Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 14:22 - ಕನ್ನಡ ಸಮಕಾಲಿಕ ಅನುವಾದ

22 ಅಲ್ಲಿದ್ದ ಶಿಷ್ಯರು ವಿಶ್ವಾಸದಲ್ಲಿ ಮುಂದುವರಿಯಲು, “ನಾವು ಅನೇಕ ಸಂಕಟಗಳಿಂದ ದೇವರ ರಾಜ್ಯದೊಳಗೆ ಸೇರಬೇಕು,” ಎಂದು ಹೇಳಿ ದೃಢಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಅಲ್ಲಿ ಶಿಷ್ಯರ ಮನಸ್ಸುಗಳನ್ನು ದೃಢಪಡಿಸಿ ಕ್ರಿಸ್ತ ನಂಬಿಕೆಯಲ್ಲಿ ಸ್ಥಿರವಾಗಿ ನಿಲ್ಲಿರಿ ಎಂದು ಪ್ರೋತ್ಸಾಹಿಸಿದರು. ನಾವು ಬಹು ಸಂಕಟಗಳನ್ನು ತಾಳಿ ದೇವರ ರಾಜ್ಯದೊಳಗೆ ಸೇರಬೇಕಾಗಿದೆ ಎಂದು ಬೋಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಅಲ್ಲಿ ಭಕ್ತಾದಿಗಳನ್ನು ದೃಢಪಡಿಸಿ ವಿಶ್ವಾಸದಲ್ಲಿ ನಿಷ್ಠರಾಗಿರುವಂತೆ ಪ್ರೋತ್ಸಾಹಿಸಿದರು. ‘ಕಷ್ಟಸಂಕಟಗಳ ಮೂಲಕ ನಾವು ದೇವರ ಸಾಮ್ರಾಜ್ಯವನ್ನು ಪ್ರವೇಶಿಸಬೇಕಾಗಿದೆ’ ಎಂದು ಬೋಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ನಾವು ಬಹು ಸಂಕಟಗಳನ್ನು ತಾಳಿ ದೇವರ ರಾಜ್ಯದೊಳಗೆ ಸೇರಬೇಕೆಂಬದಾಗಿ ಎಚ್ಚರಿಕೆಯ ಮಾತನ್ನು ಹೇಳಿ ಕ್ರಿಸ್ತನಂಬಿಕೆಯಲ್ಲಿ ಸ್ಥಿರವಾಗಿರ್ರಿ ಎಂದು ಅವರನ್ನು ಧೈರ್ಯಗೊಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಯೇಸುವಿನ ಶಿಷ್ಯರನ್ನು ಬಲಗೊಳಿಸಿ, ನಂಬಿಕೆಯಲ್ಲಿ ದೃಢವಾಗಿರಲು ಅವರಿಗೆ ಪ್ರೋತ್ಸಾಹಿಸಿದರು, “ನಾವು ದೇವರ ರಾಜ್ಯಕ್ಕೆ ಅನೇಕ ಕಷ್ಟಗಳ ಮೂಲಕ ಹೋಗಬೇಕಾಗಿದೆ” ಎಂದು ಬೋಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ಜೆಜುಚ್ಯಾ ಶಿಸಾಕ್ನಿ ವಿಶ್ವಾಸಾತ್ ಬಳ್ ಹಾನುನ್ ಘಟ್ ಹೊವ್ನ್ ರ್‍ಹಾಯ್ ಸಾರ್ಕೆ ಉಮ್ಮೆದ್ ಭರ್‍ಲ್ಯಾನಿ, ಅನಿ ಅಮಿ ದೆವಾಚ್ಯಾ ರಾಜಾಕ್ ಜಾವ್ಚೆ ಹೊಲ್ಯಾರ್ ಲೈ ತರಾಸಾನಿ ಜಾವ್ಚೆ ಹೊತಾ ಮನುನ್ ಶಿಕಾಪಾ ಕರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 14:22
49 ತಿಳಿವುಗಳ ಹೋಲಿಕೆ  

ಕ್ರಿಸ್ತ ಯೇಸುವಿನ ಮೂಲಕ ನಿಮ್ಮನ್ನು ತಮ್ಮ ನಿತ್ಯ ಪ್ರಭಾವಕ್ಕೆ ಕರೆದ ಕೃಪಾಪೂರ್ಣ ಆಗಿರುವ ದೇವರು ನೀವು ಸ್ವಲ್ಪಕಾಲ ಬಾಧೆಪಟ್ಟ ಮೇಲೆ ತಾವೇ ನಿಮ್ಮನ್ನು ಪರಿಪೂರ್ಣಮಾಡಿ, ಸ್ಥಿರಪಡಿಸಿ, ಬಲಪಡಿಸಿ ನೆಲೆಗೊಳಿಸುವರು.


ನಿಜವಾಗಿಯೂ ಕ್ರಿಸ್ತ ಯೇಸುವಿನಲ್ಲಿ ಭಕ್ತಿಯುಳ್ಳವರಾಗಿ ಜೀವಿಸುವುದಕ್ಕೆ ಮನಸ್ಸು ಮಾಡುವವರೆಲ್ಲರೂ ಹಿಂಸೆಗೊಳಗಾಗುವರು.


“ನನ್ನಲ್ಲಿ ನಿಮಗೆ ಸಮಾಧಾನ ಇರುವಂತೆ ಇವುಗಳನ್ನು ನಾನು ನಿಮ್ಮೊಂದಿಗೆ ಮಾತನಾಡಿದ್ದೇನೆ. ಲೋಕದಲ್ಲಿ ನಿಮಗೆ ಸಂಕಟವಿರುವದು. ಆದರೆ ಧೈರ್ಯವಾಗಿರಿ, ನಾನು ಲೋಕವನ್ನು ಜಯಿಸಿದ್ದೇನೆ,” ಎಂದರು.


ನಾವು ಈಗ ಮಕ್ಕಳಾಗಿರುವುದಾದರೆ, ಬಾಧ್ಯರಾಗಿರುತ್ತೇವೆ; ದೇವರಿಗೆ ಬಾಧ್ಯರು ಮತ್ತು ಕ್ರಿಸ್ತ ಯೇಸುವಿನೊಂದಿಗೆ ಸಹಬಾಧ್ಯರಾಗಿದ್ದೇವೆ. ನಾವು ಕ್ರಿಸ್ತ ಯೇಸುವಿನ ಶ್ರಮೆಗಳಲ್ಲಿ ನಿಜವಾಗಿಯೂ ಪಾಲುಗಾರರಾಗಿದ್ದರೆ, ಅವರ ಮಹಿಮೆಯಲ್ಲಿಯೂ ಪಾಲುಗಾರರಾಗುವೆವು.


ನಿನಗೆ ಸಂಭವಿಸುವುದಕ್ಕಿರುವ ಬಾಧೆಗಳಿಗೆ ಭಯಪಡಬೇಡ. ಇಗೋ, ನಿಮ್ಮನ್ನು ಪರೀಕ್ಷಿಸಲು, ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವುದಕ್ಕೆ ಇದ್ದಾನೆ. ಹತ್ತು ದಿವಸಗಳ ತನಕ ನಿಮಗೆ ಸಂಕಟವಿರುವುದು. ನೀನು ಸಾಯುವವರೆಗೆ ನಂಬಿಗಸ್ತನಾಗಿರು. ನಾನು ನಿನಗೆ ಜೀವದ ಕಿರೀಟವನ್ನು ಕೊಡುವೆನು.


ನೀವು ನಿಮ್ಮ ನಂಬಿಕೆಯಲ್ಲಿ ಸ್ಥಿರವಾಗಿ ಮುಂದುವರೆದು ನೆಲೆಗೊಂಡು, ಸುವಾರ್ತೆಯ ನಿರೀಕ್ಷೆಯಿಂದ ತೊಲಗಿ ಹೋಗದಿರಿ. ನೀವು ಕೇಳಿದಂಥ ಮತ್ತು ಆಕಾಶದ ಕೆಳಗಿರುವ ಸರ್ವಸೃಷ್ಟಿಗೆ ಸಾರಲಾದ ಈ ಸುವಾರ್ತೆಗೆ ಪೌಲನೆಂಬ ನಾನು ಸೇವಕನಾದೆನು.


ಹೀಗಿರುವುದರಿಂದ ನಮ್ಮ ಕರ್ತ ಯೇಸುವಿನ ಸಾಕ್ಷಿಯ ವಿಷಯವಾಗಿಯೂ ಅವರ ಸೆರೆಯವನಾದ ನನ್ನ ವಿಷಯವಾಗಿಯೂ ನೀನು ನಾಚಿಕೆಪಡಬೇಡ. ಅದರ ಬದಲಾಗಿ, ದೇವರ ಶಕ್ತಿಗೆ ಅನುಸಾರವಾಗಿ, ಸುವಾರ್ತೆಗೋಸ್ಕರ ನನ್ನೊಂದಿಗೆ ಶ್ರಮೆಯನ್ನು ಅನುಭವಿಸು.


ಅಲ್ಲಿ ಸ್ವಲ್ಪ ಸಮಯ ಕಳೆದನಂತರ ಅವನು ಅಲ್ಲಿಂದ ಹೊರಟು ಕ್ರಮವಾಗಿ ಗಲಾತ್ಯ ಮತ್ತು ಫ್ರುಗ್ಯ ಪ್ರದೇಶದಲ್ಲೆಲ್ಲಾ ಸಂಚರಿಸುತ್ತಾ ಶಿಷ್ಯರಲ್ಲಿ ವಿಶ್ವಾಸವನ್ನು ಬಲಪಡಿಸಿದನು.


ತನ್ನ ಶಿಲುಬೆಯನ್ನು ತೆಗೆದುಕೊಂಡು ನನ್ನನ್ನು ಹಿಂಬಾಲಿಸದವನು ನನ್ನವನಾಗಲು ಯೋಗ್ಯನಲ್ಲ.


ಅದಕ್ಕೆ ನಾನು, “ನನ್ನ ಒಡೆಯನೆ ನೀನೇ ಬಲ್ಲೆ!” ಎಂದು ಉತ್ತರಿಸಿದೆನು. ಅವನು ನನಗೆ, “ಇವರು ಆ ಮಹಾಸಂಕಟದಿಂದ ಹೊರಬಂದವರು. ಇವರು ತಮ್ಮ ನಿಲುವಂಗಿಗಳನ್ನು ಕುರಿಮರಿ ಆಗಿರುವವರ ರಕ್ತದಲ್ಲಿ ಅವುಗಳನ್ನು ಬೆಳ್ಳಗೆ ಮಾಡಿಕೊಂಡಿದ್ದಾರೆ!”


ನಮಗೆ ಕರ್ತ ಹಾಗೂ ರಕ್ಷಕ ಆಗಿರುವ ಕ್ರಿಸ್ತ ಯೇಸುವು ತಮ್ಮ ನಿತ್ಯ ರಾಜ್ಯದಲ್ಲಿ ಪ್ರವೇಶಿಸುವ ಭಾಗ್ಯವನ್ನು ನಿಮಗೆ ಧಾರಾಳವಾಗಿ ಅನುಗ್ರಹಿಸುವರು.


ನನ್ನ ಹೆಸರಿನ ನಿಮಿತ್ತವಾಗಿ ಅವನು ಎಷ್ಟು ಕಷ್ಟಪಡಬೇಕೆಂಬುದನ್ನು ನಾನು ಅವನಿಗೆ ತೋರಿಸುವೆನು,” ಎಂದು ಹೇಳಿದರು.


ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ದಿನದಲ್ಲಿ ನೀವು ನಿರ್ದೋಷಿಗಳಾಗಿರುವಂತೆ ಅವರು ಕೊನೆಯತನಕವೂ ನಿಮ್ಮನ್ನು ಬಲಪಡಿಸಿ ಕಾಯುವರು.


ಪೌಲನು ಸಿರಿಯ ಮತ್ತು ಕಿಲಿಕ್ಯ ಸೀಮೆಗಳನ್ನು ಹಾದುಹೋಗುತ್ತಾ, ಅಲ್ಲಿದ್ದ ಸಭೆಗಳ ನಂಬಿಕೆಯನ್ನು ಬಲಪಡಿಸಿದನು.


ಯೂದ ಮತ್ತು ಸೀಲರು ಸ್ವತಃ ಪ್ರವಾದಿಗಳಾಗಿದ್ದುದರಿಂದ ಅಲ್ಲಿದ್ದ ವಿಶ್ವಾಸಿಗಳನ್ನು ಅನೇಕ ಬುದ್ಧಿವಾದಗಳಿಂದ ಬಲಪಡಿಸಿದರು.


ಶ್ರಮೆಗಳನ್ನು ಅನುಭವಿಸಿದ ಮೇಲೆ ಕ್ರಿಸ್ತನು ಮಹಿಮೆಯಲ್ಲಿ ಪ್ರವೇಶಿಸುವುದು ಅಗತ್ಯವಾಗಿತ್ತಲ್ಲವೇ?” ಎಂದು ಹೇಳಿ,


ತರುವಾಯ ಯೇಸು ತಮ್ಮ ಶಿಷ್ಯರಿಗೆ, “ಯಾರಾದರೂ ನನ್ನ ಶಿಷ್ಯರಾಗುವುದಕ್ಕೆ ಬಯಸಿದರೆ, ಅವರು ತಮ್ಮನ್ನು ತಾವೇ ನಿರಾಕರಿಸಿ ತಮ್ಮ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.


ಅವನು ಅಲ್ಲಿಗೆ ಬಂದು ದೇವರ ಕೃಪೆಯನ್ನು ಕಂಡು ಹರ್ಷಭರಿತನಾಗಿ, ಅವರೆಲ್ಲರೂ ಕರ್ತನಿಗೆ ಹೃದಯಪೂರ್ವಕವಾಗಿ ಭಯಭಕ್ತಿ ಉಳ್ಳವರಾಗಿರಬೇಕೆಂದು ಅವರನ್ನು ಪ್ರೋತ್ಸಾಹಿಸಿದನು.


‘ಧಣಿಗಿಂತ ಆಳು ದೊಡ್ಡವನಲ್ಲ,’ ಎಂದು ನಾನು ನಿಮಗೆ ಹೇಳಿದ ಮಾತನ್ನು ನೆನಪಿಗೆ ತಂದುಕೊಳ್ಳಿರಿ. ಅವರು ನನ್ನನ್ನು ಹಿಂಸಿಸಿದರೆ ನಿಮ್ಮನ್ನು ಸಹ ಹಿಂಸೆಪಡಿಸುವರು. ಅವರು ನನ್ನ ಮಾತನ್ನು ಅನುಸರಿಸಿದರೆ ನಿಮ್ಮ ಮಾತನ್ನು ಸಹ ಅನುಸರಿಸುವರು.


ನೀವು ಬಲಹೀನವಾದ ಕೈಗಳನ್ನು ಬಲಪಡಿಸಿರಿ. ನಡುಗುವ ಮೊಣಕಾಲುಗಳನ್ನು ದೃಢಪಡಿಸಿರಿ.


ನಿಮ್ಮ ಸಹೋದರನೂ ಯೇಸುವಿನ ನಿಮಿತ್ತ ಆಗುವ ಬಾಧೆಯಲ್ಲಿಯೂ ರಾಜ್ಯದಲ್ಲಿಯೂ ತಾಳ್ಮೆಯಲ್ಲಿಯೂ ನಿಮ್ಮೊಂದಿಗೆ ಪಾಲುಗಾರನೂ ಆಗಿರುವ ಯೋಹಾನನೆಂಬ ನಾನು ದೇವರ ವಾಕ್ಯಕ್ಕೋಸ್ಕರವೂ ಯೇಸುವಿನ ವಿಷಯವಾದ ಸಾಕ್ಷಿಗೋಸ್ಕರವೂ ಪತ್ಮೊಸ್ ಎಂಬ ದ್ವೀಪದಲ್ಲಿದ್ದೆನು.


ಪ್ರಿಯ ಸ್ನೇಹಿತರೇ, ನಾವು ಹಂಚಿಕೊಳ್ಳುವ ರಕ್ಷಣೆಯ ವಿಷಯದಲ್ಲಿ ನಿಮಗೆ ಬರೆಯುವುದಕ್ಕೆ ಪೂರ್ಣಜಾಗ್ರತೆಯಿಂದ ಪ್ರಯತ್ನ ಮಾಡುತ್ತಿದ್ದಾಗ, ಪರಿಶುದ್ಧರಿಗೆ ಒಂದೇ ಸಾರಿ ಒಪ್ಪಿಸಲಾದ ನಂಬಿಕೆಯನ್ನು ಕಾಪಾಡಿಕೊಳ್ಳುವುದಕ್ಕೆ ನೀವು ಹೋರಾಡಬೇಕೆಂದು ಎಚ್ಚರಿಸಿ ಬರೆಯುವುದು ನನಗೆ ಅವಶ್ಯವೆಂದು ತೋರಿತು.


ನಮಗೆ ಕರ್ತ ಆಗಿರುವ ಯೇಸುವು ತಮ್ಮ ಎಲ್ಲಾ ಪರಿಶುದ್ಧರೊಂದಿಗೆ ಬರುವಾಗ, ನೀವು ತಂದೆ ದೇವರ ಮುಂದೆ ಪರಿಶುದ್ಧರೂ ನಿರ್ದೋಷಿಗಳೂ ಆಗಿರುವಂತೆ ನಿಮ್ಮ ಹೃದಯಗಳನ್ನು ಬಲಪಡಿಸಲಿ!


ಸಭೆಯು ಮುಗಿದ ತರುವಾಯ ಅನೇಕ ಯೆಹೂದ್ಯರೂ ದೇವಭಕ್ತಿವುಳ್ಳ ಯೆಹೂದಿ ಮಾರ್ಗದ ವಿಶ್ವಾಸಿಗಳು ಪೌಲ ಬಾರ್ನಬರನ್ನು ಹಿಂಬಾಲಿಸಿದರು. ಪೌಲ ಬಾರ್ನಬರು ತಮ್ಮೊಂದಿಗೆ ಬಂದವರ ಜೊತೆ ಮಾತನಾಡಿ ದೇವರ ಕೃಪೆಯಲ್ಲಿ ಮುಂದುವರಿಯಲು ಅವರನ್ನು ಒಡಂಬಡಿಸಿದರು.


ದೇವರ ವಾಕ್ಯವು ಅಭಿವೃದ್ಧಿಯಾಗುತ್ತಾ ಬಂತು. ಯೆರೂಸಲೇಮಿನಲ್ಲಿ ಶಿಷ್ಯರ ಸಂಖ್ಯೆಯು ಬಹಳವಾಗಿ ಹೆಚ್ಚಿತು. ಯಾಜಕರಲ್ಲಿಯೂ ಅನೇಕ ಜನರು ನಂಬಿಕೆಗೆ ವಿಧೇಯರಾದರು.


ಅವರು ಈಗಿನ ಕಾಲದಲ್ಲಿ ಹಿಂಸೆಗಳ ಸಹಿತವಾಗಿ ಮನೆಗಳನ್ನೂ ಸಹೋದರರನ್ನೂ ಸಹೋದರಿಯರನ್ನೂ ತಾಯಂದಿರನ್ನೂ ಮಕ್ಕಳನ್ನೂ ಹೊಲವನ್ನೂ ನೂರರಷ್ಟು ಪಡೆಯುವುದಲ್ಲದೆ ಮುಂದಿನ ಲೋಕದಲ್ಲಿ ನಿತ್ಯಜೀವವನ್ನು ಹೊಂದುವರು.


ನಿಮ್ಮ ಕಣ್ಣು ನಿಮ್ಮ ಪಾಪಕ್ಕೆ ಕಾರಣವಾದರೆ ಅದನ್ನು ಕಿತ್ತುಬಿಡಿರಿ. ಎರಡು ಕಣ್ಣುಳ್ಳವರಾಗಿ ನರಕದ ಬೆಂಕಿಯಲ್ಲಿ ಹಾಕಿಸಿಕೊಳ್ಳುವುದಕ್ಕಿಂತ ಒಂದು ಕಣ್ಣುಳ್ಳವರಾಗಿ ದೇವರ ರಾಜ್ಯದಲ್ಲಿ ಸೇರುವುದು ನಿಮಗೆ ಲೇಸು.


ಯೇಸು ಅವನಿಗೆ, “ಯಾರು ನೀರಿನಿಂದಲೂ ಆತ್ಮದಿಂದಲೂ ಹುಟ್ಟುವದಿಲ್ಲವೋ ಅವನು ದೇವರ ರಾಜ್ಯದೊಳಗೆ ಪ್ರವೇಶಿಸಲಾರನು, ಎಂದು ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ.


ಐಶ್ವರ್ಯವಂತನು ದೇವರ ರಾಜ್ಯದಲ್ಲಿ ಸೇರುವುದಕ್ಕಿಂತ ಒಂಟೆಯು ಸೂಜಿಯ ಕಣ್ಣಿನಲ್ಲಿ ನುಗ್ಗುವುದು ಸುಲಭ ಎಂದು ಪುನಃ ನಿಮಗೆ ಹೇಳುತ್ತೇನೆ,” ಎಂದರು.


“ಲೋಕವು ನಿಮ್ಮನ್ನು ದ್ವೇಷಿಸಿದರೆ ನಿಮಗಿಂತ ಮೊದಲು ಅದು ನನ್ನನ್ನು ದ್ವೇಷಿಸಿತು ಎಂದು ನೀವು ತಿಳಿಯಿರಿ.


ಅಲ್ಲಿ ಸೌಲನನ್ನು ಭೇಟಿಯಾಗಿ, ಅಂತಿಯೋಕ್ಯಕ್ಕೆ ಕರೆದುಕೊಂಡು ಬಂದನು. ಅನಂತರ ಇಡೀ ಒಂದು ವರ್ಷಕಾಲ ಬಾರ್ನಬನು, ಸೌಲನು ಅಲ್ಲಿ ಸಭೆಯವರೊಂದಿಗೆ ಇದ್ದುಕೊಂಡು ಬಹಳ ಜನರಿಗೆ ಬೋಧನೆ ಮಾಡಿದರು. ಶಿಷ್ಯರಿಗೆ ಪ್ರಥಮ ಬಾರಿ “ಕ್ರೈಸ್ತರು” ಎಂಬ ಹೆಸರು ಬಂದದ್ದು ಅಂತಿಯೋಕ್ಯದಲ್ಲಿಯೇ.


ಯೂದಾಯದಲ್ಲಿ ವಾಸಿಸುತ್ತಿದ್ದ ಸಹೋದರರಿಗೆ ಸಹಾಯ ಒದಗಿಸಲು ಅನುಕೂಲಸ್ಥರಾದ ಶಿಷ್ಯರು ತಮ್ಮ ಶಕ್ತ್ಯಾನುಸಾರ ಕೊಡಲು ನಿರ್ಧರಿಸಿದರು.


ಆದರೆ ಶಿಷ್ಯರು ಬಂದು ಪೌಲನ ಸುತ್ತಲೂ ನಿಂತುಕೊಳ್ಳಲು ಅವನು ಎದ್ದು ಪಟ್ಟಣಕ್ಕೆ ಹಿಂದಿರುಗಿ ಹೋದನು. ಮರುದಿನ ಅವನೂ ಬಾರ್ನಬನೂ ದೆರ್ಬೆಗೆ ಹೊರಟು ಹೋದರು.


ಅವರು ಅಲ್ಲಿಯೇ ಶಿಷ್ಯರೊಂದಿಗೆ ಬಹುಕಾಲ ತಂಗಿದ್ದರು.


ನೀವು ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯಿಡುವುದು ಮಾತ್ರವಲ್ಲ, ಅವರಿಗೋಸ್ಕರ ಸಂಕಷ್ಟಗಳನ್ನು ಅನುಭವಿಸುವುದೂ ನಿಮಗೆ ದಾನವಾಗಿ ಕೊಡಲಾಗಿದೆ.


ಇದಕ್ಕಾಗಿಯೇ ನಿಮ್ಮನ್ನು ಕರೆಯಲಾಯಿತು: ಕ್ರಿಸ್ತ ಯೇಸು ಸಹ ನಮಗೋಸ್ಕರ ಬಾಧೆಯನ್ನು ಅನುಭವಿಸಿ ತಮ್ಮ ಹೆಜ್ಜೆಯ ಜಾಡಿನಲ್ಲಿ ನೀವು ನಡೆಯಬೇಕೆಂದು ಆದರ್ಶವನ್ನು ಬಿಟ್ಟುಹೋದರು.


ನೀವು ನಂಬಿಕೆಯಲ್ಲಿ ದೃಢವಾಗಿದ್ದು ಸೈತಾನನನ್ನು ಎದುರಿಸಿರಿ. ಲೋಕದಲ್ಲಿರುವ ನಿಮ್ಮ ಸಹೋದರರಿಗೂ ಸಹೋದರಿಯರಿಗೂ ಅಂಥಾ ಬಾಧೆಗಳೇ ಸಂಭವಿಸುತ್ತವೆ ಎಂದು ನಿಮಗೆ ತಿಳಿದದೆಯಲ್ಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು