Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 13:29 - ಕನ್ನಡ ಸಮಕಾಲಿಕ ಅನುವಾದ

29 ಪವಿತ್ರ ವೇದದಲ್ಲಿ ಯೇಸುವನ್ನು ಕುರಿತು ಬರೆದಿರುವ ಪ್ರಕಾರ ನೆರವೇರಿದ ನಂತರ, ಅವರನ್ನು ಶಿಲುಬೆಯಿಂದ ಕೆಳಗಿಳಿಸಿ ಸಮಾಧಿಯಲ್ಲಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಆತನ ವಿಷಯವಾಗಿ ಶಾಸ್ತ್ರದಲ್ಲಿ ಬರೆದಿರುವುದೆಲ್ಲಾ ನೆರವೇರಿಸಿದ ಮೇಲೆ, ಆತನನ್ನು ಮರದ ಕಂಬದಿಂದ ಇಳಿಸಿ ಸಮಾಧಿಯಲ್ಲಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಯೇಸುವನ್ನು ಕುರಿತು ಪವಿತ್ರಗ್ರಂಥ ಹೇಳುವುದೆಲ್ಲವೂ ನೆರವೇರಿದ ಮೇಲೆ ಅವರನ್ನು ಶಿಲುಬೆಯಿಂದ ಕೆಳಗಿಳಿಸಿ ಸಮಾಧಿಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಆತನ ವಿಷಯವಾಗಿ ಶಾಸ್ತ್ರದಲ್ಲಿ ಬರೆದಿರುವದನ್ನೆಲ್ಲಾ ನೆರವೇರಿಸಿದ ಮೇಲೆ ಆತನನ್ನು ಮರದ ಕಂಬದಿಂದ ಇಳಿಸಿ ಸಮಾಧಿಯಲ್ಲಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 “ಪವಿತ್ರ ಗ್ರಂಥದಲ್ಲಿ ಬರೆದಿರುವಂತೆ ಯೇಸುವಿಗೆ ಸಂಭವಿಸಬೇಕಾಗಿದ್ದ ಕೆಟ್ಟವುಗಳನ್ನೆಲ್ಲ ಯೆಹೂದ್ಯರು ಆತನಿಗೆ ಮಾಡಿದರು. ಬಳಿಕ ಅವರು ಯೇಸುವನ್ನು ಶಿಲುಬೆಯಿಂದ ಕೆಳಗಿಳಿಸಿ ಸಮಾಧಿಯಲ್ಲಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 ಪವಿತ್ರ್ ಪುಸ್ತಕಾತ್ ಲಿವಲ್ಯಾ ಸಾರ್ಕೆ ಜೆಜುಕ್ ಹೊವ್ಚೆ ಮನುನ್ ಹೊತ್ತೆ ಬುರ್ಶೆಪಾನ್ ಸಗ್ಳೆ ಜುದೆವಾಂಚ್ಯಾ ಲೊಕಾನಿಚ್ ತೆಕಾ ಕರ್‍ಲ್ಯಾನಿ ತೆಚ್ಯಾ ಮಾನಾ ತೆಕಾ ಕುರ್ಸಾ ವೈನಾ ಖಾಲ್ತಿ ಉತ್ರುನ್ ಸಮಾದಿತ್ ಥವ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 13:29
16 ತಿಳಿವುಗಳ ಹೋಲಿಕೆ  

ತರುವಾಯ ಇವನು ಶರೀರವನ್ನು ಕೆಳಗೆ ಇಳಿಸಿ, ನಾರುಬಟ್ಟೆಯಲ್ಲಿ ಸುತ್ತಿ, ಬಂಡೆಯಲ್ಲಿ ಕೊರೆದಿದ್ದ ಸಮಾಧಿಯಲ್ಲಿ ಇಟ್ಟನು, ಅದರಲ್ಲಿ ಅದುವರೆಗೆ ಯಾರನ್ನೂ ಇಟ್ಟಿರಲಿಲ್ಲ.


ಯೇಸು ಆ ಹುಳಿರಸವನ್ನು ತೆಗೆದುಕೊಂಡ ಮೇಲೆ, “ತೀರಿತು” ಎಂದು ಹೇಳಿ ತಲೆಬಾಗಿ ತಮ್ಮ ಆತ್ಮವನ್ನು ಒಪ್ಪಿಸಿಕೊಟ್ಟರು.


ಇದಾದ ಮೇಲೆ ಯೇಸು ಈಗ ಎಲ್ಲವೂ ಪೂರ್ತಿಯಾಗಿದೆಯೆಂದು ತಿಳಿದು, ಪವಿತ್ರ ವೇದದ ವಾಕ್ಯವು ನೆರವೇರುವಂತೆ, “ನನಗೆ ನೀರಡಿಕೆಯಾಗಿದೆ” ಎಂದರು.


ಹೂಣಿಡಲಾದರು, ಪವಿತ್ರ ವೇದದ ಪ್ರಕಾರವೇ ಮೂರನೆಯ ದಿನದಲ್ಲಿ ಎದ್ದು ಬಂದರು.


ನೀವು ಮರಕ್ಕೆ ತೂಗುಹಾಕಿ ಕೊಂದ ಯೇಸುವನ್ನು ನಮ್ಮ ಪಿತೃಗಳ ದೇವರು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದ್ದಾರೆ.


ಯೇಸು ಶಿಷ್ಯರಿಗೆ, “ಮೋಶೆಯ ನಿಯಮದಲ್ಲಿಯೂ ಪ್ರವಾದನೆಗಳಲ್ಲಿಯೂ ಕೀರ್ತನೆಗಳಲ್ಲಿಯೂ ನನ್ನನ್ನು ಕುರಿತಾಗಿ ಬರೆದಿರುವುದೆಲ್ಲವೂ ನೆರವೇರುವುದು ಅಗತ್ಯವಾಗಿದೆ ಎಂಬ ಈ ಮಾತುಗಳನ್ನು ನಾನು ನಿಮ್ಮೊಂದಿಗೆ ಇದ್ದಾಗಲೇ ನಿಮಗೆ ಹೇಳಿದ್ದೇನೆ,” ಎಂದರು.


ಯೆರೂಸಲೇಮಿನಲ್ಲಿ ವಾಸವಾಗಿರುವವರೂ ಅವರ ಅಧಿಕಾರಿಗಳೂ ಯೇಸುವನ್ನು ಯಾರೆಂದು ಗುರುತಿಸಿಲಿಲ್ಲ. ಆದರೂ ಅವರು ಪ್ರತಿ ಸಬ್ಬತ್ ದಿನದಲ್ಲಿ ಪಾರಾಯಣವಾಗುವ ಪ್ರವಾದಿಗಳ ವಾಕ್ಯಗಳನ್ನೂ ಗ್ರಹಿಸಲಿಲ್ಲ. ಅವರು ಯೇಸುವನ್ನು ಅಪರಾಧಿಯೆಂದು ತೀರ್ಪು ಮಾಡಿ, ಪ್ರವಾದಿಗಳ ವಾಕ್ಯಗಳನ್ನು ನೆರವೇರಿಸಿದರು.


ನಿಮ್ಮ ಶಕ್ತಿಯೂ ಚಿತ್ತವೂ ಮುಂಚಿತವಾಗಿಯೇ ಏನಾಗಬೇಕೆಂದು ನಿರ್ಣಯಿಸಿದ್ದನ್ನೇ ಅವರು ಮಾಡಿದರು.


ದೇವರು ತಾವು ಮುಂಚಿತವಾಗಿ ನಿರ್ಣಯಿಸಿದ ಪ್ರಕಾರವೂ ತಾವು ಮೊದಲೇ ತಿಳಿದಿರುವಂತೆ ದೇವರು ಯೇಸುವನ್ನು ತಾವಾಗಿಯೇ ನಿಮಗೆ ಒಪ್ಪಿಸಿಕೊಟ್ಟರು. ನೀವಾದರೋ ದುಷ್ಟರ ಸಹಾಯದಿಂದ ಯೇಸುವನ್ನು ಶಿಲುಬೆಗೆ ಹಾಕಿ ಕೊಲೆಮಾಡಿದಿರಿ.


ಸಂಜೆ ಸಮೀಪಿಸುತ್ತಿದ್ದಾಗ, ಅದು ಸಬ್ಬತ್ ದಿನದ ಸಿದ್ಧತೆಯ ಹಿಂದಿನ ದಿವಸವಾಗಿತ್ತು.


ಯೋಸೇಫನೆಂಬ ಹೆಸರುಳ್ಳ ಒಬ್ಬ ಮನುಷ್ಯನಿದ್ದನು, ಇವನು ಆಲೋಚನಾ ಸಭೆಯವನೂ ಒಳ್ಳೆಯವನೂ ಮತ್ತು ನೀತಿವಂತನೂ ಆಗಿದ್ದನು.


ಆದರೆ ನಾನು ಇಂದಿನವರೆಗೂ ದೇವರಿಂದ ಸಹಾಯವನ್ನು ಪಡೆದಿರುತ್ತೇನೆ. ಹೀಗೆ ನಾನು ಇಲ್ಲಿ ನಿಂತುಕೊಂಡು ಚಿಕ್ಕವರಿಗೂ ದೊಡ್ಡವರಿಗೂ ಸಾಕ್ಷಿ ಕೊಡುತ್ತಿದ್ದೇನೆ. ಪ್ರವಾದಿಗಳೂ ಮೋಶೆಯೂ ಮುಂದೆ ಏನು ಸಂಭವಿಸುತ್ತದೆಯೆಂದು ಹೇಳಿದ್ದಕ್ಕಿಂತ ಹೆಚ್ಚಾಗಿ ನಾನು ಏನನ್ನೂ ಹೇಳಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು