Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 16:18 - ಕನ್ನಡ ಸಮಕಾಲಿಕ ಅನುವಾದ

18 ಹೀಗೆ ಬಹಳ ದಿನ ಮಾಡುತ್ತಲೇ ಇದ್ದಳು. ಆದರೆ ಪೌಲನು ಬಹು ಬೇಸರಗೊಂಡು ಹಿಂದಿರುಗಿ ಆ ದುರಾತ್ಮಕ್ಕೆ, “ಇವಳನ್ನು ಈಗಲೇ ಬಿಟ್ಟು ಹೊರಗೆ ಬರಬೇಕೆಂದು ಕ್ರಿಸ್ತ ಯೇಸುವಿನ ಹೆಸರಿನಲ್ಲಿ ನಿನಗೆ ಅಪ್ಪಣೆ ಕೊಡುತ್ತೇನೆ,” ಎಂದು ಹೇಳಲು, ಅದೇ ಗಳಿಗೆಯಲ್ಲಿ ಆ ದುರಾತ್ಮವು ಆಕೆಯನ್ನು ಬಿಟ್ಟುಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅನೇಕ ದಿನ ಅವಳು ಹೀಗೆ ಮಾಡುತ್ತಿದ್ದುದರಿಂದ ಪೌಲನು ಬಹಳವಾಗಿ ಬೇಸರಗೊಂಡು ಹಿಂತಿರುಗಿ ಅವಳೊಳಗಿದ್ದ ದುರಾತ್ಮಕ್ಕೆ; “ಅವಳನ್ನು ಬಿಟ್ಟುಹೋಗು ಎಂದು ಯೇಸು ಕ್ರಿಸ್ತನ ಹೆಸರಿನಲ್ಲಿ ನಿನಗೆ ಆಜ್ಞಾಪಿಸುತ್ತೇನೆ” ಎಂದು ಹೇಳಿದನು. ಅದೇ ಗಳಿಗೆಯಲ್ಲಿಯೇ ಅದು ಬಿಟ್ಟು ಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಹೀಗೆ ದಿನೇ ದಿನೇ ಮಾಡುತ್ತಿದ್ದಳು. ಇದರಿಂದ ಪೌಲನಿಗೆ ಬಹಳ ಬೇಸರವಾಯಿತು. ಅವಳ ಕಡೆಗೆ ತಿರುಗಿ, ಅವಳನ್ನು ಹಿಡಿದಿದ್ದ ದೆವ್ವಕ್ಕೆ, “ಇವಳನ್ನು ಬಿಟ್ಟು ತೊಲಗು ಎಂದು ಯೇಸುಕ್ರಿಸ್ತರ ನಾಮದಲ್ಲಿ ನಿನಗೆ ಆಜ್ಞಾಪಿಸುತ್ತೇನೆ,” ಎಂದನು. ಆ ಕ್ಷಣವೇ ಅದು ಅವಳನ್ನು ಬಿಟ್ಟುಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಹೀಗೆ ಅನೇಕ ದಿವಸ ಮಾಡಿದ್ದರಿಂದ ಪೌಲನು ಬಹಳವಾಗಿ ಬೇಸರಗೊಂಡು ಹಿಂತಿರುಗಿ ಆ ದೆವ್ವಕ್ಕೆ - ಅವಳನ್ನು ಬಿಟ್ಟುಹೋಗು ಎಂದು ಯೇಸು ಕ್ರಿಸ್ತನ ಹೆಸರಿನಲ್ಲಿ ನಿನಗೆ ಅಪ್ಪಣೆಕೊಡುತ್ತೇನೆ ಎಂದು ಹೇಳಿದನು. ಅದೇ ಗಳಿಗೆಯಲ್ಲಿಯೇ ಅದು ಬಿಟ್ಟುಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಹೀಗೆ ಆಕೆ ಅನೇಕ ದಿನಗಳವರೆಗೆ ಮಾಡಿದಳು. ಇದರಿಂದ ಬೇಸರಗೊಂಡ ಪೌಲನು ಹಿಂತಿರುಗಿ, ಆ ಆತ್ಮಕ್ಕೆ, “ಅವಳನ್ನು ಬಿಟ್ಟು ಹೋಗಬೇಕೆಂದು ಯೇಸು ಕ್ರಿಸ್ತನ ಹೆಸರಿನಲ್ಲಿ ನಿನಗೆ ಆಜ್ಞಾಪಿಸುತ್ತೇನೆ!” ಎಂದು ಹೇಳಿದನು. ಆ ಕೂಡಲೇ ಆ ಆತ್ಮವು ಹೊರಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ತಿನಿ ಲೈ ದಿಸಾ ಪತರ್ ಅಸೆಚ್ ಕರ್‍ಲಿನ್, ಹೆಚ್ಯಾ ವೈನಾ ಬೆಜಾರ್ ಹೊಲ್ಲ್ಯಾ ಪಾವ್ಲುನ್ ಪರ್ತುನ್, ತ್ಯಾ ಬುರ್ಶ್ಯಾ ಆತ್ಮ್ಯಾಕ್ “ಜೆಜು ಕ್ರಿಸ್ತಾಚ್ಯಾ ನಾವಾನ್ ತುಕಾ ಹುಕುಮ್ ದಿತಾ ಹಿಕಾ ಸೊಡುನ್ ಚಲ್!” ಮಟ್ಲ್ಯಾನ್, ತನ್ನಾಚ್ ತೊ ಬುರ್ಸೊ ಆತ್ಮೊ ತಿಕಾ ಸೊಡುನ್ ಗೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 16:18
12 ತಿಳಿವುಗಳ ಹೋಲಿಕೆ  

ಇದಲ್ಲದೆ ನಂಬುವವರಿಂದ ಈ ಸೂಚಕಕಾರ್ಯಗಳು ಉಂಟಾಗುವುವು: ಅವರು ನನ್ನ ಹೆಸರಿನಲ್ಲಿ ದೆವ್ವಗಳನ್ನು ಓಡಿಸುವರು, ಅವರು ಹೊಸ ಭಾಷೆಗಳಲ್ಲಿ ಮಾತನಾಡುವರು.


ಪೇತ್ರನು ಅವನಿಗೆ, “ಐನೇಯ, ಕ್ರಿಸ್ತ ಯೇಸುವು ನಿನ್ನನ್ನು ಗುಣಪಡಿಸುತ್ತಾರೆ. ಏಳು, ನಿನ್ನ ಹಾಸಿಗೆಯನ್ನು ಸುತ್ತಿಡು,” ಎಂದು ಹೇಳಲು, ತಕ್ಷಣವೇ ಐನೇಯ ಮೇಲಕ್ಕೆದ್ದನು.


ಆಗ ಪೇತ್ರನು, “ಬೆಳ್ಳಿಬಂಗಾರ ನನ್ನಲ್ಲಿಲ್ಲ, ನನ್ನಲ್ಲಿರುವುದನ್ನು ನಿನಗೆ ಕೊಡುತ್ತೇನೆ. ನಜರೇತಿನ ಕ್ರಿಸ್ತ ಯೇಸುವಿನ ಹೆಸರಿನಲ್ಲಿ, ಎದ್ದು ನಡೆ,” ಎಂದು ಹೇಳಿ,


ಯೇಸು ವಿವಿಧ ರೋಗಗಳಿಗೆ ಒಳಗಾದ ಅನೇಕರನ್ನು ಸ್ವಸ್ಥಪಡಿಸಿ, ಅನೇಕ ದೆವ್ವಗಳನ್ನು ಓಡಿಸಿದರು. ಆದರೆ ತಾನು ಯಾರೆಂದು ಆ ದೆವ್ವಗಳಿಗೆ ತಿಳಿದಿದ್ದರಿಂದ ಯೇಸು ಅವುಗಳಿಗೆ ಮಾತನಾಡಲು ಅನುಮತಿಸಲಿಲ್ಲ.


ಕ್ರಿಸ್ತ ಯೇಸುವು ಆಳುವ ಅದೃಶ್ಯ ಶಕ್ತಿಗಳನ್ನೂ ಅಧಿಕಾರಗಳನ್ನೂ ನಿರಾಯುಧರನ್ನಾಗಿ ಮಾಡಿ ಶಿಲುಬೆಯಲ್ಲಿ ಅವುಗಳ ಮೇಲೆ ಜಯಹೊಂದಿ, ಬಹಿರಂಗವಾಗಿ ಪ್ರದರ್ಶಿಸಿದರು.


ಯೇಸು ತಮ್ಮ ಹನ್ನೆರಡು ಮಂದಿ ಶಿಷ್ಯರನ್ನು ಒಟ್ಟಿಗೆ ಕರೆದು, ಅವರಿಗೆ ಎಲ್ಲಾ ದೆವ್ವಗಳನ್ನು ಓಡಿಸುವುದಕ್ಕೂ ರೋಗಗಳನ್ನು ಸ್ವಸ್ಥಮಾಡುವುದಕ್ಕೂ ಅವರಿಗೆ ಶಕ್ತಿಯನ್ನು ಮತ್ತು ಅಧಿಕಾರವನ್ನು ಕೊಟ್ಟರು,


ಅಷ್ಟರಲ್ಲಿ ದೋಣಿಯು ತೀರದಿಂದ ಬಹುದೂರ ಹೋಗಿತ್ತು, ಎದುರುಗಾಳಿ ಬೀಸುತ್ತಿದ್ದದರಿಂದ ತೆರೆಗಳ ಬಡಿತಕ್ಕೆ ಸಿಕ್ಕಿ ಹೊಯ್ದಾಡುತ್ತಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು