Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 14:23 - ಕನ್ನಡ ಸಮಕಾಲಿಕ ಅನುವಾದ

23 ಪ್ರತಿಯೊಂದು ಸಭೆಯಲ್ಲಿ ಪೌಲ, ಬಾರ್ನಬರು ಸಭಾ ಹಿರಿಯರನ್ನು ನೇಮಿಸಿ, ಉಪವಾಸ ಪ್ರಾರ್ಥನೆಯನ್ನು ಮಾಡಿ ಅವರು ನಂಬಿದ್ದ ಕರ್ತ ಯೇಸುವಿಗೆ ಅವರನ್ನು ಒಪ್ಪಿಸಿಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಇದಲ್ಲದೆ ಪ್ರತಿ ಕ್ರೈಸ್ತ ಸಭೆಗೂ ಹಿರಿಯರನ್ನು ನೇಮಿಸಿದರು. ಉಪವಾಸವಿದ್ದು ಪ್ರಾರ್ಥನೆ ಮಾಡಿ ಅವರು ನಂಬಿದ್ದ ಕರ್ತನಿಗೆ ಅವರನ್ನು ಒಪ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಇದಲ್ಲದೆ ಪ್ರತಿಯೊಂದು ಕ್ರೈಸ್ತಸಭೆಗೂ ಪ್ರಮುಖರನ್ನು ನೇಮಿಸಿದರು. ಪ್ರಾರ್ಥನೆ ಮತ್ತು ಉಪವಾಸಮಾಡಿ ತಾವು ಅಚಲವಾಗಿ ನಂಬಿದ್ದ ಪ್ರಭುವಿಗೆ ಅವರನ್ನು ಒಪ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಇದಲ್ಲದೆ ಪ್ರತಿಸಭೆಯಲ್ಲಿ ಸಭೆಯವರ ಸಮ್ಮತಿಯಿಂದ ಹಿರಿಯರನ್ನು ಗೊತ್ತು ಮಾಡಿ ನೇವಿುಸಿ ಉಪವಾಸವಿದ್ದು ಪ್ರಾರ್ಥನೆ ಮಾಡಿ ಅವರು ನಂಬಿದ್ದ ಕರ್ತನ ಕೈಗೆ ಅವರನ್ನು ಒಪ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಪೌಲ ಬಾರ್ನಬರು ಪ್ರತಿಯೊಂದು ಸಭೆಗೂ ಹಿರಿಯರನ್ನು ಆಯ್ಕೆ ಮಾಡಿದರು. ಅವರು ಈ ಹಿರಿಯರಿಗೋಸ್ಕರ ಉಪವಾಸವಿದ್ದು ಪ್ರಾರ್ಥನೆ ಮಾಡಿ ಅವರನ್ನು ಪ್ರಭುವಿನ ಕೈಗೆ ಒಪ್ಪಿಸಿಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ಪಾವ್ಲುನ್ ಅನಿ ಬಾರ್ನಾಬಾಸಾನ್ ಹರ್ ಎಕ್ ತಾಂಡ್ಯಾಕ್ಬಿ ಎಕ್‍ ಎಕ್ ಮುಖಂಡ್ ಎಚ್ಲ್ಯಾನಿ ಉಪಾಸ್ ರ್ಹಾವ್ನ್ ಮಾಗ್ನಿ ಕರುನ್ ಅಪ್ನಿ ವಿಶ್ವಾಸ್ ಥವಲ್ಯಾ ಧನಿಯಾಕ್ ಒಪ್ಸುನ್ ದಿಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 14:23
28 ತಿಳಿವುಗಳ ಹೋಲಿಕೆ  

ಕ್ರೇತದ್ವೀಪದಲ್ಲಿ ಪೂರ್ಣಗೊಳಿಸದ ಕಾರ್ಯಗಳನ್ನು ನೀನು ಕ್ರಮಪಡಿಸಿ ನಾನು ನಿನಗೆ ಆಜ್ಞಾಪಿಸಿದ ಪ್ರಕಾರ ಪ್ರತಿಯೊಂದು ಪಟ್ಟಣದಲ್ಲಿ ಹಿರಿಯರನ್ನು ನೇಮಿಸಬೇಕೆಂದು ನಿನ್ನನ್ನು ಅಲ್ಲೇ ಬಿಟ್ಟು ಬಂದೆನು.


ಇದಕ್ಕನುಗುಣವಾಗಿ ಬಾರ್ನಬ ಮತ್ತು ಸೌಲರ ಮುಖಾಂತರ ಹಿರಿಯರಿಗೆ ತಮ್ಮ ದೇಣಿಗೆಗಳನ್ನು ಕಳುಹಿಸಿದರು.


ನಿಮ್ಮಲ್ಲಿ ಯಾವನಾದರೂ ಅಸ್ವಸ್ಥನಾಗಿರುವವನು ಇದ್ದಾನೋ? ಅವನು ಸಭೆಯ ಹಿರಿಯನನ್ನು ಕರೆಕಳುಹಿಸಲಿ. ಅವರು ಕರ್ತ ಯೇಸುವಿನ ಹೆಸರಿನಿಂದ ಎಣ್ಣೆ ಹಚ್ಚಿ ಅವನಿಗೋಸ್ಕರ ಪ್ರಾರ್ಥಿಸಲಿ.


ಅನೇಕ ಸಾಕ್ಷಿಗಳ ಮುಂದೆ ನೀನು ನನ್ನಿಂದ ಕೇಳಿದವುಗಳನ್ನು ಇತರರಿಗೆ ಸಹ ಬೋಧಿಸಲು ಶಕ್ತರಾದ ನಂಬಿಗಸ್ತ ಮನುಷ್ಯರಿಗೆ ಒಪ್ಪಿಸಿಕೊಡು.


“ಆದಕಾರಣ ನಾನು ದೇವರಿಗೂ ಅವರ ಕೃಪಾವಾಕ್ಯಕ್ಕೂ ಈಗ ನಿಮ್ಮನ್ನು ಒಪ್ಪಿಸಿಕೊಡುತ್ತೇನೆ. ಆ ವಾಕ್ಯವು ನಿಮ್ಮಲ್ಲಿ ಭಕ್ತಿವೃದ್ಧಿ ಮಾಡಿ, ಪವಿತ್ರರಾದವರೆಲ್ಲರಲ್ಲಿ ನಿಮಗೆ ಬಾಧ್ಯತೆಯನ್ನು ಕೊಡಲು ಸಾಮರ್ಥ್ಯವುಳ್ಳದ್ದು.


ಅವಸರದಿಂದ ಯಾರ ಮೇಲೆಯೂ ಹಸ್ತವನ್ನಿಟ್ಟು, ಸಭಾ ಹಿರಿಯರನ್ನಾಗಿ ನೇಮಿಸಬೇಡ. ಇತರರ ಪಾಪಗಳಲ್ಲಿ ಪಾಲುಗಾರನಾಗಬೇಡ. ನಿನ್ನನ್ನು ಶುದ್ಧನಾಗಿ ಕಾಪಾಡಿಕೋ.


ಮಿಲೇತದಿಂದ, ಪೌಲನು ಎಫೆಸಕ್ಕೆ ಸಂದೇಶ ಕಳುಹಿಸಿ, ಅಲ್ಲಿಯ ಸಭೆಯ ಹಿರಿಯರು ಬರಬೇಕೆಂದು ತಿಳಿಸಿದನು.


ಹಿರಿಯನು, ಸತ್ಯದಲ್ಲಿ ಬಹಳವಾಗಿ ಪ್ರೀತಿಸುವ ಗಾಯನಿಗೆ ಬರೆಯುವುದು:


ಸಭಾಹಿರಿಯನಾದ ನಾನು, ನಮ್ಮಲ್ಲಿ ವಾಸಿಸುವ ಮತ್ತು ನಮ್ಮೊಂದಿಗೆ ಸದಾಕಾಲವೂ ಇರುವಂಥ ಸತ್ಯದ ನಿಮಿತ್ತವಾಗಿ ನಾನು ಮಾತ್ರವಲ್ಲದೆ ಸತ್ಯವನ್ನು ತಿಳಿದಿರುವವರೆಲ್ಲರೂ


ಜೊತೆ ಹಿರಿಯನೂ ಕ್ರಿಸ್ತ ಯೇಸುವಿನ ಶ್ರಮೆಗಳ ಸಾಕ್ಷಿಯೂ ಪ್ರತ್ಯಕ್ಷವಾಗಲಿರುವ ಮಹಿಮೆಯಲ್ಲಿ ಪಾಲುಗಾರನೂ ಆಗಿರುವ ನಾನು ನಿಮ್ಮಲ್ಲಿರುವ ಹಿರಿಯರನ್ನು ಬೇಡಿಕೊಳ್ಳುವುದು.


ವೃದ್ಧನನ್ನು ಗದರಿಸದೆ ತಂದೆಯಂತೆಯೂ ಯೌವನಸ್ಥರನ್ನು ಸಹೋದರರಂತೆಯೂ


ಅಪೊಸ್ತಲರು ಮತ್ತು ಹಿರಿಯರು ಈ ವಿಷಯದ ಕುರಿತಾಗಿ ವಿಚಾರಿಸಲು ಸಭೆ ಸೇರಿದರು.


ಅವರು ಯೆರೂಸಲೇಮನ್ನು ತಲುಪಿದಾಗ, ಸಭೆಯವರು, ಅಪೊಸ್ತಲರು ಹಾಗೂ ಹಿರಿಯರು ಅವರನ್ನು ಸ್ವಾಗತಿಸಿದರು. ದೇವರು ತಮ್ಮ ಮುಖಾಂತರವಾಗಿ ಮಾಡಿದ್ದನ್ನು ಅವರು ತಿಳಿಸಿದರು.


ಕ್ರಿಸ್ತ ಯೇಸುವಿನ ಮೂಲಕ ನಿಮ್ಮನ್ನು ತಮ್ಮ ನಿತ್ಯ ಪ್ರಭಾವಕ್ಕೆ ಕರೆದ ಕೃಪಾಪೂರ್ಣ ಆಗಿರುವ ದೇವರು ನೀವು ಸ್ವಲ್ಪಕಾಲ ಬಾಧೆಪಟ್ಟ ಮೇಲೆ ತಾವೇ ನಿಮ್ಮನ್ನು ಪರಿಪೂರ್ಣಮಾಡಿ, ಸ್ಥಿರಪಡಿಸಿ, ಬಲಪಡಿಸಿ ನೆಲೆಗೊಳಿಸುವರು.


ಇದಕ್ಕಾಗಿಯೇ ನಾನು ಈ ಶ್ರಮೆಗಳನ್ನು ಅನುಭವಿಸುತ್ತಿದ್ದೇನೆ. ಆದರೆ ನಾನು ನಾಚಿಕೆಪಡುವುದಿಲ್ಲ. ಏಕೆಂದರೆ ನಾನು ನಂಬಿರುವ ಕ್ರಿಸ್ತ ಯೇಸುವನ್ನು ಬಲ್ಲೆನು. ನಾನು ಕ್ರಿಸ್ತ ಯೇಸುವಿಗೆ ಒಪ್ಪಿಸಿದ್ದನ್ನು ಅವರು ಆ ದಿನಕ್ಕಾಗಿ ಕಾಪಾಡುವುದಕ್ಕೆ ಶಕ್ತರಾಗಿದ್ದಾರೆಂಬ ದೃಢವಿಶ್ವಾಸ ನನಗಿದೆ.


ಅವರ ಕೈಯಿಂದ ಬರೆದು ಕೊಟ್ಟದ್ದೇನೆಂದರೆ: ಅಪೊಸ್ತಲರು ಹಾಗೂ ಹಿರಿಯ ಸಹೋದರರು, ಅಂತಿಯೋಕ್ಯ, ಸಿರಿಯ ಮತ್ತು ಕಿಲಿಕ್ಯದಲ್ಲಿ ವಾಸಿಸುವ ಯೆಹೂದ್ಯರಲ್ಲದವರೊಳಗಿನ ಸಹೋದರರಿಗೆ: ವಂದನೆಗಳು.


ಅತ್ತಾಲಿಯದಿಂದ ನೌಕೆಯಲ್ಲಿ ಪ್ರಯಾಣಮಾಡಿ ಅಂತಿಯೋಕ್ಯಕ್ಕೆ ಬಂದರು. ಅವರು ಪೂರೈಸಿದ ಸೇವೆಗಾಗಿ ದೇವರ ಕೃಪೆಗೆ ತಮ್ಮನ್ನು ಸಮರ್ಪಿಸಿಕೊಂಡದ್ದು ಈ ಪಟ್ಟಣದಿಂದಲೇ.


ಅಂದರೆ, ಯೋಹಾನನಿಂದ ದೀಕ್ಷಾಸ್ನಾನ ಪಡೆದ ದಿನದಿಂದ, ಯೇಸು ಸ್ವರ್ಗಕ್ಕೆ ಏರಿಹೋದ ಕಾಲದವರೆಗೆ ನಮ್ಮ ಸಂಗಡ ಇದ್ದವನಾಗಿರಬೇಕು.” ಅವನು ಯೇಸುವಿನ ಪುನರುತ್ಥಾನಕ್ಕೆ ನಮ್ಮೊಂದಿಗೆ ಸಾಕ್ಷಿಯಾಗಿರಬೇಕು.


ಯೇಸು ಮಹಾಧ್ವನಿಯಿಂದ, “ತಂದೆಯೇ, ನನ್ನ ಆತ್ಮವನ್ನು ನಿನ್ನ ಕೈಗಳಲ್ಲಿ ಒಪ್ಪಿಸುತ್ತೇನೆ,” ಎಂದು ಗಟ್ಟಿಯಾಗಿ ಕೂಗಿ ಪ್ರಾಣಬಿಟ್ಟರು.


ಯೇಸು ಹನ್ನೆರಡು ಮಂದಿಯನ್ನು ತಮ್ಮ ಸಂಗಡ ಇರಲು ಮತ್ತು ಅವರನ್ನು ಉಪದೇಶಮಾಡಲು ನೇಮಿಸಿ, ಅವರಿಗೆ “ಅಪೊಸ್ತಲರು” ಎಂದು ಕರೆದರು.


ಅವಳು ಎಂಬತ್ತನಾಲ್ಕು ವರ್ಷ ವಿಧವೆಯಾಗಿದ್ದು, ದೇವಾಲಯವನ್ನು ಬಿಟ್ಟುಹೋಗದೆ ಉಪವಾಸಗಳಿಂದಲೂ ಪ್ರಾರ್ಥನೆಗಳಿಂದಲೂ ರಾತ್ರಿ ಹಗಲೂ ಆರಾಧನೆ ಮಾಡುತ್ತಿದ್ದಳು.


ಆಮೇಲೆ ಅವರು, “ಕರ್ತ ಯೇಸುವೇ, ಪ್ರತಿಯೊಬ್ಬರ ಹೃದಯವನ್ನು ನೀವು ತಿಳಿದವರು. ಈ ಸೇವೆಯಿಂದ ಯೂದನು ಭ್ರಷ್ಟನಾಗಿ ತನಗೆ ತಕ್ಕ ಸ್ಥಳಕ್ಕೆ ಹೋಗಿರುವುದರಿಂದ,


ಅಲ್ಲದೆ, ಕರ್ತ ಯೇಸುವಿನ ಮಹಿಮೆಗಾಗಿಯೂ ಸಹಾಯಮಾಡಬೇಕೆಂಬ ಸದುದ್ದೇಶ ತೋರಿಸುವುದಕ್ಕಾಗಿಯೂ ನಾವು ಸೇವೆಯನ್ನು ನಿರ್ವಹಿಸುತ್ತೇವೆ. ಇದಕ್ಕಾಗಿಯೇ, ನಮ್ಮ ಜೊತೆ ಬಂದು ಸಹಾಯಮಾಡಲು ಸಭೆಗಳಿಂದ ಆಯ್ಕೆಯಾದವನು ಆ ಸಹೋದರನು.


ಆದರೂ ದೇವರ ಪ್ರಾರ್ಥನೆ ಉಪವಾಸಗಳಿಂದ ಹೊರತು ಬೇರೆ ಯಾವುದರಿಂದಲೂ ಈ ರೀತಿಯಾದ ದೆವ್ವ ಹೊರಟು ಹೋಗುವುದಿಲ್ಲ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು