Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 15:7 - ಕನ್ನಡ ಸಮಕಾಲಿಕ ಅನುವಾದ

7 ಬಹಳ ಚರ್ಚೆಯಾಗುತ್ತಿರುವಾಗ ಪೇತ್ರನು ಎದ್ದು ನಿಂತು ಅವರಿಗೆ, “ಸಹೋದರರೇ, ಯೆಹೂದ್ಯರಲ್ಲದವರು ನನ್ನ ಬಾಯಿಂದ ಸುವಾರ್ತೆಯ ವಾಕ್ಯವನ್ನು ಕೇಳಿ ನಂಬಬೇಕೆಂಬ ಉದ್ದೇಶದಿಂದ ನಿಮ್ಮೊಳಗಿಂದ ನನ್ನನ್ನು ದೇವರು ಬಹು ದಿನಗಳ ಹಿಂದೆ ಆಯ್ದುಕೊಂಡರೆಂಬುದು ನಿಮಗೆ ತಿಳಿದೇ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 “ಸಹೋದರರೇ, ಅನ್ಯಜನರು ನನ್ನ ಬಾಯಿಂದ ಸುವಾರ್ತೆಯ ವಾಕ್ಯವನ್ನು ಕೇಳಿ ನಂಬಬೇಕೆಂದು ದೇವರು ಬಹಳ ದಿನಗಳ ಹಿಂದೆ ನಿಮ್ಮೊಳಗಿಂದ ನನ್ನನ್ನು ಆರಿಸಿಕೊಂಡದ್ದು ನಿಮಗೇ ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಸುದೀರ್ಘ ಚರ್ಚೆಯಾದ ನಂತರ ಪೇತ್ರನು ಎದ್ದುನಿಂತು ಹೀಗೆಂದನು: “ಸಹೋದರರೇ, ಅನ್ಯಧರ್ಮೀಯರು ಶುಭಸಂದೇಶವನ್ನು ನನ್ನ ಬಾಯಿಯಿಂದ ಕೇಳಿ ವಿಶ್ವಾಸಿಸಲೆಂದು ದೇವರು ನಿಮ್ಮ ಮಧ್ಯೆಯಿಂದ ನನ್ನನ್ನು ಬಹುದಿನಗಳ ಹಿಂದೆಯೇ ಆರಿಸಿಕೊಂಡರು. ಇದು ನಿಮಗೆ ತಿಳಿದ ವಿಷಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಪೇತ್ರನು ಎದ್ದು ಅವರಿಗೆ - ಸಹೋದರರೇ, ಅನ್ಯಜನರು ನನ್ನ ಬಾಯಿಂದ ಸುವಾರ್ತೆಯ ವಾಕ್ಯವನ್ನು ಕೇಳಿ ನಂಬಬೇಕೆಂದು ದೇವರು ಬಹಳ ದಿವಸಗಳ ಕೆಳಗೆ ನಿಮ್ಮೊಳಗಿಂದ ನನ್ನನ್ನು ಆರಿಸಿಕೊಂಡದ್ದು ನಿಮಗೇ ತಿಳಿದದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ದೀರ್ಘಚರ್ಚೆಯಾಯಿತು. ಬಳಿಕ ಪೇತ್ರ ಎದ್ದುನಿಂತು ಅವರಿಗೆ, “ನನ್ನ ಸಹೋದರರೇ, ನಿಮಗೇ ತಿಳಿದಿರುವಂತೆ, ಯೆಹೂದ್ಯರಲ್ಲದ ಜನರಿಗೆ ಸುವಾರ್ತೆಯನ್ನು ಬೋಧಿಸುವುದಕ್ಕಾಗಿ ನಿಮ್ಮ ಮಧ್ಯದೊಳಗಿಂದ ದೇವರು ನನ್ನನ್ನು ಬಹುದಿನಗಳ ಹಿಂದೆ ಆರಿಸಿಕೊಂಡನು. ಅವರು ನನ್ನಿಂದ ಸುವಾರ್ತೆಯನ್ನು ಕೇಳಿ ನಂಬಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಲೈ ಯೆಳ್ ಚರ್ಚಾ ಕರುನ್ ಹೊಲ್ಲ್ಯಾ ಮಾನಾ, ಪೆದ್ರುನ್ ಉಟುನ್ ಇಬೆ ರಾವ್ನ್ ತೆಂಕಾ , ಮಾಜ್ಯಾ ಭಾವಾನು ಅನಿ ಭೆನಿಯಾನು, ಜುದೆವಾಂಚೆ ನ್ಹಯ್ ಹೊಲ್ಲ್ಯಾ ಲೊಕಾಕ್ನಿ ದೆವಾಚಿ ಬರಿ ಖಬರ್ ಸಾಂಗುಕ್ ಮನುನ್ ತುಮ್ಚ್ಯಾತ್ನಾ ಮಾಕಾ ದೆವಾನ್ ಲೈ ದಿಸಾಂಚ್ಯಾ ಅದ್ದಿಚ್ ಎಚುನ್ ಘೆಟ್ಲ್ಯಾನ್, ಅನಿ ತೆನಿ ಮಾಜಿ ಶಿಕಾಪಾ ಆಯ್ಕುನ್ ದೆವಾಚೆರ್ ವಿಶ್ವಾಸ್ ಥವ್ಲ್ಯಾನಿ ಮನ್ತಲೆ ತುಮ್ಕಾಚ್ ಗೊತ್ತ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 15:7
25 ತಿಳಿವುಗಳ ಹೋಲಿಕೆ  

ಇದರಿಂದ ಪೌಲ, ಬಾರ್ನಬರು ಅವರೊಂದಿಗೆ ಭಿನ್ನಾಭಿಪ್ರಾಯವುಳ್ಳವರಾಗಿ ತೀವ್ರ ವಿವಾದವುಂಟಾಯಿತು. ಈ ಪ್ರಶ್ನೆಯ ವಿಷಯದಲ್ಲಿ ಅಪೊಸ್ತಲರನ್ನೂ ಹಿರಿಯರನ್ನೂ ಭೇಟಿಯಾಗಲು, ತಮ್ಮಲ್ಲಿ ಬೇರೆ ಕೆಲವರು ಪೌಲ, ಬಾರ್ನಬರೊಂದಿಗೆ ಯೆರೂಸಲೇಮಿಗೆ ಹೋಗಬೇಕೆಂದು ನಿರ್ಣಯಿಸಲಾಯಿತು.


ಆದರೂ ನನ್ನ ಪ್ರಾಣ ನನಗೆ ಅಮೂಲ್ಯವೆಂದು ನಾನು ಎಣಿಸುವುದಿಲ್ಲ. ಕರ್ತ ಯೇಸು ನನಗೆ ಕೊಟ್ಟ, ದೇವರ ಕೃಪೆಯ ಸುವಾರ್ತೆಗೆ ಸಾಕ್ಷಿ ಕೊಡುವ ಸೇವೆಯ ಓಟವನ್ನು ಓಡಿ ಮುಗಿಸುವುದೇ ನನ್ನ ಬಾಳಿನ ಒಂದೇ ಗುರಿಯಾಗಿದೆ.


ಎದ್ದೇಳು, ಕೆಳಗಿಳಿದು ಹೋಗು. ಅವರ ಜೊತೆಯಲ್ಲಿ ಹೋಗಲು ಹಿಂಜರಿಯಬೇಡ, ನಾನೇ ಅವರನ್ನು ಕಳುಹಿಸಿರುವೆ,” ಎಂದರು.


ಗೊಣಗುಟ್ಟದೆಯೂ ವಿವಾದವಿಲ್ಲದೆಯೂ ಎಲ್ಲವನ್ನೂ ಮಾಡಿರಿ.


ಇದರಿಂದ ಅವರಲ್ಲಿ ತೀವ್ರ ಭಿನ್ನಾಭಿಪ್ರಾಯ ಉಂಟಾಗಿ ಅವರು ಒಬ್ಬರಿಂದೊಬ್ಬರು ಪ್ರತ್ಯೇಕವಾಗಿ ಹೋಗಬೇಕಾಯಿತು. ಬಾರ್ನಬನು ಮಾರ್ಕನನ್ನು ಕರೆದುಕೊಂಡು ಸೈಪ್ರಸ್ ದ್ವೀಪಕ್ಕೆ ಪ್ರಯಾಣಮಾಡಿದನು,


ಇವರೆಲ್ಲರೂ ಕರ್ತದೇವರನ್ನು ಆರಾಧಿಸಿ, ಉಪವಾಸಮಾಡುತ್ತಿದ್ದರು. ಆಗ ಪವಿತ್ರಾತ್ಮ ದೇವರು, “ಬಾರ್ನಬನನ್ನೂ ಸೌಲನನ್ನೂ ನಾನು ಕರೆದಿರುವ ಕಾರ್ಯಕ್ಕಾಗಿ ಅವರನ್ನು ನನಗಾಗಿ ಪ್ರತ್ಯೇಕಿಸಿರಿ,” ಎಂದರು.


ಆದರೆ ಕರ್ತ ಯೇಸುವು ಅವನಿಗೆ, “ಹೋಗು! ಯೆಹೂದ್ಯರಲ್ಲದವರಿಗೂ ಅವರ ಅರಸುಗಳಿಗೂ ಇಸ್ರಾಯೇಲ್ ದೇಶಕ್ಕೂ ನನ್ನ ಹೆಸರನ್ನು ಪ್ರಸಿದ್ಧಿಪಡಿಸಲು ಅವನು ನಾನು ಆಯ್ದುಕೊಂಡ ಸಾಧನವಾಗಿದ್ದಾನೆ.


ಪವಿತ್ರಾತ್ಮ ದೇವರ ಮೂಲಕ ನಿಮ್ಮ ಸೇವಕನೂ ನಮ್ಮ ಪಿತೃವೂ ಆದ ದಾವೀದನ ಮುಖಾಂತರ ನೀವು ಮಾತನಾಡಿ: “ ‘ರಾಷ್ಟ್ರಗಳು ರೋಷಗೊಳ್ಳುವುದೇಕೆ? ಜನರು ವ್ಯರ್ಥವಾಗಿ ಕಲ್ಪಿಸಿಕೊಂಡದ್ದೇಕೆ?


ಆದರೆ ತಮ್ಮ ಕ್ರಿಸ್ತ ಯೇಸು ಹಿಂಸೆಗೊಳಗಾಗಬೇಕೆಂದು, ಎಲ್ಲಾ ಪ್ರವಾದಿಗಳ ಬಾಯಿಯ ಮುಖಾಂತರ ದೇವರು ಮುಂತಿಳಿಸಿದ್ದನ್ನು ಈ ರೀತಿ ನೆರವೇರಿಸಿದರು.


ಆಮೇಲೆ ಅವರು, “ಕರ್ತ ಯೇಸುವೇ, ಪ್ರತಿಯೊಬ್ಬರ ಹೃದಯವನ್ನು ನೀವು ತಿಳಿದವರು. ಈ ಸೇವೆಯಿಂದ ಯೂದನು ಭ್ರಷ್ಟನಾಗಿ ತನಗೆ ತಕ್ಕ ಸ್ಥಳಕ್ಕೆ ಹೋಗಿರುವುದರಿಂದ,


“ಸಹೋದರ ಸಹೋದರಿಯರೇ, ಬಹಳ ದಿನಗಳ ಹಿಂದೆ ದಾವೀದನ ಮುಖಾಂತರ ಪವಿತ್ರಾತ್ಮರು ಮುಂತಿಳಿಸಿದ ದೇವರ ವಾಕ್ಯ ಯೂದನ ವಿಷಯವಾಗಿ ನೆರವೇರಬೇಕಾಗಿತ್ತು. ಯೂದನು ಯೇಸುವನ್ನು ಬಂಧಿಸಿದವರಿಗೆ ಮಾರ್ಗದರ್ಶಕನಾಗಿದ್ದನು.


ನೀವು ನನ್ನನ್ನು ಆರಿಸಿಕೊಳ್ಳಲಿಲ್ಲ. ನಾನೇ ನಿಮ್ಮನ್ನು ಆರಿಸಿಕೊಂಡಿದ್ದೇನೆ. ನೀವು ಹೋಗಿ ಫಲಕೊಡುವಂತೆಯೂ ನಿಮ್ಮ ಫಲವು ಸ್ಥಿರವಾಗಿರುವಂತೆಯೂ ನಾನು ನಿಮ್ಮನ್ನು ನೇಮಿಸಿದ್ದೇನೆ. ಹೀಗೆ ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನು ಕೇಳಿಕೊಂಡರೂ ಅವರು ನಿಮಗೆ ಕೊಡುವರು.


ಅದಕ್ಕೆ ಯೋಹಾನನು, “ಪರಲೋಕದಿಂದ ಒಬ್ಬ ಮನುಷ್ಯನಿಗೆ ದಯಪಾಲಿಸದ ಹೊರತು ಅವನು ಯಾವುದನ್ನೂ ಹೊಂದಲಾರನು.


ಆಗ ಯೆಹೋವ ದೇವರು ಕೈಚಾಚಿ, ನನ್ನ ಬಾಯಿಯನ್ನು ಮುಟ್ಟಿ ನನಗೆ, “ಇಗೋ, ನನ್ನ ವಾಕ್ಯಗಳನ್ನು ನಿನ್ನ ಬಾಯಲ್ಲಿ ಇಟ್ಟಿದ್ದೇನೆ.


ಹಾಗಾದರೆ ಈಗ ಹೋಗು, ನಾನೇ ನಿನ್ನ ಸಂಗಡವಿದ್ದು, ನೀನು ಮಾತನಾಡತಕ್ಕದ್ದನ್ನು ನಿನಗೆ ಬೋಧಿಸುವೆನು,” ಎಂದರು.


ಪೇತ್ರನು ಇನ್ನೂ ಆ ದರ್ಶನದ ಬಗ್ಗೆ ಯೋಚಿಸುತ್ತಿರಲು, ಪವಿತ್ರಾತ್ಮ ದೇವರು ಅವನಿಗೆ, “ಸೀಮೋನನೇ ಇಗೋ, ಮೂವರು ನಿನ್ನನ್ನು ಹುಡುಕುತ್ತಾ ಬಂದಿದ್ದಾರೆ.


ದೇವರು ಯೆಹೂದ್ಯರಲ್ಲದವರೊಳಗಿಂದ ತಮ್ಮ ಹೆಸರಿಗಾಗಿ ಜನರನ್ನು ಆರಿಸಿಕೊಳ್ಳಲು ಹೇಗೆ ದಯೆತೋರಿಸಿದರೆಂದು ಸೀಮೋನನು ಈಗಾಗಲೇ ನಮಗೆ ವಿವರಿಸಿದ್ದಾನೆ.


ಕೈಸರೈಯದಿಂದ ಕೆಲವು ಶಿಷ್ಯರು ನಮ್ಮೊಂದಿಗೆ ಬಂದು, ಮ್ನಾಸೋನ ಎಂಬುವನ ಮನೆಗೆ ನಾವು ಇಳಿದುಕೊಳ್ಳುವಂತೆ ಕರೆದುಕೊಂಡು ಹೋದರು. ಅವನು ಸೈಪ್ರಸ್ ದಿಂದ ಬಂದ ಪ್ರಥಮ ಶಿಷ್ಯರಲ್ಲಿ ಒಬ್ಬನಾಗಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು