Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 15:41 - ಕನ್ನಡ ಸಮಕಾಲಿಕ ಅನುವಾದ

41 ಪೌಲನು ಸಿರಿಯ ಮತ್ತು ಕಿಲಿಕ್ಯ ಸೀಮೆಗಳನ್ನು ಹಾದುಹೋಗುತ್ತಾ, ಅಲ್ಲಿದ್ದ ಸಭೆಗಳ ನಂಬಿಕೆಯನ್ನು ಬಲಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 ಹೊರಟು ಸಿರಿಯ ಮತ್ತು ಕಿಲಿಕ್ಯ ಸೀಮೆಗಳಲ್ಲಿ ಸಂಚರಿಸುತ್ತಾ ಸಭೆಗಳನ್ನು ದೃಢಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

41 ಅವನು ಸಿರಿಯ ಮತ್ತು ಸಿಲಿಸಿಯಗಳನ್ನು ಹಾದುಹೋಗುತ್ತಾ, ಅಲ್ಲಿದ್ದ ಕ್ರೈಸ್ತಸಭೆಗಳನ್ನು ದೃಢಪಡಿಸುತ್ತಾ ಪ್ರಯಾಣ ಬೆಳೆಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

41 ಸಿರಿಯ ಕಿಲಿಕ್ಯ ಸೀಮೆಗಳಲ್ಲಿ ಸಂಚರಿಸುತ್ತಾ ಸಭೆಗಳನ್ನು ದೃಢಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

41 ಪೌಲ ಸೀಲರು ಸಿರಿಯಾ ಮತ್ತು ಸಿಲಿಸಿಯ ನಾಡುಗಳಲ್ಲಿ ಹಾದು ಹೋಗುತ್ತಾ ಅಲ್ಲಿದ್ದ ಸಭೆಗಳಿಗೆ ಬಲವಾಗಿ ಬೆಳೆಯಲು ನೆರವು ನೀಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

41 ತೆನಿ ಸಿರಿಯಾ ಅನಿ ಸಿಲಿಸಿಯಾ ಮನ್ತಲ್ಯಾ ಗಾಂವಾತ್ನಾ ದಾಟುನ್ ಜಾವನ್ಗೆತ್ ಥೈತ್ಲ್ಯಾ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಕ್ನಿ ಲೈ ಘಟ್ ಕರ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 15:41
8 ತಿಳಿವುಗಳ ಹೋಲಿಕೆ  

ಅವರ ಕೈಯಿಂದ ಬರೆದು ಕೊಟ್ಟದ್ದೇನೆಂದರೆ: ಅಪೊಸ್ತಲರು ಹಾಗೂ ಹಿರಿಯ ಸಹೋದರರು, ಅಂತಿಯೋಕ್ಯ, ಸಿರಿಯ ಮತ್ತು ಕಿಲಿಕ್ಯದಲ್ಲಿ ವಾಸಿಸುವ ಯೆಹೂದ್ಯರಲ್ಲದವರೊಳಗಿನ ಸಹೋದರರಿಗೆ: ವಂದನೆಗಳು.


ಆಮೇಲೆ ಸಿರಿಯಾ ಮತ್ತು ಕಿಲಿಕ್ಯ ಪ್ರಾಂತಗಳಿಗೆ ಬಂದೆನು.


ಯೂದ ಮತ್ತು ಸೀಲರು ಸ್ವತಃ ಪ್ರವಾದಿಗಳಾಗಿದ್ದುದರಿಂದ ಅಲ್ಲಿದ್ದ ವಿಶ್ವಾಸಿಗಳನ್ನು ಅನೇಕ ಬುದ್ಧಿವಾದಗಳಿಂದ ಬಲಪಡಿಸಿದರು.


ಸೈಪ್ರಸ್ ಹತ್ತಿರ ಬಂದು ಅದರ ದಕ್ಷಿಣಕ್ಕೆ ಪ್ರಯಾಣಮಾಡಿ ಸಿರಿಯಕ್ಕೆ ಹೋದೆವು. ನಮ್ಮ ನೌಕೆಯಲ್ಲಿದ್ದ ಸರಕುಗಳನ್ನು ಇಳಿಸಬೇಕಾಗಿದ್ದ ಟೈರ್ ಎಂಬಲ್ಲಿ ಬಂದು ಇಳಿದೆವು.


ಆದರೆ, “ಬಿಡುಗಡೆ ಹೊಂದಿದವರು” ಎಂಬ ಯೆಹೂದ್ಯ ಸಭಾಮಂದಿರಕ್ಕೆ ಸೇರಿದವರಿಂದ ವಿರೋಧ ಉಂಟಾಯಿತು. ಅವರು ಕುರೇನ್ಯ ಅಲೆಕ್ಸಾಂದ್ರಿಯ ಕಿಲಿಕ್ಯ ಮತ್ತು ಏಷ್ಯಾ ಪ್ರಾಂತಗಳಿಂದ ಬಂದ ಯೆಹೂದ್ಯರಾಗಿದ್ದರು. ಅವರು ಸ್ತೆಫನನೊಂದಿಗೆ ತರ್ಕಿಸುವುದಕ್ಕೆ ಪ್ರಾರಂಭಿಸಿದರು.


ಇನ್ನು ಕೆಲವು ದಿನ ಪೌಲನು ಅಲ್ಲಿಯೇ ಉಳಿದುಕೊಂಡನು. ಅನಂತರ ಸಹೋದರರಿಂದ ಅಪ್ಪಣೆ ತೆಗೆದುಕೊಂಡು ಕೆಂಖ್ರೆಯ ಎಂಬ ಸ್ಥಳದಲ್ಲಿ ತಲೆ ಕೂದಲನ್ನು ಕ್ಷೌರಮಾಡಿಸಿಕೊಂಡು ತಾನು ಹೊತ್ತ ಹರಕೆ ಪೂರೈಸಿದ ಮೇಲೆ ಸಿರಿಯಕ್ಕೆ ನೌಕೆ ಪ್ರಯಾಣಮಾಡಿದನು. ಪ್ರಿಸ್ಕಿಲ್ಲ ಮತ್ತು ಅಕ್ವಿಲರು ಅವನ ಜೊತೆಯಲ್ಲಿ ಹೊರಟರು.


ಯೇಸುವಿನ ಸುದ್ದಿ ಸಿರಿಯಾ ದೇಶದಲ್ಲೆಲ್ಲಾ ಹಬ್ಬಿದ್ದರಿಂದ, ಜನರು ವಿವಿಧ ವ್ಯಾಧಿಗಳಿಂದಲೂ ತೀವ್ರ ವೇದನೆಯಿಂದಲೂ ಅಸ್ವಸ್ಥರಾದವರನ್ನೂ ದೆವ್ವ ಹಿಡಿದವರನ್ನೂ ಮೂರ್ಛಾರೋಗಿಗಳನ್ನೂ ಪಾರ್ಶ್ವವಾಯು ಪೀಡಿತರನ್ನೂ ಅವರ ಬಳಿಗೆ ಕರೆದುಕೊಂಡು ಬಂದರು; ಯೇಸು ಅವರನ್ನೆಲ್ಲಾ ಗುಣಪಡಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು