Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 16:21 - ಕನ್ನಡ ಸಮಕಾಲಿಕ ಅನುವಾದ

21 ರೋಮನವರಾದ ನಾವು ಸ್ವೀಕರಿಸಲೂ ಇಲ್ಲವೆ ಅನುಸರಿಸಲೂ ಆಗದಂಥಾ ಆಚಾರಗಳನ್ನು ಪ್ರಕಟಿಸುತ್ತಿದ್ದಾರೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಇವರು ಯೆಹೂದ್ಯರಾಗಿದ್ದು ರೋಮನ್ನರಾದ ನಾವು ಅವಲಂಬಿಸಿ ಆಚರಿಸಬಾರದ ಆಚಾರಗಳನ್ನು ಪ್ರಚಾರ ಮಾಡುತ್ತಿದ್ದಾರೆ” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಇವರು ಯೆಹೂದ್ಯರು. ರೋಮನರಾದ ನಾವು ಅಂಗೀಕರಿಸಲು ಅಥವಾ ಅನುಸರಿಸಲು ಆಗದಂತಹ ಆಚಾರಗಳನ್ನು ಪ್ರಚಾರ ಮಾಡುತ್ತಿದ್ದಾರೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಇವರು ಯೆಹೂದ್ಯರಾಗಿದ್ದು ರೋಮಾಯರಾದ ನಾವು ಅವಲಂಬಿಸಿ ನಡಿಸಕೂಡದಂಥ ಆಚಾರಗಳನ್ನು ಪ್ರಕಟಿಸುತ್ತಾರೆ ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ನಿಷಿದ್ಧ ಕಾರ್ಯಗಳನ್ನು ಮಾಡುವಂತೆ ಇವರು ಜನರಿಗೆ ಹೇಳುತ್ತಿದ್ದಾರೆ. ರೋಮ್ ಪ್ರಜೆಗಳಾಗಿರುವ ನಾವು ಅಂಥ ಕಾರ್ಯಗಳನ್ನು ಮಾಡಲು ಸಾಧ್ಯವಿಲ್ಲ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಅಮ್ಚ್ಯಾ ಪದ್ದತಿ ನೆಮಾಕ್ ವಿರೊದ್ ಹೊವ್ನ್ ನಕ್ಕೊ ಹೊಲ್ಲಿ ಕಾಮಾ ಕರುಲ್ಲಾತ್ ಮನುನ್ ಹೆನಿ ಲೊಕಾಕ್ನಿ ಸಾಂಗುಲ್ಲಾತ್, ರೊಮ್ ಮನ್ತಲ್ಯಾ ಶಾರಾಚ್ಯಾ ಲೊಕಾನಿ, ಅಮಿ ತಸ್ಲಿ ಕಾಮಾ ಕರುಕ್ ಹೊಯ್ನಾ ಮನುನ್ ಸಾಂಗ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 16:21
6 ತಿಳಿವುಗಳ ಹೋಲಿಕೆ  

ಆಗ ಹಾಮಾನನು ಅರಸನಾದ ಅಹಷ್ವೇರೋಷನಿಗೆ, “ನಿನ್ನ ರಾಜ್ಯದ ಸಕಲ ಪ್ರಾಂತಗಳಲ್ಲಿರುವ ಜನರೊಳಗೆ ಚದರಿ ಬಂದು ವಾಸಿಸುವ ಪ್ರತ್ಯೇಕವಾದ ಜನಾಂಗದ ಜನರಿದ್ದಾರೆ. ಅವರ ರೀತಿನೀತಿಗಳು ಎಲ್ಲಾ ಜನರಿಗಿಂತಲೂ ಬೇರೆಯಾಗಿರುತ್ತವೆ. ಈ ಜನರು ಅರಸನ ನಿಯಮಗಳನ್ನು ಕೈಗೊಳ್ಳುವುದೇ ಇಲ್ಲ. ಆದಕಾರಣ ಇಂಥವರನ್ನು ಸುಮ್ಮನೇ ಬಿಡುವುದು ಅರಸನ ಪ್ರಯೋಜನಕ್ಕೆ ತಕ್ಕದ್ದಲ್ಲ.


ಯೆಹೂದ್ಯರ ಎಲ್ಲಾ ಆಚಾರ ವಿಚಾರಗಳನ್ನು, ವಾದವಿವಾದಗಳನ್ನು ತಾವು ಚೆನ್ನಾಗಿ ತಿಳಿದಿದ್ದೀರಿ. ಆದ್ದರಿಂದ, ತಾವು ತಾಳ್ಮೆಯಿಂದ ಆಲಿಸಬೇಕೆಂದು ಕೇಳಿಕೊಳ್ಳುತ್ತೇನೆ.


ಅಲ್ಲಿಂದ ಮಕೆದೋನ್ಯ ಪ್ರಾಂತದ ಪ್ರಮುಖ ಪಟ್ಟಣವಾದ ಫಿಲಿಪ್ಪಿಗೆ ಬಂದೆವು. ಇದು ರೋಮಿನ ಪ್ರವಾಸ ಸ್ಥಳವಾಗಿತ್ತು. ನಾವು ಆ ಪಟ್ಟಣದಲ್ಲಿ ಕೆಲವು ದಿನ ಉಳಿದುಕೊಂಡೆವು.


ಜನಾಂಗಗಳ ಪದ್ಧತಿಗಳು ವ್ಯರ್ಥವಾಗಿವೆ. ಹೇಗೆಂದರೆ, ಅಡವಿಯಲ್ಲಿ ಒಬ್ಬನು ಮರವನ್ನು ಕಡಿಯುತ್ತಾನೆ. ಅದು ಕೊಡಲಿಯಿಂದ ಕಡಿದ ಬಡಿಗೆಯವನ ಕೈಕೆಲಸವೇ.


ಫರಿಸಾಯರು ಅದನ್ನು ಕಂಡು ಯೇಸುವಿಗೆ, “ಇಗೋ, ನಿನ್ನ ಶಿಷ್ಯರು ಸಬ್ಬತ್ ದಿನದಲ್ಲಿ ನಿಯಮಕ್ಕೆ ವಿರುದ್ಧವಾಗಿರುವದನ್ನು ಮಾಡುತ್ತಿದ್ದಾರೆ,” ಎಂದರು.


ಅವರನ್ನು ನ್ಯಾಯಾಧಿಪತಿಗಳ ಮುಂದೆ ನಿಲ್ಲಿಸಿ, “ಯೆಹೂದ್ಯರಾಗಿರುವ ಇವರು, ನಮ್ಮ ಪಟ್ಟಣದಲ್ಲಿ ಬಹು ಗಲಿಬಿಲಿ ಮಾಡುತ್ತಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು