Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 15:39 - ಕನ್ನಡ ಸಮಕಾಲಿಕ ಅನುವಾದ

39 ಇದರಿಂದ ಅವರಲ್ಲಿ ತೀವ್ರ ಭಿನ್ನಾಭಿಪ್ರಾಯ ಉಂಟಾಗಿ ಅವರು ಒಬ್ಬರಿಂದೊಬ್ಬರು ಪ್ರತ್ಯೇಕವಾಗಿ ಹೋಗಬೇಕಾಯಿತು. ಬಾರ್ನಬನು ಮಾರ್ಕನನ್ನು ಕರೆದುಕೊಂಡು ಸೈಪ್ರಸ್ ದ್ವೀಪಕ್ಕೆ ಪ್ರಯಾಣಮಾಡಿದನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಈ ವಿಷಯದಲ್ಲಿ ತೀವ್ರವಾದ ವಾಗ್ವಾದವುಂಟಾಗಿ ಅವರು ಒಬ್ಬರನ್ನೊಬ್ಬರು ಅಗಲಿದರು. ಬಾರ್ನಬನು ಮಾರ್ಕನನ್ನು ಕರೆದುಕೊಂಡು ಸಮುದ್ರ ಮಾರ್ಗವಾಗಿ ಕುಪ್ರದ್ವೀಪಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

39 ಹೀಗೆ ಇವರಿಬ್ಬರಲ್ಲಿ ತೀವ್ರ ವಾಗ್ವಾದ ಉಂಟಾಯಿತು. ಒಬ್ಬರನ್ನೊಬ್ಬರು ಬಿಟ್ಟು ಅಗಲಬೇಕಾಯಿತು. ಬಾರ್ನಬನು ಮಾರ್ಕನನ್ನು ಕರೆದುಕೊಂಡು ಸೈಪ್ರಸ್ ದ್ವೀಪಕ್ಕೆ ನೌಕಾಯಾನ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ಈ ವಿಷಯದಲ್ಲಿ ತೀಕ್ಷ್ಣ ವಾಗ್ವಾದವುಂಟಾಗಿ ಅವರು ಒಬ್ಬರನ್ನೊಬ್ಬರು ಅಗಲಿದರು. ಬಾರ್ನಬನು ಮಾರ್ಕನನ್ನು ಕರಕೊಂಡು ಸಮುದ್ರಮಾರ್ಗವಾಗಿ ಕುಪ್ರದ್ವೀಪಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 ಇದರ ಬಗ್ಗೆ ಪೌಲ ಮತ್ತು ಬಾರ್ನಬರ ನಡುವೆ ದೊಡ್ಡ ವಾಗ್ವಾದವೇ ನಡೆಯಿತು. ಅವರಿಬ್ಬರೂ ಬೇರ್ಪಟ್ಟು ಬೇರೆ ಮಾರ್ಗಗಳಲ್ಲಿ ಹೋದರು. ಬಾರ್ನಬನು ಮಾರ್ಕನೊಂದಿಗೆ ಸೈಪ್ರಸ್‌ಗೆ ನೌಕಾಯಾನ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

39 ಹೆಚ್ಯಾ ವಿಶಯಾತ್ ಪಾವ್ಲುಕ್ ಅನಿ ಬಾರ್ನಾಬಾಸಾಕ್ ಝಗ್ಡೊ ಹೊಲೊ, ತೆನಿ ಎಗ್ಳೆ ಹೊವ್ನ್ ದುಸ್ರ್ಯಾ ವಾಟಾನಿ ಗೆಲೆ, ಬಾರ್ನಾಬಾಸ್ ಮಾರ್ಕಾಚ್ಯಾ ವಾಂಗ್ಡಾ ಢೊನಾತ್ನಾ ಸೈಪ್ರಸಾಕ್ ಗೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 15:39
15 ತಿಳಿವುಗಳ ಹೋಲಿಕೆ  

ನನ್ನ ಜೊತೆ ಸೆರೆಯಾಳಾದ ಅರಿಸ್ತಾರ್ಕ, ಬಾರ್ನಬನ ಸಹೋದರಿಯ ಮಗನಾದ ಮಾರ್ಕನು ನಿಮಗೆ ವಂದನೆ ಹೇಳುತ್ತಾರೆ. ಮಾರ್ಕನ ವಿಷಯದಲ್ಲಿ ನೀವು ಮಾರ್ಗದರ್ಶನ ಹೊಂದಿದ್ದೀರಲ್ಲಾ, ಅವನು ನಿಮ್ಮ ಬಳಿಗೆ ಬಂದರೆ ಅವನನ್ನು ಸೇರಿಸಿಕೊಳ್ಳಿರಿ.


ಏಕೆಂದರೆ ಅನೇಕ ವಿಷಯಗಳಲ್ಲಿ ನಾವೆಲ್ಲರೂ ತಪ್ಪುವುದುಂಟು. ಒಬ್ಬನು ಮಾತಿನಲ್ಲಿ ತಪ್ಪದಿದ್ದರೆ, ಅವನು ಪರಿಪೂರ್ಣನೂ ತನ್ನ ಇಡೀ ದೇಹವನ್ನೇ ಸ್ವಾಧೀನದಲ್ಲಿಟ್ಟುಕೊಳ್ಳುವುದಕ್ಕೆ ಸಮರ್ಥನೂ ಆಗಿದ್ದಾನೆ.


ಸೈಪ್ರಸ್ ಎಂಬಲ್ಲಿ ಹುಟ್ಟಿದ ಒಬ್ಬ ಲೇವಿಯನು ಇದ್ದನು, ಅವನ ಹೆಸರು ಯೋಸೇಫ, ಅಪೊಸ್ತಲರು ಅವನನ್ನು “ಬಾರ್ನಬ” ಎಂದು ಕರೆದರು. ಬಾರ್ನಬ ಅಂದರೆ “ಆದರಣೆಯ ಪುತ್ರನು” ಎಂದು ಅರ್ಥ.


ಪಾಪಮಾಡದೆ ಒಳ್ಳೆಯದನ್ನೇ ನಡೆಸುವ ನೀತಿವಂತನು, ಭೂಮಿಯ ಮೇಲೆ ಒಬ್ಬನೂ ಇಲ್ಲ.


ಆದರೆ ಅವರಲ್ಲಿ, ಕೆಲವರು ಅಂದರೆ ಸೈಪ್ರಸ್ ಮತ್ತು ಕುರೇನೆದ ಪುರುಷರು ಅಂತಿಯೋಕ್ಯಕ್ಕೆ ಹೋಗಿ ಗ್ರೀಕರಿಗೂ ಕರ್ತ ಯೇಸುವಿನ ಶುಭಸಮಾಚಾರ ಸಾರಲು ಪ್ರಾರಂಭಿಸಿದರು.


ಆ ದಿನಗಳಲ್ಲಿ ಶಿಷ್ಯರ ಸಂಖ್ಯೆ ಹೆಚ್ಚುತ್ತಲೇ ಇತ್ತು. ಅವರಲ್ಲಿ ಗ್ರೀಕ್ ಮಾತನಾಡುವ ಯೆಹೂದ್ಯರು, ಹೀಬ್ರೂ ಭಾಷೆ ಮಾತನಾಡುವ ಯೆಹೂದ್ಯರ ವಿರೋಧವಾಗಿ ಗೊಣಗುಟ್ಟುತ್ತಿದ್ದರು. ಏಕೆಂದರೆ, “ಅನುದಿನದ ಉಪಚಾರದಲ್ಲಿ ಅವರು ತಮ್ಮ ವಿಧವೆಯರನ್ನು ಅಲಕ್ಷ್ಯಮಾಡುತ್ತಿದ್ದಾರೆ,” ಎಂದರು.


ಅಲ್ಲಿಂದ ಹೊರಟು, ಎದುರುಗಾಳಿ ಬೀಸುತ್ತಿದ್ದದರಿಂದ ನಾವು ಸಮುದ್ರ ಪ್ರಯಾಣಮಾಡಿ ಸೈಪ್ರಸ್ ದ್ವೀಪ ಸಮೀಪವಾಗಿ,


ಇದರಿಂದ ಪೌಲ, ಬಾರ್ನಬರು ಅವರೊಂದಿಗೆ ಭಿನ್ನಾಭಿಪ್ರಾಯವುಳ್ಳವರಾಗಿ ತೀವ್ರ ವಿವಾದವುಂಟಾಯಿತು. ಈ ಪ್ರಶ್ನೆಯ ವಿಷಯದಲ್ಲಿ ಅಪೊಸ್ತಲರನ್ನೂ ಹಿರಿಯರನ್ನೂ ಭೇಟಿಯಾಗಲು, ತಮ್ಮಲ್ಲಿ ಬೇರೆ ಕೆಲವರು ಪೌಲ, ಬಾರ್ನಬರೊಂದಿಗೆ ಯೆರೂಸಲೇಮಿಗೆ ಹೋಗಬೇಕೆಂದು ನಿರ್ಣಯಿಸಲಾಯಿತು.


ಸರ್ವ ಸಂಪೂರ್ಣತೆಗೂ ಒಂದು ಮಿತಿಯಿರುವುದನ್ನು ನಾನು ನೋಡಿದ್ದೇನೆ; ಆದರೆ ನಿಮ್ಮ ಆಜ್ಞೆಗಳು ಮಿತಿಯಿಲ್ಲದವುಗಳಾಗಿವೆ.


ಏಕೆಂದರೆ ಇಸ್ರಾಯೇಲರು ದೇವರ ಆತ್ಮನಿಗೆ ತಿರುಗಿ ಬಿದ್ದದ್ದರಿಂದ, ಮೋಶೆ ದುಡುಕಿ ಮಾತನಾಡಿದನು.


ಅವನು ಇದನ್ನು ಗ್ರಹಿಸಿ, ಮಾರ್ಕನೆನಿಸಿಕೊಳ್ಳುವ ಯೋಹಾನನ ತಾಯಿ ಮರಿಯಳ ಮನೆಗೆ ಹೋದನು. ಅಲ್ಲಿ ಅನೇಕರು ಒಟ್ಟಾಗಿ ಕೂಡಿಬಂದು ಪ್ರಾರ್ಥನೆ ಮಾಡುತ್ತಿದ್ದರು.


ಬಾರ್ನಬನು ಮಾರ್ಕ ಎಂಬ ಹೆಸರಿನ ಯೋಹಾನನನ್ನು ತಮ್ಮ ಜೊತೆಯಲ್ಲಿ ಕರೆದುಕೊಂಡು ಹೋಗಬೇಕೆಂದು ಬಯಸಿದನು,


ನಿಮ್ಮೊಂದಿಗೆ ಆರಿಸಿಕೊಂಡಂಥ ಬಾಬಿಲೋನಿನಲ್ಲಿರುವ ಸಭೆಯು ನಿಮಗೆ ವಂದನೆ ಹೇಳುತ್ತದೆ. ನನ್ನ ಮಗನಾದ ಮಾರ್ಕನು ಸಹ ವಂದನೆ ಹೇಳುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು