Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 16:12 - ಕನ್ನಡ ಸಮಕಾಲಿಕ ಅನುವಾದ

12 ಅಲ್ಲಿಂದ ಮಕೆದೋನ್ಯ ಪ್ರಾಂತದ ಪ್ರಮುಖ ಪಟ್ಟಣವಾದ ಫಿಲಿಪ್ಪಿಗೆ ಬಂದೆವು. ಇದು ರೋಮಿನ ಪ್ರವಾಸ ಸ್ಥಳವಾಗಿತ್ತು. ನಾವು ಆ ಪಟ್ಟಣದಲ್ಲಿ ಕೆಲವು ದಿನ ಉಳಿದುಕೊಂಡೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಫಿಲಿಪ್ಪಿ ಎಂಬುದು ಮಕೆದೋನ್ಯದಲ್ಲಿ ಪ್ರಧಾನ ಪಟ್ಟಣ, ಇದು ರೋಮಾಪುರದವರ ಒಂದು ಪ್ರವಾಸ ಸ್ಥಾನವೂ ಆಗಿದೆ. ಈ ಪಟ್ಟಣದಲ್ಲಿ ನಾವು ಕೆಲವು ದಿನಗಳ ಕಾಲ ಇದ್ದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಅಲ್ಲಿಂದ ಮಕೆದೋನಿಯದ ಪ್ರಮುಖ ಪಟ್ಟಣವಾದ ಫಿಲಿಪ್ಪಿಗೆ ಬಂದೆವು. ಇದು ರೋಮಿನ ವಸಾಹತು; ಇಲ್ಲಿ ಕೆಲವು ದಿನಗಳನ್ನು ಕಳೆದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಫಿಲಿಪ್ಪಿ ಎಂಬದು ಮಕೆದೋನ್ಯದಲ್ಲಿ ಪ್ರಧಾನ ಪಟ್ಟಣವೂ ರೋಮಾಪುರದವರ ಒಂದು ಪ್ರವಾಸಸ್ಥಾನವೂ ಆಗಿದೆ. ಈ ಪಟ್ಟಣದಲ್ಲಿ ನಾವು ಕೆಲವು ದಿವಸ ಇದ್ದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಅಲ್ಲಿಂದ ಫಿಲಿಪ್ಪಿಗೆ ಹೋದೆವು. ಅದು ಮಕೆದೋನಿಯದ ಜಿಲ್ಲೆಯಲ್ಲಿ ಮತ್ತು ರೋಮನ್ನರ ವಸಾಹತುವಿನಲ್ಲಿ ಮುಖ್ಯವಾದ ಪಟ್ಟಣವಾಗಿತ್ತು. ನಾವು ಅಲ್ಲಿ ಕೆಲವು ದಿನಗಳವರೆಗೆ ಇಳಿದುಕೊಂಡೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಥೈತ್ನಾ ಫಿಲಿಪ್ಪಿ ಪ್ರಾಂತ್ಯಾತ್ ಗೆಲಾಂವ್, ತೆ ಮೆಸೆದೊನಿಯಾಚೆ ಎಕ್ ಶಾರ್ ಹೊವ್ನ್ ಹೊತ್ತೆ, ಅನಿ ರೊಮನ್ನಾಂಚೊ ವಾಡೊ ಹೊಲ್ಲೊ ಹೊತ್ತೊ, ಅಮಿ ಥೈ ಉಲ್ಲ್ಯಾ ದಿಸಾಂಚ್ಯಾ ಪತರ್ ಹೊತ್ತ್ಯಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 16:12
14 ತಿಳಿವುಗಳ ಹೋಲಿಕೆ  

ಫಿಲಿಪ್ಪಿ ಪಟ್ಟಣದಲ್ಲಿ ಮುಂಚೆ ನಮಗೆ ಹಿಂಸೆ ಮತ್ತು ಅವಮಾನವು ಸಂಭವಿಸಿದ್ದನ್ನು ನೀವು ಬಲ್ಲಿರಿ. ಹಾಗಿದ್ದರೂ ನಾವು ನಮ್ಮ ದೇವರ ಸಹಾಯದಿಂದ ಧೈರ್ಯಗೊಂಡು ಬಹು ವಿರೋಧದ ನಡುವೆ ನಿಮಗೆ ಸುವಾರ್ತೆಯನ್ನು ತಿಳಿಸಿದೆವು.


ಕ್ರಿಸ್ತ ಯೇಸುವಿನ ದಾಸರಾದ ಪೌಲ ತಿಮೊಥೆಯರು, ಕ್ರಿಸ್ತ ಯೇಸುವಿನಲ್ಲಿರುವ ಫಿಲಿಪ್ಪಿಯ ದೇವರ ಪರಿಶುದ್ಧರೆಲ್ಲರಿಗೂ, ಅವರೊಂದಿಗಿರುವ ಮೇಲ್ವಿಚಾರಕರಿಗೂ ಸಭಾಸೇವಕರಿಗೂ ಬರೆಯುವ ಪತ್ರ:


ಹುಳಿಯಿಲ್ಲದ ರೊಟ್ಟಿಯ ಹಬ್ಬದ ನಂತರ ನಾವು ಫಿಲಿಪ್ಪಿಯಿಂದ ಸಮುದ್ರ ಮಾರ್ಗವಾಗಿ ಪ್ರಯಾಣಮಾಡಿ, ಐದು ದಿನಗಳ ತರುವಾಯ ತ್ರೋವದಲ್ಲಿದ್ದ ಇತರರೊಂದಿಗೆ ಸೇರಿ, ಅಲ್ಲಿ ಏಳು ದಿನ ಇದ್ದೆವು.


ರೋಮನವರಾದ ನಾವು ಸ್ವೀಕರಿಸಲೂ ಇಲ್ಲವೆ ಅನುಸರಿಸಲೂ ಆಗದಂಥಾ ಆಚಾರಗಳನ್ನು ಪ್ರಕಟಿಸುತ್ತಿದ್ದಾರೆ,” ಎಂದರು.


ಆ ರಾತ್ರಿಯಲ್ಲಿ ಪೌಲನಿಗೆ ಒಂದು ದರ್ಶನವಾಯಿತು. ಅದರಲ್ಲಿ ಮಕೆದೋನ್ಯದವನೊಬ್ಬನು ನಿಂತುಕೊಂಡು, “ಮಕೆದೋನ್ಯ ದಾಟಿ ಬಂದು ನಮಗೆ ಸಹಾಯಮಾಡು,” ಎಂದು ಅವನನ್ನು ಬೇಡಿಕೊಂಡನು.


ಪೌಲನಿಗೆ ಈ ದರ್ಶನವಾದಾಗ ಆ ಜನರಿಗೆ ಸುವಾರ್ತೆ ಸಾರಲು ದೇವರು ನಮ್ಮನ್ನು ಕರೆಯುತ್ತಿದ್ದಾರೆಂದು ತಿಳಿದುಕೊಂಡು ಕೂಡಲೇ ಮಕೆದೋನ್ಯಕ್ಕೆ ಹೊರಡಲು ಸಿದ್ಧರಾದೆವು.


ಮಕೆದೋನ್ಯದಿಂದ ಸೀಲ ಮತ್ತು ತಿಮೊಥೆ ಬಂದ ತರುವಾಯ, ಪೌಲನು ವಾಕ್ಯವನ್ನು ಬೋಧಿಸುವುದರಲ್ಲಿಯೇ ಸಮರ್ಪಿಸಿಕೊಂಡವನಾಗಿ ಯೇಸುವೇ ಕ್ರಿಸ್ತ ಎಂದು ಯೆಹೂದ್ಯರಿಗೆ ಖಚಿತವಾಗಿ ಸಾಕ್ಷಿಕೊಟ್ಟನು.


ಇದೆಲ್ಲ ಸಂಭವಿಸಿದ ನಂತರ ಮಕೆದೋನ್ಯ ಮತ್ತು ಅಖಾಯ ಮಾರ್ಗವಾಗಿ ಯೆರೂಸಲೇಮಿಗೆ ಹೋಗಲು ಪೌಲನು ಮನಸ್ಸಿನಲ್ಲಿ ನಿರ್ಧರಿಸಿದನು. ಅವನು, “ಅಲ್ಲಿಗೆ ಹೋದ ನಂತರ ನಾನು ರೋಮ್ ಪಟ್ಟಣವನ್ನು ಸಂದರ್ಶಿಸಬೇಕು,” ಎಂದನು.


ಕೂಡಲೇ ಇಡೀ ಪಟ್ಟಣದಲ್ಲೆಲ್ಲಾ ಕೋಲಾಹಲ ಉಂಟಾಯಿತು. ಜನರು ಗುಂಪಾಗಿ ಕೂಡಿಕೊಂಡು ಬಂದು ಮಕೆದೋನ್ಯದಿಂದ ಪೌಲನೊಂದಿಗೆ ಪ್ರಯಾಣಮಾಡಿ ಬಂದ, ಗಾಯ ಮತ್ತು ಅರಿಸ್ತಾರ್ಕರನ್ನು ಬಂಧಿಸಿ ಕ್ರೀಡಾಂಗಣದೊಳಗೆ ಎಳೆದುಕೊಂಡು ಬಂದರು.


ಗಲಭೆಯು ಶಾಂತಗೊಂಡ ನಂತರ ಪೌಲನು ಶಿಷ್ಯರನ್ನು ಕರೆಕಳುಹಿಸಿ ಅವರಿಗೆ ಧೈರ್ಯ ಹೇಳಿ, ಅವರನ್ನು ಬೀಳ್ಕೊಟ್ಟು ಮಕೆದೋನ್ಯಕ್ಕೆ ಪ್ರಯಾಣಮಾಡಿದನು.


ಇಲ್ಲಿ ಮೂರು ತಿಂಗಳುಗಳ ಕಾಲ ಇದ್ದ ಮೇಲೆ, ಅವನು ಸಿರಿಯಕ್ಕೆ ಪ್ರಯಾಣ ಮಾಡಬೇಕೆಂದು ಯೋಚಿಸುತ್ತಿದ್ದಾಗ ಅವನಿಗೆ ವಿರೋಧವಾಗಿ ಯೆಹೂದ್ಯರು ಒಳಸಂಚು ಮಾಡಿದ್ದು ಅವನಿಗೆ ತಿಳಿದು ಬಂದದ್ದರಿಂದ ಮಕೆದೋನ್ಯ ಮಾರ್ಗವಾಗಿ ಹಿಂತಿರುಗಿ ಹೋಗಲು ನಿರ್ಣಯಿಸಿದನು.


ಆಗ ಅದ್ರಮಿತ್ತಿಯದಿಂದ ಬಂದು ಏಷ್ಯಾ ಪ್ರಾಂತದ ಬಂದರುಗಳಿಗೆ ಹೋಗಲು ಸಿದ್ಧವಾಗಿದ್ದ ನೌಕೆಯನ್ನೇರಿ ನಾವು ಪ್ರಯಾಣ ಪ್ರಾರಂಭಿಸಿದೆವು. ಥೆಸಲೋನಿಕದಿಂದ ಬಂದ ಮಕೆದೋನ್ಯದ ಅರಿಸ್ತಾರ್ಕನು ನಮ್ಮೊಂದಿಗಿದ್ದನು.


ಮಕೆದೋನ್ಯ ಮತ್ತು ಅಖಾಯದವರು ಯೆರೂಸಲೇಮಿನ ಭಕ್ತರಲ್ಲಿರುವ ಬಡವರಾಗಿರುವವರಿಗೆ ಸಹಾಯ ಮಾಡುವುದು ಒಳ್ಳೆಯದೆಂದು ಭಾವಿಸಿದ್ದಾರೆ.


ಏಕೆಂದರೆ, ನೀವು ಮೊದಲನೆಯ ದಿನದಿಂದ ಇಂದಿನವರೆಗೂ ಸುವಾರ್ತೆಯಲ್ಲಿ ಸಹಭಾಗಿಗಳಾಗಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು