Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 15:5 - ಕನ್ನಡ ಸಮಕಾಲಿಕ ಅನುವಾದ

5 ಆದರೆ ಫರಿಸಾಯರ ಪಂಗಡಕ್ಕೆ ಸೇರಿದ ಕೆಲವು ವಿಶ್ವಾಸಿಗಳು ಎದ್ದು ನಿಂತುಕೊಂಡು, “ಯೆಹೂದ್ಯರಲ್ಲದವರು ಸುನ್ನತಿ ಹೊಂದಬೇಕು ಮತ್ತು ಮೋಶೆಯ ನಿಯಮಕ್ಕೆ ವಿಧೇಯರಾಗಬೇಕು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆದರೆ ಫರಿಸಾಯ ಮತದವರಲ್ಲಿ ಯೇಸುವನ್ನು ನಂಬಿದ್ದ ಕೆಲವರು ಎದ್ದು; “ದೇವರ ಕಡೆಗೆ ತಿರುಗಿಕೊಂಡಿರುವ ಅನ್ಯಜನರಿಗೆ ಸುನ್ನತಿಮಾಡಿಸಬೇಕು, ಮತ್ತು ಮೋಶೆಯ ಧರ್ಮಶಾಸ್ತ್ರವನ್ನು ಕೈಕೊಂಡು ನಡೆಯುವುದಕ್ಕೆ ಅವರಿಗೆ ಅಪ್ಪಣೆಕೊಡಬೇಕು” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಫರಿಸಾಯ ಪಂಥಕ್ಕೆ ಸೇರಿದ ಕೆಲವು ಭಕ್ತರು ಮಾತ್ರ ಎದ್ದುನಿಂತು, ಅನ್ಯಧರ್ಮೀಯರು ಸುನ್ನತಿಮಾಡಿಸಿಕೊಳ್ಳಲೇಬೇಕು, ಅವರು ಮೋಶೆಯ ನಿಯಮಗಳನ್ನು ಅನುಸರಿಸುವಂತೆ ಆಜ್ಞೆ ಮಾಡಲೇಬೇಕು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆದರೆ ಫರಿಸಾಯ ಮತದವರಲ್ಲಿ ಯೇಸುವನ್ನು ನಂಬಿದ್ದ ಕೆಲವರು ಎದ್ದು - ದೇವರ ಕಡೆಗೆ ತಿರುಗಿಕೊಂಡಿರುವ ಅನ್ಯಜನರಿಗೆ ಸುನ್ನತಿಮಾಡಿಸಬೇಕು ಮತ್ತು ಮೋಶೆಯ ಧರ್ಮಶಾಸ್ತ್ರವನ್ನು ಕೈಕೊಂಡು ನಡೆಯುವದಕ್ಕೆ ಅವರಿಗೆ ಅಪ್ಪಣೆಕೊಡಬೇಕು ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಜೆರುಸಲೇಮಿನಲ್ಲಿದ್ದ ವಿಶ್ವಾಸಿಗಳಲ್ಲಿ ಕೆಲವರು ಫರಿಸಾಯರ ಗುಂಪಿಗೆ ಸೇರಿದವರಾಗಿದ್ದರು. ಅವರು ಎದ್ದು ನಿಂತುಕೊಂಡು, “ಯೆಹೂದ್ಯರಲ್ಲದ ವಿಶ್ವಾಸಿಗಳು ಸುನ್ನತಿ ಮಾಡಿಸಿಕೊಳ್ಳಬೇಕು. ಮೋಶೆಯ ಧರ್ಮಶಾಸ್ತ್ರಕ್ಕೆ ವಿಧೇಯರಾಗಬೇಕೆಂದು ನಾವು ಅವರಿಗೆ ಹೇಳಬೇಕು!” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಖರೆ ದೆವಾಚ್ಯಾ ಲೊಕಾಂತ್ಲಿ ಥೊಡಿ ಲೊಕಾ ಫಾರಿಜೆವಾಂಚ್ಯಾ ತಾಂಡ್ಯಾಚಿ ಲೊಕಾ ಹೊಲ್ಲಿ ಅನಿ ತೆನಿ ಉಟುನ್ ಇಬೆ ರ್‍ಹಾವ್ನ್ “ಜುದೆವಾಂಚಿ ನ್ಹಯ್ ಹೊಲ್ಲ್ಯಾ ಲೊಕಾನಿ ಸುನ್ನತ್ ಕರುನ್ ಘೆವ್ಚೆ ಅನಿ ತೆನಿ ಮೊಯ್ಜೆಚ್ಯಾ ಖಾಯ್ದ್ಯಾಂಚ್ಯಾ ಪುಸ್ತಕಾಕ್ ಮಾನುಚೆ ಮನುನ್ ಅಮಿ ತೆಂಕಾ ಸಾಂಗುಚೆ!” ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 15:5
14 ತಿಳಿವುಗಳ ಹೋಲಿಕೆ  

ಕೆಲವು ಜನರು ಯೂದಾಯದಿಂದ ಅಂತಿಯೋಕ್ಯಕ್ಕೆ ಬಂದು ಅಲ್ಲಿಯ ಸಹೋದರರಿಗೆ, “ಮೋಶೆ ಬೋಧಿಸಿದ ಪದ್ಧತಿಯಂತೆ ನೀವು ಸುನ್ನತಿ ಹೊಂದದಿದ್ದರೆ ನೀವು ರಕ್ಷಣೆ ಹೊಂದಲಾರಿರಿ,” ಎಂದು ಬೋಧಿಸತೊಡಗಿದರು.


ಅವರು ಅದನ್ನು ಕೇಳಿ, ದೇವರನ್ನು ಕೊಂಡಾಡಿದರು. ಅನಂತರ ಪೌಲನಿಗೆ, “ಸಹೋದರನೇ, ಸಾವಿರಾರು ಜನ ಯೆಹೂದ್ಯರು ನಂಬಿರುವುದನ್ನು ಕಾಣುತ್ತೀಯಲ್ಲಾ, ಅವರೆಲ್ಲರೂ ಮೋಶೆಯ ನಿಯಮದ ಅಭಿಮಾನಿಗಳಾಗಿದ್ದರು.


ನಮ್ಮಿಂದ ಕೆಲವರು ನಮ್ಮ ಅಪ್ಪಣೆಯಿಲ್ಲದೆ ತಮ್ಮ ಮಾತುಗಳಿಂದ ನಿಮ್ಮ ಮನಸ್ಸಿಗೆ ತೊಂದರೆ ಕೊಟ್ಟರೆಂದು ನಾವು ಕೇಳಿದೆವು.


“ಜಗತ್ತಿನಲ್ಲಿ ಇರುವ ಯೆಹೂದ್ಯರ ಮಧ್ಯದಲ್ಲಿ ದಂಗೆಯೆಬ್ಬಿಸಿ ಪೌಲನೆಂಬ ಈ ಮನುಷ್ಯನು ತೊಂದರೆ ಕೊಡುವವನಾಗಿದ್ದಾನೆಂತಲೂ ನಜರೇತಿನವರ ಪಂಗಡಕ್ಕೆ ಇವನು ನಾಯಕನೆಂದೂ ನಾವು ಕಂಡೆವು.


ಆದರೆ ಫರಿಸಾಯರು ಹಾಗೂ ಸದ್ದುಕಾಯರಲ್ಲಿ ಅನೇಕರು ದೀಕ್ಷಾಸ್ನಾನಕ್ಕಾಗಿ ಬರುವುದನ್ನು ಕಂಡು, ಯೋಹಾನನು ಅವರಿಗೆ: “ಎಲೈ ಸರ್ಪಸಂತತಿಯವರೇ! ಮುಂದೆ ಬರುವ ಕೋಪಾಗ್ನಿಯಿಂದ ತಪ್ಪಿಸಿಕೊಳ್ಳಲು ನಿಮ್ಮನ್ನು ಎಚ್ಚರಿಸಿದವರು ಯಾರು?


ಹೀಗಿರಲು ಮಹಾಯಾಜಕನೂ ಅವನ ಬಳಿಯಲ್ಲಿದ್ದ ಸದ್ದುಕಾಯರೆಲ್ಲರೂ ಬಹಳ ಅಸೂಯೆಪಟ್ಟರು.


ಆದರೂ ಅವರು ಒಂದು ಪಂಗಡ ಎಂದು ಕರೆಯುವ ಮಾರ್ಗದ ಅನುಯಾಯಿಯಾಗಿ ನಾನು ನಮ್ಮ ಪಿತೃಗಳ ದೇವರನ್ನು ಆರಾಧಿಸುತ್ತೇನೆ ಎಂಬುದನ್ನು ಒಪ್ಪಿಕೊಳ್ಳುತ್ತೇನೆ. ಮೋಶೆಯ ನಿಯಮ ಒಪ್ಪಿಕೊಳ್ಳುವಂಥದೆಲ್ಲವನ್ನೂ ಪ್ರವಾದಿಗಳ ಗ್ರಂಥಗಳಲ್ಲಿ ಬರೆದಿರುವುದೆಲ್ಲವನ್ನೂ ನಾನು ನಂಬುತ್ತೇನೆ.


ಆದರೆ ನಿನ್ನ ಅಭಿಪ್ರಾಯಗಳೇನೆಂಬುದನ್ನು ಕೇಳಲು ನಮಗೆ ಮನಸ್ಸಿದೆ. ಏಕೆಂದರೆ ಈ ಪಂಥದ ವಿರುದ್ಧವಾಗಿ ಎಲ್ಲಾ ಕಡೆಗಳಲ್ಲಿ ಜನರು ಮಾತನಾಡುತ್ತಿರುವುದನ್ನು ನಾವು ಬಲ್ಲೆವು,” ಎಂದರು.


ಸುನ್ನತಿ ಮಾಡಿಸಿಕೊಂಡವನು ದೇವರ ಕರೆಹೊಂದಿದ್ದರೆ, ಅವನು ಸುನ್ನತಿಯಿಲ್ಲದವನಂತೆ ಇರಬಾರದು. ಸುನ್ನತಿ ಮಾಡಿಸಿಕೊಳ್ಳದವನು ದೇವರ ಕರೆಹೊಂದಿದ್ದರೆ, ಅವನು ಸುನ್ನತಿ ಮಾಡಿಸಿಕೊಳ್ಳಬೇಕಾಗಿಲ್ಲ.


ಕೇಫನು ಅಂತಿಯೋಕ್ಯ ಎಂಬ ಪಟ್ಟಣಕ್ಕೆ ಬಂದಾಗ ಅವನು ತಪ್ಪುಮಾಡಿದವನಾಗಿ ಇದ್ದುದರಿಂದ, ನಾನು ಅವನನ್ನು ಬಹಿರಂಗವಾಗಿ ಎದುರಿಸಿದೆನು.


ಆದರೆ ಅವರು ಸುವಾರ್ತೆಯ ಸತ್ಯದ ಪ್ರಕಾರ ನೆಟ್ಟಗೆ ನಡೆಯಲಿಲ್ಲವೆಂದು ನಾನು ಕಂಡಾಗ ಎಲ್ಲರ ಮುಂದೆ ಪೇತ್ರನಿಗೆ, “ನೀನು ಯೆಹೂದ್ಯನಾಗಿದ್ದು, ಯೆಹೂದ್ಯರಂತೆ ಜೀವಿಸದೆ ಯೆಹೂದ್ಯರಲ್ಲದವರಂತೆ ಜೀವಿಸಿ, ಯೆಹೂದ್ಯರಲ್ಲದವರು ಯೆಹೂದ್ಯರಂತೆ ಜೀವಿಸಬೇಕೆಂದು ನೀನು ಒತ್ತಾಯ ಮಾಡುವುದು ಹೇಗೆ?” ಎಂದು ಕೇಳಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು