Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 14:2 - ಕನ್ನಡ ಸಮಕಾಲಿಕ ಅನುವಾದ

2 ಆದರೆ ನಂಬಲು ನಿರಾಕರಿಸಿದ ಯೆಹೂದ್ಯರು ಯೆಹೂದ್ಯರಲ್ಲದವರ ಮನಸ್ಸನ್ನು ಕೆಡಿಸಿ, ಸಹೋದರರ ಮೇಲೆ ವಿರೋಧ ಭಾವನೆ ಹುಟ್ಟಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆದರೆ ನಂಬದೆ ಹೋದ ಯೆಹೂದ್ಯರು, ಅನ್ಯಜನರ ಮನಸ್ಸನ್ನು ಈ ಸಹೋದರರ ವಿರುದ್ಧವಾಗಿ ಪ್ರಚೋದಿಸಿ ಕೆಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ವಿಶ್ವಾಸಿಸಲೊಲ್ಲದ ಯೆಹೂದ್ಯರಾದರೋ ಅನ್ಯಧರ್ಮೀಯರನ್ನು ಪ್ರಚೋದಿಸಿ ಭಕ್ತರ ವಿರುದ್ಧ ಎತ್ತಿಕಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆದರೆ ನಂಬದೆ ಹೋದ ಯೆಹೂದ್ಯರು ಅನ್ಯಜನರ ಮನಸ್ಸನ್ನು ಸಹೋದರರಿಗೆ ವಿರುದ್ಧವಾಗಿ ರೇಗಿಸಿ ಕೆಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆದರೆ ಯೆಹೂದ್ಯರಲ್ಲಿ ನಂಬದೆ ಹೋದ ಕೆಲವರು ಯೆಹೂದ್ಯರಲ್ಲದವರನ್ನು ಪ್ರಚೋಧಿಸಿ ಸಹೋದರರ ವಿರುದ್ಧ ಜನರನ್ನು ಎಬ್ಬಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಖರೆ ಜುದೆವಾಂತ್ನಿ ವಿಶ್ವಾಸ್ ಕರಿನಸ್ತಾನಾ ಹೊತ್ತ್ಯಾ ಥೊಡ್ಯಾ ಜುದೆವ್ ನ್ಹಯ್ ಹೊಲ್ಲ್ಯಾ ಲೊಕಾಕ್ನಿ ರಾಗ್ ಹೊಯ್ ಸಾರ್ಕೆ ಕರುನ್ ಭಾವಾಂಚ್ಯಾ ವಿರೊಧ್ ಹೊವ್ನ್ ಲೊಕಾಕ್ನಿ ಉಟ್ವುಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 14:2
14 ತಿಳಿವುಗಳ ಹೋಲಿಕೆ  

ಆದರೆ ಯೆಹೂದ್ಯರು, ಆರಾಧಕರಾಗಿದ್ದ ಮಾನ್ಯರಾದ ಸ್ತ್ರೀಯರನ್ನೂ ನಗರದ ಗಣ್ಯ ನಾಯಕರನ್ನೂ ಪ್ರೇರೇಪಿಸಿ, ಪೌಲ, ಬಾರ್ನಬರ ಮೇಲೆ ಹಿಂಸೆಯನ್ನು ಎಬ್ಬಿಸಿ ತಮ್ಮ ಪ್ರದೇಶದಿಂದ ಹೊರಗೋಡಿಸಿದರು.


ಆದರೆ ಯೆಹೂದ್ಯರು ಮತ್ಸರದಿಂದ ಕೂಡಿ, ಬೀದಿಗಳಲ್ಲಿ ತಿರುಗಾಡುವ ಕೆಲವು ದುಷ್ಟವ್ಯಕ್ತಿಗಳನ್ನು ಕೂಡಿಸಿ ಪಟ್ಟಣದಲ್ಲಿ ಗಲಭೆ ಎಬ್ಬಿಸಿದರು. ಜನಸಮೂಹದ ಮುಂದೆ ಪೌಲ, ಸೀಲರನ್ನು ಎಳೆದು ತರುವಂತೆ ಅವರನ್ನು ಹುಡುಕುತ್ತಾ ಯಾಸೋನ ಎಂಬುವನ ಮನೆಯನ್ನು ಮುತ್ತಿದರು.


ಅದೇ ಸಮಯದಲ್ಲಿ ಅಂತಿಯೋಕ್ಯ ಮತ್ತು ಇಕೋನ್ಯದಿಂದ ಕೆಲವು ಜನ ಯೆಹೂದ್ಯರು ಬಂದು ಜನಸಮೂಹವನ್ನು ತಮ್ಮ ಕಡೆಗೆ ಒಲಿಸಿಕೊಂಡು, ಪೌಲನ ಮೇಲೆ ಕಲ್ಲೆಸೆಯಲು, ಅವನು ಸತ್ತನೆಂದು ಭಾವಿಸಿ ಅವನನ್ನು ಊರ ಹೊರಗೆ ಎಳೆದು ಹಾಕಿದರು.


ಜನಸಮೂಹಗಳನ್ನು ಯೆಹೂದ್ಯರು ಕಂಡಾಗ ಅಸೂಯೆಗೊಂಡು ಪೌಲನು ಹೇಳಿದ ಮಾತುಗಳಿಗೆ ವಿರೋಧವಾಗಿ ವಾದಿಸಿ ದೂಷಣೆಮಾಡತೊಡಗಿದರು.


ಆದರೆ ಪೌಲನು ದೇವರ ವಾಕ್ಯವನ್ನು ಬೆರೋಯದಲ್ಲಿ ಬೋಧಿಸುತ್ತಿದ್ದಾನೆಂಬುದು ಥೆಸಲೋನಿಕದಲ್ಲಿದ್ದ ಯೆಹೂದ್ಯರಿಗೆ ತಿಳಿದುಬಂದಾಗ ಅವರು ಅಲ್ಲಿಗೂ ಬಂದು, ಜನಸಮೂಹವನ್ನು ಪ್ರಚೋದಿಸಿ ಗಲಭೆ ಎಬ್ಬಿಸಿದರು.


ಗಲ್ಲಿಯೋನ ಎಂಬುವನು ಅಖಾಯದ ರಾಜ್ಯಪಾಲನಾಗಿದ್ದನು. ಯೆಹೂದ್ಯರು ಒಟ್ಟುಗೂಡಿ ಪೌಲನನ್ನು ವಿರೋಧಿಸಿ, ಅವನನ್ನು ನ್ಯಾಯಸ್ಥಾನಕ್ಕೆ ಕರೆದುಕೊಂಡು ಬಂದು,


ಯಾರು ದೇವಪುತ್ರ ಆಗಿರುವವರನ್ನು ನಂಬುವರೋ ಅವರು ನಿತ್ಯಜೀವ ಪಡೆದಿರುತ್ತಾರೆ. ದೇವಪುತ್ರ ಆಗಿರುವವರನ್ನು ನಂಬದವರು ನಿತ್ಯಜೀವವನ್ನು ಕಾಣುವುದಿಲ್ಲ. ಆದರೆ ದೇವರ ಕೋಪಾಗ್ನಿಯು ಅವರ ಮೇಲೆ ನೆಲೆಗೊಂಡಿರುವುದು,” ಎಂದು ಹೇಳಿದನು.


ಆ ದಿನಗಳಲ್ಲಿ ಸುಮಾರು ನೂರಿಪ್ಪತ್ತು ಮಂದಿ ವಿಶ್ವಾಸಿಗಳು ಸೇರಿದ್ದರು. ಅವರ ನಡುವೆ ಪೇತ್ರನು ಎದ್ದು ನಿಂತು, ಹೀಗೆಂದನು:


ಆದರೆ ಪಟ್ಟಣದ ಜನರಲ್ಲಿ ಭಿನ್ನಾಭಿಪ್ರಾಯಗಳಾದವು. ಕೆಲವರು ಯೆಹೂದ್ಯರ ಪರವಾದರು, ಇನ್ನೂ ಕೆಲವರು ಅಪೊಸ್ತಲರ ಪರವಾದರು.


ಯೆಹೂದ್ಯರೂ ಯೆಹೂದ್ಯರಲ್ಲದವರೂ ತಮ್ಮ ನಾಯಕರನ್ನು ಕೂಡಿಕೊಂಡು ಪೌಲ, ಬಾರ್ನಬರನ್ನು ಅವಮಾನ ಮಾಡಿ ಅವರ ಮೇಲೆ ಕಲ್ಲೆಸೆಯಬೇಕೆಂದು ನುಗ್ಗಿದಾಗ,


ಪ್ರಿಯರೇ, ನೀವು ಯೂದಾಯದಲ್ಲಿ ಕ್ರಿಸ್ತ ಯೇಸುವಿನಲ್ಲಿರುವ ದೇವರ ಸಭೆಗಳನ್ನು ಅನುಸರಿಸುವವರಾದಿರಿ. ಅವರು ಯೆಹೂದ್ಯರಿಂದ ಅನುಭವಿಸಿದಂಥ ಕಷ್ಟಗಳನ್ನೇ ನೀವೂ ಸಹ ನಿಮ್ಮ ಸ್ವದೇಶಿಯರಿಂದ ಅನುಭವಿಸಿದಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು