Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 13:27 - ಕನ್ನಡ ಸಮಕಾಲಿಕ ಅನುವಾದ

27 ಯೆರೂಸಲೇಮಿನಲ್ಲಿ ವಾಸವಾಗಿರುವವರೂ ಅವರ ಅಧಿಕಾರಿಗಳೂ ಯೇಸುವನ್ನು ಯಾರೆಂದು ಗುರುತಿಸಿಲಿಲ್ಲ. ಆದರೂ ಅವರು ಪ್ರತಿ ಸಬ್ಬತ್ ದಿನದಲ್ಲಿ ಪಾರಾಯಣವಾಗುವ ಪ್ರವಾದಿಗಳ ವಾಕ್ಯಗಳನ್ನೂ ಗ್ರಹಿಸಲಿಲ್ಲ. ಅವರು ಯೇಸುವನ್ನು ಅಪರಾಧಿಯೆಂದು ತೀರ್ಪು ಮಾಡಿ, ಪ್ರವಾದಿಗಳ ವಾಕ್ಯಗಳನ್ನು ನೆರವೇರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಯೆರೂಸಲೇಮಿನಲ್ಲಿ ವಾಸವಾಗಿರುವವರೂ, ಅವರ ಅಧಿಕಾರಿಗಳೂ, ಆತನನ್ನಾಗಲಿ, ಪ್ರತಿ ಸಬ್ಬತ್ ದಿನದಲ್ಲಿ ಪಾರಾಯಣವಾಗುವ ಪ್ರವಾದಿಗಳ ಮಾತುಗಳನ್ನಾಗಲಿ ಗ್ರಹಿಸದೆ, ಆತನನ್ನು ಅಪರಾಧಿಯೆಂದು ತೀರ್ಪುಮಾಡಿ ಆ ಮಾತುಗಳನ್ನೇ ನೆರವೇರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಜೆರುಸಲೇಮಿನ ನಿವಾಸಿಗಳು ಮತ್ತು ಅವರ ಅಧಿಕಾರಿಗಳು ಯೇಸು ಲೋಕೋದ್ಧಾರಕನೆಂದು ಅರಿತುಕೊಳ್ಳಲಿಲ್ಲ. ಪ್ರತಿ ಸಬ್ಬತ್‍ದಿನ ಓದಲಾದ ಪ್ರವಾದಿಗಳ ವಾಕ್ಯಗಳನ್ನು ಅವರು ಗ್ರಹಿಸಿಕೊಳ್ಳಲಿಲ್ಲ. ಯೇಸುವಿಗೆ ಮರಣದಂಡನೆಯನ್ನು ವಿಧಿಸಿ ಆ ಪ್ರವಾದನೆಗಳು ನಿಜವಾಗಲು ಕಾರಣರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಯೆರೂಸಲೇವಿುನಲ್ಲಿ ವಾಸವಾಗಿರುವವರೂ ಅವರ ಅಧಿಕಾರಿಗಳೂ ಆತನನ್ನಾಗಲಿ ಪ್ರತಿ ಸಬ್ಬತ್ ದಿನದಲ್ಲಿ ಪಾರಾಯಣವಾಗುವ ಪ್ರವಾದಿಗಳ ವಾಕ್ಯಗಳನ್ನಾಗಲಿ ಗ್ರಹಿಸದೆ ಆತನನ್ನು ಅಪರಾಧಿಯೆಂದು ತೀರ್ಪುಮಾಡಿ ಆ ವಾಕ್ಯಗಳನ್ನೇ ನೆರವೇರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಜೆರುಸಲೇಮಿನಲ್ಲಿ ವಾಸವಾಗಿದ್ದ ಯೆಹೂದ್ಯರು ಮತ್ತು ಯೆಹೂದ್ಯನಾಯಕರು ಯೇಸುವೇ ರಕ್ಷಕನೆಂಬುದನ್ನು ಅರ್ಥಮಾಡಿಕೊಳ್ಳಲಿಲ್ಲ. ಪ್ರವಾದಿಗಳು ಯೇಸುವಿನ ಬಗ್ಗೆ ಬರೆದಿದ್ದ ಮಾತುಗಳನ್ನು ಪ್ರತಿ ಸಬ್ಬತ್‌ದಿನದಂದು ಓದಲಾಗುತ್ತಿತ್ತು. ಆದರೆ ಅವರು ಅರ್ಥಮಾಡಿಕೊಳ್ಳಲಿಲ್ಲ. ಆ ಯೆಹೂದ್ಯರು ಯೇಸುವನ್ನು ಅಪರಾಧಿಯೆಂದು ತೀರ್ಪುಮಾಡಿದರು. ಹೀಗೆ ಮಾಡುವುದರ ಮೂಲಕವಾಗಿ ಅವರು ಪ್ರವಾದಿಗಳ ನುಡಿಗಳನ್ನು ನೆರವೇರಿಸಿದರು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ಜೆರುಜಲೆಮಾತ್ ಹೊತ್ತ್ಯಾ ಜುದೆವಾನಿ ಅನಿ ಜುದೆವಾಂಚ್ಯಾ ಮುಂಖಡಾನಿ ಜೆಜುಚ್ ಅರ್ಥ್ ಕರುನ್ ಘೆವ್ಕ್ ನಾತ್, ಹರ್ ಎಕ್ ಸಬ್ಬತಾಚ್ಯಾ ದಿಸಾಬಿ ಪ್ರವಾದ್ಯಾಚಿ ಗೊಸ್ಟಿಯಾ ಪುರಾ ಹೊಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 13:27
25 ತಿಳಿವುಗಳ ಹೋಲಿಕೆ  

“ಈಗ, ಪ್ರಿಯರೇ, ನೀವು ಅಜ್ಞಾನದಿಂದ ಹಾಗೆ ವರ್ತಿಸಿದಿರೆಂದು ನನಗೆ ಗೊತ್ತು. ಹಾಗೆಯೇ ನಿಮ್ಮ ನಾಯಕರೂ ಮಾಡಿದರು.


ಪ್ರಿಯರೇ, ನೀವು ಈ ಮರ್ಮದ ಬಗ್ಗೆ ಅಜ್ಞಾನಿಗಳಾಗಿರಬೇಕೆಂದು ನಾನು ಬಯಸುವುದಿಲ್ಲ. ಅದೇನೆಂದರೆ, ಯೆಹೂದ್ಯರಲ್ಲದವರು ಪೂರ್ಣಸಂಖ್ಯೆಯಲ್ಲಿ ದೇವರ ಬಳಿಗೆ ಬರುವವರೆಗೆ ಮಾತ್ರ ಇಸ್ರಾಯೇಲರು ತಮ್ಮ ಹೃದಯದ ಕಾಠಿಣ್ಯಕ್ಕೆ ತಾತ್ಕಾಲಿಕವಾಗಿ ಒಳಗಾಗಿರುವರು.


ಏಕೆಂದರೆ ಆರಂಭ ಕಾಲದಿಂದಲೂ ಪ್ರತಿಯೊಂದು ಪಟ್ಟಣದಲ್ಲಿ ಮೋಶೆಯ ಗ್ರಂಥವನ್ನು ಬೋಧಿಸಲಾಗುತ್ತದೆ ಹಾಗೂ ಪ್ರತಿ ಸಬ್ಬತ್ ದಿನ ಸಭಾಮಂದಿರಗಳಲ್ಲಿ ಓದಲಾಗುತ್ತದೆ,” ಎಂದು ಹೇಳಿದನು.


ಮುಖ್ಯಯಾಜಕರೂ ನಮ್ಮ ಅಧಿಕಾರಿಗಳೂ ಯೇಸುವನ್ನು ಮರಣದಂಡನೆಗೆ ಒಪ್ಪಿಸಿಕೊಟ್ಟು, ಅವರನ್ನು ಶಿಲುಬೆಗೆ ಹಾಕಿದರು.


ಈ ಲೋಕದ ದೇವರು ನಂಬದವರ ಮನಸ್ಸನ್ನು ಕುರುಡುಮಾಡಿರುತ್ತಾನೆ. ಆದ್ದರಿಂದ ದೇವರ ಸ್ವರೂಪವಾಗಿರುವ ಕ್ರಿಸ್ತ ಯೇಸುವಿನ ಸುವಾರ್ತೆಯ ಮಹಿಮೆಯ ಬೆಳಕನ್ನು ಅವರು ಕಾಣಲಾರರು.


ಆದರೆ ಇಸ್ರಾಯೇಲರ ಬುದ್ಧಿ ಮಂದವಾಯಿತು. ಈ ದಿನದವರೆಗೂ ಹಳೆಯ ಒಡಂಬಡಿಕೆಯು ಓದುವಾಗಲೆಲ್ಲಾ, ಅದೇ ಮುಸುಕು ಅವರಲ್ಲಿ ಇರುತ್ತದೆ. ಅದು ಕ್ರಿಸ್ತ ಯೇಸುವಿನಲ್ಲಿ ಮಾತ್ರವೇ ತೆಗೆಯಲು ಸಾಧ್ಯ. ಆದ್ದರಿಂದ ಅದು ಈಗಲೂ ತೆಗೆದುಹಾಕಲಾಗಿಲ್ಲ.


ಇದನ್ನು ಇಹಲೋಕದ ಅಧಿಕಾರಿಗಳಲ್ಲಿ ಒಬ್ಬರಾದರೂ ಅರಿಯಲಿಲ್ಲ. ಅರಿತಿದ್ದರೆ, ಅವರು ಮಹಿಮೆಯುಳ್ಳ ಕರ್ತದೇವರನ್ನು ಶಿಲುಬೆಗೇರಿಸುತ್ತಿರಲಿಲ್ಲ.


ಅವರು ಒಂದು ದಿನ ಪೌಲನೊಂದಿಗಿರಲು ಏರ್ಪಡಿಸಿ, ಅವನಿದ್ದ ಸ್ಥಳಕ್ಕೆ ಬಹುಮಂದಿ ಕೂಡಿಬಂದರು. ಬೆಳಿಗ್ಗೆಯಿಂದ ಸಂಜೆಯವರೆಗೆ ಅವನು ದೇವರ ರಾಜ್ಯದ ಬಗ್ಗೆ ಖಚಿತವಾಗಿ ಸಾಕ್ಷಿ ಕೊಡುತ್ತಾ, ಮೋಶೆಯ ನಿಯಮ ಮತ್ತು ಪ್ರವಾದಿಗಳ ಗ್ರಂಥಗಳಿಂದ ಯೇಸುವಿನ ಬಗ್ಗೆ ವಿವರಿಸಿ ಅವರ ಮನವೊಲಿಸಲು ಪ್ರಯತ್ನಿಸಿದನು.


ಆದರೆ ಅವರು ನನ್ನನ್ನು ಕಳುಹಿಸಿದ ತಂದೆಯನ್ನು ತಿಳಿಯದಿರುವುದರಿಂದಲೇ ನನ್ನ ಹೆಸರಿನ ನಿಮಿತ್ತ ಇವುಗಳನ್ನೆಲ್ಲಾ ನಿಮಗೆ ಮಾಡುವರು.


ಮೊದಲು ದೇವದೂಷಕನೂ ಹಿಂಸಕನೂ ಅಪಮಾನ ಮಾಡುವವನೂ ಆಗಿದ್ದ ನಾನು ಅಜ್ಞಾನಿಯಾಗಿ ಅಪನಂಬಿಕೆಯಲ್ಲಿ ಹಾಗೆ ವರ್ತಿಸಿದ್ದರೂ ದೇವರು ನನಗೆ ಕರುಣೆತೋರಿದರು.


ಅವರು ತಂದೆಯನ್ನಾಗಲಿ ನನ್ನನ್ನಾಗಲಿ ತಿಳಿಯದ ಕಾರಣ ಇವೆಲ್ಲವುಗಳನ್ನು ಮಾಡುವರು.


ಯೇಸು ಅವರಿಗೆ, “ಮನುಷ್ಯಪುತ್ರನಾದ ನನ್ನನ್ನು ನೀವು ಮೇಲಕ್ಕೇರಿಸಿದಾಗ ‘ನಾನೇ ಆತನು’ ಎಂದು ನಿಮಗೆ ತಿಳಿಯುವುದು. ನನ್ನಷ್ಟಕ್ಕೆ ನಾನೇ ಏನೂ ಮಾಡದೆ ನನ್ನ ತಂದೆಯು ನನಗೆ ಬೋಧಿಸಿದಂತೆ ನಾನು ಈ ಸಂಗತಿಗಳನ್ನು ಮಾತನಾಡುತ್ತೇನೆ ಎಂದೂ ನೀವು ತಿಳಿದುಕೊಳ್ಳುವಿರಿ.


ಆಗ ಯೇಸು, “ಪೇತ್ರನೇ, ನೀನು ನನ್ನನ್ನು ಅರಿಯೆನೆಂದು ಮೂರು ಸಾರಿ ಅಲ್ಲಗಳೆಯುವುದಕ್ಕಿಂತ ಮುಂಚೆ, ಈ ದಿವಸ ಹುಂಜ ಕೂಗುವುದಿಲ್ಲ ಎಂದು ನಿನಗೆ ಹೇಳುತ್ತೇನೆ,” ಎಂದರು.


ಅದಕ್ಕೆ ಯೇಸು ಉತ್ತರವಾಗಿ, “ನೀವು ಪವಿತ್ರ ವೇದವನ್ನಾಗಲಿ ದೇವರ ಶಕ್ತಿಯನ್ನಾಗಲಿ ಅರ್ಥ ಮಾಡಿಕೊಳ್ಳದೆ ತಪ್ಪುತ್ತಿದ್ದೀರಿ.


ನೀವು ನನಗೆ ವಿರೋಧವಾಗಿ ಕೇಡನ್ನು ಕಲ್ಪಿಸಿದ್ದೀರಿ, ಆದರೆ ದೇವರು ಒಳ್ಳೆಯದಕ್ಕಾಗಿಯೇ ಸಂಕಲ್ಪಿಸಿದರು. ಈಗ ಬಹುಜನರ ಪ್ರಾಣ ಉಳಿಯುವಂತೆ ನಡೆಯುತ್ತಿದೆ.


ಪಿಲಾತನು ಮುಖ್ಯಯಾಜಕರನ್ನೂ ಅಧಿಕಾರಿಗಳನ್ನೂ ಜನರನ್ನೂ ಒಟ್ಟಾಗಿ ಕರೆಯಿಸಿ ಅವರಿಗೆ,


ನೀವು ಪವಿತ್ರ ವೇದದಲ್ಲಿ ನಿತ್ಯಜೀವ ದೊರೆಯುತ್ತದೆ ಎಂದು ನೆನಸಿ, ಅವುಗಳನ್ನು ಪರಿಶೋಧಿಸುತ್ತೀದ್ದಿರಿ. ಆ ಪವಿತ್ರ ವೇದವೇ ನನ್ನ ವಿಷಯವಾಗಿ ಸಾಕ್ಷಿಕೊಡುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು