Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 15:18 - ಕನ್ನಡ ಸಮಕಾಲಿಕ ಅನುವಾದ

18 ಎಂದು ನಿತ್ಯತ್ವವನ್ನು ತಿಳಿದಿರುವವರೂ ಇವುಗಳನ್ನೆಲ್ಲಾ ಮಾಡುವವರೂ ಆಗಿರುವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅನಾದಿಕಾಲದಿಂದ ಈ ಕಾರ್ಯಗಳನ್ನು ತಿಳಿಯಪಡಿಸುವ ಕರ್ತನು ನುಡಿಯುತ್ತಾನೆ’ ಎಂದು ಬರೆದದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಎಂಬೀ ಸರ್ವೇಶ್ವರನ ನುಡಿ ಎಂದಿನಿಂದಲೋ ತಿಳಿದಿಹುದು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಆದಿಯಿಂದ ಈ ಕಾರ್ಯಗಳನ್ನು ತಿಳಿಯಪಡಿಸುವ ಕರ್ತನು ನುಡಿಯುತ್ತಾನೆ ಎಂದು ಬರೆದದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ‘ಆದಿಯಿಂದಲೂ ಈ ಕಾರ್ಯಗಳನ್ನು ತಿಳಿಯಪಡಿಸಲಾಗಿದೆ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಲೈ ಅದ್ದಿಚ್ಯಾನುಚ್ ಹಿ ಸಗ್ಳ್ಯಿ ಕಾಮಾ ಕಳ್ವುನ್ ಹೊಲಾತ್”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 15:18
17 ತಿಳಿವುಗಳ ಹೋಲಿಕೆ  

ಸಮಸ್ತವನ್ನೂ ಸೃಷ್ಟಿಸಿದ ದೇವರಲ್ಲಿ ಲೋಕಾದಿಯಿಂದ ಮರೆಯಾಗಿದ್ದ ಕಾರ್ಯಭಾರದ ರಹಸ್ಯವು ಏನೆಂಬುದನ್ನು ಎಲ್ಲರಿಗೂ ಸ್ಪಷ್ಟಪಡಿಸುವುದಕ್ಕಾಗಿಯೂ ಆಗಿರುತ್ತದೆ.


ನಾವು ಪ್ರೀತಿಯಲ್ಲಿದ್ದು ಅವರ ಮುಂದೆ ಪರಿಶುದ್ಧರೂ ನಿರ್ದೋಷಿಗಳೂ ಆಗಿರಬೇಕೆಂದು ಅವರು ಲೋಕದ ಅಸ್ತಿವಾರಕ್ಕೆ ಮುಂಚೆ ನಮ್ಮನ್ನು ಕ್ರಿಸ್ತನಲ್ಲಿ ಆರಿಸಿಕೊಂಡರು.


ಅವರು ಜಗದುತ್ಪತ್ತಿಗೆ ಮೊದಲೇ ನೇಮಕಗೊಂಡು ಈ ಅಂತ್ಯಕಾಲಗಳಲ್ಲಿ ನಿಮಗಾಗಿ ಪ್ರತ್ಯಕ್ಷರಾದರು.


ದೇವರ ಚಿತ್ತಾನುಸಾರವಾಗಿ ಎಲ್ಲಾ ಕಾರ್ಯಗಳನ್ನು ನಡೆಸುವ ಅವರ ಉದ್ದೇಶದ ಪ್ರಕಾರ ಕ್ರಿಸ್ತನಲ್ಲಿ ನಮ್ಮನ್ನು ಮೊದಲೇ ಆರಿಸಿಕೊಂಡರು.


ದೇವರು ಒಬ್ಬ ಮನುಷ್ಯನಿಂದ ಎಲ್ಲಾ ದೇಶಗಳನ್ನು ಸೃಷ್ಟಿಸಿ, ಜನರು ಇಡೀ ಭೂಲೋಕವನ್ನು ತುಂಬಿಕೊಳ್ಳುವಂತೆ ಮಾಡಿದರು; ಅವರವರು ಇರತಕ್ಕ ಕಾಲಾವಧಿಯನ್ನೂ ವಾಸಿಸಲು ನಿರ್ದಿಷ್ಟ ಸ್ಥಳಗಳನ್ನೂ ನೇಮಿಸಿದ್ದಾರೆ.


ದೇವರು ಮನುಷ್ಯನಂತೆ ಸುಳ್ಳಾಡುವವರಲ್ಲ. ನರಪುತ್ರರಂತೆ ಮನಸ್ಸನ್ನು ಬದಲಾಯಿಸಿಕೊಳ್ಳುವವರಲ್ಲ. ಅವರು ನುಡಿದದ್ದನ್ನು ಮಾಡದಿರುವರೇ? ವಾಗ್ದಾನ ಮಾಡಿದ್ದನ್ನು ಅವರು ನೆರವೇರಿಸದಿರುವರೇ?


ಕರ್ತ ಯೇಸುವಿಗೆ ಪ್ರಿಯರಾಗಿರುವವರೇ, ನಾವು ನಿಮ್ಮ ವಿಷಯದಲ್ಲಿ ಯಾವಾಗಲೂ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇವೆ. ಏಕೆಂದರೆ, ನೀವು ಪವಿತ್ರಾತ್ಮ ದೇವರ ಶುದ್ಧೀಕರಣದಿಂದಲೂ ಸತ್ಯವನ್ನು ನಂಬುವುದರಿಂದಲೂ ರಕ್ಷಣೆಯನ್ನು ಹೊಂದಿ ಪ್ರಥಮ ಫಲವಾಗುವುದಕ್ಕೆ ದೇವರು ನಿಮ್ಮನ್ನು ಆದಿಯಿಂದ ಆರಿಸಿಕೊಂಡಿದ್ದಾರೆ.


ಹೀಗೆ ಒಬ್ಬ ಪ್ರವಾದಿಯ ಮೂಲಕ ಹೇಳಿದ ಮಾತು ನೆರವೇರಿತು: “ನಾನು ಸಾಮ್ಯಗಳನ್ನು ಹೇಳುವಂತೆ ನನ್ನ ಬಾಯಿ ತೆರೆಯುವೆನು. ನಾನು ಲೋಕ ಪ್ರಾರಂಭದಿಂದ ಮರೆಯಾದವುಗಳನ್ನು ಪ್ರಕಟಪಡಿಸುವೆನು.”


ನೀನು ಕಂಡ ಮೃಗವು ಒಮ್ಮೆ ಇತ್ತು, ಈಗ ಇಲ್ಲ, ಪಾತಾಳದೊಳಗಿನಿಂದ ಮೇಲೆ ಬಂದು ವಿನಾಶಕ್ಕೆ ಹೊರಡಲಿದೆ. ಲೋಕದ ಸೃಷ್ಟಿಯಾದ ದಿನದಿಂದ ಯಾರ ಯಾರ ಹೆಸರುಗಳು ಜೀವಗ್ರಂಥದಲ್ಲಿ ಬರೆದಿರುವುದಿಲ್ಲವೋ, ಆ ಭೂನಿವಾಸಿಗಳು ಮೃಗವನ್ನು ನೋಡಿ ಆ ಮೃಗವು ಹಿಂದೆ ಇತ್ತು, ಈಗ ಇಲ್ಲ, ಇನ್ನು ಮೇಲೆ ಬರಲಿದೆ ಎಂದು ಆಶ್ಚರ್ಯಗೊಳ್ಳುವರು.


ಜಗದುತ್ಪತ್ತಿಗೆ ಮೊದಲೇ ಕೊಯ್ಯಲಾದ ಕುರಿಮರಿಯವರ ಜೀವಗ್ರಂಥದಲ್ಲಿ ಯಾರ‍್ಯಾರ ಹೆಸರುಗಳು ಬರೆದಿರುವುದಿಲ್ಲವೋ, ಆ ಭೂನಿವಾಸಿಗಳೆಲ್ಲರೂ ಆ ಮೃಗವನ್ನು ಆರಾಧಿಸುವರು.


“ಆಗ ನಾನು ನನ್ನ ಬಲಗಡೆಯಲ್ಲಿರುವವರಿಗೆ, ‘ನನ್ನ ತಂದೆಯಿಂದ ಆಶೀರ್ವಾದ ಹೊಂದಿದವರೇ, ಬನ್ನಿರಿ, ಭೂಲೋಕಕ್ಕೆ ಅಸ್ತಿವಾರ ಹಾಕಿದ ದಿನದಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಆಸ್ತಿಯನ್ನಾಗಿ ಹೊಂದಿರಿ.


ನಾನು ಪುರಾತನ ಕಾಲದವರನ್ನು ಸೃಷ್ಟಿಸಿದಂದಿನಿಂದ ನನ್ನ ಹಾಗೆ ಕರೆದು, ತಿಳಿಸಿ, ಅದನ್ನು ಸರಿಯಾಗಿ ನನಗೋಸ್ಕರ ಸಿದ್ಧಮಾಡಿದವನು ಯಾರು? ಮುಂದೆ ಬರಬೇಕಾದದ್ದನ್ನು ಅವರು ನನಗೆ ತಿಳಿಸಲಿ.


ನೀವು ಏನು ಸಾರಬೇಕೋ ಅದನ್ನು ಈಗ ತನ್ನಿರಿ ಹೌದು, ಒಟ್ಟಿಗೆ ಅವರು ಆಲೋಚಿಸಲಿ ಈ ಸಂಗತಿಗಳನ್ನು ಪುರಾತನ ಕಾಲದಿಂದಲೂ ಪ್ರಕಟಿಸಿದವರು ಯಾರು? ಪ್ರಾರಂಭದಿಂದ ಇದನ್ನು ತಿಳಿಸಿದವರು ಯಾರು? ಯೆಹೋವನಾದ ನಾನೇ ಅಲ್ಲವೇ? ನನ್ನ ಹೊರತು ಬೇರೆ ದೇವರು ಇಲ್ಲ. ನನ್ನ ಹೊರತಾಗಿ ನೀತಿಯುಳ್ಳ ದೇವರೂ, ರಕ್ಷಕನೂ ಇಲ್ಲವೇ ಇಲ್ಲ.


ಆಗ ಅವರು ಎದೋಮಿನ ಮಿಕ್ಕ ಭಾಗವನ್ನೂ, ನನ್ನ ಹೆಸರಿನಿಂದ ಕರೆಯಲಾಗುವ ಎಲ್ಲಾ ಜನಾಂಗಗಳನ್ನೂ ಸ್ವಾಧೀನ ಮಾಡಿಕೊಳ್ಳುವೆನು, ಎಂಬುದಾಗಿ ಇದನ್ನು ಮಾಡುವವರಾದ ಯೆಹೋವ ದೇವರು ಹೇಳುತ್ತಾರೆ.


ಆದರೆ ಅದು ಒಂದು ವಿಶಿಷ್ಟ ದಿವಸವಾಗಿರುವುದು. ಯೆಹೋವ ದೇವರಿಗೆ ಮಾತ್ರ ತಿಳಿದಿರುವ ಒಂದು ದಿನ ಇರುವುದು. ಅದು ಹಗಲೂ ಅಲ್ಲ, ರಾತ್ರಿಯೂ ಅಲ್ಲ. ಆದರೆ, ಸಾಯಂಕಾಲದ ಸಮಯದಲ್ಲಿ ಬೆಳಕು ಇರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು