Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 15:2 - ಕನ್ನಡ ಸಮಕಾಲಿಕ ಅನುವಾದ

2 ಇದರಿಂದ ಪೌಲ, ಬಾರ್ನಬರು ಅವರೊಂದಿಗೆ ಭಿನ್ನಾಭಿಪ್ರಾಯವುಳ್ಳವರಾಗಿ ತೀವ್ರ ವಿವಾದವುಂಟಾಯಿತು. ಈ ಪ್ರಶ್ನೆಯ ವಿಷಯದಲ್ಲಿ ಅಪೊಸ್ತಲರನ್ನೂ ಹಿರಿಯರನ್ನೂ ಭೇಟಿಯಾಗಲು, ತಮ್ಮಲ್ಲಿ ಬೇರೆ ಕೆಲವರು ಪೌಲ, ಬಾರ್ನಬರೊಂದಿಗೆ ಯೆರೂಸಲೇಮಿಗೆ ಹೋಗಬೇಕೆಂದು ನಿರ್ಣಯಿಸಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅವರೊಂದಿಗೆ ಪೌಲ ಮತ್ತು ಬಾರ್ನಬರಿಗೆ ಚರ್ಚೆಯೂ ಮಹಾ ವಿವಾದವೂ ಉಂಟಾದಾಗ ಇದರ ವಿಷಯವಾಗಿ ಪೌಲ, ಬಾರ್ನಬರು ಮತ್ತು ತಮ್ಮಲ್ಲಿ ಬೇರೆ ಕೆಲವರು ಯೆರೂಸಲೇಮಿನಲ್ಲಿದ್ದ ಅಪೊಸ್ತಲರ ಮತ್ತು ಸಭೆಯ ಹಿರಿಯರ ಬಳಿಗೆ ಹೋಗಬೇಕೆಂದು ಸಹೋದರರು ತೀರ್ಮಾನಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಈ ವಿಷಯವಾಗಿ ಅವರಿಗೂ ಪೌಲ ಮತ್ತು ಬಾರ್ನಬರಿಗೂ ಭಿನ್ನಾಭಿಪ್ರಾಯ ಉಂಟಾಗಿ ತೀವ್ರ ವಿವಾದವೆದ್ದಿತು. ಆದುದರಿಂದ ಈ ಸಮಸ್ಯೆಯ ಬಗ್ಗೆ ಪೌಲ ಮತ್ತು ಬಾರ್ನಬರು ಅಂತಿಯೋಕ್ಯದ ಇನ್ನೂ ಕೆಲವರ ಸಮೇತ ಜೆರುಸಲೇಮಿಗೆ ಹೋಗಿ ಪ್ರೇಷಿತರನ್ನೂ ಪ್ರಮುಖರನ್ನೂ ಕಾಣಬೇಕೆಂದು ತೀರ್ಮಾನಿಸಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅವರಿಗೂ ಪೌಲ ಬಾರ್ನಬರಿಗೂ ಭೇದವೂ ಮಹಾ ವಿವಾದವೂ ಉಂಟಾದಾಗ ಇದರ ವಿಷಯವಾಗಿ ಸಹೋದರರು ಪೌಲ ಬಾರ್ನಬರನ್ನೂ ತಮ್ಮಲ್ಲಿ ಬೇರೆ ಕೆಲವರನ್ನೂ ಯೆರೂಸಲೇವಿುನಲ್ಲಿದ್ದ ಅಪೊಸ್ತಲರ ಮತ್ತು ಸಭೆಯ ಹಿರಿಯರ ಬಳಿಗೆ ಹೋಗಬೇಕೆಂದು ನೇವಿುಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಪೌಲ ಬಾರ್ನಬರು ಈ ಉಪದೇಶಕ್ಕೆ ತಮ್ಮ ವಿರೋಧವನ್ನು ವ್ಯಕ್ತಪಡಿಸಿ ಅವರೊಂದಿಗೆ ವಾದ ಮಾಡಿದರು. ಈ ಸಮಸ್ಯೆಯ ಬಗ್ಗೆ ಅಪೊಸ್ತಲರೊಡನೆ ಮತ್ತು ಹಿರಿಯರೊಡನೆ ಚರ್ಚಿಸಲು ಪೌಲ ಬಾರ್ನಬರನ್ನು ಮತ್ತು ಇತರ ಕೆಲವರನ್ನು ಜೆರುಸಲೇಮಿಗೆ ಕಳುಹಿಸಲು ಸಭೆ ನಿರ್ಧರಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಪಾವ್ಲುನ್ ಅನಿ ಬಾರ್ನಾಬಾಸಾನ್ ಹ್ಯಾ ಶಿಕಾಪಾಕ್ನಿ ಅಪ್ಲೊ ವಿರೊದ್ ದಾಕ್ವುನ್ ತೆಂಚ್ಯಾ ವಾಂಗ್ಡಾ ವಾದ್ ಕರ್‍ಲ್ಯಾನಿ, ಹ್ಯಾ ನಮುನ್ಯಾಚ್ಯಾ ವಿಶಯಾತ್ ಅಪೊಸ್ತಲಾಂಚ್ಯಾ ವಾಂಗ್ಡಾ ಅನಿ ಪುರ್ವಜ್ ಲೊಕಾಂಚ್ಯಾ ವಾಂಗ್ಡಾ ಚರ್ಚಾ ಕರುಕ್ ಸಾಟ್ನಿ ಪಾವ್ಲುಕ್ ಅನಿ ಬಾರ್ನಾಬಾಸಾಕ್ ಹುರಲ್ಯಾ ಉಲ್ಲ್ಯಾ ಲೊಕಾಂಚ್ಯಾ ವಾಂಗ್ಡಾ ಜೆರುಜಲೆಮಾಕ್ ಧಾಡುಚೆ ಮನುನ್ ತಾಂಡ್ಯಾಚ್ಯಾ ಲೊಕಾನಿ ಚಿಂತ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 15:2
20 ತಿಳಿವುಗಳ ಹೋಲಿಕೆ  

ಸುವಾರ್ತೆಯ ಸತ್ಯವು ನಿಮ್ಮಲ್ಲಿ ಸ್ಥಿರವಾಗಿರಬೇಕೆಂದು ನಾವು ಅವರಿಗೆ ಕ್ಷಣಮಾತ್ರವೂ ಬಿಟ್ಟುಕೊಡಲು ಒಪ್ಪಲಿಲ್ಲ.


“ಅತ್ಯಂತ ಮಹಾ ಅಪೊಸ್ತಲರು” ಎಂದೆನಿಸಿದ ಇತರ ಅಪೊಸ್ತಲರಿಗಿಂತಲೂ ನಾನು ಕಡಿಮೆಯಾದವನಲ್ಲ ಎಂದು ಭಾವಿಸುತ್ತೇನೆ.


ಅವರು ಯೆರೂಸಲೇಮನ್ನು ತಲುಪಿದಾಗ, ಸಭೆಯವರು, ಅಪೊಸ್ತಲರು ಹಾಗೂ ಹಿರಿಯರು ಅವರನ್ನು ಸ್ವಾಗತಿಸಿದರು. ದೇವರು ತಮ್ಮ ಮುಖಾಂತರವಾಗಿ ಮಾಡಿದ್ದನ್ನು ಅವರು ತಿಳಿಸಿದರು.


ಇದಕ್ಕನುಗುಣವಾಗಿ ಬಾರ್ನಬ ಮತ್ತು ಸೌಲರ ಮುಖಾಂತರ ಹಿರಿಯರಿಗೆ ತಮ್ಮ ದೇಣಿಗೆಗಳನ್ನು ಕಳುಹಿಸಿದರು.


ಪ್ರಿಯ ಸ್ನೇಹಿತರೇ, ನಾವು ಹಂಚಿಕೊಳ್ಳುವ ರಕ್ಷಣೆಯ ವಿಷಯದಲ್ಲಿ ನಿಮಗೆ ಬರೆಯುವುದಕ್ಕೆ ಪೂರ್ಣಜಾಗ್ರತೆಯಿಂದ ಪ್ರಯತ್ನ ಮಾಡುತ್ತಿದ್ದಾಗ, ಪರಿಶುದ್ಧರಿಗೆ ಒಂದೇ ಸಾರಿ ಒಪ್ಪಿಸಲಾದ ನಂಬಿಕೆಯನ್ನು ಕಾಪಾಡಿಕೊಳ್ಳುವುದಕ್ಕೆ ನೀವು ಹೋರಾಡಬೇಕೆಂದು ಎಚ್ಚರಿಸಿ ಬರೆಯುವುದು ನನಗೆ ಅವಶ್ಯವೆಂದು ತೋರಿತು.


ದೇವರ ಚಿತ್ತಾನುಸಾರವಾಗಿ ಕ್ರಿಸ್ತ ಯೇಸುವಿನಿಂದ ಅಪೊಸ್ತಲನಾಗಲು ಕರೆಯಲಾದ ಪೌಲನೆಂಬ ನಾನು ಮತ್ತು ನಮ್ಮ ಸಹೋದರ ಸೊಸ್ಥೆನನು,


ಮರುದಿನ ನಾವೆಲ್ಲರೂ ಪೌಲನೊಂದಿಗೆ ಯಾಕೋಬನನ್ನು ನೋಡಲು ಹೋದೆವು. ಅಲ್ಲಿ ಎಲ್ಲಾ ಸಭೆಹಿರಿಯರೂ ಇದ್ದರು.


ಅವರು ಪಟ್ಟಣಗಳಲ್ಲಿ ಪ್ರಯಾಣಮಾಡುತ್ತಿರುವಾಗ ಯೆರೂಸಲೇಮಿನಲ್ಲಿದ್ದ ಅಪೊಸ್ತಲರು, ಹಿರಿಯರು ತೆಗೆದುಕೊಂಡ ತೀರ್ಮಾನಗಳನ್ನು ಜನರು ಅನುಸರಿಸಿ ನಡೆಯುವಂತೆ ಅವರಿಗೆ ಬೋಧಿಸಿದರು.


ಆದ್ದರಿಂದ ನಾವು ಈ ಸಂಗತಿಗಳನ್ನು ಬಾಯಿಮಾತುಗಳಿಂದ ಪ್ರಕಟಿಸುವುದಕ್ಕಾಗಿ ಯೂದ ಮತ್ತು ಸೀಲರನ್ನು ಕಳುಹಿಸುತ್ತಿದ್ದೇವೆ.


ಆದ್ದರಿಂದ ಕೆಲವರನ್ನು ಆಯ್ದುಕೊಂಡು ಅವರನ್ನು ನಮ್ಮ ಪ್ರಿಯರಾದ ಬಾರ್ನಬ ಮತ್ತು ಪೌಲರೊಂದಿಗೆ ನಿಮ್ಮ ಬಳಿಗೆ ಕಳುಹಿಸುವುದು ಯುಕ್ತವೆಂದು ಒಂದೇ ಮನಸ್ಸಾಗಿರುವ ನಮಗೆ ತೋಚಿತು.


ಏನೂ ಸಂಶಯಪಡದೇ ಅವರ ಜೊತೆಯಲ್ಲಿ ಹೋಗಬೇಕೆಂದು ಪವಿತ್ರಾತ್ಮ ದೇವರು ನನಗೆ ಅಪ್ಪಣೆಕೊಟ್ಟರು. ಇದಲ್ಲದೆ ಈ ಆರು ಜನ ಸಹೋದರರೂ ನನ್ನೊಂದಿಗೆ ಹೊರಟರು. ನಾವು ಆ ಮನುಷ್ಯನ ಮನೆಯೊಳಗೆ ಪ್ರವೇಶಿಸಿದೆವು.


ಪೇತ್ರನು ಅವರನ್ನು ತನ್ನ ಅತಿಥಿಗಳಾಗಿರಲು ಮನೆಯೊಳಗೆ ಕರೆದನು. ಮರುದಿನ ಪೇತ್ರನು ಅವರೊಂದಿಗೆ ಪ್ರಯಾಣ ಬೆಳೆಸಿದನು. ಯೊಪ್ಪದಲ್ಲಿಯ ಕೆಲವು ಸಹೋದರರು ಅವನೊಂದಿಗೆ ಹೊರಟರು.


ಆಗ ಯೆಹೋವ ದೇವರು ಸಮುಯೇಲನಿಗೆ, “ಜನರು ನಿನಗೆ ಹೇಳಿದ್ದೆಲ್ಲದರಲ್ಲಿ ಅವರ ಮಾತು ಕೇಳು. ಏಕೆಂದರೆ ಅವರು ನಿನ್ನನ್ನು ತಿರಸ್ಕಾರ ಮಾಡಿಲ್ಲ. ನಾನು ಅವರನ್ನು ಆಳದ ಹಾಗೆ ನನ್ನನ್ನೇ ತಿರಸ್ಕಾರಮಾಡಿದ್ದಾರೆ.


ಈ ಕಾರ್ಯವನ್ನು ಮಾಡುವುದಕ್ಕೆ ದೇವರು ನಿನಗೆ ಅಪ್ಪಣೆ ಕೊಟ್ಟರೆ, ಆಗ ನೀನು ಇದನ್ನು ನಿರ್ವಹಿಸಲು ಶಕ್ತನಾಗುವೆ. ಈ ಜನರೆಲ್ಲರೂ ತಮ್ಮ ತಮ್ಮ ಸ್ಥಳಗಳಿಗೆ ಸಮಾಧಾನದಿಂದ ಹೋಗುವರು,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು