Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 15:11 - ಕನ್ನಡ ಸಮಕಾಲಿಕ ಅನುವಾದ

11 ಆದರೆ ನಾವು ರಕ್ಷಣೆ ಹೊಂದಿದ್ದು ನಮ್ಮ ಕರ್ತ ಯೇಸುವಿನ ಕೃಪೆಯಿಂದಲೇ, ಹಾಗೆಯೇ ಅವರೂ ಹೊಂದುವರು ಎಂಬುದು ನಮ್ಮ ನಂಬಿಕೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಕರ್ತನಾದ ಯೇಸುವಿನ ಕೃಪೆಯಿಂದಲೇ ನಾವು ರಕ್ಷಣೆ ಹೊಂದುವೆವೆಂಬುದಾಗಿ ನಂಬುತ್ತೇವಲ್ಲಾ; ಹಾಗೆಯೇ ಅವರೂ ಹೊಂದುವರು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಇಲ್ಲ, ಇದು ಸರಿಯಲ್ಲ. ನಮಗೇ ಆಗಲಿ, ಅವರಿಗೇ ಆಗಲಿ, ಜೀವೋದ್ಧಾರ ದೊರಕುವುದು ಪ್ರಭು ಯೇಸುವಿನ ಅನುಗ್ರಹದಿಂದಲೇ. ಇದೇ ನಮ್ಮ ವಿಶ್ವಾಸ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಕರ್ತನಾದ ಯೇಸುವಿನ ಕೃಪೆಯಿಂದಲೇ ನಾವು ರಕ್ಷಣೆ ಹೊಂದುವೆವೆಂಬದಾಗಿ ನಂಬುತ್ತೇವಲ್ಲಾ; ಹಾಗೆಯೇ ಅವರೂ ಹೊಂದುವರು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆದ್ದರಿಂದ ನಾವಾಗಲಿ ಇವರಾಗಲಿ ರಕ್ಷಣೆ ಹೊಂದುವುದು ಪ್ರಭುವಾದ ಯೇಸುವಿನ ಕೃಪೆಯಿಂದಲೇ ಎಂದು ನಾವು ನಂಬುತ್ತೇವೆ!” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ತಸೆ ಹೊವ್ನ್ ಅಮ್ಕಾ ಹೊಂವ್ದಿ ಹೆಂಕಾ ಹೊಂವ್ದಿ ರಾಕ್ವನ್ ಹೊತಲಿ ಧನಿಯಾ ಜೆಜುಚ್ಯಾ ಕುರ್ಪೆನುಚ್ ಮನುನ್ ಅಮಿ ವಿಶ್ವಾಸ್ ಕರ್ತಾಂವ್ ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 15:11
14 ತಿಳಿವುಗಳ ಹೋಲಿಕೆ  

ಆದರೆ ಕ್ರಿಸ್ತ ಯೇಸುವಿನಲ್ಲಿ ಬಂದ ವಿಮೋಚನೆಯ ಮೂಲಕ ಅವರು ದೇವರ ಕೃಪೆಯಿಂದ ಉಚಿತವಾಗಿ ನೀತಿವಂತರೆಂದು ನಿರ್ಣಯ ಹೊಂದುತ್ತಾರೆ.


ಏಕೆಂದರೆ ಎಲ್ಲಾ ಮನುಷ್ಯರಿಗೆ ರಕ್ಷಣೆಯನ್ನು ತರುವ ದೇವರ ಕೃಪೆಯೂ ಪ್ರತ್ಯಕ್ಷವಾಯಿತು.


ಒಬ್ಬ ವ್ಯಕ್ತಿ ಮೋಶೆಯ ನಿಯಮದ ಕ್ರಿಯೆಗಳಿಂದ ನೀತಿವಂತನಾಗುವುದಿಲ್ಲ. ಆದರೆ ಕ್ರಿಸ್ತ ಯೇಸುವನ್ನು ನಂಬುವುದರಿಂದಲೇ ನೀತಿವಂತನಾಗುತ್ತಾನೆ ಎಂದು ನಮಗೆ ತಿಳಿದಿದೆ. ನಾವು ಸಹ ಮೋಶೆಯ ನಿಯಮದ ಕ್ರಿಯೆಗಳಿಂದಲ್ಲ, ಕ್ರಿಸ್ತ ಯೇಸುವಿನ ನಂಬಿಕೆಯ ಮೂಲಕ ನೀತಿವಂತರಾವುದಕ್ಕಾಗಿ ಕ್ರಿಸ್ತ ಯೇಸುವಿನಲ್ಲಿ ನಂಬಿಕೆ ಇಟ್ಟೆವು. ಏಕೆಂದರೆ, ಮೋಶೆಯ ನಿಯಮದ ಕ್ರಿಯೆಗಳಿಂದ ಯಾರೂ ನೀತಿವಂತರಾಗುವುದಿಲ್ಲ.


ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಕೃಪೆಯೂ ದೇವರ ಪ್ರೀತಿಯೂ ಪವಿತ್ರಾತ್ಮ ದೇವರ ಅನ್ಯೋನ್ಯತೆಯೂ ನಿಮ್ಮೆಲ್ಲರ ಸಂಗಡ ಇರಲಿ.


ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಕೃಪೆಯನ್ನು ನೀವು ಬಲ್ಲವರಾಗಿದ್ದೀರಿ. ಅವರು ಐಶ್ವರ್ಯವಂತರಾಗಿದ್ದರೂ ತಮ್ಮ ಬಡತನದ ಮೂಲಕ ನೀವು ಐಶ್ವರ್ಯವಂತರಾಗುವಂತೆ ಅವರು ನಿಮಗೋಸ್ಕರ ಬಡವರಾದರು.


ಕರ್ತ ಆಗಿರುವ ಯೇಸುಕ್ರಿಸ್ತರ ಕೃಪೆಯು ನಿಮ್ಮೊಂದಿಗಿರಲಿ.


ಏಕೆಂದರೆ ಪಾಪವು ಕೊಡುವ ಸಂಬಳ ಮರಣ, ದೇವರ ಉಚಿತ ವರವಾದರೋ ನಮಗೆ ಕರ್ತ ಆಗಿರುವ ಕ್ರಿಸ್ತ ಯೇಸುವಿನಲ್ಲಿ ಇರುವ ನಿತ್ಯಜೀವ.


ಆದರೆ ಆ ಅಪರಾಧಕ್ಕೂ ದೇವರ ವರಕ್ಕೂ ಬಹಳ ವ್ಯತ್ಯಾಸವಿದೆ. ಹೇಗೆಂದರೆ, ಆದಾಮನ ಅಪರಾಧದಿಂದ ಎಲ್ಲ ಮನುಷ್ಯರೂ ಸತ್ತರು. ಕ್ರಿಸ್ತ ಯೇಸುವೆಂಬ ಈ ಒಬ್ಬ ಮನುಷ್ಯನ ಕೃಪೆಯಿಂದ ಸಿಕ್ಕುವ ದೇವರ ಕೃಪೆಯ ವರವು ಅನೇಕರಿಗೆ ಇನ್ನೂ ಹೆಚ್ಚಾಗಿ ಸಿಕ್ಕುವುದು ನಿಶ್ಚಯವಲ್ಲವೇ?


ಕ್ರಿಸ್ತ ಯೇಸುವಿನ ಕೃಪೆಯಲ್ಲಿ ನಿಮ್ಮನ್ನು ಕರೆದ ದೇವರನ್ನು ನೀವು ಇಷ್ಟು ಬೇಗನೆ ಬಿಟ್ಟು ಬೇರೆ ಸುವಾರ್ತೆಯ ಕಡೆಗೆ ತಿರುಗಿದಿರೆಂದು ನಾನು ಆಶ್ಚರ್ಯಪಡುತ್ತೇನೆ.


ಅವರು ಹೊಸಹಾಡನ್ನು ಹಾಡುತ್ತಾ, “ನೀವು ಸುರುಳಿಯನ್ನು ತೆಗೆದುಕೊಂಡು ಅದರ ಮುದ್ರೆಗಳನ್ನು ಒಡೆಯುವುದಕ್ಕೆ ಯೋಗ್ಯರಾಗಿದ್ದೀರಿ. ಏಕೆಂದರೆ ನೀವು ವಧಿತರಾಗಿ, ನಿಮ್ಮ ರಕ್ತದಿಂದ ಸಕಲ ಕುಲ, ಭಾಷೆ, ಪ್ರಜೆ, ರಾಷ್ಟ್ರಗಳವರಿಂದ ಮನುಷ್ಯರನ್ನು ದೇವರಿಗಾಗಿ ಕೊಂಡುಕೊಂಡಿರುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು