ಅಪೊಸ್ತಲರ ಕೃತ್ಯಗಳು 13:34 - ಕನ್ನಡ ಸಮಕಾಲಿಕ ಅನುವಾದ34 ಹೀಗೆ ಯೇಸುವನ್ನು ಸಮಾಧಿಯಲ್ಲಿ ಕೊಳೆಯಲು ಬಿಡದೇ ದೇವರು ಅವರನ್ನು ಜೀವಂತವಾಗಿ ಎಬ್ಬಿಸಿದ ಸತ್ಯವು ಈ ಮಾತುಗಳಲ್ಲಿ ಬಂದಿದೆ: “ ‘ನಾನು ದಾವೀದನಿಗೆ ವಾಗ್ದಾನ ಮಾಡಿದ ಪವಿತ್ರ ಹಾಗೂ ನಿಶ್ಚಯವಾದ ಆಶೀರ್ವಾದಗಳನ್ನು ನಿಮಗೆ ಕೊಡುವೆನು’ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 “ಇದಲ್ಲದೆ ದೇವರು ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದ್ದರಿಂದ ಆತನು ಇನ್ನೆಂದಿಗೂ ಕೊಳೆಯುವ ಅವಸ್ಥೆಗೆ ಸೇರತಕ್ಕವನಲ್ಲವೆಂಬುದರ ಕುರಿತು ದೇವರು ಹೇಳಿರುವುದು ಏನೆಂದರೆ; ‘ದಾವೀದನಿಗೆ ಖಂಡಿತವಾಗಿ ವಾಗ್ದಾನಮಾಡಿದ ಕೃಪಾವರಗಳನ್ನು ನಿಮಗೂ ಕೊಡುತ್ತೇನೆ, ಅವು ನಂಬತಕ್ಕವುಗಳೇ’ ಎಂಬುದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 “ಯೇಸುವನ್ನು ಸಮಾಧಿಯಲ್ಲೇ ಕೊಳೆತುಹೋಗಲು ಬಿಡದೆ ಮರಣದಿಂದ ಪುನರುತ್ಥಾನಗೊಳಿಸಿದ ದೇವರು ಹೀಗೆಂದಿದ್ದಾರೆ: ‘ನಾನು ದಾವೀದನಿಗೆ ವಾಗ್ದಾನಮಾಡಿದ ಪವಿತ್ರ ಹಾಗೂ ನಿಶ್ಚಿತ ವರಗಳನ್ನು ನಿಮಗೆ ಕೊಡುತ್ತೇನೆ.’ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)34 ಇದಲ್ಲದೆ ದೇವರು ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದ್ದರಿಂದ ಆತನು ಇನ್ನೆಂದಿಗೂ ಕೊಳೆಯುವ ಅವಸ್ಥೆಗೆ ಸೇರತಕ್ಕವನಲ್ಲವೆಂಬದರ ವಿಷಯದಲ್ಲಿ ದೇವರು ಹೇಳಿರುವದೇನಂದರೆ - ದಾವೀದನಿಗೆ ಖಂಡಿತವಾಗಿ ವಾಗ್ದಾನ ಮಾಡಿದ ಕೃಪಾವರಗಳನ್ನು ನಿಮಗೆ ಕೊಡುತ್ತೇನೆ, ಅವು ನಂಬಿಕೆಯಾದವುಗಳೇ ಎಂಬದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್34 ದೇವರು ಯೇಸುವನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದ್ದರಿಂದ ಆತನು ಇನ್ನೆಂದಿಗೂ ಸಮಾಧಿಗೆ ಸೇರಿ ಕೊಳೆಯುವುದಿಲ್ಲ ಎಂಬ ವಿಷಯದಲ್ಲಿ ದೇವರು ಇಂತೆಂದಿದ್ದಾನೆ: ‘ನಾನು ದಾವೀದನಿಗೆ ಮಾಡಿದ ಸತ್ಯವೂ ಪವಿತ್ರವೂ ಆದ ವಾಗ್ದಾನಗಳನ್ನು ನಿನಗೆ ಕೊಡುತ್ತೇನೆ.’ ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್34 ತನ್ನಾ ದೆವಾನ್ ಸಾಂಗ್ತಲೆ ಕಾಯ್ ಮಟ್ಲ್ಯಾರ್, ಮಿಯಾ ದಾವಿದಾಕ್ ಕರಲ್ಲಿ ಖರ್ಯ್ಯಾಚಿ ಗೊಸ್ಟಿಯಾ ಅನಿ ಪವಿತ್ರ್ ಹೊವ್ನ್ ಹೊತ್ತಿ ಗೊಸ್ಟಿಯಾ ದಾಕ್ವುತಾ. ಅಧ್ಯಾಯವನ್ನು ನೋಡಿ |