39 ಮೋಶೆಯ ಧರ್ಮಶಾಸ್ತ್ರದ ಮೂಲಕ ನೀವು ಬಿಡುಗಡೆಯಾಗಿ ನೀತಿವಂತರೆನಿಸಿಕೊಳ್ಳದೆ ಇದ್ದಿರಿ. ಆದರೆ ಆತನನ್ನು ನಂಬುವವರೆಲ್ಲರೂ ಆತನ ಮೂಲಕವಾಗಿ ಬಿಡುಗಡೆಹೊಂದಿ ನೀತಿವಂತರೆನಿಸಿ ಕೊಳ್ಳುತ್ತಾರೆ.
ಒಬ್ಬ ವ್ಯಕ್ತಿ ಮೋಶೆಯ ನಿಯಮದ ಕ್ರಿಯೆಗಳಿಂದ ನೀತಿವಂತನಾಗುವುದಿಲ್ಲ. ಆದರೆ ಕ್ರಿಸ್ತ ಯೇಸುವನ್ನು ನಂಬುವುದರಿಂದಲೇ ನೀತಿವಂತನಾಗುತ್ತಾನೆ ಎಂದು ನಮಗೆ ತಿಳಿದಿದೆ. ನಾವು ಸಹ ಮೋಶೆಯ ನಿಯಮದ ಕ್ರಿಯೆಗಳಿಂದಲ್ಲ, ಕ್ರಿಸ್ತ ಯೇಸುವಿನ ನಂಬಿಕೆಯ ಮೂಲಕ ನೀತಿವಂತರಾವುದಕ್ಕಾಗಿ ಕ್ರಿಸ್ತ ಯೇಸುವಿನಲ್ಲಿ ನಂಬಿಕೆ ಇಟ್ಟೆವು. ಏಕೆಂದರೆ, ಮೋಶೆಯ ನಿಯಮದ ಕ್ರಿಯೆಗಳಿಂದ ಯಾರೂ ನೀತಿವಂತರಾಗುವುದಿಲ್ಲ.
ನಿಯಮವು ನಮ್ಮ ಮಾಂಸಭಾವದ ಬಲಹೀನತೆಯಿಂದ ಯಾವುದನ್ನು ಮಾಡಲಿಕ್ಕೆ ಸಾಧ್ಯವಾಗದೆ ಹೋಯಿತೋ ಅದನ್ನು ದೇವರೇ ಮಾಡಿದರು. ಪಾಪ ಪರಿಹಾರಕ್ಕಾಗಿ ದೇವರು ತಮ್ಮ ಸ್ವಂತ ಪುತ್ರನನ್ನು ಪಾಪಮಯವಾದ ನರಮಾಂಸದ ರೂಪದಲ್ಲಿ ಕಳುಹಿಸಿಕೊಟ್ಟರು. ಆ ನರಮಾಂಸದಲ್ಲಿಯೇ ಪಾಪಕ್ಕೆ ದಂಡನಾತೀರ್ಪು ಮಾಡಿ ಸಾಧ್ಯಗೊಳಿಸಿದರು.
ನಿಯಮವು ಏನೇ ಹೇಳುವುದಾದರೂ ಅದು ನಿಯಮಕ್ಕೆ ಒಳಪಟ್ಟಿರುವವರಿಗೇ ಅನ್ವಯವಾಗುವುದೆಂದು ನಾವು ಬಲ್ಲೆವು. ಹೀಗೆ ಎಲ್ಲರ ಬಾಯಿ ಮುಚ್ಚಿಹೋಗುವುದು ಮತ್ತು ಲೋಕವೆಲ್ಲಾ ದೇವರ ತೀರ್ಪಿಗೆ ಒಳಗಾಗಿರುವುದು.
ಯೆಹೂದ್ಯರಲ್ಲದವರನ್ನು ನಂಬಿಕೆಯಿಂದಲೇ ದೇವರು ನೀತಿವಂತರನ್ನಾಗಿ ಮಾಡುವರು ಎಂದು ಪವಿತ್ರ ವೇದವು ಮೊದಲೇ ಕಂಡು, “ನಿನ್ನ ಮೂಲಕ ಎಲ್ಲಾ ಜನಾಂಗಗಳಿಗೂ ಆಶೀರ್ವಾದ ಉಂಟಾಗುವುದು,” ಎಂಬ ಸುವಾರ್ತೆಯನ್ನು ಅಬ್ರಹಾಮನಿಗೆ, ಮುಂಚಿತವಾಗಿಯೇ ಸಾರಿತು.
ನಿಮ್ಮಲ್ಲಿ ಕೆಲವರು ಅಂಥವರಾಗಿದ್ದೀರಿ. ಆದರೂ ಕರ್ತ ಆಗಿರುವ ಯೇಸುಕ್ರಿಸ್ತರ ಹೆಸರಿನಲ್ಲಿಯೂ ನಮ್ಮ ದೇವರ ಆತ್ಮದಿಂದಲೂ ನೀವು ತೊಳೆದು, ಶುದ್ಧೀಕರಣ ಹೊಂದಿ, ನೀತಿವಂತರೆಂಬ ನಿರ್ಣಯವನ್ನು ಹೊಂದಿದ್ದೀರಿ.
“ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿದ ತಂದೆಯನ್ನು ನಂಬುವವರು ನಿತ್ಯಜೀವವನ್ನು ಹೊಂದಿದ್ದಾರೆ. ಅವರು ನ್ಯಾಯತೀರ್ಪಿಗೆ ಗುರಿಯಾಗುವುದಿಲ್ಲ, ಮರಣದಿಂದ ಪಾರಾಗಿ ಜೀವವನ್ನು ಹೊಂದಿದ್ದಾರೆ.
“ನಾನು ನಿಮಗೆ ಹೇಳುತ್ತೇನೆ, ಅವನಲ್ಲ, ಇವನೇ ನೀತಿವಂತನೆಂಬ ನಿರ್ಣಯ ಪಡೆದವನಾಗಿ ತನ್ನ ಮನೆಗೆ ಹೋದನು. ಏಕೆಂದರೆ, ಯಾರಾದರೂ ತಮ್ಮನ್ನು ತಾವೇ ಹೆಚ್ಚಿಸಿಕೊಳ್ಳುವರೋ ಅವರು ತಗ್ಗಿಸಲಾಗುವರು ಮತ್ತು ತಮ್ಮನ್ನು ತಾವೇ ತಗ್ಗಿಸಿಕೊಳ್ಳುವವರು ಹೆಚ್ಚಿಸಲಾಗುವರು,” ಎಂದರು.
ಒಂದು ಸಂದರ್ಭದಲ್ಲಿ ಒಬ್ಬ ನಿಯಮ ಬೋಧಕನು ಎದ್ದು ನಿಂತು ಯೇಸುವನ್ನು ಪರೀಕ್ಷಿಸುವುದಕ್ಕಾಗಿ, “ಬೋಧಕರೇ, ನಾನು ನಿತ್ಯಜೀವವನ್ನು ಪ್ರಾಪ್ತಿಮಾಡಿಕೊಳ್ಳುವುದಕ್ಕೆ ಏನು ಮಾಡಬೇಕು?” ಎಂದು ಕೇಳಿದನು.
ಈ ಒಡಂಬಡಿಕೆಯು ನಾನು ಇವರ ಪೂರ್ವಜರನ್ನು ಕೈಹಿಡಿದು ಈಜಿಪ್ಟ್ ದೇಶದಿಂದ ಕರೆದು ತಂದಾಗ, ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯಂಥದಲ್ಲ. ನಾನು ಅವರಿಗೆ ಯಜಮಾನನಾಗಿ ಇದ್ದರೂ, ಆ ನನ್ನ ಒಡಂಬಡಿಕೆಯನ್ನು ಅವರು ಮೀರಿ ನಡೆದರು,” ಎಂದು ಯೆಹೋವ ದೇವರು ಹೇಳುತ್ತಾರೆ.
ಆತನು ತನ್ನ ಪ್ರಾಣದ ವೇದನೆಯನ್ನು ಸಹಿಸಿದ ತರುವಾಯ, ಜೀವದ ಬೆಳಕನ್ನು ಕಂಡು ತೃಪ್ತನಾಗುವನು. ತನ್ನ ತಿಳುವಳಿಕೆಯಿಂದ ನೀತಿವಂತನಾದ ನನ್ನ ಸೇವಕನು ಅನೇಕರಿಗೆ ನೀತಿವಂತನಾಗಿ ನಿರ್ಣಯಿಸುವನು. ಏಕೆಂದರೆ ಆತನೇ ಅವರ ಅಪರಾಧಗಳನ್ನು ಹೊತ್ತುಕೊಳ್ಳುವನು.