Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 15:24 - ಕನ್ನಡ ಸಮಕಾಲಿಕ ಅನುವಾದ

24 ನಮ್ಮಿಂದ ಕೆಲವರು ನಮ್ಮ ಅಪ್ಪಣೆಯಿಲ್ಲದೆ ತಮ್ಮ ಮಾತುಗಳಿಂದ ನಿಮ್ಮ ಮನಸ್ಸಿಗೆ ತೊಂದರೆ ಕೊಟ್ಟರೆಂದು ನಾವು ಕೇಳಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 “ನಮ್ಮೊಳಗಿಂದ ಹೊರಟು ಕೆಲವರು ನಮ್ಮಿಂದ ಯಾವ ಅಪ್ಪಣೆಯನ್ನು ಹೊಂದದೆ ತಮ್ಮ ಮಾತುಗಳಿಂದ ನಿಮ್ಮಲ್ಲಿ ಅಸಮಾಧಾನವನ್ನು ಹುಟ್ಟಿಸಿ ನಿಮ್ಮ ಮನಸ್ಸುಗಳನ್ನು ಕಳವಳಗೊಳಿಸಿದ್ದಾರೆಂಬುದನ್ನು ಕೇಳಿದ್ದರಿಂದ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ನಮ್ಮ ಕಡೆಯ ಕೆಲವು ಜನರು ನಮ್ಮಿಂದ ಯಾವ ಆದೇಶವನ್ನೂ ಪಡೆಯದೆ ನಿಮ್ಮನ್ನು ತೊಂದರೆಗೆ ಈಡುಮಾಡಿ ನಿಮ್ಮ ಮನಸ್ಸನ್ನು ಕಲಕಿದರೆಂಬ ಸಮಾಚಾರ ನಮ್ಮ ಗಮನಕ್ಕೆ ಬಂದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಅದಾಗಿ ನಮ್ಮೊಳಗಿಂದ ಹೋದ ಕೆಲವರು ನಮ್ಮಿಂದ ಏನೂ ಅಪ್ಪಣೆಹೊಂದದೆ ತಮ್ಮ ಮಾತುಗಳಿಂದ ನಿಮ್ಮಲ್ಲಿ ಅಸಮಾಧಾನವನ್ನು ಹುಟ್ಟಿಸಿ ನಿಮ್ಮ ಮನಸ್ಸುಗಳನ್ನು ಕಳವಳಗೊಳಿಸಿದ್ದಾರೆಂಬದನ್ನು ಕೇಳಿದ್ದರಿಂದ ನಾವು ಕೆಲವರನ್ನು ಆರಿಸಿಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ನಮ್ಮ ಸಮುದಾಯದಿಂದ ನಿಮ್ಮ ಬಳಿಗೆ ಬಂದ ಕೆಲವರು ನಿಮಗೆ ಕೆಲವು ಸಂಗತಿಗಳನ್ನು ಹೇಳುವುದರ ಮೂಲಕ ನಿಮ್ಮನ್ನು ತೊಂದರೆಗೆ ಈಡುಮಾಡಿ ನಿಮ್ಮಲ್ಲಿ ಗಲಿಬಿಲಿ ಉಂಟುಮಾಡಿದರೆಂಬ ಸಮಾಚಾರ ನಮಗೆ ತಿಳಿಯಿತು. ಆದರೆ ಹೀಗೆ ಮಾಡಬೇಕೆಂದು ನಾವು ಅವರಿಗೆ ಹೇಳಿರಲಿಲ್ಲ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ಅಮ್ಚ್ಯಾ ತಾಂಡ್ಯಾತ್ನಾ ತುಮ್ಚ್ಯಾ ಜಗ್ಗೊಳ್ ಯೆಲ್ಲ್ಯಾ ಉಲ್ಲ್ಯಾ ಭಾವಾನಿ ಉಲ್ಲಿ ಸಂಗ್ತಿಯಾ ಸಾಂಗುನ್ ತುಮ್ಕಾ ತರಾಸ್ ಹೊಯ್ ಸಾರ್ಕೆ ಕರುನ್ ತುಮ್ಚ್ಯಾತ್ ಗೊಂದಳ್ ಕರ್‍ಲ್ಯಾನಿ ಮನ್ತಲಿ ಖಬರ್ ಅಮ್ಕಾ ಗಾವ್ಲಾ, ಖರೆ ತಸೆ ಕರಾ ಮನುನ್ ಅಮಿ ತೆಂಕಾ ಸಾಂಗುಕ್ ನತ್ತಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 15:24
12 ತಿಳಿವುಗಳ ಹೋಲಿಕೆ  

ನಿಮ್ಮನ್ನು ಸುನ್ನತಿ ಮಾಡಿಸಿಕೊಳ್ಳಬೇಕೆಂದು ತೊಂದರೆ ಪಡಿಸುವವರಿಗೆ ಆ ಅಂಗಚ್ಛೇದವನ್ನಾದರೂ ಮಾಡಿಕೊಂಡರೆ ಲೇಸು ಎಂದು ಬಯಸುತ್ತೇನೆ!


ನೀವು ಬೇರೆ ರೀತಿಯಿಂದ ಯೋಚಿಸುವುದಿಲ್ಲವೆಂದು ಕರ್ತ ಯೇಸುವಿನಲ್ಲಿ ನಿಮ್ಮನ್ನು ಕುರಿತು ನನಗೆ ಭರವಸೆ ಇದೆ. ಆದರೆ ನಿಮ್ಮನ್ನು ತೊಂದರೆ ಪಡಿಸುವವನು ಯಾವನಾದರೂ ಸರಿ, ಅವನು ದಂಡನೆಯನ್ನು ಅನುಭವಿಸುವನು.


ಕೆಲವು ಜನರು ಯೂದಾಯದಿಂದ ಅಂತಿಯೋಕ್ಯಕ್ಕೆ ಬಂದು ಅಲ್ಲಿಯ ಸಹೋದರರಿಗೆ, “ಮೋಶೆ ಬೋಧಿಸಿದ ಪದ್ಧತಿಯಂತೆ ನೀವು ಸುನ್ನತಿ ಹೊಂದದಿದ್ದರೆ ನೀವು ರಕ್ಷಣೆ ಹೊಂದಲಾರಿರಿ,” ಎಂದು ಬೋಧಿಸತೊಡಗಿದರು.


ಅದು ಸುವಾರ್ತೆಯೇ ಅಲ್ಲ, ಆದರೆ ಕೆಲವರು ನಿಮ್ಮನ್ನು ಗಲಿಬಿಲಿಗೆ ಒಳಪಡಿಸಿ, ಕ್ರಿಸ್ತ ಯೇಸುವಿನ ಸುವಾರ್ತೆಯನ್ನು ವಕ್ರಪಡಿಸಬೇಕೆಂದು ಪ್ರಯತ್ನಿಸುತ್ತಿದ್ದಾರೆ.


ಅವರು ನಮ್ಮಿಂದ ಹೊರಟು ಹೋದರು. ಆದರೆ ಅವರು ನಮ್ಮವರಾಗಿರಲಿಲ್ಲ. ಏಕೆಂದರೆ ಅವರು ನಮ್ಮವರಾಗಿದ್ದರೆ, ನಮ್ಮ ಜೊತೆಯಲ್ಲೇ ಇರುತ್ತಿದ್ದರು. ಆದರೆ ಅವರು ನಮ್ಮಿಂದ ಹೊರಟು ಹೋದುದರಿಂದ ಅವರೆಲ್ಲರೂ ನಮ್ಮವರಲ್ಲವೆಂಬುದು ತೋರಿಬಂತು.


ಈ ವಿಷಯಗಳನ್ನು ದೇವಜನರ ನೆನಪಿಗೆ ತರಬೇಕು. ಕೇಳುವವರಿಗೆ ಯಾವ ಪ್ರಯೋಜನವನ್ನೂ ಉಂಟು ಮಾಡದೆ ಕೆಡವಿ ಹಾಕುವ ವಾಗ್ವಾದಗಳನ್ನು ಮಾಡಬಾರದೆಂದು ಅವರಿಗೆ ದೇವರ ಮುಂದೆ ಎಚ್ಚರಿಸು.


ನೀವು ನಿಯಮದ ಮೂಲಕ ನೀತಿವಂತರಾಗಬೇಕೆಂದು ಪ್ರಯತ್ನಿಸುವವರು, ಕ್ರಿಸ್ತ ಯೇಸುವಿನಿಂದ ಬೇರ್ಪಟ್ಟಿದ್ದೀರಿ. ನೀವು ಕೃಪೆಯಿಂದ ಬಿದ್ದವರಾಗಿದ್ದೀರಿ.


ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ನಿಮಗೆ ಪ್ರವಾದಿಸುವ ಪ್ರವಾದಿಗಳ ವಾಕ್ಯಕ್ಕೆ ಕಿವಿಗೊಡಬೇಡಿರಿ. ಅವರು ನಿಮ್ಮಲ್ಲಿ ವ್ಯರ್ಥವಾದ ನಿರೀಕ್ಷೆಯನ್ನು ಹುಟ್ಟಿಸುತ್ತಾರೆ. ಯೆಹೋವ ದೇವರ ಬಾಯಿಂದಲ್ಲ, ಸ್ವಂತ ಹೃದಯದಿಂದ ದರ್ಶನವನ್ನು ಹೇಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು