Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 13:5 - ಕನ್ನಡ ಸಮಕಾಲಿಕ ಅನುವಾದ

5 ಸಲಮೀಸಿಗೆ ಬಂದು, ಅಲ್ಲಿಯ ಯೆಹೂದ್ಯರ ಸಭಾಮಂದಿರಗಳಲ್ಲಿ ದೇವರ ವಾಕ್ಯವನ್ನು ಸಾರಿದರು. ಮಾರ್ಕನೆನಿಸಿಕೊಂಡ ಯೋಹಾನನು ಸಹ ಅವರೊಂದಿಗಿದ್ದು ಅವರಿಗೆ ಸಹಾಯಕನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಸಲಮೀಸ್ ಎಂಬ ಸ್ಥಳಕ್ಕೆ ಸೇರಿ ಅಲ್ಲಿ ಯೆಹೂದ್ಯರ ಸಭಾಮಂದಿರಗಳಲ್ಲಿ ದೇವರ ವಾಕ್ಯವನ್ನು ಬೋಧಿಸಿದರು. ಮಾರ್ಕನೆನಿಸಿಕೊಳ್ಳುವ ಯೋಹಾನನು ಸಹಾಯಕನಾಗಿ ಅವರ ಸಂಗಡ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಅವರು ಸಲಮೀಸ್ ಎಂಬ ಸ್ಥಳಕ್ಕೆ ಬಂದಾಗ ಯೆಹೂದ್ಯರ ಪ್ರಾರ್ಥನಾಮಂದಿರಗಳಿಗೆ ಹೋಗಿ ಶುಭಸಂದೇಶವನ್ನು ಸಾರಿದರು. ಮಾರ್ಕನೆನಿಸಿಕೊಂಡ ಯೊವಾನ್ನ ಅವರ ಸಂಗಡವಿದ್ದು ಅವರಿಗೆ ನೆರವಾಗುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಸಲಮೀಸಿಗೆ ಸೇರಿದಾಗ ಯೆಹೂದ್ಯರ ಸಭಾಮಂದಿರಗಳಲ್ಲಿ ದೇವರ ವಾಕ್ಯವನ್ನು ಪ್ರಸಿದ್ಧಿಪಡಿಸಿದರು. ಯೋಹಾನನು ಪರಿಚಾರಕನಾಗಿ ಅವರ ಸಂಗಡ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಬಾರ್ನಬ ಮತ್ತು ಸೌಲರು ಸಲಾಮಿಸ್ ಪಟ್ಟಣಕ್ಕೆ ಬಂದಾಗ ಯೆಹೂದ್ಯರ ಸಭಾಮಂದಿರದಲ್ಲಿ ದೇವರ ಸಂದೇಶವನ್ನು ಸಾರಿದರು. (ಮಾರ್ಕನೆನಿಸಿಕೊಳ್ಳುವ ಯೋಹಾನನು ಸಹಾಯ ಮಾಡುವುದಕ್ಕಾಗಿ ಅವರೊಂದಿಗಿದ್ದನು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಬಾರ್ನಾಬಾಸ್ ಅನಿ ಸಾವ್ಲಾ ಸಾಲಾಮಿಸ್ ಮನ್ತಲ್ಯಾ ಶಾರಾಕ್ ಯೆಲ್ಲ್ಯಾ ತನ್ನಾ ಜುದೆವಾನಿ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾತ್ ದೆವಾಚಿ ಬರಿ ಖಬರ್ ಪರ್ಗಟ್ ಕರ್ಲ್ಯಾನಿ ಮಾರ್ಕ್ ಮನ್ವುನ್ ಘೆತಲೊ ಜುವಾಂವ್ ಮಜ್ಜತ್ ಕರುಕ್‍ಸಾಟಿ ತೆಂಚ್ಯಾ ವಾಂಗ್ಡಾ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 13:5
20 ತಿಳಿವುಗಳ ಹೋಲಿಕೆ  

ಉಳಿದವರು ಪೆರ್ಗೆದಿಂದ ಪಿಸಿದ್ಯದ ಅಂತಿಯೋಕ್ಯಕ್ಕೆ ಹೋದರು. ಸಬ್ಬತ್ ದಿನ ಅವರು ಸಭಾಮಂದಿರದೊಳಗೆ ಹೋಗಿ ಕುಳಿತುಕೊಂಡರು.


ಆಗ ಪೌಲ, ಬಾರ್ನಬರು ಧೈರ್ಯದಿಂದ ಅವರಿಗೆ ಉತ್ತರಕೊಟ್ಟರು: “ದೇವರ ವಾಕ್ಯವನ್ನು ನಾವು ಮೊದಲು ನಿಮಗೆ ಹೇಳುವುದು ಅವಶ್ಯವಾಗಿತ್ತು. ಆದರೆ ನೀವು ಅದನ್ನು ತಳ್ಳಿಬಿಟ್ಟಿದ್ದರಿಂದಲೂ ನಿತ್ಯಜೀವಕ್ಕೆ ನೀವು ಅಯೋಗ್ಯರೆಂದು ತೀರ್ಮಾನಿಸಿಕೊಂಡಿದ್ದೀರಿ. ಆದುದರಿಂದ ಇಗೋ, ನಾವೀಗ ಯೆಹೂದ್ಯರಲ್ಲದ ಜನರ ಬಳಿಗೆ ಹೋಗುತ್ತೇವೆ.


ಪೌಲನು ಸಭಾಮಂದಿರದೊಳಗೆ ಪ್ರವೇಶಿಸಿದನು. ಅಲ್ಲಿ ಮೂರು ತಿಂಗಳುಗಳ ಕಾಲ, ಧೈರ್ಯವಾಗಿ ಬೋಧನೆ ಮಾಡಿದನು. ದೇವರ ರಾಜ್ಯದ ಬಗ್ಗೆ ಅವರೊಡನೆ ಮನವೊಲಿಸುವಂತೆ ಚರ್ಚಿಸಿದನು.


ಪ್ರತಿ ಸಬ್ಬತ್ ದಿನ ಸಭಾಮಂದಿರಕ್ಕೆ ಹೋಗಿ ಯೆಹೂದ್ಯರನ್ನೂ ಗ್ರೀಕರನ್ನೂ ವಿಶ್ವಾಸಿಗಳನ್ನಾಗಿಸಲು ಪ್ರೇರೇಪಿಸುತ್ತಿದ್ದನು.


ಆದ್ದರಿಂದ ಅವನು ಸಭಾಮಂದಿರದಲ್ಲಿ ಯೆಹೂದ್ಯರೊಂದಿಗೂ ದೇವಭಕ್ತಿಯುಳ್ಳ ಗ್ರೀಕರೊಂದಿಗೂ ಅಲ್ಲದೆ ಬಹಿರಂಗ ಸಂತೆಪೇಟೆ ಸ್ಥಳದಲ್ಲಿ ದಿನದಿನವೂ ಬರುತ್ತಿದ್ದ ಜನರೊಂದಿಗೂ ಚರ್ಚೆ ಮಾಡುತ್ತಿದ್ದನು.


ಇಕೋನ್ಯದಲ್ಲಿಯೂ ಪೌಲ ಮತ್ತು ಬಾರ್ನಬರು ವಾಡಿಕೆಯಂತೆ ಯೆಹೂದ್ಯರ ಸಭಾಮಂದಿರಕ್ಕೆ ಹೋದರು. ಅವರು ಅಲ್ಲಿ ಪರಿಣಾಮಕಾರಿಯಾಗಿ ಮಾತನಾಡಿದ್ದರಿಂದ ಬಹು ಸಂಖ್ಯೆಯಲ್ಲಿ ಯೆಹೂದ್ಯರೂ ಗ್ರೀಕರೂ ವಿಶ್ವಾಸವನ್ನಿಟ್ಟರು.


ಅವನು ಇದನ್ನು ಗ್ರಹಿಸಿ, ಮಾರ್ಕನೆನಿಸಿಕೊಳ್ಳುವ ಯೋಹಾನನ ತಾಯಿ ಮರಿಯಳ ಮನೆಗೆ ಹೋದನು. ಅಲ್ಲಿ ಅನೇಕರು ಒಟ್ಟಾಗಿ ಕೂಡಿಬಂದು ಪ್ರಾರ್ಥನೆ ಮಾಡುತ್ತಿದ್ದರು.


ತಡಮಾಡದೆ, ಯೇಸುವೇ “ದೇವಪುತ್ರ” ಎಂದು ಸಭಾಮಂದಿರಗಳಲ್ಲಿ ಸಾರಲು ಪ್ರಾರಂಭಿಸಿದನು.


ಲೂಕನು ಮಾತ್ರ ನನ್ನ ಜೊತೆಯಲ್ಲಿದ್ದಾನೆ. ಮಾರ್ಕನನ್ನು ನಿನ್ನ ಸಂಗಡ ಕರೆದುಕೊಂಡು ಬಾ. ಅವನು ನನ್ನ ಸೇವೆಗಾಗಿ ನನಗೆ ಉಪಯುಕ್ತನಾಗಿದ್ದಾನೆ.


ನನ್ನ ಜೊತೆ ಸೆರೆಯಾಳಾದ ಅರಿಸ್ತಾರ್ಕ, ಬಾರ್ನಬನ ಸಹೋದರಿಯ ಮಗನಾದ ಮಾರ್ಕನು ನಿಮಗೆ ವಂದನೆ ಹೇಳುತ್ತಾರೆ. ಮಾರ್ಕನ ವಿಷಯದಲ್ಲಿ ನೀವು ಮಾರ್ಗದರ್ಶನ ಹೊಂದಿದ್ದೀರಲ್ಲಾ, ಅವನು ನಿಮ್ಮ ಬಳಿಗೆ ಬಂದರೆ ಅವನನ್ನು ಸೇರಿಸಿಕೊಳ್ಳಿರಿ.


ಬಾರ್ನಬನು ಮಾರ್ಕ ಎಂಬ ಹೆಸರಿನ ಯೋಹಾನನನ್ನು ತಮ್ಮ ಜೊತೆಯಲ್ಲಿ ಕರೆದುಕೊಂಡು ಹೋಗಬೇಕೆಂದು ಬಯಸಿದನು,


ಬಾರ್ನಬ ಮತ್ತು ಸೌಲನು ತಮ್ಮ ಸೇವಾಕಾರ್ಯವನ್ನು ಮುಗಿಸಿ, ಮಾರ್ಕ ಎಂದು ಕರೆಯಲಾಗುತ್ತಿದ್ದ ಯೋಹಾನನನ್ನು ತಮ್ಮೊಂದಿಗೆ ಕರೆದುಕೊಂಡು ಯೆರೂಸಲೇಮಿನಿಂದ ಹೊರಟು ಹೋದರು.


ಆಗ ಎಲೀಷನು ಅವನನ್ನು ಬಿಟ್ಟು ತಿರುಗಿಕೊಂಡು ಒಂದು ಜೋಡು ಎತ್ತುಗಳನ್ನು ತೆಗೆದುಕೊಂಡು ಅವುಗಳನ್ನು ವಧಿಸಿ, ನೊಗದ ಕಟ್ಟಿಗೆಯಿಂದ ಅವುಗಳ ಮಾಂಸವನ್ನು ಬೇಯಿಸಿ ಜನರಿಗೆ ಕೊಟ್ಟನು. ಅವರು ತಿಂದ ತರುವಾಯ ಅವನು ಎದ್ದು ಎಲೀಯನನ್ನು ಹಿಂಬಾಲಿಸಿ ಅವನ ಸೇವಕನಾದನು.


ಆದರೆ ನೀವು ಹಾಗಿರಬಾರದು. ನಿಮ್ಮಲ್ಲಿ ದೊಡ್ಡವನಾಗಿರಬೇಕೆಂದಿರುವವನು ನಿಮ್ಮ ಸೇವಕನಾಗಿರಲಿ.


ಆದರೆ ಯೆಹೋಷಾಫಾಟನು ಪ್ರವಾದಿಯ ಮೂಲಕವಾಗಿ ಯೆಹೋವ ದೇವರನ್ನು ಕೇಳುವ ಹಾಗೆ, “ಇಲ್ಲಿ ಯೆಹೋವ ದೇವರ ಪ್ರವಾದಿಯು ಯಾವನೂ ಇಲ್ಲವೋ?” ಎಂದನು. ಆಗ ಇಸ್ರಾಯೇಲಿನ ಅರಸನ ಸೇವಕರಲ್ಲಿ ಒಬ್ಬನು ಉತ್ತರವಾಗಿ, “ಎಲೀಯನ ಕೈಗಳ ಮೇಲೆ ನೀರು ಹೊಯ್ಯುತ್ತಿದ್ದ ಶಾಫಾಟನ ಮಗ ಎಲೀಷನು ಇಲ್ಲಿದ್ದಾನೆ,” ಎಂದು ಹೇಳಿದನು.


ಅವನು ಅದನ್ನು ಕೇಳಿ ಎದ್ದು, ತನ್ನ ಪ್ರಾಣಕ್ಕೋಸ್ಕರ ಯೆಹೂದಕ್ಕೆ ಸೇರಿದ ಬೇರ್ಷೆಬಕ್ಕೆ ಹೊರಟುಹೋಗಿ, ಅಲ್ಲಿ ತನ್ನ ಸೇವಕನನ್ನು ಕಳುಹಿಸಿಬಿಟ್ಟನು.


ಆಗ ಮೋಶೆಯೂ ಅವನ ಸಹಾಯಕನಾದ ಯೆಹೋಶುವನೂ ದೇವರ ಬೆಟ್ಟದ ಮೇಲೆ ಹೊರಟರು.


ತನ್ನ ಇಬ್ಬರು ಸಹಾಯಕರಾದ ತಿಮೊಥೆ ಮತ್ತು ಎರಸ್ತನನ್ನು ಮಕೆದೋನ್ಯಕ್ಕೆ ಕಳುಹಿಸಿ ತಾನು ಇನ್ನೂ ಸ್ವಲ್ಪಕಾಲ ಏಷ್ಯಾ ಪ್ರಾಂತದಲ್ಲಿ ಇದ್ದನು.


ಕೂಡಲೇ ಇಡೀ ಪಟ್ಟಣದಲ್ಲೆಲ್ಲಾ ಕೋಲಾಹಲ ಉಂಟಾಯಿತು. ಜನರು ಗುಂಪಾಗಿ ಕೂಡಿಕೊಂಡು ಬಂದು ಮಕೆದೋನ್ಯದಿಂದ ಪೌಲನೊಂದಿಗೆ ಪ್ರಯಾಣಮಾಡಿ ಬಂದ, ಗಾಯ ಮತ್ತು ಅರಿಸ್ತಾರ್ಕರನ್ನು ಬಂಧಿಸಿ ಕ್ರೀಡಾಂಗಣದೊಳಗೆ ಎಳೆದುಕೊಂಡು ಬಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು