Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 14:9 - ಕನ್ನಡ ಸಮಕಾಲಿಕ ಅನುವಾದ

9 ಪೌಲನು ಮಾತನಾಡುತ್ತಿರುವುದನ್ನು ಅವನು ಆಲಿಸುತ್ತಿದ್ದನು. ಪೌಲನು ನೇರವಾಗಿ ಅವನನ್ನೇ ದೃಷ್ಟಿಸಿ ನೋಡಿ, ತಾನು ಗುಣಹೊಂದಲು ಅವನಲ್ಲಿ ವಿಶ್ವಾಸವಿದೆಯೆಂದು ಕಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಪೌಲನು ಆಡುವ ಮಾತುಗಳನ್ನು ಅವನು ಕಿವಿಗೊಟ್ಟು ಕೇಳುತ್ತಿದ್ದನು. ಪೌಲನು ಅವನನ್ನು ದಿಟ್ಟಿಸಿ ನೋಡಿ ವಾಸಿಯಾಗುವುದಕ್ಕೆ ಬೇಕಾದ ನಂಬಿಕೆಯು ಅವನಲ್ಲಿ ಉಂಟೆಂದು ತಿಳಿದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಒಮ್ಮೆ, ಅವನು ಕುಳಿತಲ್ಲೇ ಪೌಲನ ಮಾತುಗಳನ್ನು ಆಲಿಸುತ್ತಿದ್ದನು. ಆಗ ಪೌಲನು ಅವನನ್ನೇ ದಿಟ್ಟಿಸಿ ನೋಡಿದನು. ಅವನಲ್ಲಿ ಸ್ವಸ್ಥ ಪಡೆಯುವಷ್ಟು ವಿಶ್ವಾಸವನ್ನು ಕಂಡು ಸ್ವರವೆತ್ತಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಪೌಲನು ಆಡುವ ಮಾತುಗಳನ್ನು ಅವನು ಕಿವಿಗೊಟ್ಟು ಕೇಳುತ್ತಿದ್ದನು. ಪೌಲನು ಅವನನ್ನು ಸ್ಥಿರವಾಗಿ ನೋಡಿ ವಾಸಿಯಾಗುವದಕ್ಕೆ ಬೇಕಾದ ನಂಬಿಕೆಯು ಅವನಲ್ಲಿ ಉಂಟೆಂದು ತಿಳಿದು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಈ ಮನುಷ್ಯನು ತಾನು ಕುಳಿತಲ್ಲೇ ಪೌಲನ ಮಾತನ್ನು ಆಲಿಸುತ್ತಿದ್ದನು. ಪೌಲನು ಅವನನ್ನು ದೃಷ್ಟಿಸಿ ನೋಡಿದನು. ದೇವರು ಗುಣಪಡಿಸಬಲ್ಲನೆಂಬ ನಂಬಿಕೆ ಅವನಲ್ಲಿರುವುದನ್ನು ಪೌಲನು ಕಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಹ್ಯೊ ಮಾನುಸ್ ಅಪ್ನಿ ಬಸಲ್ಲ್ಯಾಕ್ನಾಚ್ ಪಾವ್ಲುಚಿ ಬೊಲ್ನಿ ಆಯ್ಕಿತ್ ಹೊತ್ತೊ, ಪಾವ್ಲುನ್ ತೆಕಾಚ್ ಬಗ್ಲ್ಯಾನ್ ದೆವ್ ಅಪ್ನಾಕ್ ಗುನ್‍ ಕರ್‍ತಾ ಮನ್ತಲೊ ವಿಶ್ವಾಸ್ ತೆಕಾ ಹೊತ್ತೊ ಪಾವ್ಲುನ್ ವಳ್ಕುನ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 14:9
13 ತಿಳಿವುಗಳ ಹೋಲಿಕೆ  

ಪೇತ್ರ ಯೋಹಾನರಿಬ್ಬರೂ ಭಿಕ್ಷುಕನನ್ನು ನೇರವಾಗಿ ದೃಷ್ಟಿಸಿ ನೋಡಿದರು. ಪೇತ್ರನು ಭಿಕ್ಷುಕನಿಗೆ, “ನಮ್ಮನ್ನು ನೋಡು!” ಎಂದು ಹೇಳಿದನು.


ಯೇಸು ಉತ್ತರವಾಗಿ ಆಕೆಗೆ, “ಅಮ್ಮಾ ನಿನ್ನ ನಂಬಿಕೆಯು ದೊಡ್ಡದು! ನೀನು ಇಷ್ಟಪಟ್ಟಂತೆಯೇ ನಿನಗಾಗಲಿ,” ಎಂದು ಹೇಳಿದರು. ಆಕೆಯ ಮಗಳು ಅದೇ ಗಳಿಗೆಯಲ್ಲಿ ಗುಣಹೊಂದಿದಳು.


ಅದಕ್ಕೆ ಯೇಸು ಅವನಿಗೆ, “ಹೋಗು, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಪಡಿಸಿದೆ,” ಎಂದರು. ಕೂಡಲೇ ಅವನು ತನ್ನ ದೃಷ್ಟಿಯನ್ನು ಪಡೆದು, ದಾರಿಯಲ್ಲಿ ಯೇಸುವನ್ನು ಹಿಂಬಾಲಿಸಿದನು.


ಯೇಸು ಅವರ ನಂಬಿಕೆಯನ್ನು ಕಂಡು, ಆ ಪಾರ್ಶ್ವವಾಯು ರೋಗಿಗೆ, “ಮಗನೇ, ನಿನ್ನ ಪಾಪಗಳು ಕ್ಷಮಿಸಲಾಗಿವೆ,” ಎಂದರು.


ಯೇಸು ಅವರ ಅಪನಂಬಿಕೆಯ ದೆಸೆಯಿಂದ ಅಲ್ಲಿ ಬಹಳ ಮಹತ್ಕಾರ್ಯಗಳನ್ನು ಮಾಡಲಿಲ್ಲ.


ಯೇಸು ಹಿಂತಿರುಗಿ ಆಕೆಯನ್ನು ನೋಡಿ, “ಮಗಳೇ, ಧೈರ್ಯವಾಗಿರು; ನಿನ್ನ ನಂಬಿಕೆಯೇ ನಿನ್ನನ್ನು ಗುಣಪಡಿಸಿದೆ,” ಎಂದರು. ಆ ಗಳಿಗೆಯಲ್ಲೇ ಆ ಸ್ತ್ರೀಯು ಸ್ವಸ್ಥಳಾದಳು.


ಯೇಸು ಇದನ್ನು ಕೇಳಿ, ಆಶ್ಚರ್ಯಪಟ್ಟು ತಮ್ಮ ಹಿಂದೆ ಬರುತ್ತಿದ್ದವರಿಗೆ, “ಇಂಥ ಮಹಾ ನಂಬಿಕೆಯನ್ನು ನಾನು ಇಸ್ರಾಯೇಲ್ ಜನರಲ್ಲಿಯೂ ಕಾಣಲಿಲ್ಲ ಎಂದು ನಿಮಗೆ ನಿಜವಾಗಿ ಹೇಳುತ್ತೇನೆ.


ತರುವಾಯ ಯೇಸು ತಿರುಗಿ ಅವನ ಕಣ್ಣುಗಳ ಮೇಲೆ ತಮ್ಮ ಕೈಗಳನ್ನಿಟ್ಟರು. ಆಗ ಅವನು ಗುಣಹೊಂದಿದವನಾಗಿ ಎಲ್ಲವನ್ನೂ ಬಹುಸ್ಪಷ್ಟವಾಗಿ ಕಂಡನು.


ಕೊರ್ನೇಲ್ಯನು ಭಯದಿಂದ ದೇವದೂತನನ್ನೇ ದೃಷ್ಟಿಸಿ ನೋಡಿ, “ಏನು ಸ್ವಾಮೀ?” ಎಂದು ಕೇಳಲು, “ನಿನ್ನ ಪ್ರಾರ್ಥನೆಗಳು, ಬಡವರಿಗೆ ನೀನು ಕೊಟ್ಟ ದಾನಗಳು ದೇವರ ಸನ್ನಿಧಿಗೆ ಜ್ಞಾಪಕಾರ್ಥ ಅರ್ಪಣೆಗಳಾಗಿ ಬಂದಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು