Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 16:13 - ಕನ್ನಡ ಸಮಕಾಲಿಕ ಅನುವಾದ

13 ಪ್ರಾರ್ಥನೆಯ ಸ್ಥಳ ಸಿಕ್ಕಬಹುದೆಂದು ಭಾವಿಸಿ ಸಬ್ಬತ್ ದಿನದಂದು ಪಟ್ಟಣದ ದ್ವಾರದ ಹೊರಗಿದ್ದ ನದಿತೀರಕ್ಕೆ ಹೋದೆವು. ಅಲ್ಲಿ ಕುಳಿತುಕೊಂಡು ಕೂಡಿಬಂದಿದ್ದ ಮಹಿಳೆಯರೊಂದಿಗೆ ಮಾತನಾಡಲು ಪ್ರಾರಂಭಿಸಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನದೀತೀರದಲ್ಲಿ ದೇವರ ಪ್ರಾರ್ಥನೆ ನಡೆಯುವ ಸ್ಥಳ ಇರುವುದೆಂದು ತಿಳಿದು ಸಬ್ಬತ್ ದಿನದಲ್ಲಿ ಊರ ಬಾಗಿಲಿನ ಹೊರಗೆ ಹೋಗಿ ಅಲ್ಲಿ ಕೂಡಿಬಂದಿದ್ದ ಸ್ತ್ರೀಯರ ಸಂಗಡ ಕುಳಿತುಕೊಂಡು ಮಾತನಾಡಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಪಟ್ಟಣದ ಹೊರಗಿರುವ ನದಿತೀರದ ಬಳಿ ಯೆಹೂದ್ಯರ ಪ್ರಾರ್ಥನಾ ಸ್ಥಳವಿರಬಹುದೆಂದು ಭಾವಿಸಿ ಸಬ್ಬತ್‍ದಿನ ಅಲ್ಲಿಗೆ ಹೋದೆವು. ನಾವು ಕುಳಿತುಕೊಂಡು ಅಲ್ಲಿ ಸೇರಿದ್ದ ಮಹಿಳೆಯರೊಡನೆ ಸಂಭಾಷಿಸಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನದೀತೀರದಲ್ಲಿ ದೇವರ ಪ್ರಾರ್ಥನೆ ನಡೆಯುವ ಸ್ಥಳ ಇರುವದೆಂದು ನೆನಸಿ ಸಬ್ಬತ್‍ದಿನದಲ್ಲಿ ಊರಬಾಗಿಲಿನ ಹೊರಗೆ ಹೋಗಿ ಅಲ್ಲಿ ಕೂಡಿಬಂದಿದ್ದ ಸ್ತ್ರೀಯರ ಸಂಗಡ ಕೂತುಕೊಂಡು ಮಾತಾಡಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನದಿಯ ಸಮೀಪದಲ್ಲಿ ವಿಶೇಷವಾದ ಪ್ರಾರ್ಥನಾ ಸ್ಥಳವನ್ನು ನಾವು ಕಾಣಬಹುದೆಂದು ಆಲೋಚಿಸಿಕೊಂಡು ಸಬ್ಬತ್ ದಿನದಂದು ನದಿಯ ಬಳಿಗೆ ಹೋಗಲು ನಗರದ್ವಾರದಿಂದ ಹೊರಗೆ ಹೋದೆವು. ಕೆಲವು ಸ್ತ್ರೀಯರು ಅಲ್ಲಿ ಸೇರಿ ಬಂದಿದ್ದರು. ಆದ್ದರಿಂದ ನಾವು ಕುಳಿತುಕೊಂಡು ಅವರೊಂದಿಗೆ ಮಾತಾಡಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ನ್ಹೈಯ್‍ಚ್ಯಾ ಜಗ್ಗೊಳ್ ವಿಶೆಸ್ ಮಾಗ್ನಿ ಕರ್‍ತಲೊ ಬರೊ ಜಾಗೊ ಬಗುಕ್ ಹೊತಾ ಮನುನ್ ಚಿಂತುನ್ ಘೆವ್ನ್ ಸಬ್ಬತ್ತಾಚ್ಯಾ ದಿಸಿ ನ್ಹೈಯ್ಚ್ಯಾ ಜಗ್ಗೊಳ್ ಜಾವ್ಕ್ ಮನುನ್ ಶಾರಾಕ್ ಗುಸ್ತಲ್ಯಾ ದಡ್ಪ್ಯಾತ್ನಾ ಭಾಯ್ರ್ ಗೆಲಾಂವ್, ಥೈ ಉಲ್ಲಿ ಬಾಯ್ಕಾ ಮಾನ್ಸಾ ಗೊಳಾ ಹೊವ್ನ್ ಯೆಲ್ಲಿ, ಅಮಿ ತೆಂಚ್ಯಾ ವಾಂಗ್ಡಾ ಬಸುನ್ ಬೊಲ್ಲ್ಯಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 16:13
17 ತಿಳಿವುಗಳ ಹೋಲಿಕೆ  

ಉಳಿದವರು ಪೆರ್ಗೆದಿಂದ ಪಿಸಿದ್ಯದ ಅಂತಿಯೋಕ್ಯಕ್ಕೆ ಹೋದರು. ಸಬ್ಬತ್ ದಿನ ಅವರು ಸಭಾಮಂದಿರದೊಳಗೆ ಹೋಗಿ ಕುಳಿತುಕೊಂಡರು.


ನೀವು ನಿಮ್ಮ ನಂಬಿಕೆಯಲ್ಲಿ ಸ್ಥಿರವಾಗಿ ಮುಂದುವರೆದು ನೆಲೆಗೊಂಡು, ಸುವಾರ್ತೆಯ ನಿರೀಕ್ಷೆಯಿಂದ ತೊಲಗಿ ಹೋಗದಿರಿ. ನೀವು ಕೇಳಿದಂಥ ಮತ್ತು ಆಕಾಶದ ಕೆಳಗಿರುವ ಸರ್ವಸೃಷ್ಟಿಗೆ ಸಾರಲಾದ ಈ ಸುವಾರ್ತೆಗೆ ಪೌಲನೆಂಬ ನಾನು ಸೇವಕನಾದೆನು.


ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವುದರಿಂದ, ಯೆಹೂದ್ಯರು ಯೆಹೂದ್ಯರಲ್ಲದವರು ಎಂದೂ ದಾಸರು ಸ್ವತಂತ್ರರು ಎಂದೂ ಗಂಡು ಹೆಣ್ಣು ಎಂದೂ ಭೇದವಿಲ್ಲ.


ಆದರೆ ನಮ್ಮ ಸಮಯ ಮುಗಿದಾಗ, ನಮ್ಮ ಪ್ರಯಾಣವನ್ನು ಮುಂದುವರಿಸಬೇಕೆಂದಿದ್ದೆವು. ಶಿಷ್ಯರೆಲ್ಲರೂ ಅವರ ಮಡದಿ ಮಕ್ಕಳೂ ಪಟ್ಟಣದ ಹೊರಗಿನವರೆಗೆ ನಮ್ಮೊಂದಿಗೆ ಬಂದರು. ಸಮುದ್ರ ತೀರದಲ್ಲಿ ನಾವು ಮೊಣಕಾಲೂರಿ ಪ್ರಾರ್ಥನೆ ಮಾಡಿದೆವು.


ವಾರದ ಮೊದಲನೆಯ ದಿನ ನಾವು ರೊಟ್ಟಿ ಮುರಿಯಲು ಒಂದಾಗಿ ಕೂಡಿಬಂದೆವು. ಪೌಲನು ಅಲ್ಲಿ ಬೋಧನೆ ಮಾಡಿದನು. ಮರುದಿನ ಅವನು ಹೊರಡಬೇಕಾದ್ದರಿಂದ ಮಧ್ಯರಾತ್ರಿಯವರೆಗೆ ಮಾತನಾಡುತ್ತಲೇ ಇದ್ದನು.


ಪ್ರತಿ ಸಬ್ಬತ್ ದಿನ ಸಭಾಮಂದಿರಕ್ಕೆ ಹೋಗಿ ಯೆಹೂದ್ಯರನ್ನೂ ಗ್ರೀಕರನ್ನೂ ವಿಶ್ವಾಸಿಗಳನ್ನಾಗಿಸಲು ಪ್ರೇರೇಪಿಸುತ್ತಿದ್ದನು.


ಪೌಲನು ತನ್ನ ವಾಡಿಕೆಯಂತೆ ಮೂರು ಸಬ್ಬತ್ ದಿನಗಳಂದು ಅವರ ಬಳಿ ಹೋಗಿ, ಅವರಲ್ಲಿ ಪವಿತ್ರ ವೇದಗಳ ಬಗ್ಗೆ ವಾದಿಸಿ,


ಏಷ್ಯಾ ಪ್ರಾಂತದಲ್ಲಿ ಸುವಾರ್ತೆ ಸಾರಬಾರದೆಂದು ಪವಿತ್ರಾತ್ಮ ತಡೆದದ್ದರಿಂದ ಪೌಲ ಮತ್ತು ಅವನ ಜೊತೆಯವರು ಫ್ರುಗ್ಯ ಹಾಗೂ ಗಲಾತ್ಯ ಪ್ರದೇಶಗಳ ಮಾರ್ಗವಾಗಿ ಪ್ರಯಾಣಮಾಡಿದರು.


ಪೌಲ ಬಾರ್ನಬರು ಸಭಾಮಂದಿರವನ್ನು ಬಿಟ್ಟು ಹೊರಡುವಾಗ, “ಬರುವ ಸಬ್ಬತ್ ದಿನವೂ ಬಂದು ಇದೇ ವಿಷಯಗಳನ್ನು ಕುರಿತು ಮಾತನಾಡಿರಿ,” ಎಂದು ಜನರು ಅವರನ್ನು ಕೇಳಿಕೊಂಡರು.


ಬೆಳಿಗ್ಗೆ ಯೇಸು ತಿರುಗಿ ದೇವಾಲಯಕ್ಕೆ ಬಂದಾಗ ಎಲ್ಲಾ ಜನರು ಅವರ ಬಳಿಗೆ ಬಂದರು. ಯೇಸು ಕುಳಿತುಕೊಂಡು ಅವರಿಗೆ ಬೋಧಿಸಿದರು.


ಯೇಸು ಸಬ್ಬತ್ ದಿನದಲ್ಲಿ ಒಂದು ಸಭಾಮಂದಿರದೊಳಗೆ ಬೋಧಿಸುತ್ತಾ ಇದ್ದರು,


ಯೇಸು ಅವರಿಗೆ, “ನೀವು ಜಗತ್ತಿನ ಎಲ್ಲಾ ಕಡೆಗಳಿಗೆ ಹೋಗಿ ಸರ್ವಸೃಷ್ಟಿಗೂ ಸುವಾರ್ತೆಯನ್ನು ಸಾರಿರಿ.


ಆಗ ಜನರ ದೊಡ್ಡ ಸಮೂಹವು ಯೇಸುವಿನ ಬಳಿಗೆ ಕೂಡಿಬಂದದ್ದರಿಂದ ಅವರು ದೋಣಿಯನ್ನು ಹತ್ತಿ ಕುಳಿತುಕೊಂಡರು, ಆ ಸಮೂಹದವರೆಲ್ಲಾ ದಡದ ಮೇಲೆ ನಿಂತಿದ್ದರು.


ತಡಮಾಡದೆ, ಯೇಸುವೇ “ದೇವಪುತ್ರ” ಎಂದು ಸಭಾಮಂದಿರಗಳಲ್ಲಿ ಸಾರಲು ಪ್ರಾರಂಭಿಸಿದನು.


ಒಂದು ದಿನ ನಾವು ಪ್ರಾರ್ಥನೆಯ ಸ್ಥಳಕ್ಕೆ ಹೋಗುತ್ತಿದ್ದೆವು, ಆಗ ಭವಿಷ್ಯ ಹೇಳುವ ದುರಾತ್ಮವುಳ್ಳ ದಾಸಿಯೊಬ್ಬಳು ನಮ್ಮನ್ನು ಭೇಟಿಯಾದಳು. ಭವಿಷ್ಯ ಹೇಳುವುದರಿಂದ ಆಕೆ ತನ್ನ ಯಜಮಾನನಿಗೆ ಬಹಳ ಹಣ ಸಂಪಾದಿಸುತ್ತಿದ್ದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು