರ್ಗದಿಂದ ಮುಂದುವರಿಸಿ, ಪಿಸಿದಿಯ ಸೀಮೆಗೆ ಸೇರಿದ ಅಂತಿಯೋಕ್ಯಕ್ಕೆ ಹೋದರು. ಅವರು ಅಂತಿಯೋಕ್ಯಕ್ಕೆ ಸಬ್ಬತ್ ದಿನದಂದು ಯೆಹೂದ್ಯರ ಸಭಾಮಂದಿರದೊಳಗೆ ಹೋಗಿ ಕುಳಿತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ತೆನಿ ಪೆರ್ಗೆ ಮನ್ತಲ್ಯಾ ಗಾಂವಾತ್ನಿ ಫಿಡೆ ಜಾವ್ನ್, ಪಿಸಿದಿಯಾ ಮನ್ತಲ್ಯಾ ಪ್ರಾಂತ್ಯಾಚ್ಯಾ ಅಂತಿಯೊಕಾಕ್ ಗೆಲೆ ತೆನಿ ಸಬ್ಬತಾಚ್ಯಾ ದಿಸಿ ಅಂತಿಯೊಕ್ಯಾತ್ಲಾ ಜುದೆವಾಂಚ್ಯಾ ಸಿನಾಗೊತ್ ಜಾವ್ನ್ ಬಸ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 13:14
13 ತಿಳಿವುಗಳ ಹೋಲಿಕೆ  

ಪ್ರಾರ್ಥನೆಯ ಸ್ಥಳ ಸಿಕ್ಕಬಹುದೆಂದು ಭಾವಿಸಿ ಸಬ್ಬತ್ ದಿನದಂದು ಪಟ್ಟಣದ ದ್ವಾರದ ಹೊರಗಿದ್ದ ನದಿತೀರಕ್ಕೆ ಹೋದೆವು. ಅಲ್ಲಿ ಕುಳಿತುಕೊಂಡು ಕೂಡಿಬಂದಿದ್ದ ಮಹಿಳೆಯರೊಂದಿಗೆ ಮಾತನಾಡಲು ಪ್ರಾರಂಭಿಸಿದೆವು.


ಪೌಲನು ತನ್ನ ವಾಡಿಕೆಯಂತೆ ಮೂರು ಸಬ್ಬತ್ ದಿನಗಳಂದು ಅವರ ಬಳಿ ಹೋಗಿ, ಅವರಲ್ಲಿ ಪವಿತ್ರ ವೇದಗಳ ಬಗ್ಗೆ ವಾದಿಸಿ,


ಅದೇ ಸಮಯದಲ್ಲಿ ಅಂತಿಯೋಕ್ಯ ಮತ್ತು ಇಕೋನ್ಯದಿಂದ ಕೆಲವು ಜನ ಯೆಹೂದ್ಯರು ಬಂದು ಜನಸಮೂಹವನ್ನು ತಮ್ಮ ಕಡೆಗೆ ಒಲಿಸಿಕೊಂಡು, ಪೌಲನ ಮೇಲೆ ಕಲ್ಲೆಸೆಯಲು, ಅವನು ಸತ್ತನೆಂದು ಭಾವಿಸಿ ಅವನನ್ನು ಊರ ಹೊರಗೆ ಎಳೆದು ಹಾಕಿದರು.


ಸಲಮೀಸಿಗೆ ಬಂದು, ಅಲ್ಲಿಯ ಯೆಹೂದ್ಯರ ಸಭಾಮಂದಿರಗಳಲ್ಲಿ ದೇವರ ವಾಕ್ಯವನ್ನು ಸಾರಿದರು. ಮಾರ್ಕನೆನಿಸಿಕೊಂಡ ಯೋಹಾನನು ಸಹ ಅವರೊಂದಿಗಿದ್ದು ಅವರಿಗೆ ಸಹಾಯಕನಾಗಿದ್ದನು.


ಪ್ರತಿ ಸಬ್ಬತ್ ದಿನ ಸಭಾಮಂದಿರಕ್ಕೆ ಹೋಗಿ ಯೆಹೂದ್ಯರನ್ನೂ ಗ್ರೀಕರನ್ನೂ ವಿಶ್ವಾಸಿಗಳನ್ನಾಗಿಸಲು ಪ್ರೇರೇಪಿಸುತ್ತಿದ್ದನು.


ಪೌಲನು ಸಭಾಮಂದಿರದೊಳಗೆ ಪ್ರವೇಶಿಸಿದನು. ಅಲ್ಲಿ ಮೂರು ತಿಂಗಳುಗಳ ಕಾಲ, ಧೈರ್ಯವಾಗಿ ಬೋಧನೆ ಮಾಡಿದನು. ದೇವರ ರಾಜ್ಯದ ಬಗ್ಗೆ ಅವರೊಡನೆ ಮನವೊಲಿಸುವಂತೆ ಚರ್ಚಿಸಿದನು.


ಮುಂದಿನ ಸಬ್ಬತ್ ದಿನ ಕರ್ತದೇವರ ವಾಕ್ಯ ಕೇಳಲು ನಗರದ ಜನರೆಲ್ಲರೂ ಹೆಚ್ಚಾಗಿ ಕೂಡಿಬಂದರು.


ಪೌಲ ಬಾರ್ನಬರು ಸಭಾಮಂದಿರವನ್ನು ಬಿಟ್ಟು ಹೊರಡುವಾಗ, “ಬರುವ ಸಬ್ಬತ್ ದಿನವೂ ಬಂದು ಇದೇ ವಿಷಯಗಳನ್ನು ಕುರಿತು ಮಾತನಾಡಿರಿ,” ಎಂದು ಜನರು ಅವರನ್ನು ಕೇಳಿಕೊಂಡರು.


ತಡಮಾಡದೆ, ಯೇಸುವೇ “ದೇವಪುತ್ರ” ಎಂದು ಸಭಾಮಂದಿರಗಳಲ್ಲಿ ಸಾರಲು ಪ್ರಾರಂಭಿಸಿದನು.


ಯೇಸು ತಾವು ಬೆಳೆದ ನಜರೇತಿಗೆ ಬಂದು, ತಮ್ಮ ಪದ್ಧತಿಯಂತೆ ಸಬ್ಬತ್ ದಿನದಲ್ಲಿ ಸಭಾಮಂದಿರದೊಳಕ್ಕೆ ಹೋಗಿ ಪವಿತ್ರ ವೇದದ ಸುರುಳಿಯನ್ನು ಓದುವುದಕ್ಕಾಗಿ ಎದ್ದು ನಿಂತರು.


ಆಗ ಪೌಲ, ಬಾರ್ನಬರು ಧೈರ್ಯದಿಂದ ಅವರಿಗೆ ಉತ್ತರಕೊಟ್ಟರು: “ದೇವರ ವಾಕ್ಯವನ್ನು ನಾವು ಮೊದಲು ನಿಮಗೆ ಹೇಳುವುದು ಅವಶ್ಯವಾಗಿತ್ತು. ಆದರೆ ನೀವು ಅದನ್ನು ತಳ್ಳಿಬಿಟ್ಟಿದ್ದರಿಂದಲೂ ನಿತ್ಯಜೀವಕ್ಕೆ ನೀವು ಅಯೋಗ್ಯರೆಂದು ತೀರ್ಮಾನಿಸಿಕೊಂಡಿದ್ದೀರಿ. ಆದುದರಿಂದ ಇಗೋ, ನಾವೀಗ ಯೆಹೂದ್ಯರಲ್ಲದ ಜನರ ಬಳಿಗೆ ಹೋಗುತ್ತೇವೆ.


ನಾನು ಎಂತೆಂಥ ಹಿಂಸೆಗಳನ್ನು ಸಹಿಸಿಕೊಂಡೆನೆಂಬುದನ್ನೂ ಅಂತಿಯೋಕ್ಯ, ಇಕೋನ್ಯ, ಲುಸ್ತ್ರ ಪಟ್ಟಣಗಳಲ್ಲಿ ನನಗೆ ಸಂಭವಿಸಿದ ಕಷ್ಟಾನುಭವಗಳನ್ನೂ ನನಗುಂಟಾದ ಎಲ್ಲಾ ಹಿಂಸೆಗಳನ್ನೂ ನೀನು ಪೂರ್ಣವಾಗಿ ತಿಳಿದವನಾಗಿದ್ದೀ. ಆದರೆ ಕರ್ತದೇವರು ನನ್ನನ್ನು ಇವೆಲ್ಲವುಗಳಿಂದ ಬಿಡಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು