Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 16:14 - ಕನ್ನಡ ಸಮಕಾಲಿಕ ಅನುವಾದ

14 ಅವರಲ್ಲಿ ಒಬ್ಬ ಮಹಿಳೆಯ ಹೆಸರು ಲುದ್ಯ ಎಂದಿತ್ತು. ಆಕೆ ಥುವತೈರ ಊರಿನವಳೂ ಕೆನ್ನೀಲಿ ಬಣ್ಣದ ಬಟ್ಟೆಗಳ ವ್ಯಾಪಾರಿಯೂ ದೇವರನ್ನು ಆರಾಧಿಸುವವಳೂ ಆಗಿದ್ದಳು. ಪೌಲನು ಹೇಳಿದ್ದನ್ನು ಲಕ್ಷ್ಯಕೊಡುವಂತೆ ಕರ್ತ ಯೇಸು ಆಕೆಯ ಹೃದಯವನ್ನು ತೆರೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನಮ್ಮ ಮಾತುಗಳನ್ನು ಕೇಳಿದವರಲ್ಲಿ ಲುದ್ಯಳೆಂಬ ಒಬ್ಬ ಸ್ತ್ರೀಯು ಇದ್ದಳು. ಆಕೆ ಧೂಮ್ರ (ನೇರಳೆ) ಬಣ್ಣದ ವಸ್ತ್ರಗಳನ್ನು ಮಾರುವವಳೂ, ಥುವತೈರ ಎಂಬ ಊರಿನವಳೂ, ದೈವಭಕ್ತಳೂ ಆಗಿದ್ದಳು. ಪೌಲನು ಹೇಳುವ ಮಾತುಗಳಿಗೆ ಗಮನಕೊಡುವುದಕ್ಕಾಗಿ ಕರ್ತನು ಆಕೆಯ ಹೃದಯವನ್ನು ತೆರೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ನಮ್ಮ ಬೋಧನೆಯನ್ನು ಕೇಳಿದ ಆ ಮಹಿಳೆಯರಲ್ಲಿ ಲಿಡಿಯ ಎಂಬವಳು ಒಬ್ಬಳು. ಈಕೆ ಥುವತೈರ ಎಂಬ ಊರಿನವಳು; ಪಟ್ಟೆಪೀತಾಂಬರಗಳ ವ್ಯಾಪಾರಿ ಹಾಗೂ ದೇವಭಕ್ತೆ. ಪೌಲನ ಬೋಧನೆಗೆ ಕಿವಿಗೊಟ್ಟು ಗ್ರಹಿಸುವಂತೆ ಪ್ರಭು ಆಕೆಯ ಹೃದಯವನ್ನು ತೆರೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನಮ್ಮ ಮಾತುಗಳನ್ನು ಕೇಳಿದವರಲ್ಲಿ ಲುದ್ಯಳೆಂಬ ಒಬ್ಬ ಸ್ತ್ರೀಯು ಇದ್ದಳು. ಆಕೆ ಧೂಮ್ರವರ್ಣದ ವಸ್ತ್ರಗಳನ್ನು ಮಾರುವವಳೂ ಥುವತೈರ ಎಂಬ ಊರಿನವಳೂ ದೇವಭಕ್ತಳೂ ಆಗಿದ್ದಳು. ಪೌಲನು ಹೇಳಿದ ಮಾತುಗಳಿಗೆ ಲಕ್ಷ್ಯಕೊಡುವದಕ್ಕೆ ಕರ್ತನು ಆಕೆಯ ಹೃದಯವನ್ನು ತೆರೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಅಲ್ಲಿ ಲಿಡಿಯಾ ಎಂಬ ಒಬ್ಬ ಹೆಂಗಸಿದ್ದಳು. ಆಕೆಯು ಥುವತೈರ ಪಟ್ಟಣದವಳು. ಕೆನ್ನೇರಳೆ ಬಣ್ಣದ ಬಟ್ಟೆಗಳನ್ನು ಮಾರುವುದು ಆಕೆಯ ಕಸುಬಾಗಿತ್ತು. ಆಕೆಯು ನಿಜ ದೇವರನ್ನು ಆರಾಧಿಸುತ್ತಿದ್ದಳು. ಪೌಲನ ಮಾತನ್ನು ಲಿಡಿಯಾ ಆಲಿಸುತ್ತಿದ್ದಳು. ಪ್ರಭುವು ಆಕೆಯ ಹೃದಯವನ್ನು ತೆರೆದನು. ಪೌಲನು ಹೇಳಿದ ಸಂಗತಿಗಳನ್ನು ಆಕೆ ನಂಬಿಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಥೈ ಥುವತೈರ್ ಮನ್ತಲ್ಯಾ ಶಾರಾತ್ಲಿ ಲಿಡಿಯಾ ಮನ್ತಲಿ ಎಕ್ ಬಾಯ್ಕೊ ಮಾನುಸ್ ಹೊತ್ತಿ, ಝಾಂಬ್ಳ್ಯಾ ಬನ್ನಾಚೆ ಕಪ್ಡೆ ಇಕ್ತಲೆ ತಿಜೆ ಕಾಮ್ ಹೊಲ್ಲೆ, ತಿ ಖರ್ಯ್ಯಾ ದೆವಾಕ್ ಆರಾಧನ್‍ ಕರ್‍ತಲಿ ಹೊಲ್ಲಿ , ತಿ ಪಾವ್ಲುಚಿ ಬೊಲ್ನಿಯಾ ಆಯ್ಕುನ್ಗೆತ್ ಹೊತ್ತಿ, ತನ್ನಾ ಧನಿಯಾನ್ ತಿಜೊ ಮನ್ ಉಗಡ್ಲ್ಯಾನ್, ಅನಿ ತಿನೆ ಪಾವ್ಲು ಸಾಂಗ್ತಲ್ಯಾ ಬೊಲ್ನಿಯಾಕ್ನಿ ವಿಶ್ವಾಸ್ ಕರ್‍ಲಿನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 16:14
24 ತಿಳಿವುಗಳ ಹೋಲಿಕೆ  

ತರುವಾಯ ಅವರು ಪವಿತ್ರ ವೇದಗಳನ್ನು ಅರ್ಥಮಾಡಿಕೊಳ್ಳುವಂತೆ ಯೇಸು ಅವರ ಬುದ್ಧಿಯನ್ನು ತೆರೆದರು.


ಸಾರ್ವಭೌಮ ಯೆಹೋವ ದೇವರು ನನ್ನ ಕಿವಿಯನ್ನು ತೆರೆದಿದ್ದಾರೆ, ನಾನು ಎದುರು ಬೀಳಲಿಲ್ಲ, ವಿಮುಖನಾಗಲೂ ಇಲ್ಲ.


ಇಗೋ, ಬಾಗಿಲಲ್ಲಿ ನಿಂತುಕೊಂಡು ತಟ್ಟುತ್ತಾ ಇದ್ದೇನೆ. ಯಾರಾದರೂ ನನ್ನ ಸ್ವರವನ್ನು ಕೇಳಿ, ಬಾಗಿಲನ್ನು ತೆರೆದರೆ, ನಾನು ಪ್ರವೇಶ ಮಾಡಿ, ಆ ವ್ಯಕ್ತಿಯ ಸಂಗಡ ಊಟಮಾಡುವೆನು. ಅವರೂ ನನ್ನ ಸಂಗಡ ಊಟಮಾಡುವರು.


ಆದ್ದರಿಂದ ದೇವರ ಆಯ್ಕೆಯು ಮನುಷ್ಯನ ಬಯಕೆ ಅಥವಾ ಪ್ರಯತ್ನದಿಂದಾಗಿರದೆ, ದೇವರ ಕರುಣೆಯಿಂದಲೇ ಆಗಿದೆ.


ಏಕೆಂದರೆ, ತಮ್ಮ ಸದುದ್ದೇಶವನ್ನು ನೆರವೇರಿಸುವಂತೆ ನಿಮ್ಮಲ್ಲಿ ಬಯಕೆಯನ್ನೂ ಕಾರ್ಯಸಾಧನೆಯನ್ನೂ ನಿರ್ಮಿಸುವವರು ದೇವರೇ.


ಕರ್ತ ಯೇಸುವಿನ ಹಸ್ತವು ಅವರೊಂದಿಗಿತ್ತು ಬಹಳಷ್ಟು ಜನರು ನಂಬಿ ಕರ್ತ ಯೇಸುವಿನ ಕಡೆಗೆ ತಿರುಗಿಕೊಂಡರು.


“ಫಿಲದೆಲ್ಫಿಯದಲ್ಲಿರುವ ಸಭೆಯ ಸಂದೇಶಕನಿಗೆ ಬರೆ: ಪರಿಶುದ್ಧರೂ ಸತ್ಯವಂತರೂ ದಾವೀದನ ಬೀಗದ ಕೈಯುಳ್ಳವರೂ ಯಾರೂ ಮುಚ್ಚದಂತೆ ತೆರೆಯುವವರೂ ಯಾರೂ ತೆರೆಯದಂತೆ ಮುಚ್ಚುವವರೂ ಆಗಿರುವವರು ಹೇಳುವುದೇನೆಂದರೆ:


ಆಮೇಲೆ ಪೌಲನು ಸಭಾಮಂದಿರವನ್ನು ಬಿಟ್ಟು ಹೊರಗೆ ಬಂದು ಪಕ್ಕದಲ್ಲಿಯೇ ಇದ್ದ ದೇವಭಕ್ತನಾದ ತೀತಯುಸ್ತ ಎಂಬುವನ ಮನೆಗೆ ಹೋದನು.


ಅದು, “ಕಾಣುತ್ತಿರುವುದನ್ನು ಸುರುಳಿಯಲ್ಲಿ ಬರೆದು ಎಫೆಸ, ಸ್ಮುರ್ನ, ಪೆರ್ಗಮ, ಥುವತೈರ, ಸಾರ್ದಿಸ್, ಫಿಲದೆಲ್ಫಿಯ, ಲವೊದಿಕೀಯದಲ್ಲಿರುವ ಏಳು ಸಭೆಗಳಿಗೆ ಕಳುಹಿಸಬೇಕು,” ಎಂದು ನುಡಿಯಿತು.


ಅವನೂ ಅವನ ಕುಟುಂಬದವರು ಭಕ್ತಿವಂತರೂ ದೇವರಿಗೆ ಭಯಪಡುವವರೂ ಆಗಿದ್ದರು. ಅವನು ಕೊರತೆಯಲ್ಲಿರುವವರಿಗೆ ಧಾರಾಳವಾಗಿ ಕೊಡುತ್ತಿದ್ದನು. ಅವನು ಅನುದಿನವೂ ದೇವರಿಗೆ ಪ್ರಾರ್ಥನೆ ಮಾಡುತ್ತಿದ್ದನು.


ಅದರಂತೆ ಅವನು ಹೋಗುತ್ತಿದ್ದಾಗ, ಮಾರ್ಗದಲ್ಲಿ ಐಥಿಯೋಪ್ಯದ ರಾಣಿ ಕಂದಾಕೆಯ ಹಣಕಾಸಿನ ಮುಖ್ಯ ಅಧಿಕಾರಿಯಾಗಿದ್ದ ಕಂಚುಕಿಯನ್ನು ಭೇಟಿಯಾದನು. ಈ ಮನುಷ್ಯನು ಆರಾಧನೆಗಾಗಿ ಯೆರೂಸಲೇಮಿಗೆ ಹೋಗಿದ್ದನು.


ಹಬ್ಬದ ಆರಾಧನೆಗೆ ಗ್ರೀಕರಲ್ಲಿ ಕೆಲವರು ಬಂದಿದ್ದರು.


ಅನಂತರ ನನ್ನ ಪ್ರಿಯನು ಬಾಗಿಲ ಸಂದಿನಲ್ಲಿ ತನ್ನ ಕೈ ಹಾಕಿದನು. ನನ್ನ ಹೃದಯವು ಅವನಿಗಾಗಿ ಮಿಡಿಯಿತು.


ನೀವು ನಿಮ್ಮ ಸೈನ್ಯವನ್ನು ಒಟ್ಟುಗೂಡಿಸುವ ದಿನದಲ್ಲಿ ನಿಮ್ಮ ಪ್ರಜೆಗಳು ಸಂತೋಷದಿಂದ ತಾವಾಗಿಯೇ ಸೇರಿಕೊಳ್ಳುವರು. ಮುಂಜಾನೆಯ ಉದರದಿಂದ ಬರುವ ಇಬ್ಬನಿಯಂತೆ ನಿಮ್ಮ ಯೋಧರು ನಿಮ್ಮ ಕಡೆ ಇಳಿದು ಬರುವರು.


ಸಭೆಯು ಮುಗಿದ ತರುವಾಯ ಅನೇಕ ಯೆಹೂದ್ಯರೂ ದೇವಭಕ್ತಿವುಳ್ಳ ಯೆಹೂದಿ ಮಾರ್ಗದ ವಿಶ್ವಾಸಿಗಳು ಪೌಲ ಬಾರ್ನಬರನ್ನು ಹಿಂಬಾಲಿಸಿದರು. ಪೌಲ ಬಾರ್ನಬರು ತಮ್ಮೊಂದಿಗೆ ಬಂದವರ ಜೊತೆ ಮಾತನಾಡಿ ದೇವರ ಕೃಪೆಯಲ್ಲಿ ಮುಂದುವರಿಯಲು ಅವರನ್ನು ಒಡಂಬಡಿಸಿದರು.


ಆದರೆ ಯೆಹೂದ್ಯರು, ಆರಾಧಕರಾಗಿದ್ದ ಮಾನ್ಯರಾದ ಸ್ತ್ರೀಯರನ್ನೂ ನಗರದ ಗಣ್ಯ ನಾಯಕರನ್ನೂ ಪ್ರೇರೇಪಿಸಿ, ಪೌಲ, ಬಾರ್ನಬರ ಮೇಲೆ ಹಿಂಸೆಯನ್ನು ಎಬ್ಬಿಸಿ ತಮ್ಮ ಪ್ರದೇಶದಿಂದ ಹೊರಗೋಡಿಸಿದರು.


ಪೌಲ, ಸೀಲರು ಸೆರೆಮನೆಯಿಂದ ಹೊರಗೆ ಬಂದ ಮೇಲೆ ಲುದ್ಯಳ ಮನೆಗೆ ಹೋಗಿ, ಅಲ್ಲಿ ಸಹೋದರರನ್ನು ಭೇಟಿಯಾಗಿ ಅವರನ್ನು ಪ್ರೋತ್ಸಾಹಿಸಿ, ಅಲ್ಲಿಂದ ಹೊರಟು ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು