ಅಪೊಸ್ತಲರ ಕೃತ್ಯಗಳು 15:22 - ಕನ್ನಡ ಸಮಕಾಲಿಕ ಅನುವಾದ22 ಆಗ ಅಪೊಸ್ತಲರು ಮತ್ತು ಹಿರಿಯರು ಇಡೀ ಸಭೆಯ ಸಮ್ಮತಿ ಪಡೆದು, ಸಹೋದರರಲ್ಲಿ ನಾಯಕರಾಗಿದ್ದ ಬಾರ್ಸಬನೆಂದು ಕರೆಯಲಾದ ಯೂದ ಮತ್ತು ಸೀಲ ಎಂಬಿಬ್ಬರನ್ನು ಆಯ್ದುಕೊಂಡರು. ಅವರನ್ನು ಪೌಲ ಮತ್ತು ಬಾರ್ನಬರೊಂದಿಗೆ ಅಂತಿಯೋಕ್ಯಕ್ಕೆ ಕಳುಹಿಸಲು ನಿರ್ಧರಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಆಗ ಅಪೊಸ್ತಲರೂ, ಸಭೆಯ ಹಿರಿಯರೂ ಸರ್ವಸಭೆಯ ಅನುಮತಿಯಿಂದ ತಮ್ಮಲ್ಲಿ ಕೆಲವರನ್ನು ಆರಿಸಿಕೊಂಡು ಪೌಲ ಮತ್ತು ಬಾರ್ನಬರ ಜೊತೆಯಲ್ಲಿ ಅಂತಿಯೋಕ್ಯಕ್ಕೆ ಕಳುಹಿಸುವುದು ಯುಕ್ತವೆಂದು ತೀರ್ಮಾನಿಸಿದರು. ಆದಕಾರಣ ಸಹೋದರರಲ್ಲಿ ಮುಖ್ಯರಾಗಿದ್ದ ಬಾರ್ಸಬ್ಬನೆನಿಸಿಕೊಳ್ಳುವ ಯೂದನನ್ನೂ, ಸೀಲನನ್ನೂ ಆರಿಸಿಕೊಂಡು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಅನಂತರ ಪ್ರೇಷಿತರೂ ಸಭಾಪ್ರಮುಖರೂ ಇಡೀ ಧರ್ಮಸಭೆಯ ಸಮ್ಮತಿಪಡೆದು, ತಮ್ಮಲ್ಲಿ ಕೆಲವರನ್ನು ಆರಿಸಿ, ಪೌಲ ಮತ್ತು ಬಾರ್ಸಬರೊಂದಿಗೆ ಅಂತಿಯೋಕ್ಯಕ್ಕೆ ಕಳುಹಿಸಬೇಕೆಂದು ನಿರ್ಧರಿಸಿದರು. ಅಂತೆಯೇ, ಸಹೋದರರಲ್ಲಿ ಬಹು ಗೌರವಾನ್ವಿತರಾದ ಬಾರ್ನಬ ಎಂದು ಕರೆಯಲಾದ ಯೂದ ಮತ್ತು ಸೀಲ ಎಂಬ ಇಬ್ಬರನ್ನು ಆರಿಸಿದರು. ಈ ಕೆಳಗಿನ ಪತ್ರವನ್ನು ಬರೆದು ಅವರ ಕೈಯಲ್ಲಿ ಕಳುಹಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಆಗ ಅಪೊಸ್ತಲರೂ ಸಭೆಯ ಹಿರಿಯರೂ ಸರ್ವಸಭೆಯ ಸಮ್ಮತಿಯಿಂದ ತಮ್ಮಲ್ಲಿ ಕೆಲವರನ್ನು ಆರಿಸಿಕೊಂಡು ಪೌಲ ಬಾರ್ನಬರ ಜೊತೆಯಲ್ಲಿ ಅಂತಿಯೋಕ್ಯಕ್ಕೆ ಕಳುಹಿಸುವದು ಯುಕ್ತವೆಂದು ತೀರ್ಮಾನಿಸಿದರು. ಆದಕಾರಣ ಸಹೋದರರಲ್ಲಿ ಮುಖ್ಯರಾಗಿದ್ದ ಬಾರ್ಸಬ್ಬನೆನಿಸಿಕೊಳ್ಳುವ ಯೂದನನ್ನೂ ಸೀಲನನ್ನೂ ಆರಿಸಿಕೊಂಡು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಅಪೊಸ್ತಲರು, ಹಿರಿಯರು ಮತ್ತು ಇಡೀ ಸಭೆಯವರು ಪೌಲ ಬಾರ್ನಬರೊಂದಿಗೆ ಕೆಲವು ಜನರನ್ನು ಅಂತಿಯೋಕ್ಯಕ್ಕೆ ಕಳುಹಿಸಬಯಸಿದರು. ತಮ್ಮವರೇ ಆದ ಕೆಲವರನ್ನು ಆರಿಸಿಕೊಳ್ಳಲು ಸಭೆಯು ನಿರ್ಧರಿಸಿತು. ಅವರು ಯೂದನನ್ನು (ಬಾರ್ಸಬನೆಂದೂ ಕರೆಯುತ್ತಿದ್ದರು) ಮತ್ತು ಸೀಲನನ್ನು ಆರಿಸಿಕೊಂಡರು. ಇವರು ಜೆರುಸಲೇಮಿನ ಸಭೆಯವರಲ್ಲಿ ಪ್ರಮುಖರಾಗಿದ್ದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್22 ಅಪೊಸ್ತಲಾನಿ, ಜಾಂನ್ತ್ಯಾ ಲೊಕಾನಿ ಅನಿ ಸಗ್ಳ್ಯಾ ತಾಂಡ್ಯಾಚ್ಯಾ ಲೊಕಾನಿ ಪಾವ್ಲು ಅನಿ ಬಾರ್ನಾಬಾಸಾಚ್ಯಾ ವಾಂಗ್ಡಾ ಥೊಡ್ಯಾ ಲೊಕಾಕ್ನಿ ಅಂತಿಯೊಕಾಕ್ ಧಾಡುಚೆ ಮನುನ್ ಚಿಂತ್ಲ್ಯಾನಿ, ಅಪ್ಲ್ಯಾ ಉಲ್ಲ್ಯಾ ಲೊಕಾಕ್ನಿ ಎಚುನ್ ಘೆವ್ಚೆ ಮನುನ್ ನಿರ್ಧಾರ್ ಕರ್‍ಲ್ಯಾನಿ, ತೆನಿ ಬಾರ್ಸಬ್ ಮನ್ತಲ್ಯಾ ಜುದಾಕ್ ಅನಿ ಸಿಲಾಸ್ ಮನ್ತಲ್ಯಾಕ್ ಎಚುನ್ ಘೆಟ್ಲ್ಯಾನಿ, ಹೆನಿ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾತ್ ಪ್ರಮುಖ್ ಹೊವ್ನ್ ಹೊತ್ತೆ. ಅಧ್ಯಾಯವನ್ನು ನೋಡಿ |